AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಮಂದಣ್ಣ-ವಿಜಯ್​ ದೇವರಕೊಂಡ ಬಗ್ಗೆ ಹರಡಿದೆ ಇನ್ನೊಂದು ಹೊಸ ಗಾಸಿಪ್​

ವಿಜಯ್​ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರನ್ನು ಜೋಡಿಯಾಗಿ ನೋಡಬೇಕು ಎಂಬುದು ಅಭಿಮಾನಿಗಳ ಆಸೆ. ಈ ಹಿಂದೆ ‘ಗೀತ ಗೋವಿಂದಂ’ ಹಾಗೂ ‘ಡಿಯರ್​ ಕಾಮ್ರೇಡ್​’ ಸಿನಿಮಾಗಳಲ್ಲಿ ಅವರಿಬ್ಬರು ಜೊತೆಯಾಗಿ ನಟಿಸಿದ್ದರು. ಈಗ ಮತ್ತೊಮ್ಮೆ ಅವರನ್ನು ಒಂದಾಗಿಸಲು ನಿರ್ದೇಶಕ ರಾಹುಲ್​ ಅವರು ಪ್ಲ್ಯಾನ್​ ಮಾಡುತ್ತಿದ್ದಾರೆ ಎನ್ನಲಾಗಿದೆ. ಆ ಬಗ್ಗೆ ಗಾಸಿಪ್​ ಹಬ್ಬಿದೆ.

ರಶ್ಮಿಕಾ ಮಂದಣ್ಣ-ವಿಜಯ್​ ದೇವರಕೊಂಡ ಬಗ್ಗೆ ಹರಡಿದೆ ಇನ್ನೊಂದು ಹೊಸ ಗಾಸಿಪ್​
ರಶ್ಮಿಕಾ ಮಂದಣ್ಣ, ವಿಜಯ್​ ದೇವರಕೊಂಡ
ಮದನ್​ ಕುಮಾರ್​
|

Updated on: Jul 02, 2024 | 7:08 PM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ನಟ ವಿಜಯ್​ ದೇವರಕೊಂಡ ಜೊತೆ ಆಪ್ತವಾಗಿರುವ ವಿಷಯ ಹೊಸದೇನಲ್ಲ. ಅವರ ಬಗ್ಗೆ ಆಗಾಗ ಗಾಸಿಪ್​ಗಳು ಕೇಳಿಬರುತ್ತಾ ಇರುತ್ತವೆ. ಈಗ ಇನ್ನೊಂದು ಗಾಸಿಪ್​ ಹುಟ್ಟಿಕೊಂಡಿದೆ. ಅಂದಹಾಗೆ, ಇದು ಅವರ ಖಾಸಗಿ ಜೀವನಕ್ಕೆ ಸಂಬಂಧಿಸಿದ ಮಾಹಿತಿ ಅಲ್ಲ. ಇದೇನಿದ್ದರೂ ಅಪ್ಪಟ ಸಿನಿಮಾ ಸುದ್ದಿ. ಈಗಾಗಲೇ ಜೋಡಿಯಾಗಿ ನಟಿಸಿ ಪ್ರೇಕ್ಷಕರನ್ನು ರಂಜಿಸಿರುವ ವಿಜಯ್​ ದೇವರಕೊಂಡ (Vijay Devarakonda) ಮತ್ತು ರಶ್ಮಿಕಾ ಮಂದಣ್ಣ ಅವರು ಮತ್ತೊಮ್ಮೆ ಜೋಡಿಯಾಗಿ ನಟಿಸುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗಿದೆ. ಅವರಿಬ್ಬರನ್ನು ತೆರೆಮೇಲೆ ಒಂದಾಗಿಸಲು ಟಾಲಿವುಡ್​ (Tollywood) ನಿರ್ದೇಶಕ ರಾಹುಲ್​ ಅವರು ಪ್ಲ್ಯಾನ್​ ಮಾಡುತ್ತಿದ್ದಾರೆ.

ವಿಜಯ್​ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರು ಮೊದಲ ಬಾರಿಗೆ ಜೋಡಿಯಾಗಿದ್ದು ‘ಗೀತ ಗೋವಿಂದಂ’ ಸಿನಿಮಾದಲ್ಲಿ. ಆ ಚಿತ್ರದಿಂದ ಅವರಿಬ್ಬರ ಜೋಡಿ ಫೇಮಸ್​ ಆಯಿತು. ಟಾಲಿವುಡ್​ನಲ್ಲಿ ರಶ್ಮಿಕಾಗೆ ದೊಡ್ಡ ಮಟ್ಟದ ಖ್ಯಾತಿ ಸಿಗಲು ಆ ಸಿನಿಮಾ ಸಹಕಾರಿ ಆಯಿತು. ಆ ನಂತರ ‘ಡಿಯರ್​ ಕಾಮ್ರೇಡ್​’ ಸಿನಿಮಾದಲ್ಲೂ ರಶ್ಮಿಕಾ ಮಂದಣ್ಣ ಮತ್ತು ವಿಜಯ್​ ದೇವರಕೊಂಡ ಅವರು ಜೋಡಿಯಾಗಿ ನಟಿಸಿದರು.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ವಿಜಯ್​ ದೇವರಕೊಂಡ ನಟನೆಯ ‘ಫ್ಯಾಮಿಲಿ ಸ್ಟಾರ್​’ ಸಿನಿಮಾಗೂ ರಶ್ಮಿಕಾ ಮಂದಣ್ಣ ಹೀರೋಯಿನ್​ ಆಗಬೇಕಿತ್ತು. ಆದರೆ ನಂತರ ಆ ಪಾತ್ರ ಮೃಣಾಲ್​ ಠಾಕೂರ್​ ಪಾಲಾಯಿತು. ಈಗ ‘ಟ್ಯಾಕ್ಸಿವಾಲಾ’ ಖ್ಯಾತಿಯ ನಿರ್ದೇಶಕ ರಾಹುಲ್​ ಅವರು ಹೊಸ ಸಿನಿಮಾಗೆ ಸಜ್ಜಾಗಿದ್ದಾರೆ. ಈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್​ ದೇವರಕೊಂಡ ಅವರು ಜೋಡಿಯಾಗಬೇಕು ಎಂಬುದು ರಾಹುಲ್​ ಆಸೆ.

ಇದನ್ನೂ ಓದಿ: ಸ್ನೇಹಿತೆಯ ಮದುವೆಯಲ್ಲಿ ಕೊಡವ ಶೈಲಿಯ ಸೀರೆ ಧರಿಸಿದ ರಶ್ಮಿಕಾ ಮಂದಣ್ಣ

ರಾಹುಲ್​ ನಿರ್ದೇಶನ ಮಾಡಲಿರುವ ಹೊಸ ಸಿನಿಮಾದಲ್ಲಿ ನಾಯಕಿಯ ಪಾತ್ರ ರಾಯಲಸೀಮಾ ಪ್ರದೇಶದ ಹಿನ್ನೆಲೆಯಲ್ಲಿ ಇರಲಿದೆ. ‘ಪುಷ್ಪ’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಅವರು ಈಗಾಗಲೇ ಅಂಥ ಪಾತ್ರ ಮಾಡಿದ್ದಾರೆ. ಹಾಗಾಗಿ ರಾಹುಲ್​ ನಿರ್ದೇಶನದ ಹೊಸ ಚಿತ್ರದಲ್ಲೂ ರಶ್ಮಿಕಾ ಮಂದಣ್ಣ ಅವರು ಆ ಪಾತ್ರ ಮಾಡಿದರೆ ಉತ್ತಮ ಎಂಬುದು ಚಿತ್ರತಂಡದ ಆಲೋಚನೆ. ವಿಜಯ್​ ದೇವರಕೊಂಡ ಸಲುವಾಗಿ ರಶ್ಮಿಕಾ ಮಂದಣ್ಣ ಅವರು ಈ ಪಾತ್ರವನ್ನು ಒಪ್ಪಿಕೊಳ್ಳುತ್ತಾರೆ ಎಂಬ ಆತ್ಮವಿಶ್ವಾಸ ರಾಹುಲ್ ಅವರಿಗೆ ಇದೆ ಎಂದು ಟಾಲಿವುಡ್​ ಅಂಗಳಲ್ಲಿ ಗಾಸಿಪ್​ ಹಬ್ಬಿದೆ.

ಈ ಪ್ರಾಜೆಕ್ಟ್​ ಬಗ್ಗೆ ವಿಜಯ್​ ದೇವರಕೊಂಡ ಅವರಾಗಲಿ, ರಶ್ಮಿಕಾ ಮಂದಣ್ಣ ಅವರಾಗಲಿ ಮಾಹಿತಿ ಬಿಟ್ಟುಕೊಟ್ಟಿಲ್ಲ. ಸದ್ಯಕ್ಕೆ ರಶ್ಮಿಕಾ ಮಂದಣ್ಣ ಅವರು ಬ್ಯುಸಿ ಆಗಿದ್ದಾರೆ. ‘ಪುಷ್ಪ 2’ ಸಿನಿಮಾದ ಬಿಡುಗಡೆಗೆ ಅವರು ಕಾದಿದ್ದಾರೆ. ಅಲ್ಲದೇ, ‘ಕುಬೇರ’, ‘ದಿ ಗರ್ಲ್​ಫ್ರೆಂಡ್​’, ‘ಸಿಕಂದರ್​’ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಈ ಎಲ್ಲ ಪ್ರಾಜೆಕ್ಟ್​ಗಳ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ