Rashmika Mandanna: ಕೇಳಿಬರ್ತಿದೆ ರಶ್ಮಿಕಾ-ವಿಜಯ್​ ದೇವರಕೊಂಡ ಫ್ಯಾನ್ಸ್​ ಖುಷಿಪಡುವ ಸುದ್ದಿ; ಅಧಿಕೃತ ಆಗೋದಷ್ಟೇ ಬಾಕಿ

Rashmika Mandanna | Vijay Devarakonda: ಚಿತ್ರರಂಗದಲ್ಲಿ ವಿಜಯ್​ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಸಖತ್​ ಬ್ಯುಸಿ ಆಗಿದ್ದಾರೆ. ಇಬ್ಬರ ಕೈಯಲ್ಲೂ ಹಲವು ಆಫರ್​ಗಳಿವೆ.

Rashmika Mandanna: ಕೇಳಿಬರ್ತಿದೆ ರಶ್ಮಿಕಾ-ವಿಜಯ್​ ದೇವರಕೊಂಡ ಫ್ಯಾನ್ಸ್​ ಖುಷಿಪಡುವ ಸುದ್ದಿ; ಅಧಿಕೃತ ಆಗೋದಷ್ಟೇ ಬಾಕಿ
ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ
Follow us
TV9 Web
| Updated By: ಮದನ್​ ಕುಮಾರ್​

Updated on: Jul 07, 2022 | 8:02 AM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಖ್ಯಾತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಿನಿಮಾ ಮಾತ್ರವಲ್ಲದೇ ಕೆಲವು ವೈಯಕ್ತಿಕ ಕಾರಣದಿಂದಲೂ ಅವರು ಆಗಾಗ ಸುದ್ದಿ ಆಗುತ್ತಾರೆ. ನಟ ವಿಜಯ್​ ದೇವರಕೊಂಡ (Vijay Devarakonda) ಜೊತೆ ಅವರಿಗೆ ಎಂಥ ಬಾಂಧವ್ಯ ಇದೆ ಎಂಬುದನ್ನು ಹೊಸದಾಗಿ ಹೇಳಬೇಕಾದ್ದಿಲ್ಲ. ‘ಗೀತ ಗೋವಿಂದಂ’, ‘ಡಿಯರ್​ ಕಾಮ್ರೇಡ್​’ ಸಿನಿಮಾಗಳಲ್ಲಿ ಜೋಡಿಯಾಗಿ ನಟಿಸಿದ ಬಳಿಕ ಅವರಿಬ್ಬರ ನಡುವೆ ರಿಯಲ್​ ಲೈಫ್​ನಲ್ಲಿಯೂ ಆಪ್ತತೆ ಹೆಚ್ಚಿತು. ಅನೇಕ ಬಾರಿ ಅವರಿಬ್ಬರು ಒಟ್ಟಾಗಿ ಕಾಣಿಸಿಕೊಂಡಿದ್ದಿದೆ. ಹಾಗಾಗಿ ಅವರ ಬಗ್ಗೆ ಹಲವು ಗಾಸಿಪ್​ಗಳು ಹರಿದಾಡುತ್ತವೆ. ಈಗ ಈ ಜೋಡಿ ಬಗ್ಗೆ ಹೊಸ ನ್ಯೂಸ್​ ಕೇಳಿಬಂದಿದೆ. ಮತ್ತೆ ಇವರಿಬ್ಬರನ್ನು ತೆರೆಮೇಲೆ ಒಂದಾಗಿಸಲು ಪ್ಲ್ಯಾನ್​ ಮಾಡಲಾಗುತ್ತಿದೆ. ‘ಜನ ಗಣ ಮನ’ (Jana Gana Mana) ಚಿತ್ರದ ಇನ್​ಸೈಡ್​ ಮೂಲಗಳಿಂದ ಈ ವಿಷಯ ಲೀಕ್​ ಆಗಿದೆ.

ವಿಜಯ್​ ದೇವರಕೊಂಡ ಅವರು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಮಿಂಚಬೇಕು ಎಂದು ಕಸರತ್ತು ನಡೆಸುತ್ತಿದ್ದಾರೆ. ಅವರ ‘ಲೈಗರ್​’ ಸಿನಿಮಾ ಹಲವು ಭಾಷೆಗಳಲ್ಲಿ ರಿಲೀಸ್​ ಆಗಲಿದೆ. ಬಳಿಕ ಅವರು ನಟಿಸಲಿರುವ ‘ಜನ ಗಣ ಮನ’ ಚಿತ್ರ ಕೂಡ ಪ್ಯಾನ್ ಇಂಡಿಯಾ ಮಟ್ಟದಲ್ಲೇ ಮೂಡಿಬರಲಿದೆ. ಆ ಚಿತ್ರದ ಒಂದು ವಿಶೇಷ ಹಾಡಿನಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್​ ದೇವರಕೊಂಡ ಅವರನ್ನು ಒಂದಾಗಿಸುವ ಪ್ರಯತ್ನ ನಡೆಯುತ್ತಿದೆ ಎನ್ನಲಾಗುತ್ತಿದೆ.

ರಶ್ಮಿಕಾ ಮಂದಣ್ಣ ಮತ್ತು ವಿಜಯ್​ ದೇವರಕೊಂಡ ಅವರನ್ನು ತೆರೆ ಮೇಲೆ ಮತ್ತೊಮ್ಮೆ ಜೋಡಿಯಾಗಿ ನೋಡಬೇಕು ಎಂಬುದು ಅಭಿಮಾನಿಗಳ ಆಸೆ. ಅಂಥ ಆಸೆ ಇಟ್ಟುಕೊಂಡಿರುವ ಅಭಿಮಾನಿಗಳಿಗೆ ಈ ಸುದ್ದಿ ಕೇಳಿ ಖುಷಿ ಆಗಿದೆ. ಆದರೆ ಚಿತ್ರತಂಡದಿಂದ ಈ ಮಾಹಿತಿ ಅಧಿಕೃತವಾಗಿ ಪ್ರಕಟವಾಗಲಿ ಎಂದು ಎಲ್ಲರೂ ಕಾಯುತ್ತಿದ್ದಾರೆ. ಈ ಸಿನಿಮಾಗೆ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್​ ಅವರು ನಿರ್ದೇಶನ ಮಾಡಲಿದ್ದಾರೆ. ನಾಯಕಿಯಾಗಿ ಪೂಜಾ ಹೆಗ್ಡೆ ನಟಿಸಲಿದ್ದಾರೆ. 2023ರ ಆಗಸ್ಟ್​ನಲ್ಲಿ ‘ಜನ ಗಣ ಮನ’ ರಿಲೀಸ್​ ಆಗಲಿದೆ.

ಚಿತ್ರರಂಗದಲ್ಲಿ ವಿಜಯ್​ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಸಖತ್​ ಬ್ಯುಸಿ ಆಗಿದ್ದಾರೆ. ಇಬ್ಬರ ಕೈಯಲ್ಲೂ ಹಲವು ಆಫರ್​ಗಳಿವೆ. ಬಾಲಿವುಡ್​ನಲ್ಲಿ ರಶ್ಮಿಕಾ ನಟಿಸಿರುವ ‘ಗುಡ್​ಬೈ​’, ‘ಮಿಷನ್​ ಮಜ್ನು’ ಚಿತ್ರಗಳು ಬಿಡುಗಡೆಗೆ ಸಜ್ಜಾಗುತ್ತಿವೆ. ದಕ್ಷಿಣ ಭಾರತದಲ್ಲೂ ಅವರಿಗೆ ಭರ್ಜರಿ ಡಿಮ್ಯಾಂಡ್​ ಇದೆ. ದಳಪತಿ ವಿಜಯ್​ ಅವರಂತಹ ಸ್ಟಾರ್​ ನಟರ ಸಿನಿಮಾಗಳು ರಶ್ಮಿಕಾ ಕೈ ಸೇರುತ್ತಿವೆ.

ಇದನ್ನೂ ಓದಿ: ಬೋಲ್ಡ್ ಫೋಟೋ ಹಂಚಿಕೊಂಡು ಪಡ್ಡೆಗಳ ನಿದ್ದೆ ಕದ್ದ ನಟಿ ರಶ್ಮಿಕಾ ಮಂದಣ್ಣ; ಫ್ಯಾನ್ಸ್ ಹೇಳಿದ್ದೇನು?

Rashmika Mandanna: ರಶ್ಮಿಕಾ ಮಾತ್ರವಲ್ಲ, ಅವರ ನಾಯಿ ಬಗ್ಗೆಯೂ ಗಾಸಿಪ್​; ಬಹಿರಂಗವಾಗಿಯೇ ಸ್ಪಷ್ಟನೆ ನೀಡಿದ ನಟಿ

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?