ವಿಜಯ್ ದೇವರಕೊಂಡ-ರಶ್ಮಿಕಾ ಸಂಬಂಧ ಮುರಿದು ಬಿದ್ದು ಎಷ್ಟು ಸಮಯ ಆಯ್ತು?

TV9 Digital Desk

| Edited By: Rajesh Duggumane

Updated on: Aug 03, 2022 | 6:35 AM

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ‘ಗೀತ ಗೋವಿಂದಂ’ ಹಾಗೂ ‘ಡಿಯರ್ ಕಾಮ್ರೇಡ್’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ. ‘ಗೀತ ಗೋವಿಂದಂ’ ಸಿನಿಮಾ ಸೂಪರ್ ಡೂಪರ್ ಹಿಟ್ ಆಯಿತು. ಇಬ್ಬರ ಕೆಮಿಸ್ಟ್ರಿ ಸಖತ್ ಕೆಲಸ ಮಾಡಿತ್ತು.

ವಿಜಯ್ ದೇವರಕೊಂಡ-ರಶ್ಮಿಕಾ ಸಂಬಂಧ ಮುರಿದು ಬಿದ್ದು ಎಷ್ಟು ಸಮಯ ಆಯ್ತು?
ವಿಜಯ್​ ದೇವರಕೊಂಡ

ವಿಜಯ್ ದೇವರಕೊಂಡ (Vijay Devarakonda) ಹಾಗೂ ರಶ್ಮಿಕಾ ಮಂದಣ್ಣ (Rashmika Mandanna) ಅವರು ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಬಗ್ಗೆ ಹಲವು ವರದಿಗಳು ಹರಿದಾಡಿದ್ದವು. ಆದರೆ, ಈ ವಿಚಾರವನ್ನು ಯಾರೊಬ್ಬರೂ ಅಧಿಕೃತ ಮಾಡಿಲ್ಲ. ಮುಂಬೈನ ಹಲವು ಕಡೆಗಳಲ್ಲಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್​ ದೇವರಕೊಂಡ ಒಟ್ಟಾಗಿ ಕಾಣಿಸಿಕೊಂಡಿದ್ದಿದೆ. ಇಬ್ಬರೂ ಹಲವು ಕಡೆಗಳಲ್ಲಿ ಸುತ್ತಾಟ ನಡೆಸಿದ್ದಾರೆ. ಈ ಕಾರಣಕ್ಕೆ ಇಬ್ಬರೂ ಡೇಟಿಂಗ್​​ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಈಗ ಇವರ ರಿಲೇಶನ್​ಶಿಪ್​ ಬಗ್ಗೆ ಹೊಸ ಅಪ್​ಡೇಟ್​ ಕೇಳಿ ಬಂದಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಅಚ್ಚರಿ ಹೊರ ಹಾಕಿದ್ದಾರೆ.

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ‘ಗೀತ ಗೋವಿಂದಂ’ ಹಾಗೂ ‘ಡಿಯರ್ ಕಾಮ್ರೇಡ್’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ. ‘ಗೀತ ಗೋವಿಂದಂ’ ಸಿನಿಮಾ ಸೂಪರ್ ಡೂಪರ್ ಹಿಟ್ ಆಯಿತು. ಇಬ್ಬರ ಕೆಮಿಸ್ಟ್ರಿ ಸಖತ್ ಕೆಲಸ ಮಾಡಿತ್ತು. ಆ ಸಂದರ್ಭದಲ್ಲಿ ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿತ್ತು. ಆದರೆ, ಯಾರೊಬ್ಬರೂ ಈ ವಿಚಾರವನ್ನು ಒಪ್ಪಿಕೊಂಡಿಲ್ಲ. ಇಬ್ಬರೂ ಬೆಸ್ಟ್ ಫ್ರೆಂಡ್ಸ್ ಎಂದೇ ಹೇಳಿಕೊಂಡರು.

ಈಗ ರಶ್ಮಿಕಾ ಮಂದಣ್ಣ ಹಾಗೂ ವಿಜಯ್​ ದೇವರಕೊಂಡ ಅವರ ರಿಲೇಶನ್​ಶಿಪ್ ಬಗ್ಗೆ ಹೊಸ ಅಪ್​ಡೇಟ್​ ಸಿಕ್ಕಿದೆ. ಇಬ್ಬರೂ ಬೇರೆ ಆಗಿ ಎರಡು ವರ್ಷಗಳೇ ಕಳೆದಿವೆ ಎಂದು ಇಟೈಮ್ಸ್ ವರದಿ ಮಾಡಿದೆ. ಇವರ ಸಂಬಂಧ ಮುರಿದು ಬಿದ್ದರೂ ಇಬ್ಬರೂ ಫ್ರೆಂಡ್ಸ್ ಆಗಿ ಮುಂದುವರಿದಿದ್ದಾರೆ. ಒಬ್ಬರ ವೃತ್ತಿಜೀವನಕ್ಕೆ ಮತ್ತೊಬ್ಬರು ಬೆಂಬಲ ನೀಡುತ್ತಾ ಸಾಗುತ್ತಿದ್ದಾರೆ.

ಇದನ್ನೂ ಓದಿ

ಇದನ್ನೂ ಓದಿ: ‘ರಶ್ಮಿಕಾ ಮಂದಣ್ಣ ಡಾರ್ಲಿಂಗ್’; ಕರಣ್ ಜೋಹರ್ ಶೋನಲ್ಲಿ ಮಾತನಾಡಿದ ವಿಜಯ್ ದೇವರಕೊಂಡ

ರಶ್ಮಿಕಾ ಮಂದಣ್ಣ ಅವರು ಸಾಕಷ್ಟು ಬ್ಯುಸಿ ಇದ್ದಾರೆ. ಅವರು ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಬ್ಯುಸಿ ಇದ್ದಾರೆ. ಅವರ ಹಲವು ಸಿನಿಮಾಗಳು ರಿಲೀಸ್​ಗೆ ರೆಡಿ ಇದೆ. ವಿಜಯ್ ದೇವರಕೊಂಡ ನಟನೆಯ ‘ಲೈಗರ್’ ಚಿತ್ರ ರಿಲೀಸ್​ಗೆ ರೆಡಿ ಇದೆ. ಆಗಸ್ಟ್ 25ರಂದು ಬಿಡುಗಡೆ ಆಗುತ್ತಿರುವ ಸಿನಿಮಾಗಾಗಿ ಫ್ಯಾನ್ಸ್​ ತುದಿಗಾಲಿನಲ್ಲಿ ನಿಂತಿದ್ದಾರೆ. ಈ ಚಿತ್ರಕ್ಕೆ ಪುರಿ ಜಗನ್ನಾಥ್ ಅವರು ನಿರ್ದೇಶನ ಮಾಡಿದ್ದಾರೆ. ಅನನ್ಯಾ ಪಾಂಡೆ ಚಿತ್ರದ ನಾಯಕಿ. ಈ ಚಿತ್ರದ ಮೂಲಕ ವಿಜಯ್ ದೇವರಕೊಂಡ ಬಾಲಿವುಡ್​ಗೆ ಕಾಲಿಡುತ್ತಿದ್ದಾರೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada