Rashmika Mandanna: ಸ್ಥಳ ಒಂದೇ, ಫೋಟೋ ಬೇರೆ; ವೈರಲ್ ಆಯ್ತು ವಿಜಯ್ ದೇವರಕೊಂಡ-ರಶ್ಮಿಕಾ ಫೋಟೋ

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ‘ಗೀತ ಗೋವಿಂದಂ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ತೆರೆಕಂಡ ನಂತರದಲ್ಲಿ ಇಬ್ಬರೂ ಡೇಟಿಂಗ್ ಮಾಡಲು ಆರಂಭಿಸಿದ್ದಾರೆ ಎನ್ನಲಾಗಿದೆ.

Rashmika Mandanna: ಸ್ಥಳ ಒಂದೇ, ಫೋಟೋ ಬೇರೆ; ವೈರಲ್ ಆಯ್ತು ವಿಜಯ್ ದೇವರಕೊಂಡ-ರಶ್ಮಿಕಾ ಫೋಟೋ
ವಿಜಯ್-ರಶ್ಮಿಕಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jan 03, 2023 | 7:06 AM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಸಿನಿಮಾ ಹಾಗೂ ವೈಯಕ್ತಿಕ ವಿಚಾರದಲ್ಲಿ ಆಗಾಗ ಸುದ್ದಿ ಆಗುತ್ತಲೇ ಇರುತ್ತಾರೆ. ಅವರಿಗೆ ಚಿತ್ರರಂಗದಲ್ಲಿ ಬೇಡಿಕೆ ಹೆಚ್ಚುತ್ತಿದೆ. ಮತ್ತೊಂದು ಕಡೆ ಟ್ರೋಲ್ ಕಾಟವೂ ಮಿತಿಮೀರುತ್ತಿದೆ. ಈ ಮಧ್ಯೆ ವಿಜಯ್ ದೇವರಕೊಂಡ (Vijay Devarakonda) ಜತೆಗಿನ ಲವ್ ವಿಚಾರಕ್ಕೆ ರಶ್ಮಿಕಾ ಮಂದಣ್ಣ ಸಖತ್ ಸುದ್ದಿಯಲ್ಲಿದ್ದಾರೆ. ಬ್ರೇಕಪ್ ಮಾಡಿಕೊಂಡಿದ್ದ ಜೋಡಿ ಇತ್ತೀಚೆಗೆ ಪ್ಯಾಚಪ್ ಮಾಡಿಕೊಂಡಿತ್ತು. ಈ ಬೆನ್ನಲ್ಲೇ ಇಬ್ಬರೂ ಸುತ್ತಾಟ ಆರಂಭಿಸಿದ್ದಾರೆ. ಹೊಸ ವರ್ಷದ ಸಂದರ್ಭದಲ್ಲಿ ಹಂಚಿಕೊಂಡಿರುವ ಫೋಟೋ ಸಾಕಷ್ಟು ವೈರಲ್ ಆಗಿದೆ.

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ‘ಗೀತ ಗೋವಿಂದಂ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ತೆರೆಕಂಡ ನಂತರದಲ್ಲಿ ಇಬ್ಬರೂ ಡೇಟಿಂಗ್ ಮಾಡಲು ಆರಂಭಿಸಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಇವರ ಸಂಬಂಧದಲ್ಲಿ ಬಿರುಕು ಮೂಡಿತ್ತು. ಹೀಗಾಗಿ ಇವರು ಒಟ್ಟಾಗಿ ಕಾಣಿಸಿಕೊಳ್ಳುವುದು ಕಡಿಮೆ ಆಗಿತ್ತು. ಈಗ ಈ ಜೋಡಿ ಮತ್ತೆ ಒಂದಾಗಿದೆ.

ಹೊಸ ವರ್ಷ ಆಚರಿಸಲು ಈ ಜೋಡಿ ವಿದೇಶಕ್ಕೆ ಹಾರಿದೆ. ಸಮುದ್ರದ ಸಮೀಪದಲ್ಲಿರುವ ಸ್ವಿಮ್ಮಿಂಗ್​ಪೂಲ್​ನಲ್ಲಿ ನಿಂತಿರುವ ಫೋಟೋ ಅನ್ನು ವಿಜಯ್ ದೇವರಕೊಂಡ ಹಂಚಿಕೊಂಡಿದ್ದಾರೆ. ಹಿಂಭಾಗದಲ್ಲಿ ರೆಸಾರ್ಟ್​​ನ ಒಂದು ಭಾಗ ಕಾಣುತ್ತದೆ. ರಶ್ಮಿಕಾ ಮಂದಣ್ಣ ಕಳೆದ ಅಕ್ಟೋಬರ್​​ನಲ್ಲಿ ಇದೇ ಜಾಗದಲ್ಲಿ ನಿಂತು ಫೋಟೋ ಕ್ಲಿಕ್ಕಿಸಿಕೊಂಡಿದ್ದರು. ಅವರ ಫೋಟೋದ ಬ್ಯಾಕ್​ಗ್ರೌಂಡ್​ ವಿಜಯ್ ಹಂಚಿಕೊಂಡಿರುವ ಫೋಟೋದ ಬ್ಯಾಕ್​ಗ್ರೌಂಡ್ ಒಂದೇ ರೀತಿ ಇದೆ. ಹೀಗಾಗಿ, ಈ ಜೋಡಿ ಇದೇ ಹೋಟೆಲ್​ಗೆ ಮತ್ತೆ ಹೋಗಿದೆ ಎನ್ನಲಾಗಿದೆ. ಈ ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ರಶ್ಮಿಕಾ ಕೂಡ ಬೀಚ್​ ಬದಿಯಲ್ಲಿ ನಿಂತು ಫೋಟೋ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ
Image
Rashmika Mandanna: ಎದೆ ಮೇಲೆ ಆಟೋಗ್ರಾಫ್​ ಹಾಕಿ ಅಂತ ಹಠ ಹಿಡಿದ ರಶ್ಮಿಕಾ ಮಂದಣ್ಣ ಅಭಿಮಾನಿ; ಮುಂದೇನಾಯ್ತು?
Image
Rashmika Mandanna: ‘ಇಂದು ನಾನೇ ಗೋಲ್ಡನ್​ ಗರ್ಲ್​’ ಅಂತ ಪೋಸ್​ ನೀಡಿದ ರಶ್ಮಿಕಾ ಮಂದಣ್ಣ; ಆದ್ರೆ ಜನ ಹೇಳಿದ್ದೇನು?
Image
Rashmika Mandanna: ಬಾಲಿವುಡ್​ ಸೇರಿದ ರಶ್ಮಿಕಾ ಮಂದಣ್ಣ ಹೊಸ ಅವತಾರ ಹೇಗಿದೆ ನೋಡಿ; ಫೋಟೋ ವೈರಲ್​
Image
Rashmika Mandanna: ಸೆಲ್ಫಿ ಕೇಳಿದ ಅಭಿಮಾನಿಗಳ ಜತೆ ರಶ್ಮಿಕಾ ಮಂದಣ್ಣ ನಡೆದುಕೊಂಡಿದ್ದು ಹೇಗೆ? ವಿಡಿಯೋ ವೈರಲ್​

ವಿಜಯ್ ದೇವರಕೊಂಡ ಅವರಿಗೆ 2022 ಉತ್ತಮವಾಗಿರಲಿಲ್ಲ. ‘ಲೈಗರ್’ ಸಿನಿಮಾ ಸೋತಿದೆ. ರಶ್ಮಿಕಾ ನಟನೆಯ ಮೊದಲ ಹಿಂದಿ ಚಿತ್ರ ‘ಗುಡ್​ಬೈ’ ಕೂಡ ಫ್ಲಾಪ್ ಆಗಿದೆ. ಇದನ್ನು ಮರೆತು ಈ ಜೋಡಿ ವಿದೇಶದಲ್ಲಿ ಹಾಯಾಗಿ ಸಮಯ ಕಳೆದಿದೆ. ಹೊಸ ವರ್ಷಕ್ಕೆ ಹೊಸ ಸ್ಟಾರ್ಟ್ ನೀಡಲು ಇವರು ನಿರ್ಧರಿಸಿದಂತಿದೆ.

ಇದನ್ನೂ ಓದಿ: 12 ಗಂಟೆ ವಿಚಾರಣೆಗೆ ಒಳಗಾದ ವಿಜಯ್ ದೇವರಕೊಂಡ; ‘ಇದು ಸೈಡ್​ ಎಫೆಕ್ಟ್​’ ಎಂದ ನಟ

ರಶ್ಮಿಕಾ ಮಂದಣ್ಣ ನಟನೆಯ ‘ವಾರಿಸು’ ಚಿತ್ರ ಜನವರಿ 12ರಂದು ತೆರೆಗೆ ಬರುತ್ತಿದೆ. ದಳಪತಿ ವಿಜಯ್ ನಟನೆಯ ಈ ಸಿನಿಮಾ ಸಂಕ್ರಾಂತಿ ನಿಮಿತ್ತ ರಿಲೀಸ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:03 am, Tue, 3 January 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ