AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಒಂದಾದ ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ: ಐದರ ರಹಸ್ಯವೇನು?

Vijay-Rashmika: ನಟಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಮತ್ತೆ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಅಂದಹಾಗೆ ಈ ಐದರ ಗುಟ್ಟೇನು?

ಮತ್ತೆ ಒಂದಾದ ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ: ಐದರ ರಹಸ್ಯವೇನು?
ವಿಜಯ್-ರಶ್ಮಿಕಾ
ಮಂಜುನಾಥ ಸಿ.
|

Updated on: Aug 15, 2023 | 10:37 PM

Share

ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ (Vijay Deverakonda) ಬಗ್ಗೆ ಗಾಳಿ ಸುದ್ದಿಗಳು ಆಗಾಗ್ಗೆ ಹರಿದಾಡುತ್ತಲೇ ಇರುತ್ತವೆ. ಆದರೆ ಇವರಿಬ್ಬರು ಮಾತ್ರ, ತಾವು ಒಳ್ಳೆಯ ಗೆಳೆಯರು ಎಂದೇ ಹೇಳಿಕೊಂಡು ಒಟ್ಟೊಟ್ಟಿಗೆ ತಿರುಗಾಡುತ್ತಾ ಇದ್ದಾರೆ. ಇದೀಗ ಬಹಳ ದಿನಗಳ ನಂತರ ಮತ್ತೆ ಈ ಜೋಡಿ ಒಟ್ಟಿಗೆ ಕಾಣಿಸಿಕೊಂಡಿದೆ, ಆದರೆ ತಮ್ಮ ಭೇಟಿಯನ್ನು ತಾವೇ ಬಹಿರಂಗಗೊಳಿಸಿದೆ ಈ ಜೋಡಿ. ಅದಕ್ಕೆ ಕಾರಣವೂ ಇದೆ.

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಮೊದಲ ಬಾರಿಗೆ ಒಟ್ಟಿಗೆ ನಟಿಸಿದ್ದ ‘ಗೀತ ಗೋವಿಂದಂ’ ಸಿನಿಮಾದಲ್ಲಿ ಈ ಸಿನಿಮಾ ಬಿಡುಗಡೆ ಆಗಿ ಇಂದಿಗೆ (ಆಗಸ್ಟ್ 15) ಐದು ವರ್ಷಗಳಾಗಿವೆ. ಈ ಸಿನಿಮಾದಲ್ಲಿ ರಶ್ಮಿಕಾ ಸಖತ್ ಬೋಲ್ಡ್ ಆಗಿ ಕೆಲ ದೃಶ್ಯಗಳಲ್ಲಿ ನಟಿಸಿದ್ದರು. ವಿಜಯ್ ಹಾಗೂ ರಶ್ಮಿಕಾರ ಲಿಪ್​ಲಾಕ್ ದೃಶ್ಯಗಳಂತೂ ಸಖತ್ ವೈರಲ್ ಆಗಿದ್ದವು. ಈ ಸಿನಿಮಾದಿಂದಾಗಿಯೇ ರಶ್ಮಿಕಾ ಮಂದಣ್ಣ ಟಾಲಿವುಡ್​ನಲ್ಲಿ ಬೇಡಿಕೆಯ ನಟಿಯೂ ಆದರು. ವಿಜಯ್​ಗೆ ಸಹ ಈ ಸಿನಿಮಾದಿಂದಲೇ ರೊಮ್ಯಾಂಟಿಕ್ ಹೀರೋ ಉಪಾದಿ ದೊರೆಯಿತು. ಈ ಸಿನಿಮಾ ಬಿಡುಗಡೆ ಆಗಿ ಐದು ವರ್ಷವಾದ ಕಾರಣ ಈ ಜೋಡಿ ಒಂದಾಗಿ ಖುಷಿ ಹಂಚಿಕೊಂಡಿದ್ದಾರೆ. ಜೊತೆಗೆ ಸಿನಿಮಾದ ನಿರ್ದೇಶಕರೂ ಇದ್ದರು.

ವಿಜಯ್ ದೇವರಕೊಂಡ ಇನ್​ಸ್ಟಾಗ್ರಾಂ ಪೋಸ್ಟ್

‘ಗೀತ ಗೋವಿಂದಂ’ ಸಿನಿಮಾ ಬಿಡುಗಡೆ ಆಗಿ ಐದು ವರ್ಷಗಳಾದ ಕಾರಣ ವಿಜಯ್, ರಶ್ಮಿಕಾ ಹಾಗೂ ಸಿನಿಮಾದ ನಿರ್ದೇಶಕ ಪರಶುರಾಂ ಒಟ್ಟಿಗೆ ಸೇರಿದ್ದಾರೆ. ಮೂವರು ಒಟ್ಟಿಗಿರುವ ಚಿತ್ರಗಳನ್ನು ವಿಜಯ್ ದೇವರಕೊಂಡ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ವಿಜಯ್ ಹಾಗೂ ರಶ್ಮಿಕಾ ಐದು ಬೆರಳುಗಳನ್ನು ತೋರಿ ತಮ್ಮ ಸಿನಿಮಾಕ್ಕೆ ಐದು ವರ್ಷವಾದುದರ ಬಗ್ಗೆ ಹೆಮ್ಮೆ ಪಟ್ಟಿದ್ದಾರೆ.

ಇದನ್ನೂ ಓದಿ:‘ಡಿ51’ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿ; ಧನುಶ್​ ಜೊತೆ ನಟಿಸುವ ಅವಕಾಶ ಸಿಕ್ಕಿದ್ದಕ್ಕೆ ಖುಷಿಯೋ ಖುಷಿ

ಇದೀಗ ‘ಗೀತ ಗೋವಿಂದಂ’ ಸಿನಿಮಾದ ಎರಡನೇ ಭಾಗ ತಯಾರಾಗುತ್ತಿದೆ. ಸಿನಿಮಾದ ಕತೆ ಅಂತಿಮವಾಗಿದ್ದು ಕೆಲವೇ ದಿನಗಳಲ್ಲಿ ಚಿತ್ರೀಕರಣ ಶುರುವಾಗಲಿದೆ. ‘ಗೀತ ಗೋವಿಂದಂ’ ಸಿನಿಮಾವನ್ನು ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ನಿರ್ಮಾಣ ಮಾಡಿದ್ದರು, ‘ಗೀತ ಗೋವಿಂದಂ2’ ಸಿನಿಮಾವನ್ನೂ ಅವರೇ ನಿರ್ಮಾಣ ಮಾಡಬೇಕಿತ್ತು, ಆದರೆ ನಿರ್ಮಾಪಕ ದಿಲ್ ರಾಜು ಮಧ್ಯದಲ್ಲಿ ತಲೆ ಹಾಕಿ ಪ್ರಾಜೆಕ್ಟ್ ಅನ್ನು ತಾವು ಟೇಕ್​ಆಫ್ ಮಾಡಿದ್ದಾರೆ. ಈ ಬಗ್ಗೆ ಅಲ್ಲು ಅರವಿಂದ್ ತೀವ್ರ ಅಸಮಾಧಾನ ಸಹ ಹೊರಹಾಕಿದ್ದಾರೆ.

ಏನೇ ಆಗಲಿ ‘ಗೀತಾ ಗೋವಿಂದಂ 2’ ಸಿನಿಮಾ ಬರುತ್ತಿರುವುದು ಅಭಿಮಾನಿಗಳಿಗಂತೂ ಖುಷಿ ಇದೆ. ಸಿನಿಮಾವನ್ನು ಪರಶುರಾಮ್ ಅವರೇ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ವಿಜಯ್ ದೇವರಕೊಂಡ ನಾಯಕನಾಗಿರುವುದು ಖಾತ್ರಿಯಾಗಿದೆ. ಆದರೆ ರಶ್ಮಿಕಾ ಮಂದಣ್ಣ ಈ ಸಿನಿಮಾದಲ್ಲಿಯೂ ಇರಲಿದ್ದಾರೆಯೇ ಎಂಬುದು ಇನ್ನೂ ಖಾತ್ರಿಯಾಗಿಲ್ಲ. ಆದರೆ ಇಂದಿನ ಚಿತ್ರ ನೋಡಿದರೆ ‘ಗೀತ ಗೋವಿಂದಂ 2’ ಸಿನಿಮಾದಲ್ಲಿ ರಶ್ಮಿಕಾ ಇರಲಿದ್ದಾರೆ ಎಂದು ಊಹಿಸಬಹುದು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ