AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಹನಿಮೂನ್ ಫೋಟೋ ವೈರಲ್

ಸಿನಿಮಾ ಕೆಲಸಕ್ಕೆ ಬಿಡುವು ನೀಡಿದ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಹನಿಮೂನ್​ಗೆ ತೆರಳಿದ್ದಾರೆ.​​ ಉದಯಪುರದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಈ ತಾರಾ ಜೋಡಿ, ಈಗ ಇದೀಗ ಥೈಲ್ಯಾಂಡ್​ನಲ್ಲಿ ಇದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ರಶ್ಮಿಕಾ ಮತ್ತು ವಿಜಯ್ ಅವರ ಹನಿಮೂನ್ ಫೋಟೋ ವೈರಲ್ ಆಗಿದೆ.

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಹನಿಮೂನ್ ಫೋಟೋ ವೈರಲ್
Rashmika Mandanna, Vijay Deverakonda
ಮದನ್​ ಕುಮಾರ್​
|

Updated on: Mar 22, 2026 | 8:29 AM

Share

ದಕ್ಷಿಣ ಭಾರತದ ಖ್ಯಾತ ಸೆಲೆಬ್ರಿಟಿಗಳಾದ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಅವರು ಮದುವೆಯ ಬಳಿಕ ಹನಿಮೂನ್​​ಗೆ ತೆರಳಿದ್ದಾರೆ. ಈ ನವಜೋಡಿಯ ಹನಿಮೂನ್ (Honeymoon) ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಉದಯಪುರದಲ್ಲಿ ನಡೆದ ಅದ್ದೂರಿ ಮದುವೆಯ ನಂತರ, ಈ ದಂಪತಿ ಥೈಲ್ಯಾಂಡ್‌ಗೆ ಹಾರಿದ್ದಾರೆ. ಅಲ್ಲಿನ ಸುಂದರ ದ್ವೀಪದಲ್ಲಿ ಕಾಲ ಕಳೆಯುತ್ತಿದ್ದಾರೆ. ತಮ್ಮ ಖಾಸಗಿತನವನ್ನು ಕಾಪಾಡಿಕೊಳ್ಳಲು ಯಾವುದೇ ಐಷಾರಾಮಿ ರೆಸಾರ್ಟ್‌ ಬದಲು ವಿಲ್ಲಾವನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ಈಗ ವೈರಲ್ ಆಗಿರುವ ಫೋಟೋದಲ್ಲಿ, ಪ್ರಕೃತಿಯ ನಡುವೆ ಇರುವ ಸುಂದರವಾದ ಮೆಟ್ಟಿಲುಗಳ ಮೇಲೆ ವಿಜಯ್ ಮತ್ತು ರಶ್ಮಿಕಾ ಪರಸ್ಪರ ಪ್ರೀತಿಯಿಂದ ನೋಡುತ್ತಿರುವುದನ್ನು ಕಾಣಬಹುದು. ರಶ್ಮಿಕಾ ಹಳದಿ ಬಣ್ಣದ ಫ್ಲೋರಲ್ ಡ್ರೆಸ್‌ನಲ್ಲಿ ಮಿಂಚುತ್ತಿದ್ದರೆ, ವಿಜಯ್ ಕ್ಯಾಶುವಲ್ ಟೀ-ಶರ್ಟ್ ಮತ್ತು ಪ್ಯಾಂಟ್‌ ಧರಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

‘ಅವರು ಉಳಿದುಕೊಂಡಿರುವ ವಿಲ್ಲಾ ಸಮುದ್ರದ ಕಡೆಗೆ ಮುಖ ಮಾಡಿದ್ದು, ಅತ್ಯಂತ ಆಪ್ತವಾದ ವಾತಾವರಣ ಹೊಂದಿದೆ. ಅವರ ಮದುವೆಯಂತೆಯೇ, ಹನಿಮೂನ್ ಕೂಡ ಅವರ ಸರಳತೆ ಮತ್ತು ವೈಯಕ್ತಿಕ ಇಷ್ಟಗಳಿಗೆ ಸಾಕ್ಷಿಯಾಗಿದೆ’ ಎಂದು ಅವರ ಆಪ್ತ ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ವೈರಲ್ ಆಗಿರುವ ಫೋಟೋಗೆ ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ.

ಫೆಬ್ರವರಿ 26ರಂದು ಉದಯಪುರದ ಐಷಾರಾಮಿ ಹೋಟೆಲ್‌ನಲ್ಲಿ ಇವರಿಬ್ಬರೂ ವಿವಾಹವಾಗಿದ್ದರು. ಈ ಮದುವೆಯು ವಿಜಯ್ ಅವರ ತೆಲುಗು ಸಂಪ್ರದಾಯ ಮತ್ತು ರಶ್ಮಿಕಾ ಅವರ ಕೊಡಗಿನ ಕೊಡವ ಸಂಪ್ರದಾಯಗಳ ಸುಂದರ ಸಮ್ಮಿಲನವಾಗಿತ್ತು. ಕೇವಲ ಆಪ್ತರು ಮತ್ತು ಕುಟುಂಬದವರ ಸಮ್ಮುಖದಲ್ಲಿ ನಡೆದ ಈ ಮದುವೆಯ ಫೋಟೋಗಳು ಈಗಾಗಲೇ ಅಭಿಮಾನಿಗಳ ಮನಗೆದ್ದಿವೆ.

ಇದನ್ನೂ ಓದಿ: ಮುನಿಸಿಕೊಂಡ ಬಾಲಕಿಯನ್ನು ಮನೆಗೆ ಕರೆಸಿ ಊಟ ಬಡಿಸಿದ ರಶ್ಮಿಕಾ ಮಂದಣ್ಣ, ವಿಜಯ್

ಈ ವೈರಲ್ ಆಗಿರುವ ಈ ಜೋಡಿಯ ಹನಿಮೂನ್ ಫೋಟೋಗೆ ಅಭಿಮಾನಿಗಳು ‘ಮೇಡ್ ಫಾರ್ ಈಚ್ ಅದರ್’ ಎಂದು ಕಾಮೆಂಟ್ ಮಾಡುತ್ತಿದ್ದು, ವಿರೋಶ್ ಜೋಡಿಗೆ ಶುಭ ಹಾರೈಸುತ್ತಿದ್ದಾರೆ. ‘ರಣಬಾಲಿ’ ಸಿನಿಮಾದಲ್ಲಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರು ಜೊತೆಯಾಗಿ ನಟಿಸಲಿದ್ದಾರೆ. ಆ ಸಿನಿಮಾ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ