AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಔಟಿಂಗ್ ಹೊರಟ ರಶ್ಮಿಕಾ-ವಿಜಯ್ ದೇವರಕೊಂಡ, ಫೋಟೊ ವೈರಲ್

Vijay-Rashmika: ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಪರಸ್ಪರ ಪ್ರೀತಿಸುತ್ತಿದ್ದಾರೆ ಎಂಬ ಸುದ್ದಿ ಆಗಾಗ್ಗೆ ಹರಿದಾಡುತ್ತಲೇ ಇರುತ್ತದೆ. ಇದೀಗ ಈ ಇಬ್ಬರು ಔಟಿಂಗ್ ಹೋಗಿದ್ದು, ಮುಂಬೈನ ರೆಸ್ಟೊರೆಂಟ್ ಒಂದರಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

ಔಟಿಂಗ್ ಹೊರಟ ರಶ್ಮಿಕಾ-ವಿಜಯ್ ದೇವರಕೊಂಡ, ಫೋಟೊ ವೈರಲ್
ಮಂಜುನಾಥ ಸಿ.
|

Updated on: Nov 24, 2024 | 1:45 PM

Share

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಪರಸ್ಪರ ಪ್ರೀತಿಸುತ್ತಿದ್ದಾರೆ ಎಂಬ ಸುದ್ದಿ ಆಗಾಗ್ಗೆ ಹರಿದಾಡುತ್ತಲೇ ಇರುತ್ತದೆ. ತಮ್ಮ ಪ್ರೀತಿಯ ಸುದ್ದಿಯನ್ನು ರಶ್ಮಿಕಾ ಆಗಲಿ ವಿಜಯ್ ಆಗಲಿ ಒಪ್ಪಿಕೊಂಡಿಲ್ಲ ಆದರೆ ಅಲ್ಲಗಳೆದು ಸಹ ಇಲ್ಲ. ಆಗಾಗ್ಗೆ ಈ ಇಬ್ಬರು ಒಟ್ಟಿಗಿರುವ ಚಿತ್ರಗಳು ವೈರಲ್ ಆಗುತ್ತವೆ. ಆಗ ಇಬ್ಬರ ಲವ್ ಲೈಫ್ ಬಗ್ಗೆ ಕೆಲ ಕಾಲ ಚರ್ಚೆ ಆಗುತ್ತದೆ. ಅದಾದ ಬಳಿಕ ಮತ್ತೆ ಈ ಜೋಡಿಯ ಸುದ್ದಿಯೇ ಇರುವುದಿಲ್ಲ. ಇದೀಗ ಈ ಇಬ್ಬರು ಔಟಿಂಗ್ ಹೋಗಿರುವ ಚಿತ್ರ ವೈರಲ್ ಆಗಿದೆ.

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ರೆಸ್ಟೊರೆಂಟ್ ಒಂದರಲ್ಲಿ ಊಟ ಮಾಡುತ್ತಿರುವ ಚಿತ್ರ ಇದೀಗ ವೈರಲ್ ಆಗಿದೆ. ಇಬ್ಬರೂ ಸಹ ಕ್ಯಾಶುಲ್ ರೀತಿಯ ಬಟ್ಟೆ ಧರಿಸಿ ರೆಸ್ಟೊರೆಂಟ್​ನಲ್ಲಿ ಊಟ ಮಾಡುತ್ತಿದ್ದಾರೆ. ಈ ಚಿತ್ರ ಮುಂಬೈನಲ್ಲಿ ತೆಗೆಯಲಾಗಿದೆ ಎನ್ನಲಾಗುತ್ತಿದೆ. ಇಬ್ಬರೂ ಸಹ ನೀಲಿ ಬಣ್ಣದ ಬಟ್ಟೆ ಧರಿಸಿದ್ದು ಐಶಾರಾಮಿ ರೆಸ್ಟೊರೆಂಟ್​ನಲ್ಲಿ ಒಟ್ಟಿಗೆ ಭೋಜನ ಸವಿಯುತ್ತಿದ್ದಾರೆ. ಸ್ವತಃ ರಶ್ಮಿಕಾ ಮಂದಣ್ಣ ಸಹ ತಮ್ಮ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆದರೆ ವಿಜಯ್​ರ ಚಿತ್ರವನ್ನು ಹಂಚಿಕೊಂಡಿಲ್ಲ.

ವಿಜಯ್ ಹಾಗೂ ರಶ್ಮಿಕಾ ಹೀಗೆ ಒಟ್ಟಿಗೆ ರೆಸ್ಟೊರೆಂಟ್​ಗಳಲ್ಲಿ ಕಾಣಿಸಿಕೊಂಡಿರುವುದು ಇದು ಮೊದಲೇನಲ್ಲ. ಈ ಹಿಂದೆ ಹಲವು ಬಾರಿ ಈ ಜೋಡಿ ಒಟ್ಟಿಗೆ ಕಾಣಿಸಿಕೊಂಡಿದೆ. ಈ ಹಿಂದೆ ಇವರಿಬ್ಬರೂ ವಿದೇಶಿ ಪ್ರವಾಸಗಳಿಗೆ ಸಹ ಹೋಗಿದ್ದರು. ಇಬ್ಬರೂ ಒಟ್ಟಿಗೆ ಪ್ರವಾಸಕ್ಕೆ ಹೋಗಿದ್ದರೂ ಸಹ ಪ್ರತ್ಯೇಕವಾಗಿ ಚಿತ್ರಗಳನ್ನು ಅಪ್​ಲೋಡ್ ಮಾಡಿದ್ದರು. ಇನ್ನು ರಶ್ಮಿಕಾ ಮಂದಣ್ಣ ಎಲ್ಲ ಹಬ್ಬಗಳನ್ನು ಆಚರಣೆ ಮಾಡುವುದು ವಿಜಯ್ ದೇವರಕೊಂಡ ಅವರ ಮನೆಯಲ್ಲಿಯೇ. ಇಬ್ಬರೂ ಪರಸ್ಪರ ಬಹಳ ಆತ್ಮೀಯರಾಗಿದ್ದಾರೆ ಆದರೆ ಈ ಬಗ್ಗೆ ಬಹಿರಂಗವಾಗಿ ಹೇಳಿಕೊಂಡಿಲ್ಲ.

ಇದನ್ನೂ ಓದಿ:‘ಪುಷ್ಪ 2’ ಪ್ರಮೋಷನ್; ಸಖತ್ ಆ್ಯಕ್ಟೀವ್ ಆದ ರಶ್ಮಿಕಾ ಮಂದಣ್ಣ

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮೊದಲಿಗೆ ‘ಗೀತಾ ಗೋವಿಂದಂ’ ತೆಲುಗು ಸಿನಿಮಾದಲ್ಲಿ ನಟಿಸಿದ್ದರು. ಅದಾದ ಬಳಿಕ ‘ಡಿಯರ್ ಕಾಮರೇಡ್’ ಸಿನಿಮಾದಲ್ಲಿ ನಟಿಸಿದರು. ಇದೀಗ ‘ಗೀತ ಗೋವಿಂದಂ 2’ ಸಿನಿಮಾದಲ್ಲಿ ಮತ್ತೆ ಈ ಜೋಡಿ ಒಟ್ಟಿಗೆ ನಟಿಸಲಿದೆ ಎನ್ನಲಾಗುತ್ತಿದೆ. ವಿಜಯ್ ದೇವರಕೊಂಡ ಪ್ರಸ್ತುತ ತಮ್ಮ 12ನೇ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಸಿನಿಮಾವನ್ನು ಗೌತಮ್ ತಿನರುನೇನಿ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾಕ್ಕೆ ಶ್ರೀಲೀಲಾ ನಾಯಕಿಯಾಗಿದ್ದರು ಆ ನಂತರ ಅವರನ್ನು ಬದಲಾಯಿಸಲಾಯ್ತು. ಈ ಸಿನಿಮಾದ ಬಳಿಕ ರಶ್ಮಿಕಾ ಮಂದಣ್ಣ ಜೊತೆಗಿನ ಸಿನಿಮಾದಲ್ಲಿ ವಿಜಯ್ ನಟಿಸಲಿದ್ದಾರೆ.

ಇನ್ನು ರಶ್ಮಿಕಾ ಮಂದಣ್ಣ ಅಂತೂ ಬಹಳ ಬ್ಯುಸಿಯಾಗಿದ್ದಾರೆ. ರಶ್ಮಿಕಾ ದೇವರಕೊಂಡ ನಟನೆಯ ‘ಪುಷ್ಪ 2’ ಸಿನಿಮಾ ಡಿಸೆಂಬರ್ 05 ಕ್ಕೆ ಬಿಡುಗಡೆ ಆಗಲಿದೆ. ಬಾಲಿವುಡ್​ನ ‘ಛಾವಾ’ ಸಿನಿಮಾದಲ್ಲಿ ವಿಕ್ಕಿ ಕೌಶಲ್ ಜೊತೆ ನಟಿಸಿದ್ದು ಆ ಸಿನಿಮಾ ಸಹ ಶೀಘ್ರವೇ ತೆರೆಗೆ ಬರಲಿದೆ. ತೆಲುಗಿನಲ್ಲಿ ‘ರೇನ್​ಬೋ’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅದರ ಜೊತೆಗೆ ಕನ್ನಡಿಗ ದೀಕ್ಷಿತ್ ಶೆಟ್ಟಿ ನಟಿಸಿರುವ ‘ಗರ್ಲ್​ಫ್ರೆಂಡ್’ ಸಿನಿಮಾದಲ್ಲಿಯೂ ರಶ್ಮಿಕಾ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ