AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆಯ ಮೊದಲ ಫೋಟೋ ವೈರಲ್

Rashmika Mandanna Marriage Photo: ಪ್ಯಾನ್ ಇಂಡಿಯಾ ನಟಿ ರಶ್ಮಿಕಾ ಮಂದಣ್ಣ ಅವರು ವಿಜಯ್ ದೇವರಕೊಂಡ ಜೊತೆ ಸಪ್ತಪದಿ ತುಳಿದಿದ್ದಾರೆ. ರಾಜಸ್ಥಾನದಲ್ಲಿ ನಡೆದ ಈ ಅದ್ದೂರಿ ವಿವಾಹದ ಫೋಟೋಗಳನ್ನು ಅವರಿಬ್ಬರು ಈಗ ಪೋಸ್ಟ್ ಮಾಡಿದ್ದಾರೆ. ವಿರೋಶ್ ಮದುವೆಯ ಕಲರ್​ಫುಲ್ ಕ್ಷಣಗಳು ಈ ಫೋಟೋದಲ್ಲಿ ಸೆರೆಯಾಗಿವೆ. ಫೋಟೋಗಳು ವೈರಲ್ ಆಗಿವೆ.

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆಯ ಮೊದಲ ಫೋಟೋ ವೈರಲ್
Vijay Deverakonda, Rashmika Mandanna
ಮದನ್​ ಕುಮಾರ್​
|

Updated on:Feb 26, 2026 | 7:03 PM

Share

ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ (Vijay Deverakonda) ಅವರು ಮದುವೆ ಆಗಿದ್ದಾರೆ. ಫೆಬ್ರವರಿ 26ರಂದು ಅದ್ದೂರಿಯಾಗಿ ವಿವಾಹ ನಡೆದಿದೆ. ಮದುವೆ ಫೋಟೋ ನೋಡಲು ಕಾಯುತ್ತಿದ್ದ ಅಭಿಮಾನಿಗಳಿಗಾಗಿ ರಶ್ಮಿಕಾ (Rashmika Mandanna) ಮತ್ತು ವಿಜಯ್ ಮೊದಲ ಪೋಸ್ಟ್ ಮಾಡಿದ್ದಾರೆ. ತಮ್ಮ ಮದುವೆಯ ಸುಂದರ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವಿರೋಶ್ ವಿವಾಹದ ಫೋಟೋಗಳು (Virosh Marriage Photo) ಕ್ಷಣಾರ್ಧದಲ್ಲಿ ವೈರಲ್ ಆಗಿವೆ. ಸತಿ-ಪತಿ ಆಗಿರುವ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರಿಗೆ ಅಭಿಮಾನಿಗಳು, ಸೆಲೆಬ್ರಿಟಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

ತೆಲುಗು ಸಂಪ್ರದಾಯದಂತೆ ವಿರೋಶ್ ಮದುವೆ ನಡೆದಿದೆ. ಈ ಮದುವೆಗೆ ಕುಟುಂಬದವರು ಮತ್ತು ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ಅಂದಾಜು 100 ಮಂದಿ ಮಾತ್ರ ಈ ಮದುವೆಗೆ ಹಾಜರಿ ಹಾಕಿದ್ದಾರೆ ಎನ್ನಲಾಗಿದೆ. ತೀರಾ ಇತ್ತೀಚಿನ ದಿನಗಳ ತನಕ ಮದುವೆ ವಿಷಯವನ್ನು ಗೌಪ್ಯವಾಗಿ ಇಟ್ಟಿದ್ದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರು ಈಗ ಫೋಟೋ ಶೇರ್ ಮಾಡಿದ್ದಾರೆ.

ಹಲವು ವರ್ಷಗಳಿಂದ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಡೇಟಿಂಗ್ ಮಾಡುತ್ತಿದ್ದರು. ‘ಗೀತ ಗೋವಿಂದಂ’, ‘ಡಿಯರ್ ಕಾಮ್ರೇಡ್’ ಸಿನಿಮಾಗಳಲ್ಲಿ ಜೊತೆಯಾಗಿ ನಟಿಸಿದ್ದ ಅವರ ನಡುವೆ ಪ್ರೀತಿ ಚಿಗುರಿತ್ತು. ಆ ಬಗ್ಗೆ ಇಡೀ ಜಗತ್ತಿಗೆ ಅನುಮಾನ ಇದ್ದರೂ ಕೂಡ ಅವರು ಬಹಿರಂಗವಾಗಿ ಏನನ್ನೂ ಹೇಳಿಕೊಂಡಿರಲಿಲ್ಲ. ಈಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಇದನ್ನೂ ಓದಿ: ಶೆಟ್ಟಿ ಗ್ಯಾಂಗ್ ಬಿಟ್ಟು ಕನ್ನಡದ ಕೆಲವರಿಗೆ ಮಾತ್ರ ಮದುವೆ ಆಹ್ವಾನ ನೀಡಿದ ರಶ್ಮಿಕಾ

‘ನನ್ನ ಗಂಡನನ್ನು ನಿಮಗೆ ಪರಿಚಯಿಸುತ್ತಿದ್ದೇನೆ. ಮಿಸ್ಟರ್ ವಿಜಯ್ ದೇವರಕೊಂಡ. ನನಗೆ ನಿಜವಾದ ಪ್ರೀತಿ ಹೇಗಿರುತ್ತದೆ ಎಂಬುದನ್ನು ಕಲಿಸಿದ ವ್ಯಕ್ತಿ. ಶಾಂತಿಯಿಂದ ಇರುವುದು ಹೇಗೆಂದು ಕಲಿಸಿದ ವ್ಯಕ್ತಿ’ ಎಂಬಿತ್ಯಾದಿ ಸುಂದರ ಸಾಲುಗಳ ಜೊತೆಯಲ್ಲಿ ರಶ್ಮಿಕಾ ಮಂದಣ್ಣ ಅವರು ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:57 pm, Thu, 26 February 26

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ