AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಮುಚ್ಚುಮರೆ ಇಲ್ಲದೆ ಒಂದೇ ಕಾರಲ್ಲಿ ರಶ್ಮಿಕಾ-ವಿಜಯ್ ಜಾಲಿ ರೈಡ್

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಒಂದೇ ಕಾರಿನಲ್ಲಿ ಪ್ರಯಾಣಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದು ಅವರ ಡೇಟಿಂಗ್ ವದಂತಿಗಳನ್ನು ಮತ್ತಷ್ಟು ಬಲಪಡಿಸಿದೆ. ಆದರೆ ಇಬ್ಬರೂ ತಮ್ಮ ಸಂಬಂಧದ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ರಶ್ಮಿಕಾ ಅವರ 'ಕುಬೇರ' ಸಿನಿಮಾ ಶೀಘ್ರದಲ್ಲೇ ಬಿಡುಗಡೆಯಾಗಲಿದೆ.

Rashmika Mandanna: ಮುಚ್ಚುಮರೆ ಇಲ್ಲದೆ ಒಂದೇ ಕಾರಲ್ಲಿ ರಶ್ಮಿಕಾ-ವಿಜಯ್ ಜಾಲಿ ರೈಡ್
ವಿಜಯ್ - ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Jun 18, 2025 | 7:25 AM

Share

ನಟಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ (Vijay Devarakonda) ಪ್ರೀತಿಯಲ್ಲಿ ಇದ್ದಾರೆ ಎಂಬ ಅನುಮಾನ ಅಭಿಮಾನಿಗಳಿಗೆ ಮೊದಲಿನಿಂದಲೂ ಇದೆ. ಈ ವಿಚಾರವನ್ನು ಅವರು ಖಚಿತಪಡಿಸಿಲ್ಲ. ಆದರೆ, ಅವರ ಸುತ್ತಾಟದಿಂದ ಈ ವಿಚಾರ ಅಭಿಮಾನಿಗಳಿಗೆ ಸ್ಪಷ್ಟವಾಗುತ್ತಿದೆ. ಈಗ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಒಂದೇ ಕಾರಲ್ಲಿ ಸುತ್ತಾಟ ನಡೆಸಿದ್ದಾರೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ನಟನೆಯ ‘ಕುಬೇರ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಜೂನ್ 20ರಂದು ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರದ ಪ್ರಚಾರದಲ್ಲಿ ಇಡೀ ತಂಡ ಬ್ಯುಸಿ ಇದೆ. ಇದರ ಭಾಗವಾಗಿ ರಶ್ಮಿಕಾ ಅವರು ಮುಂಬೈಗೆ ಆಗಮಿಸಿದ್ದರು ಎನ್ನಲಾಗಿದೆ. ಈ ವೇಳೆ ವಿಜಯ್ ಕೂಡ ಅಲ್ಲಿಯೇ ಇದ್ದರು. ಇಬ್ಬರೂ ವಿಮಾನ ನಿಲ್ದಾಣದಿಂದ ಹೊರ ಬಂದು ಕಾರಿನಲ್ಲಿ ಒಟ್ಟಾಗಿ ತೆರಳುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವೇಳೆ ಇಬ್ಬರೂ ಮುಖವನ್ನು ಮುಚ್ಚಿಕೊಂಡಿದ್ದರು.

ಇದನ್ನೂ ಓದಿ
Image
ಕೇವಲ 25 ಲಕ್ಷ ರೂ. ಗಳಿಸಿದ ‘ಥಗ್ ಲೈಫ್; ಕರ್ನಾಟಕದಲ್ಲಿ ರಿಲೀಸ್ ಆದರೆ ನಷ್ಟ
Image
ಶೋಭಿತಾ ಹಾಗೂ ನಾಗ ಚೈತನ್ಯರನ್ನು ನಿರ್ಲಕ್ಷಿಸಿದ್ರಾ ಮಹೇಶ್ ಬಾಬು?
Image
ಕೊಟ್ಟಿಯೂರು ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಧನರಾಜ್, ಪತ್ನಿ
Image
ರವಿಚಂದ್ರನ್​ಗೆ ನೋವಾಗದಂತೆ ಸಿನಿಮಾ ಚೆನ್ನಾಗಿಲ್ಲ ಎಂದಿದ್ದ ತಂದೆ ವೀರಸ್ವಾಮಿ

ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಸದ್ಯ ತಮ್ಮದೇ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇವರು ಈವರೆಗೆ ಪ್ರೀತಿ ವಿಚಾರವನ್ನು ಒಪ್ಪಿಕೊಂಡಿಲ್ಲ. ಇವರು ಮುಂದೊಂದು ದಿನ ನಿಶ್ಚಿತಾರ್ಥ ಘೋಷಣೆ ಮಾಡಿದರೂ ಅಚ್ಚರಿ ಏನಿಲ್ಲ ಎಂಬುದು ಅನೇಕರ ಅಭಿಪ್ರಾಯ.

ರಶ್ಮಿಕಾ ಹಾಗೂ ವಿಜಯ್ ಅನೇಕ ಕಡೆಗಳಲ್ಲಿ ಒಟ್ಟಾಗಿ ಸುತ್ತಾಟ ನಡೆಸುತ್ತಾರೆ. ಆದರೆ, ಇವರು ಒಟ್ಟಿಗೆ ಇರೋ ಫೋಟೋನ ಪೋಸ್ಟ್ ಮಾಡಿಲ್ಲ. ಆದರೆ, ವೆಕೇಶನ್ ವೇಳೆ ತೆಗೆದುಕೊಂಡ ಫೋಟೋ ಪೋಸ್ಟ್ ಮಾಡುವಾಗ ಹಿಂದಿರೋ ಬ್ಯಾಕ್​ಗ್ರೌಂಡ್ ಮೂಲಕ ಇಬ್ಬರೂ ಒಟ್ಟಿಗೆ ಇದ್ದ ವಿಚಾರ ಗೊತ್ತಾಗುತ್ತದೆ.

ಇದನ್ನೂ ಓದಿ:  ಸಲ್ಮಾನ್-ರಶ್ಮಿಕಾ ಸಿನಿಮಾದಿಂದ 91 ಕೋಟಿ ನಷ್ಟ, ತನಿಖೆಯಿಂದ ಗೊತ್ತಾಯ್ತು ಹಲವು ವಿಷಯ

ಇತ್ತೀಚೆಗೆ ರಶ್ಮಿಕಾ ಮಂದಣ್ಣ ಅವರು ಈವೆಂಟ್ ಒಂದರಲ್ಲಿ ಭಾಗಿ ಆಗಿದ್ದರು. ಅವರಿಗೆ ವಿಜಯ್ ಅವರಲ್ಲಿ ಯಾವ ವಿಷಯ ಇಷ್ಟ ಎಂದು ಕೇಳಿದಾಗ ‘ಎಲ್ಲಾ ವಿಚಾರಗಳೂ ಇಷ್ಟ’ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದರು. ಸದ್ಯ ರಶ್ಮಿಕಾಗೆ ದೊಡ್ಡ ಮಟ್ಟದಲ್ಲಿ ಬೇಡಿಕೆ ಇದೆ. ಹೀಗಾಗಿ, ಅವರು ಸದ್ಯಕ್ಕಂತೂ ವಿವಾಹ ಆಗೋದು ಅನುಮಾನ ಎಂದು ಹೇಳಲಾಗುತ್ತಿದೆ. ‘ಕುಬೇರ’ ಜೂನ್ 20ಕ್ಕೆ ರಿಲೀಸ್ ಆಗುತ್ತಿದೆ. ಇದು ತಮಿಳು ಸಿನಿಮಾ. ಈ ಚಿತ್ರಕ್ಕೆ ಧನುಷ್ ಹೀರೋ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್