AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಸಹಾಯಕಿ ಮೇಲೆ ರೇಗಾಡಿದ ರಶ್ಮಿಕಾ ಮಂದಣ್ಣ: ಕ್ಯಾಮೆರಾ ಆಫ್​ ಮಾಡಿಸಿದ ಸಿಬ್ಬಂದಿ; ಏನ್​ ಡ್ರಾಮಾ ಗುರೂ

Rashmika Mandanna Viral Video: ‘ಏನ್​ ನಡೀತಾ ಇದೆ? ಟ್ಯಾಲೆಂಟ್​ಗೆ ಇಲ್ಲಿ ಬೆಲೆಯೇ ಇಲ್ಲ. ಟ್ಯಾಲೆಂಟ್​ಗೆ ಎಲ್ಲಿ ಬೆಲೆ ಇದೆಯೋ ಅಲ್ಲಿಗೆ ನಾನು ಹೋಗುತ್ತೇನೆ’ ಎಂದು ರಶ್ಮಿಕಾ ಮಂದಣ್ಣ ಅವರು ಸಿಟ್ಟು ಮಾಡಿಕೊಂಡಿದ್ದಾರೆ.

Rashmika Mandanna: ಸಹಾಯಕಿ ಮೇಲೆ ರೇಗಾಡಿದ ರಶ್ಮಿಕಾ ಮಂದಣ್ಣ: ಕ್ಯಾಮೆರಾ ಆಫ್​ ಮಾಡಿಸಿದ ಸಿಬ್ಬಂದಿ; ಏನ್​ ಡ್ರಾಮಾ ಗುರೂ
ರಶ್ಮಿಕಾ ಮಂದಣ್ಣ
ಮದನ್​ ಕುಮಾರ್​
|

Updated on: May 26, 2023 | 2:53 PM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಒಂದು ವಿಡಿಯೋ ವೈರಲ್​ ಆಗಿದೆ. ತಮಗೆ ಮೇಕಪ್​ ಮಾಡಲು ಬಂದ ಸಹಾಯಕಿಯ ಮೇಲೆ ಅವರು ರೇಗಾಡಿದ್ದಾರೆ. ‘ಏನ್​ ನಡೀತಾ ಇದೆ? ಟ್ಯಾಲೆಂಟ್​ಗೆ ಇಲ್ಲಿ ಬೆಲೆಯೇ ಇಲ್ಲ. ಟ್ಯಾಲೆಂಟ್​ಗೆ ಎಲ್ಲಿ ಬೆಲೆ ಇದೆಯೋ ಅಲ್ಲಿಗೆ ನಾನು ಹೋಗುತ್ತೇನೆ’ ಎಂದು ಅವರು ಸಿಟ್ಟು ಮಾಡಿಕೊಂಡಿದ್ದಾರೆ. ಆ ದೃಶ್ಯವನ್ನು ಮೊಬೈಲ್​ನಲ್ಲಿ ಶೂಟ್​ ಮಾಡಲಾಗುತ್ತಿತ್ತು. ರೆಕಾರ್ಡಿಂಗ್​ ನಿಲ್ಲಿಸುವಂತೆ ರಶ್ಮಿಕಾ ಅವರ ಸಿಬ್ಬಂದಿ ತಾಕೀತು ಮಾಡಿದ್ದಾರೆ. ಈ ವಿಡಿಯೋ (Rashmika Mandanna Viral Video) ನೋಡಿ ಎಲ್ಲರಿಗೂ ಅಚ್ಚರಿ ಆಗಿದೆ. ಅಷ್ಟಕ್ಕೂ ರಶ್ಮಿಕಾ ಮಂದಣ್ಣ ಅವರು ಹೀಗೆಲ್ಲ ಕೂಗಾಡಿದ್ದು ಯಾಕೆ? ಅವರಿಗೆ ಕಿರಿಕಿರಿ ಆಗುವಂತಹ ಘಟನೆ ಏನಾಯಿತು ಎಂದು ಫ್ಯಾನ್ಸ್​ ತಲೆ ಕೆಡಿಸಿಕೊಂಡರು. ಆದರೆ ಇದೆಲ್ಲವೂ ಡ್ರಾಮಾ ಎಂಬುದು ಈಗ ಬಯಲಾಗಿದೆ. ರಶ್ಮಿಕಾ ಮಂದಣ್ಣ ಅವರು ಈ ರೀತಿ ಮಾಡಿದ್ದು ಒಂದು ಖಾಸಗಿ ಕಂಪನಿಯ ಜಾಹೀರಾತಿನ ಸಲುವಾಗಿ. ಆ ಜಾಹೀರಾತು (Rashmika Mandanna Advertisement) ಪ್ರಸಾರ ಆಗುವುದಕ್ಕೂ ಮುನ್ನ ನೆಟ್ಟಿಗರಲ್ಲಿ ಕುತೂಹಲ ಮೂಡಿಸುವ ಸಲುವಾಗಿ ಈ ರೀತಿ ವಿಡಿಯೋ ಮಾಡಿ ವೈರಲ್​ ಮಾಡಿಸಲಾಗಿದೆ. ಈ ಸತ್ಯ ಗೊತ್ತಾದ ಬಳಿಕ ನೆಟ್ಟಿಗರು ‘ಏನ್​ ಡ್ರಾಮಾ ಗುರೂ’ ಅಂತ ಕಮೆಂಟ್​ ಮಾಡುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಹಲವು ಕಂಪನಿಗಳಿಗೆ ಪ್ರಚಾರ ರಾಯಭಾರಿ ಆಗಿದ್ದಾರೆ. ಅದರಿಂದ ಅವರಿಗೆ ದೊಡ್ಡ ಮೊತ್ತದ ಸಂಭಾವನೆ ಸಿಗುತ್ತದೆ. ಆದರೆ ಕೆಲವು ವಿವಾದಗಳು ಕೂಡ ಅಂಟಿಕೊಳ್ಳುತ್ತವೆ. ಈ ಹಿಂದೆ ಪುರುಷರ ಒಳ ಉಡುಪಿನ ಜಾಹೀರಾತಿನಲ್ಲಿ ಅವರು ಕಾಣಿಸಿಕೊಂಡಿದ್ದ ರೀತಿಗೆ ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದರು. ಆ ಟ್ರೋಲ್​ಗಳಿಗೆಲ್ಲ ರಶ್ಮಿಕಾ ತಲೆ ಕೆಡಿಸಿಕೊಂಡಿಲ್ಲ. ತಮ್ಮ ಕೆಲಸದ ಮೇಲೆ ಅವರು ಸಂಪೂರ್ಣ ಗಮನ ಹರಿಸಿದ್ದಾರೆ.

ಇತ್ತೀಚೆಗೆ ಚಿಕನ್​ ಬರ್ಗರ್​ ಜಾಹೀರಾತಿನಲ್ಲಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ಆದರೆ ತಾವು ನಾನ್​-ವೆಜ್​ ತಿನ್ನಲ್ಲ ಎಂದು ಅವರು ಈ ಹಿಂದೆ ಹೇಳಿಕೊಂಡಿದ್ದರು. ಹಾಗಾಗಿ ರಶ್ಮಿಕಾ ಮಂದಣ್ಣ ಅವರ ಈ ದ್ವಂದ್ವನೀತಿಯನ್ನು ನೆಟ್ಟಿಗರು ಪ್ರಶ್ನಿಸಿದ್ದರು. ‘ರಶ್ಮಿಕಾ ಮಂದಣ್ಣ ಅವರು ಹೊಸ ಜಾಹೀರಾತಿನಲ್ಲಿ ನಾನ್​-ವೆಜ್​ ತಿನ್ನುತ್ತಿದ್ದಾರೆ. ಆದರೆ ತಮ್ಮನ್ನು ತಾವು ಸಸ್ಯಾಹಾರಿ ಎಂದು ಹೇಳಿಕೊಂಡಿದ್ದರು. ಜನರಿಗೆ ಇದು ಇಷ್ಟ ಆಗಿಲ್ಲ. ನಮ್ಮನ್ನು ಮೂರ್ಖರನ್ನಾಗಿಸೋದು ನಿಲ್ಲಿಸಿ ಅಂತ ಜನರು ಕಮೆಂಟ್ ಮಾಡಿದ್ದಾರೆ. ಜನರ ಪ್ರತಿಕ್ರಿಯೆ​ ನೋಡಿದ ಜಾಹೀರಾತಿನ ಕಮೆಂಟ್​ ಆಯ್ಕೆಯನ್ನೇ ನಿಷ್ಕ್ರಿಯಗೊಳಿಸಲಾಗಿದೆ’ ಎಂದು ‘ಬಾಲಿವುಡ್​ ಗರಿಮಾ ಕುಮಾ​ರ್​’ ಎಂಬ ಇನ್​​ಸ್ಟಾಗ್ರಾಮ್​ ಖಾತೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿತ್ತು.

ಇದನ್ನೂ ಓದಿ: Rashmika Mandanna: ಇದು ರಶ್ಮಿಕಾ ಮಂದಣ್ಣ ಅಂತ ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು; ಈ ಫೋಟೋದ ಅಸಲಿಯತ್ತು ಏನು?

ದಿನದಿಂದ ದಿನಕ್ಕೆ ನಟಿ ರಶ್ಮಿಕಾ ಮಂದಣ್ಣ ಅವರ ಖ್ಯಾತಿ ಹೆಚ್ಚುತ್ತಿದೆ. ಅದಕ್ಕೆ ತಕ್ಕಂತೆಯೇ ಸೋಶಿಯಲ್​ ಮೀಡಿಯಾದಲ್ಲಿ ಅವರನ್ನು ಹಿಂಬಾಲಿಸುವವರ ಸಂಖ್ಯೆ ಕೂಡ ದೊಡ್ಡದಾಗುತ್ತಿದೆ. ಆ ಕಾರಣದಿಂದ ಅವರನ್ನು ಅನೇಕ ಕಂಪನಿಗಳು ಪ್ರಚಾರ ರಾಯಭಾರಿಯಾಗಿ ನೇಮಕ ಮಾಡಿಕೊಳ್ಳುತ್ತಿವೆ. ಬಹುಭಾಷೆಯಲ್ಲಿ ನಟಿಸುತ್ತಿರುವ ರಶ್ಮಿಕಾ ಮಂದಣ್ಣ ಅವರಿಗೆ ಎಲ್ಲ ರಾಜ್ಯದಲ್ಲೂ ಅಭಿಮಾನಿಗಳಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು ಬರೋಬ್ಬರಿ 3.8 ಕೋಟಿ ಜನರು​ ಫಾಲೋ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?