Rashmika Mandanna: ಕನ್ನಡ ಚಿತ್ರರಂಗದಿಂದ ಬ್ಯಾನ್, ಸ್ಪಷ್ಟನೆ ನೀಡಿದ ರಶ್ಮಿಕಾ ಮಂದಣ್ಣ

ನಟಿ ರಶ್ಮಿಕಾ ಮಂದಣ್ಣ ಅವರನ್ನು ಬ್ಯಾನ್ ಮಾಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು, ಇದೀಗ ಈ ಬಗ್ಗೆ ರಶ್ಮಿಕಾ ಮಂದಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ಮೊದಲು ಬ್ಯಾನ್ ಬಗ್ಗೆ ಮೌನ ಮುರಿದ ರಶ್ಮಿಕಾ ಮಂದಣ್ಣ, ಇದೀಗ ನನ್ನನು ಯಾರು ಬ್ಯಾನ್ ಮಾಡಿಲ್ಲ ಎಂದು ಹೇಳಿದ್ದಾರೆ.

Rashmika Mandanna: ಕನ್ನಡ ಚಿತ್ರರಂಗದಿಂದ ಬ್ಯಾನ್, ಸ್ಪಷ್ಟನೆ ನೀಡಿದ ರಶ್ಮಿಕಾ ಮಂದಣ್ಣ
ರಶ್ಮಿಕಾ
Updated By: ಅಕ್ಷಯ್​ ಪಲ್ಲಮಜಲು​​

Updated on: Dec 09, 2022 | 2:05 PM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಇತ್ತಿಚೇಗೆ ಬಾರಿ ಸುದ್ದಿ ಮಾಡುತ್ತಿರುವ ವಿಚಾರ ಮಂದಣ್ಣ ಅವರನ್ನು ಬ್ಯಾನ್ ಮಾಡಿದ್ದಾರೆ ಎಂದು. ಇದೀಗ ಈ ಬಗ್ಗೆ ರಶ್ಮಿಕಾ ಮಂದಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ಮೊದಲು ಬ್ಯಾನ್ ಬಗ್ಗೆ ಮೌನ ಮುರಿದ ರಶ್ಮಿಕಾ ಮಂದಣ್ಣ, ಇದೀಗ ನನ್ನನು ಯಾರು ಬ್ಯಾನ್ ಮಾಡಿಲ್ಲ, ನನ್ನ ಬಳಿ ಅಧಿಕೃತವಾಗಿ ಈ ವಿಷಯ ಚರ್ಚೆಯಾಗಿಲ್ಲ ಎಂದು ಹೇಳಿದ್ದಾರೆ.

ಕಾಂತಾರ ಸಿನಿಮಾ ನೋಡಿ ನಾನು ಮೆಸೆಜ್ ಮಾಡಿದ್ದೇನೆ. ಸಿನಿಮಾ ರಿಲೀಸ್ ಆಗಿ ಎರಡು ದಿನ ಆದ್ಮೇಲೆ ಸಿನಿಮಾ ನೋಡಿದ್ರಾ ಅಂತ ಕೇಳಿದ್ರು, ಆಗ ನಾನು ಸಿನಿಮಾ ನೋಡಿರಲಿಲ್ಲ. ನಂತರ ಸಿನಿಮಾ ನೋಡಿ ರಿಷಬ್ ಶೆಟ್ಟಿ ಸರ್​​ಗೆ ಮಸೆಜ್ ಮಾಡಿ ಹೇಳಿದ್ದಾನೆ, ಅದಕ್ಕೆ ರಿಷಬ್ ಸರ್ ಥ್ಯಾಂಕ್ಯೂ ಅಂತ ರಿಪ್ಲೈ ಮಾಡಿದ್ರು, ಜನರಿಗೆ ನಾವು ಹೇಗಿದ್ದಿವಿ ಅಂತ ಗೊತ್ತಿಲ್ಲ ಎಂದು ರಶ್ಮಿಕಾ ಮಂದಣ್ಣ ಸ್ಪಷ್ಟನೆ ನೀಡಿದ್ದಾರೆ.

ಇದನ್ನು ಓದಿ:ಅವರ ಪಾಡಿಗೆ ಇರಲು ಬಿಡಿ’: ಟ್ರೋಲ್​ ಕುರಿತ ಚರ್ಚೆಯಲ್ಲಿ ರಶ್ಮಿಕಾ ಪರ ನಿಂತ ರಮ್ಯಾ

ರಶ್ಮಿಕಾ ಮಂದಣ್ಣ ಈ ನಡುವೆ ತಮ್ಮ ಸಿನಿಮಾಗಿಂತ ವಿವಾದದ ಮೂಲಕವೇ ಹೆಚ್ಚು ಸುದ್ದಿಯಲ್ಲಿರುತ್ತಾರೆ. ಅವರು ಇತ್ತೀಚೆಗೆ ಸಂದರ್ಶನ ಒಂದರಲ್ಲಿ ನಡೆದುಕೊಂಡ ರೀತಿ ಬಗ್ಗೆ ಸಾಕಷ್ಟು ಚರ್ಚೆ ಆಗಿತ್ತು. ರಶ್ಮಿಕಾ ಅವರನ್ನು ಸಿನಿಮಾದಿಂದ ಬ್ಯಾನ್ ಮಾಡಿದ್ದಾರೆ ಎಂದೆಲ್ಲ ಸುದ್ದಿಗಳು ಹರಿದಾಡುತ್ತಿತ್ತು, ಇದೀಗ ಈ ಬಗ್ಗೆ ಅವರೇ ಸ್ಪಷ್ಟನೆ ನೀಡಿದ್ದಾರೆ. ಇದರ ಜೊತೆಗೆ ನಾನು ಕಾಂತಾರಾ ಸಿನಿಮಾವನ್ನು ನೋಡಿದ್ದೇನೆ. ನಂತರ ರಿಷಬ್ ಅವರಿಗೆ ಮೆಸೇಜ್ ಮಾಡಿ ಶುಭಾಶಯಗಳನ್ನು ತಿಳಿಸಿದ್ದೇನೆ ಎಂದು ಹೇಳಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಈಗಾಗಲೇ ಹಲವು ಭಾಷೆಗಳ ಸಿನಿಮಾಗಳಲ್ಲಿ ನಟಿಸಿದ್ದಾರೆ, ಆದರೆ ಅವರಿಗೆ ವೃತ್ತಿ ಜೀವನಕ್ಕೆ ಭದ್ರ ಬುನಾದಿ ಹಾಕಿದ್ದು ‘ಕಿರಿಕ್​ ಪಾರ್ಟಿ’ ಸಿನಿಮಾ. ಇದನ್ನು ನಿರ್ಮಾಣ ಮಾಡಿದ್ದು ರಕ್ಷಿತ್ ಶೆಟ್ಟಿ ಒಡೆತನದ ‘ಪರಂವಃ ಸ್ಟುಡಿಯೋಸ್​’. ಮೊದಲ ಸಿನಿಮಾ ಬಗ್ಗೆ ಕೇಳಿದಾಗ ರಶ್ಮಿಕಾ ಪ್ರೊಡಕ್ಷನ್ ಹೌಸ್ ಹೆಸರನ್ನು ಹೇಳದೆ ಆ್ಯಟಿಟ್ಯೂಡ್ ತೋರಿಸಿದ್ದರು. ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ರಶ್ಮಿಕಾ ಅವರನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಬೇಕು ಎಂಬ ಆಗ್ರಹ ಕೇಳಿ ಬಂದಿತ್ತು.

ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ಯೂಟ್ಯೂಬ್ ಚಾನೆಲ್ ಒಂದಕ್ಕೆ ಸಂದರ್ಶನ ನೀಡುತ್ತಾ, ತಮ್ಮ ಜರ್ನಿ ಬಗ್ಗೆ ವಿವರಿಸಿದ್ದರು. ಮಾಡೆಲ್ ಆಗಿ ಬಣ್ಣದ ಬದುಕು ಆರಂಭಿಸಿದೆ, ಪೇಪರ್​ನಲ್ಲಿ ಫೋಟೋ ಬಂತು ಎಂಬಿತ್ಯಾದಿ ವಿಚಾರಗಳನ್ನು ಅವರು ಹೇಳಿಕೊಂಡಿದ್ದರು. ಆ ಬಳಿಕ ಮೊದಲ ಸಿನಿಮಾ ಆಫರ್ ಬಂತು ಎನ್ನುವಾಗ ಅವರು ನಿರ್ಮಾಣ ಸಂಸ್ಥೆಯ ಹೆಸರನ್ನು ಎಲ್ಲಿಯೂ ಉಲ್ಲೇಖ ಮಾಡಿಲ್ಲ. ಬದಲಿಗೆ ಕೈಗಳಿಂದ ಕೋಟ್ ರೀತಿಯಲ್ಲಿ ಸನ್ನೆ ಮಾಡಿ ತೋರಿಸಿದ್ದರು. ರಶ್ಮಿಕಾ ಬಗ್ಗೆ ಈಗ ಅಪಸ್ವರ ಕೇಳಿ ಬಂದಿತ್ತು.

ರಶ್ಮಿಕಾ ಅವರ ಆ್ಯಟಿಟ್ಯೂಡ್ ಅನೇಕರಿಗೆ ಇಷ್ಟವಾಗಿಲ್ಲ. ಹೀಗಾಗಿ ಅವರನ್ನು ಕನ್ನಡ ಚಿತ್ರರಂಗದಿಂದ ಹೊರಗಿಡಬೇಕು ಎಂಬ ಆಗ್ರಹ ಕೇಳಿ ಬಂದಿದೆ. ಈ ಮಧ್ಯೆ ತೆಲುಗು ಮಾಧ್ಯಮಗಳಲ್ಲಿ ರಶ್ಮಿಕಾ ಬಗ್ಗೆ ಕೆಲ ಸುದ್ದಿ ಪ್ರಕಟವಾಗಿದೆ. ‘ರಶ್ಮಿಕಾ ಅವರನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಲು ಕನ್ನಡ ಚಿತ್ರರಂಗ ಮುಂದಾಗಿದೆ’ ಎಂದು ಬಾಲಿವುಡ್ ಹಂಗಾಮ ಟ್ವೀಟ್​ ಒಂದನ್ನು ಉಲ್ಲೇಖಿಸಿ ವರದಿ ಮಾಡಿದೆ. ಇದೀಗ ಈ ಸುದ್ದಿಗಳಿಗೆ ರಶ್ಮಿಕಾ ಸ್ಪಷ್ಟನೆ ನೀಡಿದ್ದರೆ, ನನ್ನನು ಯಾರು ಬ್ಯಾನ್ ಮಾಡಿಲ್ಲ ಎಂದು ಹೇಳಿದ್ದಾರೆ.

ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:00 pm, Fri, 9 December 22