ಕೆಂಪುಡುಗೆ ತೊಟ್ಟು ಟೆಂಪ್ರೇಚರ್ ಹೆಚ್ಚಿಸಿದ ನಟಿ ರಶ್ಮಿಕಾ ಮಂದಣ್ಣ; ಇಲ್ಲಿದೆ ವಿಡಿಯೋ

ರಶ್ಮಿಕಾ ಮಂದಣ್ಣ ಅವರು ಕೆಂಪು ಬಣ್ಣದ ಬಟ್ಟೆ ಹಾಕಿ ಕಾಣಿಸಿಕೊಂಡರು. ಬೋಲ್ಡ್ ಲುಕ್​ನಲ್ಲಿ ಎಲ್ಲರ ಗಮನ ಸೆಳೆದರು. ಈ ವಿಡಿಯೋ ಈಗ ಸಖತ್ ವೈರಲ್ ಆಗುತ್ತಿದೆ.

ಕೆಂಪುಡುಗೆ ತೊಟ್ಟು ಟೆಂಪ್ರೇಚರ್ ಹೆಚ್ಚಿಸಿದ ನಟಿ ರಶ್ಮಿಕಾ ಮಂದಣ್ಣ; ಇಲ್ಲಿದೆ ವಿಡಿಯೋ
ರಶ್ಮಿಕಾ (Credit: viral bhayani)Image Credit source: viral bhayani
Follow us
TV9 Web
| Updated By: Digi Tech Desk

Updated on:Jul 16, 2022 | 12:44 PM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಈಗ ದಕ್ಷಿಣ ಭಾರತ ಹಾಗೂ ಬಾಲಿವುಡ್​ನಲ್ಲಿ (Bollywood) ಮಿಂಚುತ್ತಿದ್ದಾರೆ. ಅವರಿಗೆ ಈಗಾಗಲೇ ದೊಡ್ಡ ಮಟ್ಟದ ಬೇಡಿಕೆ ಸೃಷ್ಟಿ ಆಗಿದೆ. ಅವರ ಫ್ಯಾನ್ಸ್​​ಗೆ ರಶ್ಮಿಕಾ ಕಂಡರೆ ತುಂಬಾನೇ ಇಷ್ಟ. ರಶ್ಮಿಕಾ ಕೂಡ ಫ್ಯಾನ್ಸ್​ ಬಗ್ಗೆ ಸಾಕಷ್ಟು ಪ್ರೀತಿ ತೋರುತ್ತಾರೆ. ಅವರ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಹಿಂಬಾಲಕರ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ಬಗ್ಗೆ ಅವರಿಗೆ ಖುಷಿ ಇದೆ. ಈಗ ರಶ್ಮಿಕಾ ಮಂದಣ್ಣ ಅವರು ಕೆಂಪು ಉಡುಗೆಯಲ್ಲಿ ಮಿಂಚಿದ್ದಾರೆ. ಪಾಪಾರಾಜಿಗಳು ಈ ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಇಂಗ್ಲಿಷ್ ಸುದ್ದಿ ಪತ್ರಿಕೆ ಆಯೋಜಿಸಿದ್ದ ಪ್ರಶಸ್ತಿ ಸಮಾರಂಭಕ್ಕೆ ರಶ್ಮಿಕಾ ಮಂದಣ್ಣ ಅವರಿಗೆ ಆಹ್ವಾನ ನೀಡಲಾಗಿತ್ತು. ಈ ವೇಳೆ ರಶ್ಮಿಕಾ ಮಂದಣ್ಣ ಅವರು ಕೆಂಪು ಬಣ್ಣದ ಬಟ್ಟೆ ಹಾಕಿ ಕಾಣಿಸಿಕೊಂಡರು. ಬೋಲ್ಡ್ ಲುಕ್​ನಲ್ಲಿ ಎಲ್ಲರ ಗಮನ ಸೆಳೆದರು. ಈ ವಿಡಿಯೋ ಈಗ ಸಖತ್ ವೈರಲ್ ಆಗುತ್ತಿದೆ. ರಶ್ಮಿಕಾ ಮಂದಣ್ಣ ಅವರ ಲುಕ್ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ‘ರಶ್ಮಿಕಾ ಅವರೇ ನೀವು ಸಖತ್ ಬೋಲ್ಡ್ ಆಗಿ ಕಾಣಿಸುತ್ತಿದ್ದೀರಿ’ ಎಂದು ಕೆಲವರು ಕಮೆಂಟ್ ಹಾಕಿದ್ದಾರೆ. ಅವರ ಉಡುಗೆ ಎಲ್ಲರ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ
Image
ಲಂಡನ್​ನಲ್ಲಿ ಮಹೇಶ್ ಬಾಬು ಮಗನಿಗೆ ಶಿಕ್ಷಣ; ಇಂಗ್ಲೆಂಡ್​​ಗೆ ಹಾರಲಿದೆ ಫ್ಯಾಮಿಲಿ
Image
Pushpa 2: ರಶ್ಮಿಕಾ ಮಂದಣ್ಣ ಪಾತ್ರ ಸಾಯುತ್ತೆ ಅನ್ನೋದು ನಿಜವೇ? ‘ಪುಷ್ಪ 2’ ನಿರ್ಮಾಪಕರು​ ನೀಡಿದ ಪ್ರತಿಕ್ರಿಯೆ ಇಲ್ಲಿದೆ..
Image
Rashmika Mandanna: ರಶ್ಮಿಕಾ ಮಂದಣ್ಣ ಗುಟ್ಟಾಗಿ ‘777 ಚಾರ್ಲಿ’ ನೋಡಿದ್ರಾ? ಜನರ ಅನುಮಾನಕ್ಕೆ ಕಾರಣ ಆಗಿದೆ ಈ ವಿಡಿಯೋ
Image
ರಶ್ಮಿಕಾ ಮಂದಣ್ಣ ಹೊಸ ವಿಡಿಯೋ ವೈರಲ್​; ಎನರ್ಜಿ ಕಂಡು ವಾವ್​ ಎಂದ ಅಭಿಮಾನಿಗಳು

ರಶ್ಮಿಕಾ ಮಂದಣ್ಣ ಅವರು ಬಾಲಿವುಡ್​ನ ಸಮಾರಂಭಗಳಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿದ್ದಾರೆ. ಈ ಮೊದಲು ಅವರು ಖ್ಯಾತ ನಿರ್ಮಾಪಕ ಕರಣ್ ಜೋಹರ್ ಅವರ ಬರ್ತ್​ಡೇ ಪಾರ್ಟಿಯಲ್ಲಿ ಕಪ್ಪು ಬಣ್ಣದ ಬಟ್ಟೆ ತೊಟ್ಟು ಗಮನ ಸೆಳೆದಿದ್ದರು. ಆ ಫೋಟೋಗಳು ಸಖತ್ ವೈರಲ್ ಆಗಿತ್ತು. ಪ್ರಶಸ್ತಿ ಸಮಾರಂಭಗಳಿಗೂ ಅವರು ಹಾಜರಿ ಹಾಕಿ, ಮಿಂಚುವ ಪ್ರಯತ್ನ ಮಾಡುತ್ತಿದ್ದಾರೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಮನೆಗೆ ತೆರಳುವುದು ಆ ಇಬ್ಬರಿಗಾಗಿ; ಫೋಟೋ ಮೂಲಕ ವಿವರಿಸಿದ ನಟಿ

ರಶ್ಮಿಕಾ ಮಂದಣ್ಣ ಕೈಯಲ್ಲಿ ಹಲವು ಪ್ರಾಜೆಕ್ಟ್​ಗಳಿವೆ. ಅವರು ಟಾಲಿವುಡ್​, ಕಾಲಿವುಡ್​, ಮಾಲಿವುಡ್ ಹಾಗೂ ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ತೆಲುಗಿನಲ್ಲಿ ‘ಪುಷ್ಪ 2’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ತಮಿಳಿನಲ್ಲಿ ‘ವಾರಿಸು’ ಚಿತ್ರಕ್ಕೆ ನಾಯಕಿ. ಮಲಯಾಳಂನಲ್ಲಿ ಸಿದ್ಧವಾಗುತ್ತಿರುವ ‘ಸೀತಾ ರಾಮಮ್’ ಚಿತ್ರದಲ್ಲಿ ಅವರು ಮುಸ್ಲಿಂ ಹುಡುಗಿ ಪಾತ್ರ ಮಾಡುತ್ತಿದ್ದಾರೆ. ಬಾಲಿವುಡ್​ನಲ್ಲಿ ‘ಮಿಷನ್ ಮಜ್ನು’, ‘ಗುಡ್​ಬೈ’ ಹಾಗೂ ‘ಅನಿಮಲ್​’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದಲ್ಲದೆ, ಹಲವು ಬ್ರ್ಯಾಂಡ್​ಗಳಿಗೆ ಅವರು ರಾಯಭಾರಿ ಆಗಿದ್ದಾರೆ.

Published On - 10:49 am, Sat, 16 July 22

ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು