ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಈಗ ದಕ್ಷಿಣ ಭಾರತ ಹಾಗೂ ಬಾಲಿವುಡ್ನಲ್ಲಿ (Bollywood) ಮಿಂಚುತ್ತಿದ್ದಾರೆ. ಅವರಿಗೆ ಈಗಾಗಲೇ ದೊಡ್ಡ ಮಟ್ಟದ ಬೇಡಿಕೆ ಸೃಷ್ಟಿ ಆಗಿದೆ. ಅವರ ಫ್ಯಾನ್ಸ್ಗೆ ರಶ್ಮಿಕಾ ಕಂಡರೆ ತುಂಬಾನೇ ಇಷ್ಟ. ರಶ್ಮಿಕಾ ಕೂಡ ಫ್ಯಾನ್ಸ್ ಬಗ್ಗೆ ಸಾಕಷ್ಟು ಪ್ರೀತಿ ತೋರುತ್ತಾರೆ. ಅವರ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಿಂಬಾಲಕರ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ಬಗ್ಗೆ ಅವರಿಗೆ ಖುಷಿ ಇದೆ. ಈಗ ರಶ್ಮಿಕಾ ಮಂದಣ್ಣ ಅವರು ಕೆಂಪು ಉಡುಗೆಯಲ್ಲಿ ಮಿಂಚಿದ್ದಾರೆ. ಪಾಪಾರಾಜಿಗಳು ಈ ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಇಂಗ್ಲಿಷ್ ಸುದ್ದಿ ಪತ್ರಿಕೆ ಆಯೋಜಿಸಿದ್ದ ಪ್ರಶಸ್ತಿ ಸಮಾರಂಭಕ್ಕೆ ರಶ್ಮಿಕಾ ಮಂದಣ್ಣ ಅವರಿಗೆ ಆಹ್ವಾನ ನೀಡಲಾಗಿತ್ತು. ಈ ವೇಳೆ ರಶ್ಮಿಕಾ ಮಂದಣ್ಣ ಅವರು ಕೆಂಪು ಬಣ್ಣದ ಬಟ್ಟೆ ಹಾಕಿ ಕಾಣಿಸಿಕೊಂಡರು. ಬೋಲ್ಡ್ ಲುಕ್ನಲ್ಲಿ ಎಲ್ಲರ ಗಮನ ಸೆಳೆದರು. ಈ ವಿಡಿಯೋ ಈಗ ಸಖತ್ ವೈರಲ್ ಆಗುತ್ತಿದೆ. ರಶ್ಮಿಕಾ ಮಂದಣ್ಣ ಅವರ ಲುಕ್ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ‘ರಶ್ಮಿಕಾ ಅವರೇ ನೀವು ಸಖತ್ ಬೋಲ್ಡ್ ಆಗಿ ಕಾಣಿಸುತ್ತಿದ್ದೀರಿ’ ಎಂದು ಕೆಲವರು ಕಮೆಂಟ್ ಹಾಕಿದ್ದಾರೆ. ಅವರ ಉಡುಗೆ ಎಲ್ಲರ ಗಮನ ಸೆಳೆಯುತ್ತಿದೆ.
ರಶ್ಮಿಕಾ ಮಂದಣ್ಣ ಅವರು ಬಾಲಿವುಡ್ನ ಸಮಾರಂಭಗಳಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿದ್ದಾರೆ. ಈ ಮೊದಲು ಅವರು ಖ್ಯಾತ ನಿರ್ಮಾಪಕ ಕರಣ್ ಜೋಹರ್ ಅವರ ಬರ್ತ್ಡೇ ಪಾರ್ಟಿಯಲ್ಲಿ ಕಪ್ಪು ಬಣ್ಣದ ಬಟ್ಟೆ ತೊಟ್ಟು ಗಮನ ಸೆಳೆದಿದ್ದರು. ಆ ಫೋಟೋಗಳು ಸಖತ್ ವೈರಲ್ ಆಗಿತ್ತು. ಪ್ರಶಸ್ತಿ ಸಮಾರಂಭಗಳಿಗೂ ಅವರು ಹಾಜರಿ ಹಾಕಿ, ಮಿಂಚುವ ಪ್ರಯತ್ನ ಮಾಡುತ್ತಿದ್ದಾರೆ.
ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಮನೆಗೆ ತೆರಳುವುದು ಆ ಇಬ್ಬರಿಗಾಗಿ; ಫೋಟೋ ಮೂಲಕ ವಿವರಿಸಿದ ನಟಿ
ರಶ್ಮಿಕಾ ಮಂದಣ್ಣ ಕೈಯಲ್ಲಿ ಹಲವು ಪ್ರಾಜೆಕ್ಟ್ಗಳಿವೆ. ಅವರು ಟಾಲಿವುಡ್, ಕಾಲಿವುಡ್, ಮಾಲಿವುಡ್ ಹಾಗೂ ಬಾಲಿವುಡ್ನಲ್ಲಿ ಬ್ಯುಸಿ ಆಗಿದ್ದಾರೆ. ತೆಲುಗಿನಲ್ಲಿ ‘ಪುಷ್ಪ 2’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ತಮಿಳಿನಲ್ಲಿ ‘ವಾರಿಸು’ ಚಿತ್ರಕ್ಕೆ ನಾಯಕಿ. ಮಲಯಾಳಂನಲ್ಲಿ ಸಿದ್ಧವಾಗುತ್ತಿರುವ ‘ಸೀತಾ ರಾಮಮ್’ ಚಿತ್ರದಲ್ಲಿ ಅವರು ಮುಸ್ಲಿಂ ಹುಡುಗಿ ಪಾತ್ರ ಮಾಡುತ್ತಿದ್ದಾರೆ. ಬಾಲಿವುಡ್ನಲ್ಲಿ ‘ಮಿಷನ್ ಮಜ್ನು’, ‘ಗುಡ್ಬೈ’ ಹಾಗೂ ‘ಅನಿಮಲ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದಲ್ಲದೆ, ಹಲವು ಬ್ರ್ಯಾಂಡ್ಗಳಿಗೆ ಅವರು ರಾಯಭಾರಿ ಆಗಿದ್ದಾರೆ.
Published On - 10:49 am, Sat, 16 July 22