ಎಷ್ಟೇ ಬ್ಯುಸಿ ಆಗಿದ್ದರೂ ಹೋಳಿ ಆಚರಿಸೋದು ಮಿಸ್​ ಮಾಡಿಲ್ಲ ರಶ್ಮಿಕಾ ಮಂದಣ್ಣ

‘ಈ ವರ್ಷ ನಮಗೆಲ್ಲರಿಗೂ ಕೆಲಸದ ನಡುವೆ ಹೋಳಿ. ನೀವೆಲ್ಲರೂ ಸುರಕ್ಷಿತವಾಗಿ ಹೋಳಿ ಆಡುತ್ತಾ ಎಂಜಾಯ್​ ಮಾಡುತ್ತಿದ್ದೀರಿ ಎಂದು ನಾನು ಭಾವಿಸಿದ್ದೇನೆ. ಇಲ್ಲಿಂದ ನಾವು ನಿಮಗೆ ಹೋಳಿ ಹಬ್ಬದ ಶುಭಾಶಯಗಳನ್ನು ತಿಳಿಸುತ್ತೇವೆ’ ಎಂದು ತಮ್ಮ ತಂಡದ ಜತೆ ಇರುವ ಫೋಟೋವನ್ನು ನಟಿ ರಶ್ಮಿಕಾ ಮಂದಣ್ಣ ಶೇರ್​ ಮಾಡಿಕೊಂಡಿದ್ದಾರೆ.

ಎಷ್ಟೇ ಬ್ಯುಸಿ ಆಗಿದ್ದರೂ ಹೋಳಿ ಆಚರಿಸೋದು ಮಿಸ್​ ಮಾಡಿಲ್ಲ ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
Follow us
ಮದನ್​ ಕುಮಾರ್​
|

Updated on: Mar 25, 2024 | 3:20 PM

ಖ್ಯಾತ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಮಿಂಚುತ್ತಿದ್ದಾರೆ. ಬ್ಯಾಕ್​ ಟು ಬ್ಯಾಕ್​ ಸಿನಿಮಾ ಮಾಡುತ್ತಿರುವ ಅವರು ಸೋಶಿಯಲ್​ ಮೀಡಿಯಾದಲ್ಲೂ ಆ್ಯಕ್ಟೀವ್​ ಆಗಿದ್ದಾರೆ. ತಮ್ಮ ದಿನಚರಿಯ ಬಗ್ಗೆ ಅವರು ಅಪ್​ಡೇಟ್​ ನೀಡುತ್ತಲೇ ಇರುತ್ತಾರೆ. ಇಂದು (ಮಾರ್ಚ್​ 25) ಹೋಳಿ (Holi) ಹಬ್ಬವನ್ನು ಆಚರಿಸಲಾಗುತ್ತಿದೆ. ರಶ್ಮಿಕಾ ಮಂದಣ್ಣ ಕೂಡ ಈ ಸಂಭ್ರಮದಲ್ಲಿ ಭಾಗಿ ಆಗಿದ್ದಾರೆ. ಹಾಗಂತ ಮನೆಯವರ ಜೊತೆ ಅವರು ಹೋಳಿ ಹಬ್ಬ ಆಚರಿಸಿಲ್ಲ. ಬದಲಿಗೆ ಶೂಟಿಂಗ್ ಸೆಟ್​ನಲ್ಲೇ ಹೋಳಿ ಆಚರಿಸಿದ್ದಾರೆ. ಆ ಕ್ಷಣದ ಫೋಟೋವನ್ನು ರಶ್ಮಿಕಾ (Rashmika) ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘ಈ ಬಾರಿ ನಮ್ಮೆಲ್ಲರಿಗೂ ಕೆಲಸದ ನಡುವೆಯೇ ಹೋಳಿ. ಆದರೆ ನೀವೆಲ್ಲರೂ ಸುರಕ್ಷಿತವಾಗಿ ಹೋಳಿ ಆಡುತ್ತಾ ಎಂಜಾಯ್​ ಮಾಡುತ್ತಿದ್ದೀರಿ ಎಂದು ನಾನು ಭಾವಿಸಿದ್ದೇನೆ. ಇಲ್ಲಿಂದ ನಾವು ನಿಮಗೆ ಹೋಳಿ ಹಬ್ಬದ ಶುಭಾಶಯ ತಿಳಿಸುತ್ತೇವೆ’ ಎಂದು ತಮ್ಮ ತಂಡದ ಜೊತೆ ಇರುವ ಫೋಟೋವನ್ನ ರಶ್ಮಿಕಾ ಮಂದಣ್ಣ ಅವರು ಶೇರ್​ ಮಾಡಿಕೊಂಡಿದ್ದಾರೆ. ಕಮೆಂಟ್​ ಮಾಡುವ ಮೂಲಕ ಅಭಿಮಾನಿಗಳು ಕೂಡ ರಶ್ಮಿಕಾಗೆ ವಿಶ್​ ಮಾಡಿದ್ದಾರೆ.

‘ಪುಷ್ಪ’ ಮತ್ತು ‘ಅನಿಮಲ್​’ ಸಿನಿಮಾಗಳಿಂದ ರಶ್ಮಿಕಾ ಮಂದಣ್ಣ ಅವರು ದೊಡ್ಡ ಖ್ಯಾತಿ ಗಳಿಸಿದ್ದಾರೆ. ಈಗ ಅವರು ‘ಪುಷ್ಪ 2’, ‘ರೇನ್​ ಬೋ’, ‘ದಿ ಗರ್ಲ್​ಫ್ರೆಂಡ್​’, ‘ಚಾವ್ವಾ’ ಮುಂತಾದ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ‘ಪುಷ್ಪ 2’ ಸಿನಿಮಾ ಆಗಸ್ಟ್​ 15ರಂದು ವಿಶ್ವಾದ್ಯಂತ ತೆರೆಕಾಣಲಿದೆ. ಆ ಸಿನಿಮಾ ಬಿಡುಗಡೆ ಆದ ಬಳಿಕ ರಶ್ಮಿಕಾ ಮಂದಣ್ಣ ಅವರ ಜನಪ್ರಿಯತೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ದಟ್ಟವಾಗಿದೆ.

ಇದನ್ನೂ ಓದಿ: ‘ಪುಷ್ಪ 2’ ಚಿತ್ರದ ಶ್ರೀವಲ್ಲಿ ಲುಕ್​ ಲೀಕ್​; ರಶ್ಮಿಕಾ ನೋಡಲು ಮುಗಿಬಿದ್ದ ಫ್ಯಾನ್ಸ್​

ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ‘ರಾಯಲ್​ ಚಾಲೆಂಜರ್ಸ್​ ಬೆಂಗಳೂರು’ ತಂಡದ ಪ್ರೋಮೋದಲ್ಲಿ ಕಾಣಿಸಿಕೊಂಡಿದ್ದರು. ಅದಕ್ಕೆ ಕರುನಾಡಿನ ಮಂದಿಯಿಂದ ವಿರೋಧ ವ್ಯಕ್ತವಾಗಿತ್ತು. ‘ಈ ಸಹಯೋಗ ಬೇಕಿರಲಿಲ್ಲ’ ಎಂದು ಅನೇಕರು ಕಮೆಂಟ್ ಮಾಡಿದ್ದರು. ರಶ್ಮಿಕಾ ಮಂದಣ್ಣ ಅವರಿಗೆ ಈ ರೀತಿಯ ಟ್ರೋಲ್​ಗಳು ಸಹಜ. ಹಾಗಂತ ಅವರಿಗೆ ಬರುವ ಅವಕಾಶಗಳು ಕಡಿಮೆ ಆಗಿಲ್ಲ. ಹತ್ತು ಹಲವು ದೊಡ್ಡ ದೊಡ್ಡ ಅವಕಾಶಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ