Rashmika Mandanna: ರಶ್ಮಿಕಾ ಮಾತ್ರವಲ್ಲ, ಅವರ ನಾಯಿ ಬಗ್ಗೆಯೂ ಗಾಸಿಪ್​; ಬಹಿರಂಗವಾಗಿಯೇ ಸ್ಪಷ್ಟನೆ ನೀಡಿದ ನಟಿ

Rashmika Mandanna Pet Aura: ನಟಿಯರ ಬಗ್ಗೆ ಈ ರೀತಿಯ ಗಾಸಿಪ್​ ಹಬ್ಬಿಸಿದರೆ ಕೆಲವೊಮ್ಮೆ ಅವರ ವೃತ್ತಿಜೀವನಕ್ಕೆ ತೊಂದರೆ ಆಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಈ ಗಾಸಿಪ್​ಗೆ ರಶ್ಮಿಕಾ ಮಂದಣ್ಣ ಕೂಡಲೇ ಪ್ರತಿಕ್ರಿಯೆ ನೀಡಿದ್ದಾರೆ.

Rashmika Mandanna: ರಶ್ಮಿಕಾ ಮಾತ್ರವಲ್ಲ, ಅವರ ನಾಯಿ ಬಗ್ಗೆಯೂ ಗಾಸಿಪ್​; ಬಹಿರಂಗವಾಗಿಯೇ ಸ್ಪಷ್ಟನೆ ನೀಡಿದ ನಟಿ
ಸಾಕುನಾಯಿ ಔರಾ ಜೊತೆ ರಶ್ಮಿಕಾ ಮಂದಣ್ಣ
Follow us
TV9 Web
| Updated By: ಮದನ್​ ಕುಮಾರ್​

Updated on:Jun 25, 2022 | 9:08 AM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಬಗ್ಗೆ ದಿನಕ್ಕೊಂದು ಗಾಸಿಪ್​ ಕೇಳಿಬರುತ್ತದೆ. ಅದಕ್ಕೆಲ್ಲ ಅವರು ತಲೆ ಕೆಡಿಸಿಕೊಳ್ಳುವುದಿಲ್ಲ. ಬಹುಭಾಷೆಯಲ್ಲಿ ನಟಿಸುತ್ತಿರುವ ಹೀರೋಯಿನ್​ ಬಗ್ಗೆ ಒಂದಷ್ಟು ಅಂಕೆ-ಕಂತೆಗಳು ಹರಿದಾಡುವುದು ಸಹಜ. ಆದರೆ ಈಗ ಅವರ ನಾಯಿ ಬಗ್ಗೆಯೂ ಗಾಸಿಪ್​ ಕೇಳಿಬಂದಿದೆ! ಹೌದು, ರಶ್ಮಿಕಾ ಮಂದಣ್ಣ ಅವರು ಶ್ವಾನ ಪ್ರಿಯೆ. ಔರಾ (Rashmika Mandanna dog Aura) ಎಂಬ ಹೆಣ್ಣು ನಾಯಿಯನ್ನು ಅವರು ಸಾಕಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ತಮ್ಮ ನಾಯಿಯ ಅನೇಕ ಫೋಟೋಗಳನ್ನು ಅವರು ಶೇರ್​ ಮಾಡಿಕೊಳ್ಳುತ್ತಾರೆ. ಇತ್ತೀಚೆಗೆ ಈ ಶ್ವಾನದ ಬಗ್ಗೆ ಒಂದು ಗಾಸಿಪ್​ (Gossip) ಹರಡಿತ್ತು. ಈ ನಾಯಿಯಿಂದಾಗಿ ನಿರ್ಮಾಪಕರಿಗೆ ತೊಂದರೆ ಆಗುತ್ತಿದೆ ಎಂದು ಸುದ್ದಿ ಹಬ್ಬಿಸಲಾಗಿತ್ತು. ಆ ಬಗ್ಗೆ ರಶ್ಮಿಕಾ ಮಂದಣ್ಣ ಅವರು ಪ್ರತಿಕ್ರಿಯಿಸಿದ್ದಾರೆ. ಬಹಿರಂಗವಾಗಿಯೇ ಅವರು ಸ್ಪಷ್ಟನೆ ನೀಡಿದ್ದಾರೆ.

ರಶ್ಮಿಕಾ ಮಂದಣ್ಣ ಅವರ ಶ್ವಾನದ ಬಗ್ಗೆ ಮಾಧ್ಯಮ ಸಂಸ್ಥೆಯೊಂದು ಸುದ್ದಿ ಪ್ರಕಟಿಸಿತ್ತು. ‘ತಮ್ಮ ಜೊತೆಗೆ ಶ್ವಾನಕ್ಕೂ ವಿಮಾನದಲ್ಲಿ ಟಿಕೆಟ್​ ಬುಕ್​ ಮಾಡಬೇಕು ಎಂದು ರಶ್ಮಿಕಾ ಡಿಮ್ಯಾಂಡ್​ ಮಾಡುತ್ತಿದ್ದಾರೆ. ಯಾಕೆಂದರೆ ಅವರನ್ನು ಬಿಟ್ಟು ಆ ನಾಯಿ ಒಂದು ಕ್ಷಣವೂ ಇರುವುದಿಲ್ಲ. ಇದರಿಂದ ನಿರ್ಮಾಪಕರಿಗೆ ಹೊರೆ ಆಗುತ್ತಿದೆ’ ಎಂದು ಆ ಸುದ್ದಿಯಲ್ಲಿ ಬರೆಯಲಾಗಿತ್ತು. ಅದನ್ನು ಕಂಡು ರಶ್ಮಿಕಾ ಜೋರಾಗಿ ನಕ್ಕಿದ್ದಾರೆ.

ಇದನ್ನೂ ಓದಿ
Image
Pushpa 2: ರಶ್ಮಿಕಾ ಮಂದಣ್ಣ ಪಾತ್ರ ಸಾಯುತ್ತೆ ಅನ್ನೋದು ನಿಜವೇ? ‘ಪುಷ್ಪ 2’ ನಿರ್ಮಾಪಕರು​ ನೀಡಿದ ಪ್ರತಿಕ್ರಿಯೆ ಇಲ್ಲಿದೆ..
Image
Rashmika Mandanna: ರಶ್ಮಿಕಾ ಮಂದಣ್ಣ ಗುಟ್ಟಾಗಿ ‘777 ಚಾರ್ಲಿ’ ನೋಡಿದ್ರಾ? ಜನರ ಅನುಮಾನಕ್ಕೆ ಕಾರಣ ಆಗಿದೆ ಈ ವಿಡಿಯೋ
Image
ಅತಿ ಹೆಚ್ಚು ಸಂಬಳ ಪಡೆಯುವ ದಕ್ಷಿಣ ಭಾರತದ ಟಾಪ್​ 10 ನಟಿಯರು ಇವರು; ರಶ್ಮಿಕಾ, ಸಮಂತಾ ಸಂಭಾವನೆ ಎಷ್ಟು?
Image
ರಶ್ಮಿಕಾ ಮಂದಣ್ಣ ಹೊಸ ವಿಡಿಯೋ ವೈರಲ್​; ಎನರ್ಜಿ ಕಂಡು ವಾವ್​ ಎಂದ ಅಭಿಮಾನಿಗಳು

‘ಒಂದು ವೇಳೆ ಔರಾ (ಶ್ವಾನ) ನನ್ನ ಜೊತೆ ಪ್ರಯಾಣ ಮಾಡಲಿ ಎಂದು ನೀವು ಬಯಸಿದರೂ ಕೂಡ ಆಕೆ ಬರುವುದಿಲ್ಲ. ಆಕೆ ಹೈದರಾಬಾದ್​​ನಲ್ಲಿಯೇ ಖುಷಿಯಾಗಿದ್ದಾಳೆ. ನಿಮ್ಮ ಕಾಳಜಿಗೆ ಧನ್ಯವಾದಗಳು’ ಎಂದು ರಶ್ಮಿಕಾ ವ್ಯಂಗ್ಯವಾಗಿ ಟ್ವೀಟ್​ ಮಾಡಿದ್ದಾರೆ. ಅಷ್ಟೇ ಅಲ್ಲ, ‘ನನಗೆ ನಗು ತಡೆಯಲು ಆಗುತ್ತಿಲ್ಲ’ ಎಂದು ಅವರು ಬರೆದುಕೊಂಡಿದ್ದಾರೆ.

ನಟಿಯರ ಬಗ್ಗೆ ಈ ರೀತಿಯ ಗಾಸಿಪ್​ ಹಬ್ಬಿಸಿದರೆ ಕೆಲವೊಮ್ಮೆ ಅವರ ವೃತ್ತಿಜೀವನಕ್ಕೆ ತೊಂದರೆ ಆಗುವ ಸಾಧ್ಯತೆ ಇರುತ್ತದೆ. ರಶ್ಮಿಕಾ ಅವರು ನಿರ್ಮಾಪಕರಿಂದ ಅನಗತ್ಯವಾಗಿ ನಾಯಿಗೂ ಖರ್ಚು ಮಾಡಿಸುತ್ತಾರೆ ಎಂಬ ಮಾತು ಹಬ್ಬಿದರೆ ಕೆಲವು ನಿರ್ಮಾಪಕರು ಅವರಿಗೆ ಆಫರ್​ ನೀಡಲು ಹಿಂದೇಟು ಹಾಕಬಹುದು. ಈ ಎಲ್ಲ ಕಾರಣಗಳಿಂದಾಗಿ ಈ ಗಾಸಿಪ್​ಗೆ ರಶ್ಮಿಕಾ ಪ್ರತಿಕ್ರಿಯೆ ನೀಡಿದ್ದಾರೆ. ಶ್ವಾನಕ್ಕೆ ನಿರ್ಮಾಪಕರು ಟಿಕೆಟ್​ ಮಾಡಿಸಬೇಕು ಎಂಬುದೆಲ್ಲ ಶುದ್ಧ ಸುಳ್ಳು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ರಶ್ಮಿಕಾ ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. ಅಮಿತಾಭ್​ ಬಚ್ಚನ್​ ಜೊತೆ ನಟಿಸುತ್ತಿರುವ ಹಿಂದಿಯ ‘ಗುಡ್​ಬೈ’ ಸಿನಿಮಾಗೆ ಇತ್ತೀಚೆಗಷ್ಟೇ ಶೂಟಿಂಗ್​ ಮುಗಿದಿದೆ. ‘ಪುಷ್ಪ 2’ ಚಿತ್ರದ ಶೂಟಿಂಗ್​ ಆರಂಭವಾಗಲಿ ಎಂದು ರಶ್ಮಿಕಾ ಕಾಯುತ್ತಿದ್ದಾರೆ.

ಇದನ್ನೂ ಓದಿ: No Entry 2: ಸಲ್ಮಾನ್​ ಖಾನ್​ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ, ಸಮಂತಾ? ‘ನೋ ಎಂಟ್ರಿ’ಯಲ್ಲೂ ಸಿಗಬಹುದು ಎಂಟ್ರಿ

Pushpa 2: ರಶ್ಮಿಕಾ ಮಂದಣ್ಣ ಪಾತ್ರ ಸಾಯುತ್ತೆ ಅನ್ನೋದು ನಿಜವೇ? ‘ಪುಷ್ಪ 2’ ನಿರ್ಮಾಪಕರು​ ನೀಡಿದ ಪ್ರತಿಕ್ರಿಯೆ ಇಲ್ಲಿದೆ..

Published On - 9:08 am, Sat, 25 June 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ