AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಚಿತ್ರದ ಶೂಟಿಂಗ್​ ಮಧ್ಯೆ ರಶ್ಮಿಕಾ ಮಂದಣ್ಣ ಮಾಡಿದ ಕೆಲಸ ಇದು

ರಶ್ಮಿಕಾ ಮಂದಣ್ಣ ಅವರ ಅಭಿಮಾನಿಗಳು ‘ಪುಷ್ಪ 2’ ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆಗಸ್ಟ್​ 15ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಸದ್ಯಕ್ಕೆ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಶೂಟಿಂಗ್​ ಬಿಡುವಿನಲ್ಲಿ ರಶ್ಮಿಕಾ ಮಂದಣ್ಣ ಅವರು ಖುಷಿಖುಷಿಯಿಂದ ಕಾಲ ಕಳೆಯುತ್ತಿದ್ದಾರೆ. ಚಿತ್ರತಂಡದವರ ಕ್ಯಾಂಡಿಡ್​ ಫೋಟೋಗಳನ್ನು ರಶ್ಮಿಕಾ ಕ್ಲಿಕ್ಕಿಸಿದ್ದಾರೆ.

‘ಪುಷ್ಪ 2’ ಚಿತ್ರದ ಶೂಟಿಂಗ್​ ಮಧ್ಯೆ ರಶ್ಮಿಕಾ ಮಂದಣ್ಣ ಮಾಡಿದ ಕೆಲಸ ಇದು
ಸುಕುಮಾರ್​, ರಶ್ಮಿಕಾ ಮಂದಣ್ಣ
ಮದನ್​ ಕುಮಾರ್​
|

Updated on: Feb 12, 2024 | 7:21 PM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಹಲವು ಸಿನಿಮಾಗಳ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವುಗಳ ಪೈಕಿ ‘ಪುಷ್ಪ 2’ (Pushpa 2) ಸಿನಿಮಾದ ಮೇಲಿರುವ ನಿರೀಕ್ಷೆ ಎಲ್ಲಕ್ಕಿಂತ ಹೆಚ್ಚು. ಈ ಸಿನಿಮಾದಲ್ಲಿ ಘಟಾನುಘಟಿಗಳು ಕೆಲಸ ಮಾಡುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಅವರಿಗೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಖ್ಯಾತಿ ತಂದುಕೊಟ್ಟಿದ್ದೇ ‘ಪುಷ್ಪ’ ಸಿನಿಮಾ. ಆದ್ದರಿಂದ ಅದರ ಸೀಕ್ವೆಲ್​ ಎಂದರೆ ಅವರಿಗೆ ಸಹಜವಾಗಿಯೇ ಕಾಳಜಿ ಜಾಸ್ತಿ ಇದೆ. ಹಾಗಾಗಿ ಅವರು ಬಹಳ ಖುಷಿಯಿಂದ ಶೂಟಿಂಗ್​ನಲ್ಲಿ ಭಾಗಿ ಆಗಿದ್ದಾರೆ. ಈ ಸಿನಿಮಾಗೆ ಸುಕುಮಾರ್​ (Sukumar) ಅವರು ನಿರ್ದೇಶನ ಮಾಡುತ್ತಿದ್ದಾರೆ. ಶೂಟಿಂಗ್​ ಸೆಟ್​ನಲ್ಲಿ ಅವರ ಫೋಟೋವನ್ನು ಕ್ಲಿಕ್ಕಿಸಿದ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಆ ಪೋಟೋ ವೈರಲ್​ ಆಗಿದೆ.

‘ಪುಷ್ಪ 2’ ಸಿನಿಮಾದ ನಾಯಕ ಅಲ್ಲು ಅರ್ಜುನ್​ ಕೂಡ ಈ ಮೊದಲು ನಿರ್ದೇಶಕ ಸುಕುಮಾರ್​ ಅವರ ಕ್ಯಾಂಡಿಡ್​ ಫೋಟೋಗಳನ್ನು ಕ್ಲಿಕ್ಕಿಸಿ ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದ್ದರು. ಆ ಫೋಟೋಗಳಿಗೆ ಅಭಿಮಾನಿಗಳಿಂದ ಮೆಚ್ಚುಗೆ ಸಿಕ್ಕಿತ್ತು. ಈಗ ರಶ್ಮಿಕಾ ಮಂದಣ್ಣ ಅವರ ಸರದಿ. ಸಿಂಹದ ಪ್ರತಿಮೆ ಮೇಲೆ ಸುಕುಮಾರ್​ ಅವರು ಕೈಯಿಟ್ಟು ಒರಗಿಕೊಂಡು ನಿಂತಿರುವಾಗ ರಶ್ಮಿಕಾ ಮಂದಣ್ಣ ಅವರು ಈ ಫೋಟೋ ತೆಗೆದಿದ್ದಾರೆ. ಒಟ್ಟಿನಲ್ಲಿ ಖುಷಿಖುಷಿಯಾಗಿ ‘ಪುಷ್ಪ 2’ ಸಿನಿಮಾದ ಚಿತ್ರೀಕರಣ ಸಾಗುತ್ತಿದೆ.

ಇದನ್ನೂ ಓದಿ: ಅರೆಸ್ಟ್​ ಆಗಿದ್ದ ‘ಪುಷ್ಪ 2’ ಚಿತ್ರದ ನಟ ಜಗದೀಶ್​ ಮತ್ತೆ ಶೂಟಿಂಗ್​ ಸೆಟ್​ಗೆ ಹಾಜರಿ

‘ಪುಷ್ಪ’ ತೆರೆಕಂಡಿದ್ದು 2021ರ ಡಿಸೆಂಬರ್​ನಲ್ಲಿ. ಎರಡು ವರ್ಷ ಕಳೆದರೂ ಸೀಕ್ವೆಲ್​ ಬಗ್ಗೆ ಜನರಿಗೆ ಇರುವ ಕ್ರೇಜ್​ ಕಡಿಮೆ ಆಗಿಲ್ಲ. ಆ ಕ್ರೇಜ್​ ಇನ್ನಷ್ಟು ಹೆಚ್ಚಾಗುವ ರೀತಿಯಲ್ಲಿ ಶೂಟಿಂಗ್​ ಸೆಟ್​ನ ಫೋಟೋಗಳನ್ನು ಚಿತ್ರತಂಡದವರು ಹಂಚಿಕೊಳ್ಳುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಅಲ್ಲು ಅರ್ಜುನ್​ ಮತ್ತು ಸುಕುಮಾರ್​ ಅವರು ಗಾಢವಾಗಿ ಚರ್ಚೆ ಮಾಡುತ್ತಿರುವ ಫೋಟೋ ವೈರಲ್​ ಆಗಿತ್ತು. ಬಹುಕೋಟಿ ರೂಪಾಯಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆ ಬಂಡವಾಳ ಹೂಡುತ್ತಿದೆ.

ಅಲ್ಲು ಅರ್ಜುನ್​ ಅವರಿಗೆ ‘ಪುಷ್ಪ’ ಸಿನಿಮಾದ ನಟನೆಗೆ ನ್ಯಾಷನಲ್​ ಅವಾರ್ಡ್​ ಸಿಕ್ಕಿತು. ಆ ಬಳಿಕ ‘ಪುಷ್ಪ 2’ ಮೇಲೆ ಇರುವ ನಿರೀಕ್ಷೆ ನೂರು ಪಟ್ಟು ಜಾಸ್ತಿ ಆಯಿತು. ಈ ಸಿನಿಮಾ ಆಗಸ್ಟ್​ 15ರಂದು ಬಿಡುಗಡೆ ಆಗಲಿದೆ. ಚಿತ್ರದ ರಿಲೀಸ್​ ದಿನಾಂಕ ಮುಂದೂಡಿಕೆ ಆಗಬಹುದು ಎಂದು ಕೆಲವರು ಗಾಸಿಪ್​ ಹಬ್ಬಿಸಿದ್ದರು. ಆದರೆ ಅದನ್ನು ಚಿತ್ರತಂಡ ತಳ್ಳಿಹಾಕಿತು. ಅಂದುಕೊಂಡಂತೆಯೇ ಆಗಸ್ಟ್​ 15ರಂದು ಸ್ವಾತಂತ್ರ್ಯೋತ್ಸವದ ಪ್ರಯುಕ್ತ ‘ಪುಷ್ಪ 2’ ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ಡಾಲಿ ಧನಂಜಯ್, ಫಹಾದ್​ ಫಾಸಿಲ್​ ಮುಂತಾದ ಕಲಾವಿದರು ಅಭಿನಯಿಸುತ್ತಿದ್ದಾರೆ. ಗಲ್ಲಾ ಪೆಟ್ಟಿಗೆಯಲ್ಲಿ ಈ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್​ ಮಾಡಲಿದೆ ಎಂದು ಅಭಿಮಾನಿಗಳು ಭರವಸೆ ಇಟ್ಟುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್