AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ಬಗ್ಗೆ ಟೀಕೆ ಮಾಡಿದವರಿಗೆ ನಟಿ ರಶ್ಮಿಕಾ ಮಂದಣ್ಣ ಖಡಕ್ ತಿರುಗೇಟು

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಮದುವೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ. ‘ಕಾಫಿ ವಿತ್ ಕರಣ್ ಸೀಸನ್ 9’ ಶೋನಲ್ಲಿ ಅವರಿಬ್ಬರು ಒಟ್ಟಿಗೆ ಸಂದರ್ಶನ ನೀಡಿದ ಬಳಿಕ ನೆಟ್ಟಿಗರು ಕಟುವಾಗಿ ಟೀಕೆ ಮಾಡುತ್ತಿದ್ದಾರೆ. ಜನರ ಟೀಕೆಗಳಿಗೆ ರಶ್ಮಿಕಾ ಮಂದಣ್ಣ ಅವರು ಪ್ರತಿಕ್ರಿಯಿಸಿದ್ದಾರೆ.

ವಿಜಯ್ ಬಗ್ಗೆ ಟೀಕೆ ಮಾಡಿದವರಿಗೆ ನಟಿ ರಶ್ಮಿಕಾ ಮಂದಣ್ಣ ಖಡಕ್ ತಿರುಗೇಟು
Rashmika Mandanna, Vijay Deverakonda
ಮದನ್​ ಕುಮಾರ್​
|

Updated on: Oct 26, 2026 | 3:51 PM

Share

‘ಕಾಫಿ ವಿತ್ ಕರಣ್’ ಶೋನಲ್ಲಿ ತಮ್ಮ ವೈವಾಹಿಕ ಜೀವನ ಹಾಗೂ ಮದುವೆಯ ನಿರ್ಧಾರದ ಕುರಿತು ಮಾತನಾಡಿದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾದ ಟೀಕೆಗಳಿಗೆ ನಟಿ ರಶ್ಮಿಕಾ ಮಂದಣ್ಣ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತಿ ವಿಜಯ್ ದೇವರಕೊಂಡ ಅವರನ್ನು ಸ್ತ್ರೀದ್ವೇಷಿ ಹಾಗೂ ರೆಡ್ ಫ್ಲ್ಯಾಗ್ ಎಂದು ಕರೆಯುತ್ತಿದ್ದ ನೆಟ್ಟಿಗರಿಗೆ ರಶ್ಮಿಕಾ ಸೋಶಿಯಲ್ ಮೀಡಿಯಾ ಪೋಸ್ಟ್ ಮೂಲಕ ಖಡಕ್ ತಿರುಗೇಟು ನೀಡಿದ್ದಾರೆ.

ಇತ್ತೀಚೆಗೆ ಪ್ರಸಾರವಾದ ‘ಕಾಫಿ ವಿತ್ ಕರಣ್ 9’ ಕಾರ್ಯಕ್ರಮದಲ್ಲಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಜೊತೆಯಾಗಿ ಭಾಗವಹಿಸಿದ್ದರು. ಈ ವೇಳೆ, ತಮ್ಮ ಮದುವೆಯ ಪ್ರಸ್ತಾವನೆಯ ಬಗ್ಗೆ ಮಾತನಾಡುತ್ತಾ, ವಿಜಯ್ ಅವರು ‘ನನ್ನನ್ನು ಮದುವೆಯಾಗಲು ರಶ್ಮಿಕಾ ದಿನವೂ ಕೇಳುತ್ತಿದ್ದಳು’ ಎಂದು ಹೇಳಿದ್ದರು. ಅಲ್ಲದೆ, 100 ಬಾರಿ ಕೇಳಿದ ನಂತರವೇ ಮದುವೆಗೆ ತಾವು ಒಪ್ಪಿಗೆ ನೀಡಿದ್ದಾಗಿ ವಿಜಯ್ ಹೇಳಿದ್ದರು.

ಆದರೆ ಈ ಮಾತನ್ನು ಸೋಶಿಯಲ್ ಮೀಡಿಯಾದಲ್ಲಿ ತೀವ್ರವಾಗಿ ಟೀಕಿಸಲಾಯಿತು. ವಿಜಯ್ ಅವರು ರಶ್ಮಿಕಾ ಅವರನ್ನು ಕೀಳಾಗಿ ಕಂಡಿದ್ದಾರೆ ಮತ್ತು ಅವರದ್ದು ಮಹಿಳಾ ವಿರೋಧಿ ಮನೋಭಾವ ಎಂದು ಹಲವರು ಕಮೆಂಟ್ ಮಾಡಿದ್ದರು. ಈಗ ತಮ್ಮ ಮತ್ತು ವಿಜಯ್ ನಡುವಿನ ವೈಯಕ್ತಿಕ ವಿಚಾರಗಳ ಬಗ್ಗೆ ಅನಗತ್ಯವಾಗಿ ಮಾತನಾಡುತ್ತಿರುವವರ ವಿರುದ್ಧ ರಶ್ಮಿಕಾ ಅವರು ಸುದೀರ್ಘ ಪೋಸ್ಟ್‌ನಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ನಾನು ಭಾವನಾತ್ಮಕವಾಗಿ ನಿರ್ಧಾರ ತೆಗೆದುಕೊಳ್ಳುವ ವ್ಯಕ್ತಿ, ಆದರೆ ವಿಜಯ್ ಪ್ರತಿಯೊಂದನ್ನೂ ಪ್ರಾಯೋಗಿಕವಾಗಿ ಯೋಚಿಸುತ್ತಾರೆ. ಮದುವೆಯಂತಹ ದೊಡ್ಡ ನಿರ್ಧಾರ ತೆಗೆದುಕೊಳ್ಳುವ ಮುನ್ನ ಕಾಲಾವಕಾಶ ತಗೆದುಕೊಂಡು ಪರಸ್ಪರ ಅರ್ಥಮಾಡಿಕೊಳ್ಳುವುದು ಮುಖ್ಯವಾಗಿತ್ತು. ಅದರಲ್ಲಿ ಯಾವುದೇ ತಪ್ಪಿಲ್ಲ’ ಎಂದು ರಶ್ಮಿಕಾ ಮಂದಣ್ಣ ಅವರು ಹೇಳಿದ್ದಾರೆ.

‘ನಮಗೆ ಮೊಣಕಾಲೂರಿ ರಿಂಗ್ ತೊಡಿಸುವ ಗ್ರಾಂಡ್ ಪ್ರಪೋಸಲ್ ಅಗತ್ಯವಿರಲಿಲ್ಲ. ನಮಗೆ ಮುಖ್ಯವಾಗಿದ್ದು ನಮ್ಮ ಭವಿಷ್ಯ ಮತ್ತು ಜೊತೆಯಾಗಿ ಕಟ್ಟಿಕೊಳ್ಳಬೇಕಾದ ಜೀವನ. ನಮ್ಮಿಬ್ಬರ ಸಂದರ್ಶನವನ್ನು ಜನರು ಅರ್ಥಮಾಡಿಕೊಳ್ಳುವ ಬದಲು ಅನಗತ್ಯವಾಗಿ ಟೀಕಿಸಲು ಶುರು ಮಾಡಿದ್ದಾರೆ. ನಮಗೆ ಸಲಹೆ ನೀಡಲು ಗ್ಯಾಂಗ್ ಕಟ್ಟಿಕೊಂಡು ಬಂದಂತೆ ವರ್ತಿಸುತ್ತಿದ್ದಾರೆ. ನಮ್ಮ ಕುಟುಂಬದ ವಿಚಾರಗಳನ್ನು ಎಳೆದು ತರುವುದು ಸಂಪೂರ್ಣವಾಗಿ ಗಡಿ ದಾಟಿದ ನಡವಳಿಕೆ’ ಎಂದು ರಶ್ಮಿಕಾ ಕಿಡಿಕಾರಿದ್ದಾರೆ.

ಇದನ್ನೂ ಓದಿ: ದಕ್ಷಿಣ ಭಾರತದ ಉಚ್ಚಾರಣೆ ಟೀಕೆಗಳಿಗೆ ನಟಿ ರಶ್ಮಿಕಾ ಮಂದಣ್ಣ ಖಡಕ್ ತಿರುಗೇಟು

‘ನಾವಿಬ್ಬರೂ ಸ್ವಪ್ರಯತ್ನದಿಂದ ಬೆಳೆದು ಬಂದಿರುವ ಸ್ವತಂತ್ರ ವ್ಯಕ್ತಿಗಳು. ನಾವಿಬ್ಬರೂ ಪರಸ್ಪರ ಆಯ್ಕೆ ಮಾಡಿಕೊಂಡಿದ್ದೇವೆ. ನಮ್ಮ ಪ್ರೀತಿ ನಿಮ್ಮ ಕಲ್ಪನೆಗೆ ಹೊಂದಿಕೆಯಾಗದಿದ್ದರೆ ಅದಕ್ಕೆ ನಾವೇನೂ ಮಾಡಲು ಸಾಧ್ಯವಿಲ್ಲ’ ಎಂದು ರಶ್ಮಿಕಾ ಮಂದಣ್ಣ ಅವರು ನೆಟ್ಟಿಗರಿಗೆ ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ದೆಹಲಿಗೆ ತೆರಳಿದ ಹರಿಪ್ರಸಾದ್​​: KPCC ಕಾರ್ಯಾಧ್ಯಕ್ಷರ ನೇಮಕ ಬಗ್ಗೆ ಚರ್ಚೆ?
ದೆಹಲಿಗೆ ತೆರಳಿದ ಹರಿಪ್ರಸಾದ್​​: KPCC ಕಾರ್ಯಾಧ್ಯಕ್ಷರ ನೇಮಕ ಬಗ್ಗೆ ಚರ್ಚೆ?
ಹಿರಿಯೂರು ಟಿಕೆಟ್ ಫೈಟ್: ಅಮಿತ್ ಶಾ ಭೇಟಿ ಬೆನ್ನಲ್ಲೇ ಕುಮಾರಸ್ವಾಮಿ ಹೇಳಿಕೆ
ಹಿರಿಯೂರು ಟಿಕೆಟ್ ಫೈಟ್: ಅಮಿತ್ ಶಾ ಭೇಟಿ ಬೆನ್ನಲ್ಲೇ ಕುಮಾರಸ್ವಾಮಿ ಹೇಳಿಕೆ
ಬಡವರಿಗೆ ವಿತರಿಸಬೇಕಿದ್ದ ಸರ್ಕಾರಿ ಆಸ್ಪತ್ರೆ ಔಷಧಿಗಳು ನದಿಯಲ್ಲಿ ಪತ್ತೆ!
ಬಡವರಿಗೆ ವಿತರಿಸಬೇಕಿದ್ದ ಸರ್ಕಾರಿ ಆಸ್ಪತ್ರೆ ಔಷಧಿಗಳು ನದಿಯಲ್ಲಿ ಪತ್ತೆ!
ಗೋಣಿಚೀಲ ಹೊದ್ದು ತಹಶೀಲ್ದಾರ್ ಕಚೇರಿ ಗೇಟ್ ಬಳಿಯೇ ಮಲಗಿದ ರೈತ!
ಗೋಣಿಚೀಲ ಹೊದ್ದು ತಹಶೀಲ್ದಾರ್ ಕಚೇರಿ ಗೇಟ್ ಬಳಿಯೇ ಮಲಗಿದ ರೈತ!
ರಂಭಾಪುರಿ ಪೀಠದ  ಬಗ್ಗೆಯೂ ‘ಬಸವ ಮಂಟಪ’ ಪುಸ್ತಕದಲ್ಲಿ ವಿವಾದಾತ್ಮಕ ಉಲ್ಲೇಖ!
ರಂಭಾಪುರಿ ಪೀಠದ  ಬಗ್ಗೆಯೂ ‘ಬಸವ ಮಂಟಪ’ ಪುಸ್ತಕದಲ್ಲಿ ವಿವಾದಾತ್ಮಕ ಉಲ್ಲೇಖ!
ಟಿವಿ9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ ಅದ್ದೂರಿ ಚಾಲನೆ
ಟಿವಿ9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ ಅದ್ದೂರಿ ಚಾಲನೆ
ಕ್ಯಾಪ್ಟನ್ ಆದ ಮೊದಲ ಹೆಜ್ಜೆಯಲ್ಲೇ ಎಡವಿದ ಗಾನವಿ: ವಿಡಿಯೋ
ಕ್ಯಾಪ್ಟನ್ ಆದ ಮೊದಲ ಹೆಜ್ಜೆಯಲ್ಲೇ ಎಡವಿದ ಗಾನವಿ: ವಿಡಿಯೋ
‘ಬಸವ ಮಂಟಪ’ ಕೃತಿ ವಿವಾದ: ಲೇಖಕ ರವಿ ಹಂಜ್ ಕ್ಷಮೆಯಾಚನೆ
‘ಬಸವ ಮಂಟಪ’ ಕೃತಿ ವಿವಾದ: ಲೇಖಕ ರವಿ ಹಂಜ್ ಕ್ಷಮೆಯಾಚನೆ
ಸಿಎಂ ಸಂಧಾನದ ನಂತರವೂ 4ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಧರಣಿ!
ಸಿಎಂ ಸಂಧಾನದ ನಂತರವೂ 4ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಧರಣಿ!
ಹಿರಿಯೂರು ಉಪಚುನಾವಣೆ: ಕುಮಾರಸ್ವಾಮಿ ಬಳಿ ಅಮಿತ್​ ಶಾ ಚರ್ಚೆ
ಹಿರಿಯೂರು ಉಪಚುನಾವಣೆ: ಕುಮಾರಸ್ವಾಮಿ ಬಳಿ ಅಮಿತ್​ ಶಾ ಚರ್ಚೆ