AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ, ದೀಕ್ಷಿತ್ ಶೆಟ್ಟಿ ನಟನೆಯ ‘ದಿ ಗರ್ಲ್​ಫ್ರೆಂಡ್​’ ಚಿತ್ರದ ಮೊದಲ ಹಾಡು

ಹೇಶಮ್ ಅಬ್ದುಲ್ ವಹಾಬ್ ಅವರು ‘ದಿ ಗರ್ಲ್​ಫ್ರೆಂಡ್​’ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಮತ್ತು ದೀಕ್ಷಿತ್ ಶೆಟ್ಟಿ ಅವರು ಜೋಡಿಯಾಗಿ ಅಭಿನಯಿಸಿದ್ದಾರೆ. ‘ಸ್ವರವೇ..’ ಹಾಡಿಗೆ ಹೇಶಮ್ ಅಬ್ದುಲ್ ವಹಾಬ್ ಧ್ವನಿ ನೀಡಿದ್ದು, 5 ಭಾಷೆಯಲ್ಲಿ ಸಾಂಗ್ ಬಿಡುಗಡೆ ಆಗಿದೆ.

ರಶ್ಮಿಕಾ, ದೀಕ್ಷಿತ್ ಶೆಟ್ಟಿ ನಟನೆಯ ‘ದಿ ಗರ್ಲ್​ಫ್ರೆಂಡ್​’ ಚಿತ್ರದ ಮೊದಲ ಹಾಡು
Rashmika Mandanna, Dheekshith Shetty
ಮದನ್​ ಕುಮಾರ್​
|

Updated on: Jul 16, 2025 | 10:10 PM

Share

ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಮಿಂಚುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಒಂದೆಡೆ ಸ್ಟಾರ್ ಹೀರೋಗಳ ಸಿನಿಮಾ, ಇನ್ನೊಂದೆಡೆ ನಾಯಕಿ ಪ್ರಧಾನ ಸಿನಿಮಾಗಳನ್ನು ಅವರು ಒಪ್ಪಿಕೊಳ್ಳುತ್ತಿದ್ದಾರೆ. ರಶ್ಮಿಕಾ ಮಂದಣ್ಣ ನಟನೆಯ ‘ದಿ ಗರ್ಲ್​ಫ್ರೆಂಡ್​’ (The Girlfriend) ಸಿನಿಮಾ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಈ ಚಿತ್ರದಲ್ಲಿ ಅವರಿಗೆ ಕನ್ನಡದ ನಟ ದೀಕ್ಷಿತ್ ಶೆಟ್ಟಿ (Dheekshith Shetty) ಅವರು ಜೋಡಿ ಆಗಿದ್ದಾರೆ. ಈ ಸಿನಿಮಾದ ಹೊಸ ಹಾಡು ಬಿಡುಗಡೆ ಆಗಿದೆ.

‘ದಿ ಗರ್ಲ್‌ಫ್ರೆಂಡ್’ ಸಿನಿಮಾವನ್ನು ‘ಗೀತಾ ಆರ್ಟ್ಸ್’ ಹಾಗೂ ‘ಧೀರಜ್ ಮೊಗಿಲಿನೇನಿ ಎಂಟರ್‌ಟೈನ್‌ಮೆಂಟ್’ ಸಂಸ್ಥೆಗಳು ಒಟ್ಟಾಗಿ ನಿರ್ಮಾಣ ಮಾಡುತ್ತಿವೆ. ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಅವರು ಈ ಸಿನಿಮಾವನ್ನು ಪ್ರಸ್ತುತಪಡಿಸುತ್ತಿದ್ದಾರೆ. ರಾಹುಲ್ ರವೀಂದ್ರನ್ ಅವರು ನಿರ್ದೇಶನ ಮಾಡಿದ್ದಾರೆ. ಸುಂದರ ಪ್ರೇಮಕಥೆಯನ್ನು ‘ದಿ ಗರ್ಲ್‌ ಫ್ರೆಂಡ್‌’ ಸಿನಿಮಾ ಮೂಲಕ ಅವರು ಹೇಳಲಿದ್ದಾರೆ.

ಈ ಸಿನಿಮಾದ ಮೊದಲ ಹಾಡು ಬಿಡುಗಡೆ ಆಗಿದೆ. ‘ಸ್ವರವೇ..’ ಎಂಬ ಈ ಹಾಡು ತೆಲುಗು, ತಮಿಳು, ಹಿಂದಿ, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ರಿಲೀಸ್ ಆಗಿದೆ. ಹೇಶಮ್ ಅಬ್ದುಲ್ ವಹಾಬ್ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ಅಲ್ಲದೇ, ‘ಸ್ವರವೇ..’ ಹಾಡಿಗೆ ಹೇಶಮ್ ಅಬ್ದುಲ್ ವಹಾಬ್ ಅವರೇ ಧ್ವನಿ ನೀಡಿದ್ದಾರೆ. ಕನ್ನಡ ವರ್ಷನ್​ಗೆ ನಾಗಾರ್ಜುನ್‌ ಶರ್ಮಾ ಸಾಹಿತ್ಯ ಬರೆದಿದ್ದಾರೆ.

ಇದನ್ನೂ ಓದಿ
Image
‘ನನ್ನ ತಂಗಿಗೆ ಸವಲತ್ತು ಸಿಗಬಾರದು’; ರಶ್ಮಿಕಾ ಮಂದಣ್ಣ ಹೀಗೆ ಅಂದಿದ್ಯಾಕೆ?
Image
ರಶ್ಮಿಕಾ ಮಂದಣ್ಣ ಹಿಂಗೆಲ್ಲ ಮಾಡಿದರೂ ಕ್ಯೂಟ್ ಅಂತಾರೆ ಅಭಿಮಾನಿಗಳು
Image
‘ನಾನು ಹೈದರಾಬಾದ್​ನವಳು’ ಎಂದು ಹೆಮ್ಮೆಯಿಂದ ಹೇಳಿದ ರಶ್ಮಿಕಾ
Image
‘ಎಲ್ಲರಿಗೂ ಆ ವಿಚಾರ ಗೊತ್ತಿದೆ’; ಮದುವೆ ಬಗ್ಗೆ ನೇರವಾಗಿ ಮಾತನಾಡಿದ ರಶ್ಮಿಕಾ

‘ಸ್ವರವೇ..’  ಹಾಡು:

ರಶ್ಮಿಕಾ ಮಂದಣ್ಣ ಹಾಗೂ ದೀಕ್ಷಿತ್ ಶೆಟ್ಟಿ ಅವರ ಆನ್ ಸ್ಕ್ರೀನ್ ಕೆಮಿಸ್ಟ್ರಿ ಹೇಗಿದೆ ಎಂಬುದು ಈ ಹಾಡಿನ ಮೂಲಕ ಗೊತ್ತಾಗಿದೆ. ರೊಮ್ಯಾಂಟಿಕ್ ಡ್ಯಾನ್ಸ್ ಮೂಲಕ ಅವರಿಬ್ಬರು ಗಮನ ಸೆಳೆದಿದ್ದಾರೆ. ಸದ್ಯಕ್ಕೆ ಈ ಸಿನಿಮಾದ ಕೆಲಸಗಳು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿವೆ. ಶೀಘ್ರದಲ್ಲೇ ‘ದಿ ಗರ್ಲ್‌ಫ್ರೆಂಡ್’ ಸಿನಿಮಾ ಅದ್ದೂರಿಯಾಗಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ.

ಇದನ್ನೂ ಓದಿ: ಯಾರೂ ಊಹಿಸದ ಪಾತ್ರದಲ್ಲಿ ನಟಿಸಲಿದ್ದಾರೆ ನಟಿ ರಶ್ಮಿಕಾ ಮಂದಣ್ಣ

ಧೀರಜ್ ಮೊಗಿಲಿನೇನಿ ಮತ್ತು ವಿದ್ಯಾ ಕೊಪ್ಪಿನೀಡಿ ಅವರು ‘ದಿ ಗರ್ಲ್‌ಫ್ರೆಂಡ್’ ಸಿನಿಮಾಗೆ ಹಣ ಹೂಡಿದ್ದಾರೆ. ಸದ್ಯಕ್ಕಂತೂ ರಶ್ಮಿಕಾ ಮಂದಣ್ಣ ನಟಿಸಿದ ಎಲ್ಲ ಸಿನಿಮಾಗಳು ಸೂಪರ್ ಹಿಟ್ ಆಗುತ್ತಿವೆ. ಇತ್ತೀಚಿನ ವರ್ಷಗಳಲ್ಲಿ ‘ಸಿಕಂದರ್’ ಹೊರತುಪಡಿಸಿ ಬೇರೆ ಎಲ್ಲ ಸಿನಿಮಾಗಳು ಕೂಡ ಭರ್ಜರಿ ಕಲೆಕ್ಷನ್ ಮಾಡಿವೆ. ಹೊಸ ಹೊಸ ಅವಕಾಶಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.