
ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಮಿಂಚುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಒಂದೆಡೆ ಸ್ಟಾರ್ ಹೀರೋಗಳ ಸಿನಿಮಾ, ಇನ್ನೊಂದೆಡೆ ನಾಯಕಿ ಪ್ರಧಾನ ಸಿನಿಮಾಗಳನ್ನು ಅವರು ಒಪ್ಪಿಕೊಳ್ಳುತ್ತಿದ್ದಾರೆ. ರಶ್ಮಿಕಾ ಮಂದಣ್ಣ ನಟನೆಯ ‘ದಿ ಗರ್ಲ್‌ಫ್ರೆಂಡ್’ (The Girlfriend) ಸಿನಿಮಾ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಈ ಚಿತ್ರದಲ್ಲಿ ಅವರಿಗೆ ಕನ್ನಡದ ನಟ ದೀಕ್ಷಿತ್ ಶೆಟ್ಟಿ (Dheekshith Shetty) ಅವರು ಜೋಡಿ ಆಗಿದ್ದಾರೆ. ಈ ಸಿನಿಮಾದ ಹೊಸ ಹಾಡು ಬಿಡುಗಡೆ ಆಗಿದೆ.
‘ದಿ ಗರ್ಲ್‌ಫ್ರೆಂಡ್’ ಸಿನಿಮಾವನ್ನು ‘ಗೀತಾ ಆರ್ಟ್ಸ್’ ಹಾಗೂ ‘ಧೀರಜ್ ಮೊಗಿಲಿನೇನಿ ಎಂಟರ್‌ಟೈನ್‌ಮೆಂಟ್’ ಸಂಸ್ಥೆಗಳು ಒಟ್ಟಾಗಿ ನಿರ್ಮಾಣ ಮಾಡುತ್ತಿವೆ. ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಅವರು ಈ ಸಿನಿಮಾವನ್ನು ಪ್ರಸ್ತುತಪಡಿಸುತ್ತಿದ್ದಾರೆ. ರಾಹುಲ್ ರವೀಂದ್ರನ್ ಅವರು ನಿರ್ದೇಶನ ಮಾಡಿದ್ದಾರೆ. ಸುಂದರ ಪ್ರೇಮಕಥೆಯನ್ನು ‘ದಿ ಗರ್ಲ್ ಫ್ರೆಂಡ್’ ಸಿನಿಮಾ ಮೂಲಕ ಅವರು ಹೇಳಲಿದ್ದಾರೆ.
ಈ ಸಿನಿಮಾದ ಮೊದಲ ಹಾಡು ಬಿಡುಗಡೆ ಆಗಿದೆ. ‘ಸ್ವರವೇ..’ ಎಂಬ ಈ ಹಾಡು ತೆಲುಗು, ತಮಿಳು, ಹಿಂದಿ, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ರಿಲೀಸ್ ಆಗಿದೆ. ಹೇಶಮ್ ಅಬ್ದುಲ್ ವಹಾಬ್ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ಅಲ್ಲದೇ, ‘ಸ್ವರವೇ..’ ಹಾಡಿಗೆ ಹೇಶಮ್ ಅಬ್ದುಲ್ ವಹಾಬ್ ಅವರೇ ಧ್ವನಿ ನೀಡಿದ್ದಾರೆ. ಕನ್ನಡ ವರ್ಷನ್ಗೆ ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದಿದ್ದಾರೆ.
ರಶ್ಮಿಕಾ ಮಂದಣ್ಣ ಹಾಗೂ ದೀಕ್ಷಿತ್ ಶೆಟ್ಟಿ ಅವರ ಆನ್ ಸ್ಕ್ರೀನ್ ಕೆಮಿಸ್ಟ್ರಿ ಹೇಗಿದೆ ಎಂಬುದು ಈ ಹಾಡಿನ ಮೂಲಕ ಗೊತ್ತಾಗಿದೆ. ರೊಮ್ಯಾಂಟಿಕ್ ಡ್ಯಾನ್ಸ್ ಮೂಲಕ ಅವರಿಬ್ಬರು ಗಮನ ಸೆಳೆದಿದ್ದಾರೆ. ಸದ್ಯಕ್ಕೆ ಈ ಸಿನಿಮಾದ ಕೆಲಸಗಳು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿವೆ. ಶೀಘ್ರದಲ್ಲೇ ‘ದಿ ಗರ್ಲ್‌ಫ್ರೆಂಡ್’ ಸಿನಿಮಾ ಅದ್ದೂರಿಯಾಗಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ.
ಇದನ್ನೂ ಓದಿ: ಯಾರೂ ಊಹಿಸದ ಪಾತ್ರದಲ್ಲಿ ನಟಿಸಲಿದ್ದಾರೆ ನಟಿ ರಶ್ಮಿಕಾ ಮಂದಣ್ಣ
ಧೀರಜ್ ಮೊಗಿಲಿನೇನಿ ಮತ್ತು ವಿದ್ಯಾ ಕೊಪ್ಪಿನೀಡಿ ಅವರು ‘ದಿ ಗರ್ಲ್‌ಫ್ರೆಂಡ್’ ಸಿನಿಮಾಗೆ ಹಣ ಹೂಡಿದ್ದಾರೆ. ಸದ್ಯಕ್ಕಂತೂ ರಶ್ಮಿಕಾ ಮಂದಣ್ಣ ನಟಿಸಿದ ಎಲ್ಲ ಸಿನಿಮಾಗಳು ಸೂಪರ್ ಹಿಟ್ ಆಗುತ್ತಿವೆ. ಇತ್ತೀಚಿನ ವರ್ಷಗಳಲ್ಲಿ ‘ಸಿಕಂದರ್’ ಹೊರತುಪಡಿಸಿ ಬೇರೆ ಎಲ್ಲ ಸಿನಿಮಾಗಳು ಕೂಡ ಭರ್ಜರಿ ಕಲೆಕ್ಷನ್ ಮಾಡಿವೆ. ಹೊಸ ಹೊಸ ಅವಕಾಶಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.