AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಕೈ ಚರ್ಮದ ಬಣ್ಣ ಚೇಂಜ್​ ಆಗಿದ್ದೇಕೆ? ಪರದೆ ಹಿಂದಿನ ಕಹಾನಿ ಬಿಚ್ಚಿಟ್ಟ ಒಂದು ಫೋಟೋ

Rashmika Mandanna: ತೆಲುಗಿನ ‘ಪುಷ್ಪ’ ಚಿತ್ರದಲ್ಲಿ ಅಲ್ಲು ಅರ್ಜುನ್​ಗೆ ಜೋಡಿಯಾಗಿ ರಶ್ಮಿಕಾ ನಟಿಸಿದ್ದಾರೆ. ಇದರಲ್ಲಿ ಅವರು ನಿಭಾಯಿಸಿರುವ ಶ್ರೀವಲ್ಲಿ ಎಂಬ ಪಾತ್ರ ಸಖತ್​ ಡಿಫರೆಂಟ್​ ಆಗಿದೆ.

ರಶ್ಮಿಕಾ ಕೈ ಚರ್ಮದ ಬಣ್ಣ ಚೇಂಜ್​ ಆಗಿದ್ದೇಕೆ? ಪರದೆ ಹಿಂದಿನ ಕಹಾನಿ ಬಿಚ್ಚಿಟ್ಟ ಒಂದು ಫೋಟೋ
ರಶ್ಮಿಕಾ ಮಂದಣ್ಣ
Follow us
TV9 Web
| Updated By: ಮದನ್​ ಕುಮಾರ್​

Updated on: Nov 14, 2021 | 9:58 AM

ರಶ್ಮಿಕಾ ಮಂದಣ್ಣ (Rashmika Mandanna) ಅವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ಫ್ಯಾನ್ಸ್​ ಜೊತೆ ಸಂಪರ್ಕದಲ್ಲಿ ಇರಲು ರಶ್ಮಿಕಾ ಸದಾ ಕಾಲ ಸೋಶಿಯಲ್​ ಮೀಡಿಯಾ ಬಳಕೆ ಮಾಡುತ್ತಾರೆ. ತಮ್ಮ ದಿನಚರಿಯ ಬಗ್ಗೆ ಆಗಾಗ ಅಪ್​ಡೇಟ್​ ನೀಡುತ್ತಾ ಇರುತ್ತಾರೆ. ಸಿನಿಮಾ ಬಗ್ಗೆ ಮತ್ತು ಖಾಸಗಿ ಜೀವನದ ಬಗ್ಗೆ ಒಂದಷ್ಟು ವಿಷಯಗಳನ್ನು ಹಂಚಿಕೊಳ್ಳುತ್ತಾರೆ. ಇತ್ತೀಚೆಗೆ ಅವರು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಒಂದು ಫೋಟೋ ಶೇರ್​ ಮಾಡಿಕೊಂಡಿದ್ದರು. ಅದನ್ನು ಕಂಡರೆ ಒಂದು ಕ್ಷಣ ಅಚ್ಚರಿ ಆಗುವುದು ಸಹಜ. ಅದರಲ್ಲಿ ರಶ್ಮಿಕಾ ಅವರ ಕೈ ಚರ್ಮದ ಬಣ್ಣ ಬದಲಾಗಿರುವುದು ಕಾಣುತ್ತದೆ. ತಮ್ಮ ನೆಚ್ಚಿನ ನಟಿಗೆ ಈ ರೀತಿ ಯಾಕೆ ಆಯಿತು ಎಂದು ಫ್ಯಾನ್ಸ್​ ತಲೆ ಕೆಡಿಸಿಕೊಂಡಿರಬಹುದು. ಆ ಪ್ರಶ್ನೆಗೂ ಕೂಡ ಅದೇ ಫೋಟೋದಲ್ಲಿ ರಶ್ಮಿಕಾ ಉತ್ತರ ನೀಡಿದ್ದಾರೆ. ಅಂದಹಾಗೆ ಆ ಫೋಟೋ ಕ್ಲಿಕ್ಕಿಸಿದ್ದು ‘ಪುಷ್ಪ’ ಸಿನಿಮಾದ (Pushpa Movie) ಶೂಟಿಂಗ್​ ಸಮಯದಲ್ಲಿ ಎಂಬುದು ಗಮನಿಸಬೇಕಾದ ಅಂಶ.

ತೆಲುಗಿನ ‘ಪುಷ್ಪ’ ಚಿತ್ರದಲ್ಲಿ ಅಲ್ಲು ಅರ್ಜುನ್​ಗೆ ಜೋಡಿಯಾಗಿ ರಶ್ಮಿಕಾ ನಟಿಸಿದ್ದಾರೆ. ಇದರಲ್ಲಿ ಅವರು ನಿಭಾಯಿಸಿರುವ ಶ್ರೀವಲ್ಲಿ ಎಂಬ ಪಾತ್ರ ಸಖತ್​ ಡಿಫರೆಂಟ್​ ಆಗಿದೆ. ಹಳ್ಳಿ ಹುಡುಗಿ ಗೆಟಪ್​ನಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ ಎಂಬುದು ಈಗಾಗಲೇ ಗೊತ್ತಾಗಿದೆ. ಅ ಪಾತ್ರಕ್ಕೆ ಸರಿಹೊಂದುವ ರೀತಿಯಲ್ಲೇ ಮೇಕಪ್​ ಮಾಡಲಾಗಿದೆ. ರಿಯಲ್​ ಲೈಫ್​ನಲ್ಲಿ ರಶ್ಮಿಕಾ ಅವರು ಬಿಳಿ ಮೈಬಣ್ಣ ಹೊಂದಿದ್ದಾರೆ. ಆದರೆ ಶ್ರೀವಲ್ಲಿ ಪಾತ್ರ ಸ್ವಲ್ಪ ಕಪ್ಪು. ಹಾಗಾಗಿ ಈ ರೀತಿ ಮೇಕಪ್​ ಮಾಡಲಾಗಿತ್ತು.

‘ಪುಷ್ಪ’ ಚಿತ್ರದ ಶೂಟಿಂಗ್ ವೇಳೆ ಮಧ್ಯಾಹ್ನ ಊಟದ ಬ್ರೇಕ್​ನಲ್ಲಿ ಅಂಗೈ ತೊಳೆದುಕೊಂಡಾಗ ಚರ್ಮದ ಬಣ್ಣದಲ್ಲಿ ಯಾವ ರೀತಿ ವ್ಯತ್ಯಾಸ ಕಾಣಿಸುತ್ತಿತ್ತು ಎಂಬುದನ್ನು ಈ ಒಂದು ಫೋಟೋ ಮೂಲಕ ರಶ್ಮಿಕಾ ವಿವರಿಸಿದ್ದಾರೆ. ಅದನ್ನು ಕಂಡು ಅಭಿಮಾನಿಗಳು ಅಚ್ಚರಿಪಟ್ಟಿದ್ದಾರೆ. ಈಗಾಗಲೇ ಶ್ರೀವಲ್ಲಿ ಪಾತ್ರದ ಪೋಸ್ಟರ್​ ಮತ್ತು ಹಾಡು ರಿಲೀಸ್​ ಆಗಿ ಗಮನ ಸೆಳೆಯುತ್ತಿದೆ. ಡಿ.17ರಂದು ತೆಲುಗು, ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ‘ಪುಷ್ಪ’ ಚಿತ್ರ ತೆರೆಕಾಣಲಿದೆ.

ಈ ಸಿನಿಮಾಗೆ ಖ್ಯಾತ ನಿರ್ದೇಶಕ ಸುಕುಮಾರ್​ ಅವರು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಡಾಲಿ ಧನಂಜಯ್​, ಫಹಾದ್​ ಫಾಸಿಲ್​, ಜಗಪತಿ ಬಾಬು ಪ್ರಕಾಶ್​ ರಾಜ್​ ಮುಂತಾದ ಸ್ಟಾರ್​ ಕಲಾವಿದರು ಕೂಡ ಬಣ್ಣ ಹಚ್ಚಿದ್ದಾರೆ. ಎರಡು ಪಾರ್ಟ್​ಗಳಲ್ಲಿ ‘ಪುಷ್ಪ’ ತಯಾರಾಗಿದ್ದು, ಡಿ.17ರಂದು ಮೊದಲ ಪಾರ್ಟ್​ ಮಾತ್ರ ಬಿಡುಗಡೆ ಆಗುತ್ತಿದೆ. ಈ ಸಿನಿಮಾದಿಂದ ರಶ್ಮಿಕಾ ವೃತ್ತಿಜೀವನಕ್ಕೆ ದೊಡ್ಡ ಯಶಸ್ಸು ಸಿಗಲಿದೆ ಎಂಬ ನಿರೀಕ್ಷೆ ಇದೆ.

ಇದನ್ನೂ ಓದಿ:

ತಮಗಿಂತ ಚಿಕ್ಕ ವಯಸ್ಸಿನ ಹುಡುಗನ ಜೊತೆ ಡೇಟಿಂಗ್​ ಮಾಡುವ ಬಗ್ಗೆ ರಶ್ಮಿಕಾ ಮಂದಣ್ಣ ಹೇಳೋದೇನು?

Saami Saami: ಅಲ್ಲು ಅರ್ಜುನ್​ ಪಂಚೆ ಹಿಡಿದು ರಶ್ಮಿಕಾ ಬಿಂದಾಸ್​ ಡ್ಯಾನ್ಸ್​; ಹೇಗಿದೆ ‘ಸಾಮಿ ಸಾಮಿ..’ ಹಾಡು?

ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ