ಸೂಟ್​ಕೇಸ್​ ತುಂಬ ಹಣದ ಕಂತೆ; ಎಲ್ಲವನ್ನೂ ಹೊತ್ತುಕೊಂಡು ಹೋದ ರಶ್ಮಿಕಾ ಮಂದಣ್ಣ

ನಟಿ ರಶ್ಮಿಕಾ ಮಂದಣ್ಣ ಅವರ ಅದೃಷ್ಟ ಬದಲಾಗಿದೆ. ಪ್ಯಾನ್​ ಇಂಡಿಯಾ ನಟಿಯಾಗಿ ಮಿಂಚುತ್ತಿರುವ ಅವರಿಗೆ ಕೈತುಂಬ ಸಂಭಾವನೆ ಸಿಗುತ್ತಿದೆ. ದಕ್ಷಿಣ ಭಾರತದಲ್ಲಿ ಮತ್ತು ಬಾಲಿವುಡ್​ನಲ್ಲಿ ಸ್ಟಾರ್​ ನಟರ ಜೊತೆ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ಧನುಷ್​ ಜೊತೆ ರಶ್ಮಿಕಾ ನಟಿಸಿರುವ ‘ಕುಬೇರ’ ಸಿನಿಮಾ ತಂಡದಿಂದ ಫಸ್ಟ್​ ಲುಕ್ ಟೀಸರ್​ ಬಿಡುಗಡೆ ಆಗಿದೆ. ಇದು ಇಂಟರೆಸ್ಟಿಂಗ್​ ಆಗಿದೆ.

ಸೂಟ್​ಕೇಸ್​ ತುಂಬ ಹಣದ ಕಂತೆ; ಎಲ್ಲವನ್ನೂ ಹೊತ್ತುಕೊಂಡು ಹೋದ ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
Follow us
ಮದನ್​ ಕುಮಾರ್​
|

Updated on: Jul 05, 2024 | 3:11 PM

ಹಿಂದಿ, ತಮಿಳು, ತೆಲುಗು ಭಾಷೆಯ ಸಿನಿಮಾಗಳಲ್ಲಿ ರಶ್ಮಿಕಾ ಮಂದಣ್ಣ (Rashmika Mandanna) ಅವರಿಗೆ ಸಿಕ್ಕಾಪಟ್ಟೆ ಬೇಡಿಕೆ ಇದೆ. ನಟ ಧನುಷ್​ ಜೊತೆ ರಶ್ಮಿಕಾ ಮಂದಣ್ಣ ಅವರು ‘ಕುಬೇರ’ (Kubera) ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಶೀರ್ಷಿಕೆಯೇ ಹೇಳುವಂತೆ ಇದು ಹಣದ ಕುರಿತಾದ ಸಿನಿಮಾ. ರಶ್ಮಿಕಾ ಅವರ ಅಭಿಮಾನಿಗಳು ಈ ಚಿತ್ರದ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಯನ್ನು ಹೆಚ್ಚು ಮಾಡುವ ರೀತಿಯಲ್ಲಿ ನಟಿಯ ಫಸ್ಟ್​ ಲುಕ್​ (Rashmika Mandanna First Look) ಟೀಸರ್ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ರಶ್ಮಿಕಾ ಮಂದಣ್ಣ ಅವರು ನೋಟಿನ ಕಂತೆಗಳು ತುಂಬಿರುವ ಸೂಟ್​ಕೇಸ್​ ತೆಗೆದುಕೊಂಡು ಹೋಗುತ್ತಿರುವ ದೃಶ್ಯ ಇದೆ.

ಪ್ರತಿ ಸಿನಿಮಾದಲ್ಲೂ ರಶ್ಮಿಕಾ ಮಂದಣ್ಣ ಅವರ ಪಾತ್ರಕ್ಕೆ ಪ್ರಾಮುಖ್ಯತೆ ಸಿಗುತ್ತಿದೆ. ಈಗ ‘ಕುಬೇರ’ ಸಿನಿಮಾ ಕೂಡ ಅವರ ವೃತ್ತಿಜೀವನಕ್ಕೆ ಪ್ಲಸ್​ ಆಗುವ ಸೂಚನೆ ಸಿಕ್ಕಿದೆ. 48 ಸೆಕೆಂಡ್​ಗಳ ಟೀಸರ್​ನಲ್ಲಿ ರಶ್ಮಿಕಾ ಮಂದಣ್ಣ ಅವರು ನೆಲದ ಒಳಗೆ ಹುಗಿದಿಟ್ಟ ದೊಡ್ಡ ಸೂಟ್​ಕೇಸ್​ ಹೊರಗೆ ತೆಯುತ್ತಾರೆ. ಅದರ ತುಂಬ ಹಣದ ಕಂತೆಗಳೇ ಇವೆ. ದುಡ್ಡು ನೋಡಿ ಖುಷಿ ಆಗುವ ರಶ್ಮಿಕಾ ಅವರು ಎಲ್ಲವನ್ನು ತೆಗೆದುಕೊಂಡು ಹೋಗುತ್ತಾರೆ. ಅಷ್ಟು ದುಡ್ಡು ಯಾರದ್ದು? ನೆಲೆದ ಒಳಗೆ ಹೂತಿಟ್ಟಿದ್ದು ಯಾಕೆ? ಈಗ ಅದನ್ನು ರಶ್ಮಿಕಾ ತೆಗೆದುಕೊಂಡು ಹೋಗುತ್ತಿರುವುದು ಎಲ್ಲಿಗೆ? ಇಂಥ ಹಲವು ಪ್ರಶ್ನೆಗಳು ಸಿನಿಪ್ರಿಯರ ಮನದಲ್ಲಿ ಹುಟ್ಟಿಕೊಂಡಿವೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ-ವಿಜಯ್​ ದೇವರಕೊಂಡ ಬಗ್ಗೆ ಹರಡಿದೆ ಇನ್ನೊಂದು ಹೊಸ ಗಾಸಿಪ್​

‘ಕುಬೇರ’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ, ಧನುಷ್​ ಜೊತೆ ಅಕ್ಕಿನೇನಿ ನಾಗಾರ್ಜುನ ಅವರು ಕೂಡ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಹೈದರಾಬಾದ್​ನಲ್ಲಿ ಈ ಸಿನಿಮಾದ ಶೂಟಿಂಗ್​ ನಡೆಯುತ್ತಿದೆ. ಧನುಷ್ ಮತ್ತು ನಾಗಾರ್ಜುನ ಅವರ ಫಸ್ಟ್​ ಲುಕ್​ಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಬಹುಭಾಷೆಯಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ರಿಲೀಸ್​ ದಿನಾಂಕ ಇನ್ನಷ್ಟೇ ಗೊತಾಗಬೇಕಿದೆ. ಈ ಚಿತ್ರಕ್ಕೆ ಶೇಖರ್​ ಕಮ್ಮುಲ ನಿರ್ದೇಶನ ಮಾಡುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಅವರಿಗೆ ಸಖತ್​ ಬೇಡಿಕೆ ಇದೆ. ಅಲ್ಲು ಅರ್ಜುನ್​ ಜೊತೆ ‘ಪುಷ್ಪ 2’ಸಿನಿಮಾದಲ್ಲಿ ಅವರು ನಟಿಸಿದ್ದು, ಆ ಸಿನಿಮಾ ಡಿಸೆಂಬರ್​ 6ರಂದು ಬಿಡುಗಡೆ ಆಗಲಿದೆ. ಅದಲ್ಲದೇ, ಸಲ್ಮಾನ್​ ಖಾನ್ ಜೊತೆ ‘ಸಿಕಂದರ್​’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ‘ಅನಿಮಲ್​’ ಸಿನಿಮಾದ ದೊಡ್ಡ ಯಶಸ್ಸಿನ ಬಳಿಕ ಬಾಲಿವುಡ್​ನಲ್ಲಿ ರಶ್ಮಿಕಾ ಒಪ್ಪಿಕೊಂಡ ಸಿನಿಮಾ ಇದು. ‘ಸಿಕಂದರ್​’ಗೆ ಎ.ಆರ್​. ಮುರುಗದಾಸ್​ ನಿರ್ದೇಶನ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ