Rashmika Mandanna: ‘ಶಾಲೆಯಲ್ಲಿದ್ದಾಗ ಹೀಗೆ ಆಗಿದ್ದರೆ ಏನು ಮಾಡುತ್ತಿದ್ದೆನೋ ಗೊತ್ತಿಲ್ಲ’: ನಕಲಿ ವಿಡಿಯೋ ಬಗ್ಗೆ ರಶ್ಮಿಕಾ ಪ್ರತಿಕ್ರಿಯೆ

Rashmika Mandanna Viral Video: ರಶ್ಮಿಕಾ ಮಂದಣ್ಣ ಅವರು ತುಂಬ ಗ್ಲಾಮರಸ್​ ಆದಂತಹ ಅವತಾರದಲ್ಲಿ ಲಿಫ್ಟ್​ ಪ್ರವೇಶಿಸುತ್ತಿರುವ ಕೆಲವೇ ಸೆಕೆಂಡ್​ಗಳ ವಿಡಿಯೋ ಇದಾಗಿದೆ. ಆದರಲ್ಲಿ ರಶ್ಮಿಕಾ ಅವರ ಡ್ರೆಸ್​ ಸರಿಯಿಲ್ಲ ಎಂದು ಅನೇಕರು ಕಮೆಂಟ್​ ಮಾಡಿದ್ದಾರೆ. ಅಂದಹಾಗೆ ಇದು ನಕಲಿ ವಿಡಿಯೋ. ಇದರ ಬಗ್ಗೆ ಸ್ವತಃ ರಶ್ಮಿಕಾ ಮಂದಣ್ಣ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Rashmika Mandanna: ‘ಶಾಲೆಯಲ್ಲಿದ್ದಾಗ ಹೀಗೆ ಆಗಿದ್ದರೆ ಏನು ಮಾಡುತ್ತಿದ್ದೆನೋ ಗೊತ್ತಿಲ್ಲ’: ನಕಲಿ ವಿಡಿಯೋ ಬಗ್ಗೆ ರಶ್ಮಿಕಾ ಪ್ರತಿಕ್ರಿಯೆ
ರಶ್ಮಿಕಾ ಮಂದಣ್ಣ ಫೇಕ್​ ವಿಡಿಯೋ
Follow us
ಮದನ್​ ಕುಮಾರ್​
|

Updated on: Nov 06, 2023 | 4:18 PM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಒಂದು ನಕಲಿ ವಿಡಿಯೋ ವೈರಲ್​ ಆಗಿದೆ. ಸೋಶಿಯಲ್​ ಮೀಡಿಯಾದಲ್ಲಿ ಬೇರೆ ಯುವತಿಯ ದೇಹಕ್ಕೆ ರಶ್ಮಿಕಾ ಅವರ ಮುಖವನ್ನು ಎಡಿಟ್​ ಮಾಡಿ ಹಾಕಲಾಗಿದೆ. ಎಷ್ಟೋ ಜನರು ಇದು ನಿಜವಾಗಿಯೂ ರಶ್ಮಿಕಾ ಮಂದಣ್ಣ ಅವರದ್ದೇ ವಿಡಿಯೋ ಎಂದು ನಂಬಿಕೊಂಡಿದ್ದಾರೆ. ಆದರೆ ಈ ಫೇಕ್​ ವಿಡಿಯೋ (Rashmika Mandanna Fake Video) ವಿರುದ್ಧ ಅನೇಕರು ಕಿಡಿಕಾರಿದ್ದಾರೆ. ತಂತ್ರಜ್ಞಾನದ ದುರ್ಬಳಕೆ ಮಾಡಿಕೊಂಡವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ. ಅಮಿತಾಭ್​ ಬಚ್ಚನ್​ (Amitabh Bachchan) ಕೂಡ ಇದಕ್ಕೆ ಸಹಮತ ಸೂಚಿಸಿದ್ದಾರೆ. ಈಗ ಈ ಸಂಗತಿ ಬಗ್ಗೆ ಸ್ವತಃ ರಶ್ಮಿಕಾ ಮಂದಣ್ಣ ಅವರು ಪ್ರತಿಕ್ರಿಯೆ ನೀಡಿದ್ದಾರೆ.

‘ಆನ್​ಲೈನ್​ನಲ್ಲಿ ನನ್ನ ಡೀಪ್​ಫೇಕ್​ ವಿಡಿಯೋ ಹರಿದಾಡಿದ ಬಗ್ಗೆ ಮಾತನಾಡಲು ನನಗೆ ನಿಜಕ್ಕೂ ನೋವಾಗುತ್ತಿದೆ. ತಂತ್ರಜ್ಞಾನದ ದುರ್ಬಳಕೆಯಿಂದಾಗಿ ನನಗೆ ಮಾತ್ರವಲ್ಲದೇ ಎಲ್ಲರಿಗೂ ಭಯವಾಗುತ್ತಿದೆ’ ಎಂದು ರಶ್ಮಿಕಾ ಮಂದಣ್ಣ ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ತಮ್ಮ ಬರಹ ಆರಂಭಿಸಿದ್ದಾರೆ. ಸಣ್ಣ ಪುಟ್ಟ ಟ್ರೋಲ್​ ಆಗಿದ್ದರೆ ರಶ್ಮಿಕಾ ತಲೆ ಕೆಡಿಸಿಕೊಳ್ಳುತ್ತಿರಲಿಲ್ಲ. ಆದರೆ ಈ ಬಾರಿ ಅವರ ಫೇಕ್​ ವಿಡಿಯೋ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿರುವುದರಿಂದ ಪ್ರತಿಕ್ರಿಯಿಸುವ ಸಂದರ್ಭ ಎದುರಾಗಿದೆ.

‘ಇಂದು ನನಗೆ ಬೆಂಬಲ ಮತ್ತು ರಕ್ಷಣೆ ನೀಡಿರುವ ನನ್ನ ಕುಟುಂಬ ಮತ್ತು ಸ್ನೇಹಿತರಿಗೆ ಓರ್ವ ಮಹಿಳೆಯಾಗಿ, ನಟಿಯಾಗಿ ನಾನು ಋಣಿ ಆಗಿದ್ದೇನೆ. ಆದರೆ ಇದು ಶಾಲೆ ಅಥವಾ ಕಾಲೇಜಿನಲ್ಲಿ ಇದ್ದಾಗ ಆಗಿದ್ದರೆ ಇದನ್ನು ನಾನು ಹೇಗೆ ಸರಿಪಡಿಸುತ್ತಿದ್ದೆನೋ ಗೊತ್ತಿಲ್ಲ. ಇಂಥ ಘಟನೆಗಳಿಂದ ನಮ್ಮಂತಹ ಹೆಚ್ಚಿನ ಜನರು ತೊಂದರೆಗೆ ಒಳಗಾಗುವುದಕ್ಕೂ ಮುನ್ನವೇ ಈ ಸಮಸ್ಯೆಯ ಬಗ್ಗೆ ನಾವು ಗಮನ ಹರಿಸಬೇಕಿದೆ’ ಎಂದು ರಶ್ಮಿಕಾ ಮಂದಣ್ಣ ಅವರು ಬರೆದುಕೊಂಡಿದ್ದಾರೆ. ‘ಅನಿಮಲ್​’ ಸಿನಿಮಾದ ಬಿಡುಗಡೆಗೆ ಎದುರು ನೋಡುತ್ತಿರುವ ಅವರಿಗೆ ಡೀಪ್​ಫೇಕ್​ ವಿಡಿಯೋ ತಲೆನೋವು ತಂದಿದೆ.

ಇದನ್ನೂ ಓದಿ: ಇನ್​ಸ್ಟಾಗ್ರಾಮ್​ನಿಂದಲೂ ಭರ್ಜರಿ ಕಮಾಯಿ ಮಾಡುತ್ತಿದ್ದಾರೆ ರಶ್ಮಿಕಾ ಮಂದಣ್ಣ

ವಿಡಿಯೋ ಹಿಂದಿನ ಅಸಲಿಯತ್ತೇನು?

ರಶ್ಮಿಕಾ ಮಂದಣ್ಣ ಅವರು ತುಂಬ ಗ್ಲಾಮರಸ್​ ಆದಂತಹ ಅವತಾರದಲ್ಲಿ ಲಿಫ್ಟ್​ ಪ್ರವೇಶಿಸುತ್ತಿರುವ ಕೆಲವೇ ಸೆಕೆಂಡ್​ಗಳ ವಿಡಿಯೋ ಇದಾಗಿದೆ. ಆದರಲ್ಲಿ ರಶ್ಮಿಕಾ ಅವರ ಡ್ರೆಸ್​ ಸರಿಯಿಲ್ಲ ಎಂದು ಅನೇಕರು ಕಮೆಂಟ್​ ಮಾಡಿದ್ದಾರೆ. ಅಸಲಿಗೆ ಇದರಲ್ಲಿ ಇರುವುದು ರಶ್ಮಿಕಾ ಅಲ್ಲವೇ ಅಲ್ಲ. ಜರಾ ಪಟೇಲ್​ ಎಂಬ ಯುವತಿಯ ವಿಡಿಯೋ ಇದಾಗಿದ್ದು, ಇದಕ್ಕೆ ರಶ್ಮಿಕಾ ಮಂದಣ್ಣ ಅವರ ಮುಖವನ್ನು ಎಡಿಟ್​ ಮಾಡಿ ಹರಿಬಿಡಲಾಗಿದೆ. ಸದ್ಯಕ್ಕೆ ಸೋಶಿಯಲ್​ ಮೀಡಿಯಾದಲ್ಲಿ ಈ ವಿಡಿಯೋ ವೈರಲ್​ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.