Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ವಿಜಯ್​ ದೇವರಕೊಂಡ ತಮ್ಮನ ಸಿನಿಮಾ ನೋಡಲು ಹೋಗಿ ಕಣ್ಣೀರು ಹಾಕಿದ ರಶ್ಮಿಕಾ ಮಂದಣ್ಣ

Anand Deverakonda: ಗುರುವಾರ (ಜುಲೈ 13) ರಾತ್ರಿಯೇ ‘ಬೇಬಿ’ ಸಿನಿಮಾದ ಪ್ರೀಮಿಯರ್​ ಶೋ ಏರ್ಪಡಿಸಲಾಗಿತ್ತು. ಅದರಲ್ಲಿ ವಿಜಯ್​ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಭಾಗವಹಿಸಿದ್ದಾರೆ.

Rashmika Mandanna: ವಿಜಯ್​ ದೇವರಕೊಂಡ ತಮ್ಮನ ಸಿನಿಮಾ ನೋಡಲು ಹೋಗಿ ಕಣ್ಣೀರು ಹಾಕಿದ ರಶ್ಮಿಕಾ ಮಂದಣ್ಣ
ಖುಷಿ ಸಿನಿಮಾ ಪೋಸ್ಟರ್​, ರಶ್ಮಿಕಾ ಮಂದಣ್ಣ, ಆನಂದ್​ ದೇವರಕೊಂಡ
Follow us
ಮದನ್​ ಕುಮಾರ್​
|

Updated on: Jul 14, 2023 | 4:54 PM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಟಾಲಿವುಡ್​ನಲ್ಲಿ ಭದ್ರವಾಗಿ ನೆಲೆ ಕಂಡುಕೊಂಡಿದ್ದಾರೆ. ಅಲ್ಲಿನ ಅನೇಕ ಸೆಲೆಬ್ರಿಟಿಗಳ ಜೊತೆಗೆ ಅವರು ಉತ್ತಮ ಬಾಂಧವ್ಯ ಹೊಂದಿದ್ದಾರೆ. ಅದರಲ್ಲೂ ವಿಜಯ್​ ದೇವರಕೊಂಡ ಜೊತೆಗಿನ ಅವರ ಸ್ನೇಹ ಗಟ್ಟಿಯಾಗಿದೆ. ಅಷ್ಟೇ ಅಲ್ಲದೇ, ವಿಜಯ್​ ದೇವರಕೊಂಡ (Vijay Deverakonda) ಅವರ ಕುಟುಂಬದವರ ಜೊತೆಗೂ ರಶ್ಮಿಕಾ ಆಪ್ತತೆ ಹೊಂದಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಒಂದು ಘಟನೆ ನಡೆದಿದೆ. ವಿಜಯ್​ ದೇವರಕೊಂಡ ಅವರ ಸಹೋದರ ಆನಂದ್​ ದೇವರಕೊಂಡ (Anand Deverakonda) ನಟಿಸಿದ ‘ಬೇಬಿ’ ಸಿನಿಮಾಗೆ ರಶ್ಮಿಕಾ ಮಂದಣ್ಣ ಬೆಂಬಲ ಸೂಚಿಸಿದ್ದಾರೆ. ಪ್ರೀಮಿಯರ್ ಶೋ ನೋಡಲು ಹೋದ ರಶ್ಮಿಕಾ ಅವರು ಎಮೋಷನಲ್​ ಆಗಿ ಕಣ್ಣೀರು ಹಾಕಿದ್ದಾರೆ.

ವಿಜಯ್​ ದೇವರಕೊಂಡ ರೀತಿಯೇ ಆನಂದ್​ ದೇವರಕೊಂಡ ಕೂಡ ಹೀರೋ ಆಗಿ ಟಾಲಿವುಡ್​ನಲ್ಲಿ ಸಕ್ರಿಯರಾಗಿದ್ದಾರೆ. ಅವರ ವೃತ್ತಿಜೀವನಕ್ಕೆ ವಿಜಯ್​ ದೇವರಕೊಂಡ ಬೆಂಬಲವಾಗಿ ನಿಂತಿದ್ದಾರೆ. ‘ಬೇಬಿ’ ಸಿನಿಮಾ ಇಂದು (ಜುಲೈ 14) ಬಿಡುಗಡೆ ಆಗಿದೆ. ಬಹುತೇಕ ಎಲ್ಲರಿಂದ ಪಾಸಿಟಿವ್​ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗುರುವಾರ (ಜುಲೈ 13) ರಾತ್ರಿಯೇ ಈ ಸಿನಿಮಾದ ಪ್ರೀಮಿಯರ್​ ಶೋ ಏರ್ಪಡಿಸಲಾಗಿತ್ತು. ಅದರಲ್ಲಿ ವಿಜಯ್​ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಭಾಗವಹಿಸಿದ್ದಾರೆ.

ಇದನ್ನೂ ಓದಿ: Rashmika Mandanna: ರಶ್ಮಿಕಾ ಮಂದಣ್ಣ ಕೈಯಿಂದ ಮೊಬೈಲ್​ ಕಿತ್ತುಕೊಂಡ ಯುವಕ; ಹೇಗಿತ್ತು ನಟಿಯ ರಿಯಾಕ್ಷನ್​?

‘ಬೇಬಿ’ ಸಿನಿಮಾದಲ್ಲಿ ಲವ್​ ಸ್ಟೋರಿ ಇದೆ. ಅದು ರಶ್ಮಿಕಾ ಮಂದಣ್ಣ ಅವರಿಗೆ ತುಂಬ ಇಷ್ಟವಾಗಿದೆ. ಸಿನಿಮಾದ ಕೆಲವು ದೃಶ್ಯಗಳ ತುಂಬ ಭಾವುಕವಾಗಿವೆ. ಹಾಗಾಗಿ ಸಿನಿಮಾ ನೋಡುವಾಗ ರಶ್ಮಿಕಾ ಮಂದಣ್ಣ ಅವರು ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ. ಸಿನಿಮಾ ನೋಡಿ ಹೊರಬಂದ ಅವರು ಖುಷಿಯಿಂದ ಮಾತನಾಡಿದ್ದಾರೆ. ಸ್ಟಾರ್​ ನಟಿಯ ಬೆಂಬಲ ಸಿಕ್ಕಿರುವುದರಿಂದ ‘ಬೇಬಿ’ ಸಿನಿಮಾ ತಂಡಕ್ಕೆ ಸಂತೋಷ ಆಗಿದೆ. ಮೊದಲ ದಿನ ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರ ಎಷ್ಟು ಕಲೆಕ್ಷನ್​ ಮಾಡಿದೆ ಎಂಬ ಲೆಕ್ಕ ಶೀಘ್ರದಲ್ಲೇ ಸಿಗಲಿದೆ.

ಇದನ್ನೂ ಓದಿ: Rashmika Mandanna: ರಣಬೀರ್ ಕಪೂರ್ ಜೊತೆ ಆಪ್ತವಾಗಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ; ಇಲ್ಲಿದೆ ಫೋಟೋ ಆಲ್ಬಂ

ಸಾಯಿ ರಾಜೇಶ್​ ಅವರ ನಿರ್ದೇಶನದಲ್ಲಿ ‘ಬೇಬಿ’ ಸಿನಿಮಾ ಮೂಡಿಬಂದಿದೆ. ಆನಂದ್​ ದೇವರಕೊಂಡ ಮತ್ತು ವೈಷ್ಣವಿ ಚೈತನ್ಯ ಅವರು ಜೋಡಿಯಾಗಿ ಅಭಿನಯಿಸಿದ್ದಾರೆ. ಅವರಿಬ್ಬರ ಅಭಿನಯಕ್ಕೆ ವಿಜಯ್​ ದೇವರಕೊಂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ಪ್ರಸಾದ್​ ಮಲ್ಟಿಪ್ಲೆಕ್ಸ್​’ನಲ್ಲಿ ಸಿನಿಮಾ ವೀಕ್ಷಿಸಿದ ಅವರು ಕೂಡ ಎಮೋಷನಲ್​ ಆಗಿದ್ದರು. ‘ಆನಂದ್​ ಮತ್ತು ವೈಷ್ಣವಿ ಚೈತನ್ಯ ಅವರು ನನ್ನನ್ನು ಎಮೋಷನಲ್​ ಆಗಿಸಿದ್ದಾರೆ. ಈ ಚಿತ್ರದ ಕುರಿತು ನಾನು ಮೂರ್ನಾಲ್ಕು ದಿನಗಳ ನಂತರ ಒಂದು ಇವೆಂಟ್​ನಲ್ಲಿ ಮಾತನಾಡುತ್ತೇನೆ’ ಎಂದಿದ್ದಾರೆ ವಿಜಯ್​ ದೇವರಕೊಂಡ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು