AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ನಾನ್​-ವೆಜ್​ ತಿನ್ನಲ್ಲ ಅಂತ ಸುಳ್ಳು ಹೇಳಿದ್ರಾ ರಶ್ಮಿಕಾ ಮಂದಣ್ಣ? ತರಾಟೆಗೆ ತೆಗೆದುಕೊಂಡ ನೆಟ್ಟಿಗರು

ಚಿಕನ್​ ಬರ್ಗರ್​ ಜಾಹೀರಾತಿನ ವಿಚಾರದಲ್ಲಿ ನೆಟ್ಟಿಗರು ಪರ-ವಿರೋಧ ಚರ್ಚೆ ಮಾಡಿದ್ದಾರೆ. ಕೆಲವರು ರಶ್ಮಿಕಾ ಮಂದಣ್ಣ ನಡೆಯನ್ನು ಖಂಡಿಸಿದ್ದರೆ, ಇನ್ನೂ ಕೆಲವರು ನಟಿಯ ಪರವಾಗಿ ವಾದ ಮಾಡಿದ್ದಾರೆ.

Rashmika Mandanna: ನಾನ್​-ವೆಜ್​ ತಿನ್ನಲ್ಲ ಅಂತ ಸುಳ್ಳು ಹೇಳಿದ್ರಾ ರಶ್ಮಿಕಾ ಮಂದಣ್ಣ? ತರಾಟೆಗೆ ತೆಗೆದುಕೊಂಡ ನೆಟ್ಟಿಗರು
ರಶ್ಮಿಕಾ ಮಂದಣ್ಣ
ಮದನ್​ ಕುಮಾರ್​
|

Updated on: May 08, 2023 | 10:57 PM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರನ್ನು ಇಷ್ಟಪಡುವ ದೊಡ್ಡ ಅಭಿಮಾನಿ ಬಳಗ ಇದೆ. ಅದೇ ರೀತಿ ಅವರನ್ನು ಟ್ರೋಲ್​ ಮಾಡುವ ನೆಟ್ಟಿಗರ ಸಂಖ್ಯೆಯೂ ದೊಡ್ಡದಿದೆ. ಸೆಲೆಬ್ರಿಟಿಗಳು ಏನೇ ಮಾಡಿದರು ಜನರು ಸೂಕ್ಷ್ಮವಾಗಿ ಗಮನಿಸುತ್ತಾರೆ. ರಶ್ಮಿಕಾ ಮಂದಣ್ಣ ಅವರ ವಿಚಾರದಲ್ಲೂ ಇದು ನಿಜ. ರಶ್ಮಿಕಾ ಈಗ ಬಾಲಿವುಡ್​ ವಲಯದಲ್ಲೂ ಫೇಮಸ್​ ಆಗಿರುವುದರಿಂದ ಅವರಿಗೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಸಿಕ್ಕಿದೆ. ಹಲವು ಪ್ರತಿಷ್ಠಿತ ಬ್ರ್ಯಾಂಡ್​ಗಳಿಗೆ ಅವರು ರಾಯಭಾರಿ ಆಗಿದ್ದಾರೆ. ಇತ್ತೀಚೆಗೆ ಚಿಕನ್​ ಬರ್ಗರ್​ (Chicken Burger) ಜಾಹೀರಾತಿನಲ್ಲಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ಆದರೆ ತಾವು ನಾನ್​-ವೆಜ್​ (Non Veg) ತಿನ್ನಲ್ಲ ಎಂದು ಅವರು ಈ ಹಿಂದೆ ಹೇಳಿಕೊಂಡಿದ್ದರು. ಹಾಗಾಗಿ ರಶ್ಮಿಕಾ ಮಂದಣ್ಣ ಅವರ ಈ ದ್ವಂದ್ವನೀತಿಯನ್ನು ನೆಟ್ಟಿಗರು ಪ್ರಶ್ನಿಸಿದ್ದಾರೆ.

‘ಬಾಲಿವುಡ್​ ಗರಿಮಾ ಕುಮಾ​ರ್​’ ಇನ್​​ಸ್ಟಾಗ್ರಾಮ್​ ಖಾತೆಯಲ್ಲಿ ಈ ಬಗ್ಗೆ ಪ್ರಶ್ನೆ ಎತ್ತಲಾಗಿದೆ. ‘ರಶ್ಮಿಕಾ ಮಂದಣ್ಣ ಅವರು ಹೊಸ ಜಾಹೀರಾತಿನಲ್ಲಿ ನಾನ್​-ವೆಜ್​ ತಿನ್ನುತ್ತಿದ್ದಾರೆ. ಆದರೆ ತಮ್ಮನ್ನು ತಾವು ಸಸ್ಯಾಹಾರಿ ಎಂದು ಹೇಳಿಕೊಂಡಿದ್ದರು. ಜನರಿಗೆ ಇದು ಇಷ್ಟ ಆಗಿಲ್ಲ. ನಮ್ಮನ್ನು ಮೂರ್ಖರನ್ನಾಗಿಸೋದು ನಿಲ್ಲಿಸಿ ಅಂತ ಜನರು ಕಮೆಂಟ್ ಮಾಡಿದ್ದಾರೆ. ಜನರ ಪ್ರತಿಕ್ರಿಯೆ​ ನೋಡಿದ ಜಾಹೀರಾತಿನ ಕಮೆಂಟ್​ ಆಯ್ಕೆಯನ್ನೇ ನಿಷ್ಕ್ರಿಯಗೊಳಿಸಲಾಗಿದೆ’ ಎಂದು ಈ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ
Image
Rashmika Mandanna: ಎದೆ ಮೇಲೆ ಆಟೋಗ್ರಾಫ್​ ಹಾಕಿ ಅಂತ ಹಠ ಹಿಡಿದ ರಶ್ಮಿಕಾ ಮಂದಣ್ಣ ಅಭಿಮಾನಿ; ಮುಂದೇನಾಯ್ತು?
Image
Rashmika Mandanna: ‘ಇಂದು ನಾನೇ ಗೋಲ್ಡನ್​ ಗರ್ಲ್​’ ಅಂತ ಪೋಸ್​ ನೀಡಿದ ರಶ್ಮಿಕಾ ಮಂದಣ್ಣ; ಆದ್ರೆ ಜನ ಹೇಳಿದ್ದೇನು?
Image
Rashmika Mandanna: ಬಾಲಿವುಡ್​ ಸೇರಿದ ರಶ್ಮಿಕಾ ಮಂದಣ್ಣ ಹೊಸ ಅವತಾರ ಹೇಗಿದೆ ನೋಡಿ; ಫೋಟೋ ವೈರಲ್​
Image
Rashmika Mandanna: ಸೆಲ್ಫಿ ಕೇಳಿದ ಅಭಿಮಾನಿಗಳ ಜತೆ ರಶ್ಮಿಕಾ ಮಂದಣ್ಣ ನಡೆದುಕೊಂಡಿದ್ದು ಹೇಗೆ? ವಿಡಿಯೋ ವೈರಲ್​

ಈ ವಿಚಾರದಲ್ಲಿ ನೆಟ್ಟಿಗರು ಪರ-ವಿರೋಧ ಚರ್ಚೆ ಮಾಡಿದ್ದಾರೆ. ಕೆಲವರು ರಶ್ಮಿಕಾಗೆ ಛಾಟಿ ಬೀಸಿದ್ದರೆ, ಇನ್ನೂ ಕೆಲವರು ನಟಿಯ ಪರವಾಗಿ ವಾದ ಮಾಡಿದ್ದಾರೆ. ‘ಎಲ್ಲ ಸೆಲೆಬ್ರಿಟಿಗಳು ತಾವು ಪ್ರಚಾರ ಮಾಡುವ ವಸ್ತುಗಳನ್ನು ಬಳಸುವುದಿಲ್ಲ. ಅವರು ಕೇವಲ ಪ್ರಚಾರ ರಾಯಭಾರಿ ಮಾತ್ರ’ ಎಂದು ಕೆಲವರು ಬೆಂಬಲ ಸೂಚಿಸಿದ್ದಾರೆ. ಈ ಹಿಂದೆ ರಶ್ಮಿಕಾ ಮಂದಣ್ಣ ಅವರು ನಟ ವಿಕ್ಕಿ ಕೌಶಲ್​ ಜೊತೆ ಪುರುಷರ ಒಳ ಉಡುಪಿನ ಜಾಹೀರಾತಿನಲ್ಲಿ ನಟಿಸಿದ್ದಾಗಲೂ ವಿವಾದ ಸೃಷ್ಟಿ ಆಗಿತ್ತು.

Rashmika Mandanna: 3.8 ಕೋಟಿಗೆ ಏರಿತು ರಶ್ಮಿಕಾ ಮಂದಣ್ಣ ಹಿಂಬಾಲಕರ ಸಂಖ್ಯೆ; ಇನ್​ಸ್ಟಾಗ್ರಾಮ್​ನಲ್ಲಿ ಇವರದ್ದೇ ಹವಾ

ದಿನದಿಂದ ದಿನಕ್ಕೆ ನಟಿ ರಶ್ಮಿಕಾ ಮಂದಣ್ಣ ಅವರ ಖ್ಯಾತಿ ಹೆಚ್ಚುತ್ತಿದೆ. ಅದಕ್ಕೆ ತಕ್ಕಂತೆಯೇ ಸೋಶಿಯಲ್​ ಮೀಡಿಯಾದಲ್ಲಿ ಅವರನ್ನು ಹಿಂಬಾಲಿಸುವವರ ಸಂಖ್ಯೆ ಕೂಡ ದೊಡ್ಡದಾಗುತ್ತಿದೆ. ಆ ಕಾರಣದಿಂದ ಅವರನ್ನು ಅನೇಕ ಕಂಪನಿಗಳು ಪ್ರಚಾರ ರಾಯಭಾರಿಯಾಗಿ ನೇಮಕ ಮಾಡಿಕೊಳ್ಳುತ್ತಿವೆ. ಬಹುಭಾಷೆಯಲ್ಲಿ ನಟಿಸುತ್ತಿರುವ ರಶ್ಮಿಕಾ ಮಂದಣ್ಣ ಅವರಿಗೆ ಎಲ್ಲ ರಾಜ್ಯದಲ್ಲೂ ಅಭಿಮಾನಿಗಳಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು ಬರೋಬ್ಬರಿ 3.8 ಕೋಟಿ ಜನರು​ ಫಾಲೋ ಮಾಡುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಅವರು ಆಗಾಗ ಹೊಸ ಫೋಟೋ ಮತ್ತು ವಿಡಿಯೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಆ ಮೂಲಕ ಅವರು ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರುತ್ತಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್