AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಸಿನಿಮಾ ಡಬ್ಬಿಂಗ್; ಹೊಸ ಅಪ್​ಡೇಟ್​ ನೀಡಿದ ರಶ್ಮಿಕಾ ಮಂದಣ್ಣ

ಭಾರಿ ನಿರೀಕ್ಷೆ ಹುಟ್ಟುಹಾಕಿರುವ ‘ಪುಷ್ಪ 2’ ಸಿನಿಮಾದ ಕೆಲಸಗಳ ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಅವರು ಒಂದು ಹೊಸ ಅಪ್​ಡೇಟ್​ ನೀಡಿದ್ದಾರೆ. ತಮ್ಮ ಪಾತ್ರಕ್ಕೆ ರಶ್ಮಿಕಾ ಡಬ್ಬಿಂಗ್ ಮಾಡುತ್ತಿದ್ದಾರೆ. ಮೊದಲರ್ಧ ಭಾಗದ ಡಬ್ಬಿಂಗ್ ಮುಕ್ತಾಯ ಆಗಿದೆ ಎಂದು ಅವರು ಹೇಳಿದ್ದಾರೆ. ದ್ವಿತೀಯಾರ್ಧದ ಡಬ್ಬಿಂಗ್ ಕೆಲಸಗಳಲ್ಲಿ ರಶ್ಮಿಕಾ ಬ್ಯುಸಿ ಆಗಿದ್ದಾರೆ. ಸಿನಿಮಾದ ಶೂಟಿಂಗ್ ಮುಕ್ತಾಯ ಹಂತಕ್ಕೆ ಬಂದಿದೆ.

‘ಪುಷ್ಪ 2’ ಸಿನಿಮಾ ಡಬ್ಬಿಂಗ್; ಹೊಸ ಅಪ್​ಡೇಟ್​ ನೀಡಿದ ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ಮದನ್​ ಕುಮಾರ್​
|

Updated on: Nov 13, 2024 | 6:31 PM

Share

ನಟಿ ರಶ್ಮಿಕಾ ಮಂದಣ್ಣ ಅವರ ವೃತ್ತಿ ಜೀವನದಲ್ಲಿ ‘ಪುಷ್ಪ 2’ ಸಿನಿಮಾ ಅತಿ ಮುಖ್ಯವಾಗಿದೆ. ಅಲ್ಲು ಅರ್ಜುನ್ ಜೊತೆ ಅವರು ತೆರೆ ಹಂಚಿಕೊಂಡಿದ್ದಾರೆ. ಬಾಕ್ಸ್ ಆಫೀಸ್​ನಲ್ಲಿ ಹೊಸ ದಾಖಲೆ ಬರೆಯುವ ಎಲ್ಲ ಸೂಚನೆಗಳನ್ನು ಈ ಸಿನಿಮಾ ನೀಡಿದೆ. ಡಿಸೆಂಬರ್​ 5ರಂದು ವಿಶ್ವಾದ್ಯಂತ ‘ಪುಷ್ಪ 2’ ಬಿಡುಗಡೆ ಆಗಲಿದೆ. ಸದ್ಯಕ್ಕೆ ಸಿನಿಮಾದ ಕೊನೆಯ ಹಂತದ ಕೆಲಸಗಳು ಚಾಲ್ತಿಯಲ್ಲಿವೆ. ಆ ಬಗ್ಗೆ ರಶ್ಮಿಕಾ ಮಂದಣ್ಣ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಈಗ ಅವರು ಡಬ್ಬಿಂಗ್ ಮಾಡುತ್ತಿದ್ದಾರೆ.

ಸುಕುಮಾರ್​ ನಿರ್ದೇಶನ ಮಾಡಿರುವ ‘ಪುಷ್ಪ 2’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಅವರಿಗೆ ಶ್ರೀವಲ್ಲಿ ಎಂಬ ಪಾತ್ರ ಇದೆ. ‘ಪುಷ್ಪ’ ಚಿತ್ರದಲ್ಲಿ ಈ ಪಾತ್ರ ಹೈಲೈಟ್​ ಆಗಿತ್ತು. ಈಗ 2ನೇ ಪಾರ್ಟ್​ನಲ್ಲೂ ಆ ಪಾತ್ರ ಮುಂದುವರಿಯುತ್ತಿದೆ. ತಮ್ಮ ಪಾತ್ರಕ್ಕೆ ಸ್ವತಃ ರಶ್ಮಿಕಾ ಮಂದಣ್ಣ ಅವರು ಡಬ್ಬಿಂಗ್ ಮಾಡುತ್ತಿದ್ದು, ಸ್ಟುಡಿಯೋದಿಂದಲೇ ಈ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

‘ತಮಾಷೆ ಮತ್ತು ಆಟಗಳು ಮುಗಿದಿವೆ. ಈಗ ಬಿಸ್ನೆಸ್ ಶುರು ಮಾಡೋಣ. ಇದರ ಅರ್ಥ ಏನೆಂದರೆ, ‘ಪುಷ್ಪ 2’ ಸಿನಿಮಾದ ಚಿತ್ರೀಕರಣ ಬಹುತೇಕ ಮುಕ್ತಾಯ ಆಗಿದೆ. ಈ ಸಿನಿಮಾದ ಫಸ್ಟ್​ ಹಾಫ್​ಗೆ ಡಬ್ಬಿಂಗ್ ಮುಗಿದಿದೆ. ಈಗ ನಾನು ಸೆಕೆಂಡ್​ ಹಾಫ್​ಗೆ ಡಬ್ಬಿಂಗ್ ಮಾಡುತ್ತಿದ್ದೇನೆ. ಈ ಚಿತ್ರದ ಮೊದಲಾರ್ಥ ಅದ್ಭುತವಾಗಿದೆ. ದ್ವಿತೀಯಾರ್ಧ ಇನ್ನೂ ಚೆನ್ನಾಗಿದೆ. ಅದನ್ನು ಹೇಳಲು ಪದಗಳೇ ಸಾಲುತ್ತಿಲ್ಲ. ನಿಮಗೂ ಅದ್ಭುತ ಅನುಭವ ಸಿಗಲಿದೆ’ ಎಂದು ರಶ್ಮಿಕಾ ಮಂದಣ್ಣ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಮುಂದಿನ 10 ತಿಂಗಳಲ್ಲಿ ರಿಲೀಸ್ ಆಗಲಿದೆ ರಶ್ಮಿಕಾ ಮಂದಣ್ಣ ನಟನೆಯ ಐದು ಸಿನಿಮಾಗಳು

ಸೋಶಿಯಲ್ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಅವರು ತುಂಬಾ ಆ್ಯಕ್ಟೀವ್ ಆಗಿದ್ದಾರೆ. ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಅವರು ಈ ಫೋಟೋ ಮತ್ತು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಶೂಟಿಂಗ್ ಮುಗಿಯುತ್ತಿದೆ ಎಂಬುದಕ್ಕೆ ರಶ್ಮಿಕಾ ಮಂದಣ್ಣ ಅವರು ಬೇಸರ ಮಾಡಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ