AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ರಶ್ಮಿಕಾ ಮಂದಣ್ಣ ಇನ್​ಸ್ಟಾಗ್ರಾಮ್​ ಖಾತೆ ಹ್ಯಾಕ್​ ಆಯ್ತಾ? ಉಲ್ಟಾ ಅಕ್ಷರದ ಅಸಲಿ ವಿಷಯ ಇಲ್ಲಿದೆ..

Rashmika Mandanna Instagram Account: ವೃತ್ತಿಜೀವನದಲ್ಲಿ ರಶ್ಮಿಕಾ ಮಂದಣ್ಣ ಅವರು ಒಂದೊಂದೇ ಮೆಟ್ಟಿಲುಗಳನ್ನು ಏರುತ್ತಿದ್ದಾರೆ. ದಳಪತಿ ವಿಜಯ್​ ಜತೆ ನಟಿಸಿರುವ ‘ವಾರಿಸು’ ಚಿತ್ರ 2023ರ ಜನವರಿ 12ರಂದು ಬಿಡುಗಡೆ ಆಗಲಿದೆ.

Rashmika Mandanna: ರಶ್ಮಿಕಾ ಮಂದಣ್ಣ ಇನ್​ಸ್ಟಾಗ್ರಾಮ್​ ಖಾತೆ ಹ್ಯಾಕ್​ ಆಯ್ತಾ? ಉಲ್ಟಾ ಅಕ್ಷರದ ಅಸಲಿ ವಿಷಯ ಇಲ್ಲಿದೆ..
ರಶ್ಮಿಕಾ ಮಂದಣ್ಣ
TV9 Web
| Updated By: Digi Tech Desk|

Updated on:Dec 13, 2022 | 1:35 PM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ. ತಮ್ಮ ದಿನಚರಿ ಕುರಿತು ಅವರು ಆಗಾಗ ಅಪ್​ಡೇಟ್​ ನೀಡುತ್ತಾ ಇರುತ್ತಾರೆ. ತಮ್ಮ ಸಿನಿಮಾಗಳ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಕೆಲವು ಬ್ರ್ಯಾಂಡ್​ಗಳ ಪ್ರಚಾರಕ್ಕೂ ಅವರ ಇನ್​ಸ್ಟಾಗ್ರಾಮ್ (Rashmika Mandanna Instagram)​ ಖಾತೆ ಬಳಕೆ ಆಗುತ್ತದೆ. ಮೂರೂವರೆ ಕೋಟಿಗೂ ಅಧಿಕ ಜನರು ರಶ್ಮಿಕಾ ಮಂದಣ್ಣ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಫಾಲೋ ಮಾಡುತ್ತಿದ್ದಾರೆ. ಆ ಪೈಕಿ ಹಲವರಿಗೆ ಇತ್ತೀಚೆಗೆ ಅಚ್ಚರಿ ಆಗಿದೆ. ರಶ್ಮಿಕಾ ಮಂದಣ್ಣ ಅವರ ಹೆಸರು ಉಲ್ಟಾ ಕಾಣಿಸಿದೆ. ಇದು ಹ್ಯಾಕರ್​ಗಳ (Hacker) ಕೈವಾಡ ಎಂದೇ ಅನೇಕರು ಭಾವಿಸಿದ್ದರು. ಆದರೆ ಅಸಲಿ ವಿಚಾರ ಏನು ಎಂಬುದನ್ನು ಈಗ ಸ್ವತಃ ರಶ್ಮಿಕಾ ಮಂದಣ್ಣ ಅವರೇ ವಿವರಿಸಿದ್ದಾರೆ.

ಖಾಸಗಿ ಕಂಪನಿಯೊಂದರ ಜೊತೆಗೆ ರಶ್ಮಿಕಾ ಮಂದಣ್ಣ ಕೈ ಜೋಡಿಸಿದ್ದಾರೆ. ಹೆಣ್ಣು ಮಕ್ಕಳ ಶಿಕ್ಷಣದ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಅವರು ಅಭಿಯಾನ ಕೈಗೊಂಡಿದ್ದಾರೆ. ಅದರ ಅಂಗವಾಗಿ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯ ಹೆಸರು ಉಲ್ಟಾ ಕಾಣುವಂತೆ ಮಾಡಿದ್ದಾರೆ. ಅದರ ಸ್ಕ್ರೀನ್​ ಶಾಟ್​ ಹಂಚಿಕೊಂಡು, ‘ಓದಲು ಬಾರದ ಹೆಣ್ಣು ಮಕ್ಕಳಿಗೆ ಇದೇ ರೀತಿ ಅನಿಸುತ್ತದೆ’ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಾರೆ. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಅನುಕೂಲ ಆಗಲಿದೆ ಎಂಬ ಕಾರಣಕ್ಕೆ ಅವರು ಈ ಅಭಿಯಾನದಲ್ಲಿ ಕೈ ಜೋಡಿಸಿದ್ದಾರೆ. ಅವರ ಕಾರ್ಯಕ್ಕೆ ಅಭಿಮಾನಿಗಳು ಭೇಷ್​ ಎಂದಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಒಂದಿಲ್ಲೊಂದು ಕಾರಣಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ಕರುನಾಡಿನಲ್ಲಿ ಅವರು ಟ್ರೋಲ್​ ಆಗಿದ್ದೇ ಹೆಚ್ಚು ಎನ್ನಬಹುದು. ತಮ್ಮ ಮೊದಲ ಸಿನಿಮಾದ ನಿರ್ಮಾಣ ಸಂಸ್ಥೆಯ ಹೆಸರು ಹೇಳದೇ ಇರುವುದಕ್ಕೆ, ‘ಕಾಂತಾರ’ ಚಿತ್ರ ನೋಡಿಲ್ಲ ಅಂತ ಹೇಳಿದ್ದಕ್ಕೆ.. ಹೀಗೆ ಹಲವು ಕಾರಣದಿಂದ ಅವರನ್ನು ಜನರು ಟ್ರೋಲ್​ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಅವರನ್ನು ಬ್ಯಾನ್​ ಮಾಡಬೇಕು ಎಂದು ಕೂಡ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದುಂಟು.

ಇದನ್ನೂ ಓದಿ
Image
Rashmika Mandanna: ಎದೆ ಮೇಲೆ ಆಟೋಗ್ರಾಫ್​ ಹಾಕಿ ಅಂತ ಹಠ ಹಿಡಿದ ರಶ್ಮಿಕಾ ಮಂದಣ್ಣ ಅಭಿಮಾನಿ; ಮುಂದೇನಾಯ್ತು?
Image
Rashmika Mandanna: ‘ಇಂದು ನಾನೇ ಗೋಲ್ಡನ್​ ಗರ್ಲ್​’ ಅಂತ ಪೋಸ್​ ನೀಡಿದ ರಶ್ಮಿಕಾ ಮಂದಣ್ಣ; ಆದ್ರೆ ಜನ ಹೇಳಿದ್ದೇನು?
Image
Rashmika Mandanna: ಬಾಲಿವುಡ್​ ಸೇರಿದ ರಶ್ಮಿಕಾ ಮಂದಣ್ಣ ಹೊಸ ಅವತಾರ ಹೇಗಿದೆ ನೋಡಿ; ಫೋಟೋ ವೈರಲ್​
Image
Rashmika Mandanna: ಸೆಲ್ಫಿ ಕೇಳಿದ ಅಭಿಮಾನಿಗಳ ಜತೆ ರಶ್ಮಿಕಾ ಮಂದಣ್ಣ ನಡೆದುಕೊಂಡಿದ್ದು ಹೇಗೆ? ವಿಡಿಯೋ ವೈರಲ್​

ಇದನ್ನೂ ಓದಿ: ಪ್ರಪಂಚದಲ್ಲೇ 2ನೇ ಸ್ಥಾನ ಪಡೆದ ರಶ್ಮಿಕಾ ಮಂದಣ್ಣ ಹೊಸ ಸಾಂಗ್​ ‘ರಂಜಿದಮೆ..’

ವೃತ್ತಿಜೀವನದಲ್ಲಿ ರಶ್ಮಿಕಾ ಮಂದಣ್ಣ ಅವರು ಒಂದೊಂದೇ ಮೆಟ್ಟಿಲುಗಳನ್ನು ಏರುತ್ತಿದ್ದಾರೆ. ದಳಪತಿ ವಿಜಯ್​ ಜೊತೆಗೆ ಅವರು ನಟಿಸಿರುವ ‘ವಾರಿಸು’ ಸಿನಿಮಾ 2023ರ ಜನವರಿ 12ರಂದು ಬಿಡುಗಡೆ ಆಗಲಿದೆ. ಈ ಚಿತ್ರದಿಂದ ರಶ್ಮಿಕಾ ಅವರ ವೃತ್ತಿಜೀವನಕ್ಕೆ ದೊಡ್ಡ ಮೈಲೇಜ್​ ಸಿಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ಕನ್ನಡ ಚಿತ್ರರಂಗದಿಂದ ಬ್ಯಾನ್, ಸ್ಪಷ್ಟನೆ ನೀಡಿದ ರಶ್ಮಿಕಾ ಮಂದಣ್ಣ

ಅಲ್ಲು ಅರ್ಜುನ್​ ಜೊತೆ ‘ಪುಷ್ಪ 2’ ಸಿನಿಮಾದಲ್ಲೂ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ಆದಷ್ಟು ಬೇಗ ಈ ಚಿತ್ರದ ಬಗ್ಗೆ ಅಪ್​ಡೇಟ್​ ಸಿಗಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ. ಹಲವು ಹೊಸ ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:53 pm, Tue, 13 December 22

ಚಿಕ್ಕಬಳ್ಳಾಪುರ: 1 ಕೋಟಿ 11 ಲಕ್ಷ ರೂ ಮೌಲ್ಯದ ಕುದುರೆಗೆ ಅದ್ದೂರಿ ಸ್ವಾಗತ
ಚಿಕ್ಕಬಳ್ಳಾಪುರ: 1 ಕೋಟಿ 11 ಲಕ್ಷ ರೂ ಮೌಲ್ಯದ ಕುದುರೆಗೆ ಅದ್ದೂರಿ ಸ್ವಾಗತ
ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ವೇಗವಾಗಿ ಬಂದ ಆಂಬ್ಯುಲೆನ್ಸ್​ ಕನ್ವಾರಿಯಾಗಳಿಗೆ ಡಿಕ್ಕಿ, ಇಬ್ಬರು ಸಾವು
ವೇಗವಾಗಿ ಬಂದ ಆಂಬ್ಯುಲೆನ್ಸ್​ ಕನ್ವಾರಿಯಾಗಳಿಗೆ ಡಿಕ್ಕಿ, ಇಬ್ಬರು ಸಾವು
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು