ಟಾಲಿವುಡ್ನ ಸ್ಟಾರ್ ಹೀರೋ ಚಿತ್ರಕ್ಕೆ ನಾಯಕಿ ಆದ ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ ಅವರು ಅಲ್ಲು ಅರ್ಜುನ್ ಅವರೊಂದಿಗೆ ಮತ್ತೊಂದು ಚಿತ್ರದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಭಿಮಾನಿಗಳಲ್ಲಿ ಸಂತೋಷವನ್ನು ತಂದಿದೆ. 'AA22xA6' ಎಂಬ ಚಿತ್ರದಲ್ಲಿ ಅವರು ನಟಿಸಲಿದ್ದಾರೆ. ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ, ಜಾನ್ವಿ ಕಪೂರ್ ಮತ್ತು ಮೃಣಾಲ್ ಠಾಕೂರ್ ಕೂಡ ನಟಿಸುತ್ತಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಚಿತ್ರರಂಗದಲ್ಲಿ ಗೆಲ್ಲುವ ಕುದುರೆ. ಅವರು ಮುಟ್ಟಿದ್ದೆಲ್ಲ ಚಿನ್ನ. ಅವರು ಇದ್ದರೆ ಸಿನಿಮಾ ಗೆಲ್ಲುತ್ತದೆಯೋ ಅಥವಾ ಗೆಲ್ಲುವ ಚಿತ್ರದಲ್ಲಿ ಅವರಿರುತ್ತಾರೋ ಎಂಬುದು ಸದ್ಯದ ಪ್ರಶ್ನೆ. ಒಟ್ಟಿನಲ್ಲಿ ನಿರ್ಮಾಪಕರ ಪಾಲಿಗೆ ರಶ್ಮಿಕಾ ಅದೃಷ್ಟ ಲಕ್ಷ್ಮೀ. ಈ ಕಾರಣದಿಂದಲೇ ನಿರ್ಮಾಪಕರು ಅವರ ಮನೆಯ ಬಾಗಿಲು ತಟ್ಟುವ ಕೆಲಸ ಮಾಡುತ್ತಿದ್ದಾರೆ. ಈಗ ರಶ್ಮಿಕಾಗೆ ಒಂದು ಬಂಪರ್ ಆಫರ್ ಸಿಕ್ಕಿದೆ. ಅವರು ಅಲ್ಲು ಅರ್ಜುನ್ ಜೊತೆ ಮತ್ತೆ ಸಿನಿಮಾ ಮಾಡಲಿದ್ದಾರೆ!
ಅಲ್ಲು ಅರ್ಜುನ್ ಟಾಲಿವುಡ್ನ ಬೇಡಿಕೆಯ ಹೀರೋ. ಅವರು ‘ಪುಷ್ಪ’ ಹಾಗೂ ‘ಪುಷ್ಪ 2’ ಚಿತ್ರದಲ್ಲಿ ರಶ್ಮಿಕಾ ಜೊತೆ ನಟಿಸಿದ್ದರು. ಈ ಎರಡೂ ಚಿತ್ರಗಳು ಯಶಸ್ಸು ಕಂಡಿದ್ದು ಗೊತ್ತೇ ಇದೆ. ಈಗ ಇವರಿಬ್ಬರೂ ಮತ್ತೊಂದು ಸಿನಿಮಾಗಾಗಿ ಒಂದಾಗುತ್ತಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡಿದೆ. ಈ ವಿಚಾರ ರಶ್ಮಿಕಾ ಫ್ಯಾನ್ಸ್ ಖುಷಿ ಹೆಚ್ಚಿಸಿದೆ.
ಸನ್ ಪಿಕ್ಚರ್ಸ್ ನಿರ್ಮಾಣದ ‘AA22xA6’ ಚಿತ್ರದಲ್ಲಿ ಅಲ್ಲು ಅರ್ಜುನ್ ಹಾಗೂ ಅಟ್ಲಿ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿನಿಮಾ ಈಗಾಗಲೇ ಸೆಟ್ಟೇರಿದ್ದು, 2026ರ ಕೊನೆ ಅಥವಾ 2027ರ ಆರಂಭದಲ್ಲಿ ರಿಲೀಸ್ ಆಗಲಿದೆ. ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ, ಜಾನ್ವಿ ಕಪೂರ್ ಹಾಗೂ ಮೃಣಾಲ್ ಠಾಕೂರ್ ಇರೋದು ಖಚಿತವಾಗಿದೆ. ಇವರ ಜೊತೆ ರಶ್ಮಿಕಾ ಕೂಡ ನಟಿಸುತ್ತಿದ್ದಾರೆ. ಆದರೆ, ಈ ಬಾರಿ ಅಲ್ಲು ಅರ್ಜುನ್ ಜೊತೆ ರೊಮ್ಯಾನ್ಸ್ ಮಾಡೋ ಅವಕಾಶ ನಟಿಗೆ ಸಿಗೋದಿಲ್ಲ ಎನ್ನಲಾಗಿದೆ.
ಸದ್ಯ ‘ಪುಷ್ಪ 3’ ಸಿನಿಮಾ ಕೂಡ ಬರಬೇಕಿದೆ. ಅದು ಕೂಡ ಸೆಟ್ಟೇರಿದರೆ ರಶ್ಮಿಕಾ ಅವರು ನಾಲ್ಕನೇ ಬಾರಿಗೆ ಅಲ್ಲು ಅರ್ಜುನ್ ಜೊತೆ ಒಂದಾಗಲಿದ್ದಾರೆ. ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಜೋಡಿಯನ್ನು ಇಷ್ಟಪಡುವವರಿಗೆ ಇದು ತುಂಬಾನೇ ಖುಷಿ ಸುದ್ದಿ.
ಇದನ್ನೂ ಓದಿ: ಬಾಲಿವುಡ್ಗೆ ಹೋಲಿಸಿದರೆ ಸ್ಯಾಂಡಲ್ವುಡ್ನಲ್ಲಿ ಕೆಲಸ ಮಾಡೋದು ಸುಲಭ ಎಂದ ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ಬ್ಯಾಕ್ ಟು ಬ್ಯಾಕ್ ಹಿಟ್ ನೀಡುತ್ತಿದ್ದಾರೆ. ‘ಅನಿಮಲ್’, ‘ಛಾವ’, ‘ಪುಷ್ಪ 2’ ರೀತಿಯ ಸಿನಿಮಾಗಳು ಬಾಕ್ಸ್ ಆಫೀಸ್ನಲ್ಲಿ ಗೆದ್ದು ಬೀಗಿವೆ. ಇದರಿಂದ ರಶ್ಮಿಕಾ ಬೇಡಿಕೆ ಹೆಚ್ಚಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.








