AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ವಾನಗಳ ಮೇಲೆ ನಟಿ ರಶ್ಮಿಕಾ ಮಂದಣ್ಣಗೆ ಸಖತ್ ಪ್ರೀತಿ; ಇಲ್ಲಿದೆ ವಿಡಿಯೋ ಸಾಕ್ಷಿ

ರಶ್ಮಿಕಾ ಮಂದಣ್ಣ ಅವರು ಎರಡು ಶ್ವಾನಗಳನ್ನು ಸಾಕಿದ್ದಾರೆ. ಈ ಶ್ವಾನಗಳು ಮರಿ ಇದ್ದಾಗ ಹೇಗೆ ಟ್ರೇನ್ ಮಾಡಲಾಗಿತ್ತು ಎಂಬುದನ್ನು ರಶ್ಮಿಕಾ ಮಂದಣ್ಣ ಅವರು ವಿಡಿಯೋ ಮೂಲಕ ತೋರಿಸಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗಿದೆ

ಶ್ವಾನಗಳ ಮೇಲೆ ನಟಿ ರಶ್ಮಿಕಾ ಮಂದಣ್ಣಗೆ ಸಖತ್ ಪ್ರೀತಿ; ಇಲ್ಲಿದೆ ವಿಡಿಯೋ ಸಾಕ್ಷಿ
ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Apr 12, 2024 | 11:11 AM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ರಶ್ಮಿಕಾಗೆ ಪ್ರಾಣಿಗಳ ಬಗ್ಗೆ ವಿಶೇಷ ಪ್ರೀತಿ ಇದೆ. ಅವರು ಆಗಾಗ ತಮ್ಮ ಶ್ವಾನಗಳ ಜೊತೆ ಇರೋ ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಹಂಚಿಕೊಂಡಿರುವ ಹೊಸ ವಿಡಿಯೋ ಸಖತ್ ವೈರಲ್ ಆಗಿದೆ. ಇದರಿಂದ ರಶ್ಮಿಕಾ ಅವರಿಗೆ ಪ್ರಾಣಿಗಳ ಬಗ್ಗೆ ಎಷ್ಟು ಪ್ರೀತಿ ಎಂಬುದು ಗೊತ್ತಾಗಿದೆ.

ರಶ್ಮಿಕಾ ಮಂದಣ್ಣ ಅವರು ಎರಡು ಶ್ವಾನಗಳನ್ನು ಸಾಕಿದ್ದಾರೆ. ಈ ಶ್ವಾನಗಳು ಮರಿ ಇದ್ದಾಗ ಹೇಗೆ ಟ್ರೇನ್ ಮಾಡಲಾಗಿತ್ತು ಎಂಬುದನ್ನು ರಶ್ಮಿಕಾ ಮಂದಣ್ಣ ಅವರು ವಿಡಿಯೋ ಮೂಲಕ ತೋರಿಸಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗಿದೆ. ರಶ್ಮಿಕಾ ಅವರು ಶ್ವಾನಗಳನ್ನು ಪ್ರಿತಿಯಿಂದ ನೋಡಿಕೊಳ್ಳುತ್ತಾರೆ. ಆಗಾಗ ಅವುಗಳ ಫೋಟೋಗಳನ್ನು ರಶ್ಮಿಕಾ ಹಂಚಿಕೊಳ್ಳುತ್ತಾರೆ.

ನಟಿ ರಶ್ಮಿಕಾ ಮಂದಣ್ಣ ಅವರು ತಮ್ಮ ಬಗ್ಗೆ ಏನಾದರೂ ವದಂತಿ ಹುಟ್ಟಿದರೆ ಅದನ್ನು ಸಹಿಸಿಕೊಳ್ಳುತ್ತಾರೆ. ಆದರೆ, ಶ್ವಾನಗಳ ಬಗ್ಗೆ ಯಾರಾದರೂ ಮಾತನಾಡಿದರೆ ಅವರಿಗೆ ಅದು ಇಷ್ಟ ಆಗುವುದಿಲ್ಲ. ಈ ಮೊದಲು ರಶ್ಮಿಕಾ ಶ್ವಾನದ ಬಗ್ಗೆ ಹೀಗೊಂದು ಸುದ್ದಿ ಹುಟ್ಟಿಕೊಂಡಿತ್ತು. ‘ರಶ್ಮಿಕಾ ತಮ್ಮ ಜೊತೆ ಶ್ವಾನಕ್ಕೂ ಟಿಕೆಟ್ ಬುಕ್ ಮಾಡುವಂತೆ ನಿರ್ಮಾಪಕರ ಬಳಿ ಬೇಡಿಕೆ ಇಡುತ್ತಿದ್ದಾರೆ. ಇದರಿಂದ ನಿರ್ಮಾಪಕರಿಗೆ ಹೊರೆ ಆಗುತ್ತಿದೆ’ ಎಂದು ವರದಿ ಆಗಿತ್ತು. ಇದನ್ನು ರಶ್ಮಿಕಾ ಖಂಡಿಸಿದ್ದರು. ಇದು ಸುಳ್ಳು ಎಂದು ಅವರು ಸ್ಪಷ್ಟನೆ ನೀಡಿದ್ದರು.

ರಶ್ಮಿಕಾ ವಿಡಿಯೋದ ಸ್ಕ್ರೀನ್​ಶಾಟ್

ಇದನ್ನೂ ಓದಿ: ಹೊಸ ಅವತಾರದಲ್ಲಿ ಬಂದ ರಶ್ಮಿಕಾ ಮಂದಣ್ಣ; ಬರ್ತ್​​ಡೇಗೆ ಪೋಸ್ಟರ್ ಗಿಫ್ಟ್

ರಶ್ಮಿಕಾ ಮಂದಣ್ಣ ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಜೊತೆಗೆ ಅವರು ‘ರೇನ್​ಬೋ’, ‘ದಿ ಗರ್ಲ್​ಫ್ರೆಂಡ್’ ಮೊದಲಾದ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಆಗಸ್ಟ್ 15ರಂದು ರಿಲೀಸ್ ಆಗುತ್ತಿದೆ. ಸುಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ