AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳು ಅಭಿಮಾನಿಗಳಿ​ಗೆ ರಶ್ಮಿಕಾ ಮಂದಣ್ಣ ಕಡೆಯಿಂದ ಗುಡ್​ ನ್ಯೂಸ್?

ಕಾರ್ತಿ ನಟನೆಯ ‘ಸುಲ್ತಾನ್​’ ಚಿತ್ರದ ಮೂಲಕ ರಶ್ಮಿಕಾ ತಮಿಳು ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ಇದಾದ ನಂತರದಲ್ಲಿ ಅವರು ಯಾವುದೇ ತಮಿಳು ಸಿನಿಮಾ ಒಪ್ಪಿಕೊಂಡಿಲ್ಲ.

ತಮಿಳು ಅಭಿಮಾನಿಗಳಿ​ಗೆ ರಶ್ಮಿಕಾ ಮಂದಣ್ಣ ಕಡೆಯಿಂದ ಗುಡ್​ ನ್ಯೂಸ್?
ರಶ್ಮಿಕಾ ಮಂದಣ್ಣ
TV9 Web
| Edited By: |

Updated on: Jul 28, 2021 | 3:34 PM

Share

ನಟಿ ರಶ್ಮಿಕಾ ಮಂದಣ್ಣ ಖ್ಯಾತಿ ದಿನಕಳೆದಂತೆ ಹೆಚ್ಚುತ್ತಲೇ ಇದೆ. ಅವರು ಕನ್ನಡ ಮಾತ್ರವಲ್ಲದೆ, ತೆಲುಗು, ತಮಿಳು ಹಾಗೂ ಹಿಂದಿ ಚಿತ್ರಗಳಲ್ಲಿ ನಟಿಸಿದ್ದಾರೆ. ದೊಡ್ಡ ಬಜೆಟ್​ ಚಿತ್ರಗಳು ಅವರ ಕೈಯಲ್ಲಿವೆ. ಈಗ ಅವರು ತಮಿಳು ಚಿತ್ರರಂಗದ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಡೋಕೆ ಮುಂದಾಗಿದ್ದಾರೆ. ಅರ್ಥಾತ್​ ತಮಿಳಿನ ಚಿತ್ರವೊಂದಕ್ಕೆ ರಶ್ಮಿಕಾ ನಾಯಕಿಯಾಗಿ ನಟಿಸಲಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ.

‘ಜಾತಿ ರತ್ನಾಲು’ ಮೂಲಕ ಸಾಕಷ್ಟು ಖ್ಯಾತಿ ಗಳಿಸಿಕೊಂಡ ನಿರ್ದೇಶಕ ಅನುದೀಪ್​ ಕೆ.ವಿ. ಈಗ ಹೊಸ ಸಿನಿಮಾಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಶಿವ ಕಾರ್ತಿಕೇಯನ್​ ಜತೆ ಅವರು ಕೈ ಜೋಡಿಸುತ್ತಿದ್ದಾರೆ ಎನ್ನಲಾಗಿದೆ. ಈ ಚಿತ್ರಕ್ಕೆ ಏಷ್ಯನ್​ ಗ್ರೂಪ್​ ಮುಖ್ಯಸ್ಥ ನಾರಾಯಣ್​ ದಾಸ್​ ನಾರಂಗ್​ ಅವರು ಬಂಡವಾಳ ಹೂಡುತ್ತಿದ್ದಾರೆ. ಈ ಚಿತ್ರಕ್ಕೆ ರಶ್ಮಿಕಾ ಅವರನ್ನು ನಾಯಕಿಯಾಗಿ ಆಯ್ಕೆ ಮಾಡಿಕೊಳ್ಳುವ ಆಲೋಚನೆಯಲ್ಲಿ ಚಿತ್ರತಂಡ ಇದೆ.

ಕಾರ್ತಿ ನಟನೆಯ ‘ಸುಲ್ತಾನ್​’ ಚಿತ್ರದ ಮೂಲಕ ರಶ್ಮಿಕಾ ತಮಿಳು ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ಇದಾದ ನಂತರದಲ್ಲಿ ಅವರು ಯಾವುದೇ ತಮಿಳು ಸಿನಿಮಾ ಒಪ್ಪಿಕೊಂಡಿಲ್ಲ. ಒಂದೊಮ್ಮೆ ಈ ಚಿತ್ರ ಒಪ್ಪಿಕೊಂಡರೆ ಅವರು ಮತ್ತೊಮ್ಮೆ ಕಾಲಿವುಡ್​ಗೆ ಕಾಲಿಟ್ಟಂತಾಗುತ್ತದೆ.

ಅಂದಹಾಗೆ, ಈ ಸಿನಿಮಾ ತೆಲುಗು ಹಾಗೂ ತಮಿಳು ಎರಡಲ್ಲೂ ಸಿದ್ಧಗೊಳ್ಳುತ್ತಿದೆ. ತೆಲುಗು ಚಿತ್ರರಂಗದಲ್ಲಿ ರಶ್ಮಿಕಾ ದೊಡ್ಡಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಈ ಚಿತ್ರಕ್ಕೆ ನಾಯಕಿಯಾದರೆ, ಸಿನಿಮಾಗೆ ದೊಡ್ಡಮಟ್ಟದಲ್ಲಿ ಮೈಲೇಜ್​ ಸಿಕ್ಕಂತಾಗುತ್ತದೆ. ಸಿನಿಮಾಗೆ ಅವರು ಸಹಿ ಹಾಕಿದ ನಂತರದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗುವ ನಿರೀಕ್ಷೆ ಇದೆ.

ವಿಕಾಸ್​ ಬಹ್ಲ್​ ಆ್ಯಕ್ಷನ್​-ಕಟ್​ ಹೇಳುತ್ತಿರುವ  ‘ಗುಡ್​ಬೈ’ ಚಿತ್ರದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಹಿರಿಯ ನಟಿ ನೀನಾ ಗುಪ್ತಾ, ಥಪ್ಪಡ್​ ಖ್ಯಾತಿಯ ಬಾಲಿವುಡ್​ ನಟ ಪವೈಲ್​ ಗುಲಾಟಿ ಮುಂತಾದವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ‘ಗುಡ್​ಬೈ’ ಮಾತ್ರವಲ್ಲದೇ ಇನ್ನೂ ಅನೇಕ ಸಿನಿಮಾಗಳು ರಶ್ಮಿಕಾ ಮಂದಣ್ಣ ಕೈಯಲ್ಲಿವೆ. ಬಾಲಿವುಡ್​ನಲ್ಲಿ ಅವರು ಸಿದ್ಧಾರ್ಥ್​ ಮಲ್ಹೋತ್ರಾಗೆ ಜೋಡಿಯಾಗಿ ‘ಮಿಷನ್​ ಮಜ್ನು’ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಟಾಲಿವುಡ್​ನಲ್ಲಿ ಅಲ್ಲು ಅರ್ಜುನ್​ ಜೊತೆ ರಶ್ಮಿಕಾ ನಟಿಸಿರುವ ‘ಪುಷ್ಪ’ ಚಿತ್ರಕ್ಕೆ ಕೊನೇ ಹಂತದ ಕೆಲಸಗಳು ನಡೆಯುತ್ತಿವೆ. ಆ ಚಿತ್ರದಿಂದ ರಶ್ಮಿಕಾ ವೃತ್ತಿಜೀವನಕ್ಕೆ ದೊಡ್ಡ ಮೈಲಿಗಲ್ಲು ಸಿಗುವ ನಿರೀಕ್ಷೆ ಇದೆ. ಕೆಜಿಎಫ್​, ಬಾಹುಬಲಿ ರೀತಿಯೇ ‘ಪುಷ್ಪ’ ಕೂಡ ಎರಡು ಪಾರ್ಟ್​​ನಲ್ಲಿ ಮೂಡಿಬರಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ರಶ್ಮಿಕಾ ಸಿನಿಮಾದಲ್ಲಿ ಸನ್ನಿ ಲಿಯೋನ್​ಗೆ 50 ಲಕ್ಷ ಸಂಬಳ; ಮಾಜಿ ನೀಲಿ ತಾರೆಗೆ ಏನು ಕೆಲಸ?

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?