‘ಪುಷ್ಪ 2’ ಚಿತ್ರದಿಂದ ರಾಷ್ಟ್ರ ಪ್ರಶಸ್ತಿ ಗೆಲ್ಲುವ ಭರವಸೆಯಲ್ಲಿದ್ದಾರೆ ರಶ್ಮಿಕಾ ಮಂದಣ್ಣ

| Updated By: ಮಂಜುನಾಥ ಸಿ.

Updated on: Nov 29, 2024 | 7:25 PM

Rashmika Mandanna: ‘ಪುಷ್ಪ’ ಸಿನಿಮಾದ ನಟನೆಗೆ ಅಲ್ಲು ಅರ್ಜುನ್​ಗೆ ರಾಷ್ಟ್ರಪ್ರಶಸ್ತಿ ದೊರೆತಿತ್ತು, ಇದೀಗ ‘ಪುಷ್ಪ 2’ ಸಿನಿಮಾದ ನಟನೆಗೆ ರಶ್ಮಿಕಾ ಮಂದಣ್ಣಗೆ ರಾಷ್ಟ್ರಪ್ರಶಸ್ತಿ ದೊರಕುವ ಸಾಧ್ಯತೆ ಇದೆ.

‘ಪುಷ್ಪ 2’ ಚಿತ್ರದಿಂದ ರಾಷ್ಟ್ರ ಪ್ರಶಸ್ತಿ ಗೆಲ್ಲುವ ಭರವಸೆಯಲ್ಲಿದ್ದಾರೆ ರಶ್ಮಿಕಾ ಮಂದಣ್ಣ
Rashmika Mandanna
Follow us on

ರಶ್ಮಿಕಾ ಮಂದಣ್ಣ ಅವರು ಈವರೆಗೆ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿದೆ. ಕನ್ನಡದಿಂದ ಆರಂಭವಾದ ಅವರ ಪಯಣ ಈಗ ಹಿಂದಿ, ತಮಿಳು, ತೆಲುಗಿನ ಕಡೆ ಸಾಗಿದೆ. ತೆಲುಗು ಚಿತ್ರರಂಗದಲ್ಲಿ ಅವರಿಗೆ ಸಖತ್ ಬೇಡಿಕೆ ಇದೆ. ಅವರು ಕೆಲವು ಅವಾರ್ಡ್ಗಳನ್ನು ಗೆದ್ದಿದ್ದಾರೆ. ಆದರೆ, ಅವರಿಗೆ ರಾಷ್ಟ್ರಪ್ರಶಸ್ತಿ ಸಿಕ್ಕಿಲ್ಲ. ‘ಪುಷ್ಪ 2’ ಚಿತ್ರದಿಂದ ರಾಷ್ಟ್ರಪ್ರಶಸ್ತಿ ಗೆಲ್ಲುವ ಆಸೆಯಲ್ಲಿ ಅವರು ಇದ್ದಾರೆ.

‘ಪುಷ್ಪ’ ಚಿತ್ರದ ನಟನೆಗೆ ಅಲ್ಲು ಅರ್ಜುನ್ ಅವರು ‘ಅತ್ಯುತ್ತಮ ನಟ’ ರಾಷ್ಟ್ರಪ್ರಶಸ್ತಿ ಪಡೆದುಕೊಂಡಿದ್ದಾರೆ. ಹೀಗಾಗಿ, ‘ಪುಷ್ಪ 2’ ಚಿತ್ರದ ನಟನೆಗೆ ರಶ್ಮಿಕಾ ಅವರಿಗೆ ರಾಷ್ಟ್ರ ಪ್ರಶಸ್ತಿ ಸಿಗಲಿ ಎಂದು ಕೆಲವರು ಆಶಿಸಿದ್ದಾರೆ. ಮಾಧ್ಯಮಗಳಲ್ಲಿ ಈ ಬಗ್ಗೆ ಅವರಿಗೆ ಪ್ರಶ್ನೆ ಮಾಡಲಾಗಿದೆ. ‘ಹಾಗೆ ಆಗಲಿ’ ಎಂದು ಅವರು ಹೇಳಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

‘ಪುಷ್ಪ 2’ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಅವರ ಪಾತ್ರ ಹೇಗೆ ಇರಲಿದೆ ಎಂಬ ಪ್ರಶ್ನೆ ಅನೇಕರಿಗೆ ಇದೆ. ಇದಕ್ಕೆ ಕಾರಣವೂ ಇದೆ. ಏಕೆಂದರೆ, ಅವರ ಪಾತ್ರ ಕೊನೆ ಆಗಲಿದೆ ಎಂಬ ಟಾಕ್ ಇತ್ತು. ಅದು ನಿಜವೇ ಆಗಿ, ರಶ್ಮಿಕಾ ಪಾತ್ರ ಚಿಕ್ಕದಾಗಿದ್ದರೆ ಅವರಿಗೆ ರಾಷ್ಟ್ರ ಪ್ರಶಸ್ತಿ ಸಿಗೋದು ಸಾಧ್ಯವಾಗುವುದಿಲ್ಲ.

ಇದನ್ನೂ ಓದಿ:‘ನಿಮಗೆ ನಿರಾಸೆ ಮಾಡಲ್ಲ’: ಅಭಿಮಾನಿಗಳಿಗೆ ರಶ್ಮಿಕಾ ಮಂದಣ್ಣ ಭರವಸೆ

ರಾಷ್ಟ್ರ ಪ್ರಶಸ್ತಿ ಇದು ಕೇಂದ್ರ ಸರ್ಕಾರ ನೀಡುವ ಅತ್ಯುತ್ತಮ ಅವಾರ್ಡ್ಗಳಲ್ಲಿ ಒಂದು. ಕೇಂದ್ರ ಸರ್ಕಾರ ಪ್ರತಿ ವರ್ಷ ಅತ್ಯುತ್ತಮ ಸಿನಿಮಾ, ಅತ್ಯುತ್ತಮ ಪೋಷಕ ಪಾತ್ರ ಸೇರಿ ಅತ್ಯುತ್ತಮ ನಟಿ, ಅತ್ಯುತ್ತಮ ನಟ ಅವಾರ್ಡ್ ಕೂಡ ನೀಡುತ್ತಾರೆ. ಈ ವರ್ಷ ರಿಷಬ್ ಶೆಟ್ಟಿ ಅತ್ಯುತ್ತಮ ನಟ ಅವಾರ್ಡ್ ಪಡೆದುಕೊಂಡರೆ, ನಿತ್ಯಾ ಮೆನನ್ ಅತ್ಯುತ್ತಮ ನಟಿ ಅವಾರ್ಡ್ ಪಡೆದಿದ್ದಾರೆ.

ಡಿಸೆಂಬರ್ 5ರಂದು ‘ಪುಷ್ಪ 2’ ಸಿನಿಮಾ ರಿಲೀಸ್ ಆಗಲಿದೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಡಾಲಿ ಧನಂಜಯ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಸುಕುಮಾರ್ ನಿರ್ದೇಶನ ಇದ್ದು, ಮೈತ್ರಿ ಮೂವೀ ಮೇಕರ್ಸ್ ಬಂಡವಾಳ ಹೂಡುತ್ತಿದೆ. ಈ ಚಿತ್ರ ಮೊದಲ ದಿನ ಎಷ್ಟು ಕೋಟಿ ರೂಪಾಯಿ ಗಳಿಸಲಿದೆ ಎಂಬ ಕುತೂಹಲ ಮೂಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ