ಅತಿ ಹೆಚ್ಚು ಸಂಬಳ ಪಡೆಯುವ ದಕ್ಷಿಣ ಭಾರತದ ಟಾಪ್​ 10 ನಟಿಯರು ಇವರು; ರಶ್ಮಿಕಾ, ಸಮಂತಾ ಸಂಭಾವನೆ ಎಷ್ಟು?

Highest Paid South Actress: ದಕ್ಷಿಣ ಭಾರತದಲ್ಲಿ ರಶ್ಮಿಕಾ ಮಂದಣ್ಣ, ನಯನತಾರಾ, ಸಮಂತಾ, ಪೂಜಾ ಹೆಗ್ಡೆ ಮುಂತಾದ ನಟಿಯರಿಗೆ ಸಖತ್​ ಡಿಮ್ಯಾಂಡ್​ ಇದೆ. ಇವರೆಲ್ಲ ಕೈ ತುಂಬ ಸಂಭಾವನೆ ಪಡೆಯುತ್ತಾರೆ.

ಅತಿ ಹೆಚ್ಚು ಸಂಬಳ ಪಡೆಯುವ ದಕ್ಷಿಣ ಭಾರತದ ಟಾಪ್​ 10 ನಟಿಯರು ಇವರು; ರಶ್ಮಿಕಾ, ಸಮಂತಾ ಸಂಭಾವನೆ ಎಷ್ಟು?
ಟಾಪ್​ 10 ನಟಿಯರು
Follow us
TV9 Web
| Updated By: ಮದನ್​ ಕುಮಾರ್​

Updated on:Jun 16, 2022 | 11:45 AM

ಯಾವುದೇ ಸಿನಿಮಾಗೆ ಹೀರೋಗಳ ರೀತಿಯೇ ಹೀರೋಯಿನ್​ ಕೂಡ ಮುಖ್ಯ. ಕೆಲವು ಸಿನಿಮಾಗಳಲ್ಲಿ ನಾಯಕಿಯರ ಪಾತ್ರಗಳು ಕಥೆಗೆ ಪೂರಕವಾಗಿದ್ದರೆ ಇನ್ನೂ ಕೆಲವು ಚಿತ್ರಗಳಲ್ಲಿ ಕೇವಲ ಗ್ಲಾಮರ್​ ಸಲುವಾಗಿ ನಟಿಯರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ನಾಯಕಿ ಪ್ರಧಾನ ಸಿನಿಮಾಗಳಲ್ಲಿ ಹೀರೋಯಿನ್​ ಪಾತ್ರವೇ ಹೈಲೈಟ್​ ಆಗಿರುತ್ತದೆ. ಸಂಭಾವನೆ (Remuneration) ವಿಚಾರ ಬಂದಾಗ ಕೆಲವು ನಟಿಯರ ಅಸಮಾಧಾನ ವ್ಯಕ್ತಪಡಿಸುವುದುಂಟು. ಅದೇನೇ ಇರಲಿ, ದಕ್ಷಿಣ ಭಾರತದ ಹಲವು ನಟಿಯರು ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ. ರಶ್ಮಿಕಾ ಮಂದಣ್ಣ, ನಯನತಾರಾ (Nayanthara), ಪೂಜಾ ಹೆಗ್ಡೆ, ಸಮಂತಾ ಸೇರಿದಂತೆ ಅನೇಕ ನಟಿಯರಿಗೆ ಸೌತ್ ಇಂಡಸ್ಟ್ರಿಯಲ್ಲಿ ಭರ್ಜರಿ ಬೇಡಿಕೆ ಇದೆ. ಹಾಗಾದರೆ ಇವರಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿ ಯಾರು? ಪ್ರತಿ ಚಿತ್ರಕ್ಕೆ ರಶ್ಮಿಕಾ ಮಂದಣ್ಣ (Rashmika Mandanna) ಅವರು ಎಷ್ಟು ಸಂಬಳ ಪಡೆಯುತ್ತಾರೆ? ಆ ಕುರಿತು ಮಾಹಿತಿ ಇಲ್ಲಿದೆ..

ತಮಗೆ ಸಿಕ್ಕ ಸಂಭಾವನೆ ಬಗ್ಗೆ ಯಾವ ನಟಿ-ನಟಿಯರು ಕೂಡ ಅಧಿಕೃತವಾಗಿ ಹೇಳಿಕೊಳ್ಳುವುದಿಲ್ಲ. ಆದರೆ ಈ ಕುರಿತು ಹಲವು ವರದಿಗಳು ಪ್ರಕಟ ಆಗುತ್ತಲೇ ಇರುತ್ತವೆ. ಆ ವರದಿಗಳ ಪ್ರಕಾರ, ದಕ್ಷಿಣ ಭಾರತದಲ್ಲಿ ನಯನತಾರಾ ನಂಬರ್​ ಒನ್​. ಲೇಡಿ ಸೂಪರ್​ ಸ್ಟಾರ್​ ಎಂದು ಕರೆಸಿಕೊಳ್ಳುವ ಅವರು ಈಗ ಪ್ರತಿ ಸಿನಿಮಾಗೆ ಬರೋಬ್ಬರಿ 10 ಕೋಟಿ ರೂಪಾಯಿ ಡಿಮ್ಯಾಂಡ್​ ಮಾಡುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ‘ಕನ್ನಡದ ಕೋಟ್ಯಧಿಪತಿ’ಯಿಂದ ಪುನೀತ್​ಗೆ ಸಿಕ್ಕ ಸಂಭಾವನೆ ಎಷ್ಟು ಕೋಟಿ? ಆ ದುಡ್ಡಲ್ಲಿ ಆಗ್ತಿದೆ ಪುಣ್ಯದ ಕೆಲಸ

ಇದನ್ನೂ ಓದಿ
Image
‘ಕೆಜಿಎಫ್: ಚಾಪ್ಟರ್​​ 2’ ಸಿನಿಮಾ ಹಿಟ್​ ಆದ್ಮೇಲೆ ಶ್ರೀನಿಧಿ ಶೆಟ್ಟಿ ಕೇಳ್ತಿರುವ ಸಂಭಾವನೆ ಎಷ್ಟು ಕೋಟಿ?
Image
ಅಬ್ಬಬ್ಬಾ.. ‘ಪುಷ್ಪ 2’ ಸಿನಿಮಾದ ನಿರ್ದೇಶನಕ್ಕೆ ಸುಕುಮಾರ್​ ಪಡೆಯುವ ಸಂಭಾವನೆ ಇಷ್ಟೊಂದಾ?
Image
‘ಲಾಲ್​ ಸಿಂಗ್​ ಚಡ್ಡಾ’ ಚಿತ್ರಕ್ಕೆ ಆಮಿರ್​, ಕರೀನಾ, ನಾಗ ಚೈತನ್ಯ ಪಡೆದ ಸಂಭಾವನೆ ಎಷ್ಟು ಕೋಟಿ?
Image
‘ದಿ ಕಾಶ್ಮೀರ್​ ಫೈಲ್ಸ್​’ ನಟರಿಗೆ ಸಿಕ್ಕಿದೆ ಕೋಟಿ ರೂ. ಸಂಬಳ; ಅತಿ ಹೆಚ್ಚು ಸಂಭಾವನೆ ಪಡೆದಿದ್ದು ಯಾರು?

ನಟಿ ಪೂಜಾ ಹೆಗ್ಡೆ ಅವರು ಬ್ಯಾಕ್​ ಟು ಬ್ಯಾಕ್​ ಸ್ಟಾರ್​ ಸಿನಿಮಾಗಳಿಗೆ ನಾಯಕಿ ಆಗುತ್ತಿದ್ದಾರೆ. ಅವರಿಗೆ ಸಖತ್​ ಬೇಡಿಕೆ ಇದೆ. ಅವರು ಈಗ 5 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಾರೆ ಎಂದು ವರದಿ ಆಗಿದೆ. ಇನ್ನು, ನಟಿ ಸಮಂತಾ ಕೂಡ ಕಮ್ಮಿ ಏನಿಲ್ಲ. ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​ ಹಾಗೂ ‘ಪುಷ್ಪ’ ಸಿನಿಮಾದ ಐಟಂ ಸಾಂಗ್​ನಲ್ಲಿ ನಟಿಸಿದ ಬಳಿಕ ಅವರ ಚಾರ್ಮ್​ ಹೆಚ್ಚಿದೆ. ಹಾಗಾಗಿ ಅವರು 3ರಿಂದ 5 ಕೋಟಿ ರೂಪಾಯಿ ಕೇಳುತ್ತಿದ್ದಾರೆ. ತಮ್ಮ ಪಾತ್ರದ ಅವಧಿ ಎಷ್ಟು ಇರಲಿದೆ? ನಿರ್ಮಾಣ ಸಂಸ್ಥೆ ಯಾವುದು? ತಮ್ಮ ಜೊತೆ ನಟಿಸುವ ಹೀರೋ ಯಾರು ಎಂಬಿತ್ಯಾದಿ ಲೆಕ್ಕಾಚಾರಗಳ ಮೇಲೆ ಸಂಭಾವನೆ ದರ ನಿಗದಿ ಮಾಡುತ್ತಾರಂತೆ ಸಮಂತಾ.

ಇದನ್ನೂ ಓದಿ: ಡಾ.ರಾಜ್ ಸಂಭಾವನೆ 5 ರಿಂದ 10 ಸಾವಿರಕ್ಕೇರಲು ಎಷ್ಟು ಸಿನಿಮಾ ಮಾಡಬೇಕಾಯಿತು?

ಖ್ಯಾತ ನಟಿ ಅನುಷ್ಕಾ ಶೆಟ್ಟಿ ಅವರು ಈಗ ಸಿನಿಮಾ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ಅವರು ಪ್ರತಿ ಚಿತ್ರಕ್ಕೆ 4 ಕೋಟಿ ರೂಪಾಯಿ ಡಿಮ್ಯಾಂಡ್​ ಮಾಡುತ್ತಾರೆ. ರಶ್ಮಿಕಾ ಮಂದಣ್ಣ ಅವರು ಬಹುಭಾಷೆಯಲ್ಲಿ ಮಿಂಚುತ್ತಿದ್ದಾರೆ. ‘ಪುಷ್ಪ’ ಸಿನಿಮಾ ಗೆದ್ದ ಬಳಿಕ ಅವರು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಫೇಮಸ್​ ಆಗಿದ್ದಾರೆ. ಈಗ ಅವರಿಗೆ ಬಾಲಿವುಡ್​ನಲ್ಲೂ ಹಲವು ಅವಕಾಶಗಳು ಹರಿದುಬರುತ್ತಿವೆ. ಪ್ರತಿ ಸಿನಿಮಾಗೆ ಅವರು 3 ಕೋಟಿ ರೂಪಾಯಿಗಿಂತಲೂ ಹೆಚ್ಚು ಸಂಭಾವನೆ ಪಡೆಯುತ್ತಾರೆ ಎಂದು ವರದಿ ಆಗಿದೆ.

ರಾಕುಲ್ ಪ್ರೀತ್​ ಸಿಂಗ್​ 3.5 ಕೋಟಿ ರೂಪಾಯಿ, ತಮನ್ನಾ ಭಾಟಿಯಾ 3 ಕೋಟಿ ರೂಪಾಯಿ, ಕಾಜಲ್​ ಅಗರ್​ವಾಲ್​, ಶ್ರುತಿ ಹಾಸನ್, ಕೀರ್ತಿ ಸುರೇಶ್​ ಅವರು​ 2 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ ಎನ್ನಲಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:45 am, Thu, 16 June 22

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ