AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಮಂದಣ್ಣ-ನಿತಿನ್​ ನಟನೆಯ ಹೊಸ ಚಿತ್ರಕ್ಕೆ ಚಾಲನೆ; ಮುಹೂರ್ತಕ್ಕೆ ಬಂದು ಹಾರೈಸಿದ ಚಿರಂಜೀವಿ

Rashmika Mandanna | Nithiin: ರಶ್ಮಿಕಾ ಮಂದಣ್ಣ ನಟನೆಯ ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಇಟ್ಟಿಲ್ಲ. ‘ಮೆಗಾ ಸ್ಟಾರ್​’ ಚಿರಂಜೀವಿ ಅವರು ಮೊದಲ ದೃಶ್ಯಕ್ಕೆ ಕ್ಲ್ಯಾಪ್​ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದ್ದಾರೆ.

ರಶ್ಮಿಕಾ ಮಂದಣ್ಣ-ನಿತಿನ್​ ನಟನೆಯ ಹೊಸ ಚಿತ್ರಕ್ಕೆ ಚಾಲನೆ; ಮುಹೂರ್ತಕ್ಕೆ ಬಂದು ಹಾರೈಸಿದ ಚಿರಂಜೀವಿ
ಚಿರಂಜೀವಿ, ರಶ್ಮಿಕಾ ಮಂದಣ್ಣ, ನಿತಿನ್
ಮದನ್​ ಕುಮಾರ್​
|

Updated on: Mar 24, 2023 | 5:28 PM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಯಶಸ್ಸಿನ ಓಟ ಮುಂದುವರಿದಿದೆ. ಯಾರು ಎಷ್ಟೇ ಟ್ರೋಲ್​ ಮಾಡಿದರೂ ಅವರಿಗೆ ಹೊಸ ಹೊಸ ಆಫರ್​ಗಳು ಸಿಗುತ್ತಲೇ ಇವೆ. ಸ್ಟಾರ್​ ನಟರ ಜೊತೆ ಅಭಿನಯಿಸುತ್ತ ಅವರು ಭದ್ರವಾಗಿ ನೆಲೆ ಕಂಡುಕೊಳ್ಳುತ್ತಿದ್ದಾರೆ. ಟಾಲಿವುಡ್​ ನಟ ನಿತಿನ್​ (Nithiin) ಜೊತೆ ರಶ್ಮಿಕಾ ಮಂದಣ್ಣ ಅವರು ಹೊಸದೊಂದು ಸಿನಿಮಾದಲ್ಲಿ ತೆರೆ ಹಂಚಿಕೊಳ್ಳುತ್ತಾರೆ ಎಂದು ಇತ್ತೀಚೆಗಷ್ಟೇ ಸುದ್ದಿ ಆಗಿತ್ತು. ಈಗ ಆ ಸಿನಿಮಾಗೆ ಮುಹೂರ್ತ ಕೂಡ ನೆರವೇರಿದೆ. ತೆಲುಗು ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಬಂದು ಹೊಸ ಚಿತ್ರಕ್ಕೆ ಶುಭ ಕೋರಿದ್ದಾರೆ. ರಶ್ಮಿಕಾ ಮಂದಣ್ಣ ಮತ್ತು ನಿತಿನ್​ ಅವರು ಜೊತೆಯಾಗಿ ನಟಿಸುತ್ತಿರುವ ಎರಡನೇ ಸಿನಿಮಾ ಇದು. ಈ ಮೊದಲು ಅವರು ‘ಭೀಷ್ಮ’ ಚಿತ್ರದಲ್ಲಿ ಒಟ್ಟಿಗೆ ನಟಿಸಿದ್ದರು.

ತೆಲುಗು ಚಿತ್ರರಂಗದಲ್ಲಿ ರಶ್ಮಿಕಾ ಮಂದಣ್ಣ ಅವರಿಗೆ ಸಖತ್​ ಬೇಡಿಕೆ ಇದೆ. ಅವರು ಲಕ್ಕಿ ಹೀರೋಯಿನ್​ ಎನಿಸಿಕೊಂಡಿದ್ದಾರೆ. ಅವರ ಕಾಲ್​ಶೀಟ್​ ಪಡೆಯಲು ದೊಡ್ಡ ದೊಡ್ಡ ನಿರ್ಮಾಣ ಸಂಸ್ಥೆಗಳ ನಡುವೆ ಪೈಪೋಟಿ ಇದೆ. ನಿತಿನ್​-ರಶ್ಮಿಕಾ ಕಾಂಬಿನೇಷನ್​ನ ಹೊಸ ಸಿನಿಮಾಗೆ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ‘ಮೈತ್ರಿ ಮೂವೀ ಮೇಕರ್ಸ್​’ ಬಂಡವಾಳ ಹೂಡುತ್ತಿದೆ. ಅದ್ದೂರಿ ವೆಚ್ಚದಲ್ಲಿ ಈ ಸಿನಿಮಾ ನಿರ್ಮಾಣ ಆಗಲಿದೆ. ಜಿವಿ ಪ್ರಕಾಶ್​ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

ಇದನ್ನೂ ಓದಿ
Image
Rashmika Mandanna: ಎದೆ ಮೇಲೆ ಆಟೋಗ್ರಾಫ್​ ಹಾಕಿ ಅಂತ ಹಠ ಹಿಡಿದ ರಶ್ಮಿಕಾ ಮಂದಣ್ಣ ಅಭಿಮಾನಿ; ಮುಂದೇನಾಯ್ತು?
Image
Rashmika Mandanna: ‘ಇಂದು ನಾನೇ ಗೋಲ್ಡನ್​ ಗರ್ಲ್​’ ಅಂತ ಪೋಸ್​ ನೀಡಿದ ರಶ್ಮಿಕಾ ಮಂದಣ್ಣ; ಆದ್ರೆ ಜನ ಹೇಳಿದ್ದೇನು?
Image
Rashmika Mandanna: ಬಾಲಿವುಡ್​ ಸೇರಿದ ರಶ್ಮಿಕಾ ಮಂದಣ್ಣ ಹೊಸ ಅವತಾರ ಹೇಗಿದೆ ನೋಡಿ; ಫೋಟೋ ವೈರಲ್​
Image
Rashmika Mandanna: ಸೆಲ್ಫಿ ಕೇಳಿದ ಅಭಿಮಾನಿಗಳ ಜತೆ ರಶ್ಮಿಕಾ ಮಂದಣ್ಣ ನಡೆದುಕೊಂಡಿದ್ದು ಹೇಗೆ? ವಿಡಿಯೋ ವೈರಲ್​

ಇದನ್ನೂ ಓದಿ: ‘ಮನೆ ಕೆಲಸದವರ ಕಾಲಿಗೂ ನಮಸ್ಕಾರ ಮಾಡ್ತೀನಿ’: ಕಲಿತ ಸಂಸ್ಕಾರದ ಬಗ್ಗೆ ರಶ್ಮಿಕಾ ಮಂದಣ್ಣ ಮಾತು

ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಇಟ್ಟಿಲ್ಲ. ವೆಂಕಿ ಕುದುಮುಲ ಅವರು ನಿರ್ದೇಶನ ಮಾಡುತ್ತಿದ್ದಾರೆ. ತೆಲುಗು ಚಿತ್ರರಂಗದ ಸ್ಟಾರ್​ ನಿರ್ದೇಶಕರಾದ ಗೋಪಿಚಂದ್​ ಮಲಿನೇನಿ, ಹನು ರಾಘವಪುಡಿ ಮುಂತಾದವರು ಕೂಡ ಈ ಸಿನಿಮಾದ ಮುಹೂರ್ತ ಸಮಾರಂಭಕ್ಕೆ ಆಗಮಿಸಿದ್ದಾರೆ. ‘ಮೆಗಾ ಸ್ಟಾರ್​’ ಚಿರಂಜೀವಿ ಅವರು ಮೊದಲ ದೃಶ್ಯಕ್ಕೆ ಕ್ಲ್ಯಾಪ್​ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದ್ದಾರೆ.

ಇದನ್ನೂ ಓದಿ: Rashmika Mandanna: ರಶ್ಮಿಕಾ ನಟನೆ ಬಗ್ಗೆ ತಂದೆ-ತಾಯಿಗೆ ಹೆಮ್ಮೆ ಇಲ್ವಾ? ಸಂದರ್ಶನದಲ್ಲಿ ಬಹಿರಂಗ ಆಯ್ತು ವಿಷಯ

ರಶ್ಮಿಕಾ ಮಂದಣ್ಣ ಅವರು ಪ್ಯಾನ್​ ಇಂಡಿಯಾ ಹೀರೋಯಿನ್​ ಆಗಿ ಮಿಂಚುತ್ತಿದ್ದಾರೆ. ‘ಪುಷ್ಪ’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ಅವರ ಖ್ಯಾತಿ ಹೆಚ್ಚಿತು. ಈಗ ಅವರು ‘ಪುಷ್ಪ 2’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅದರ ಜೊತೆಗೆ ಹಿಂದಿಯ ‘ಅನಿಮಲ್​’ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಈ ಎಲ್ಲ ಸಿನಿಮಾಗಳ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ.

ಸಿದ್ದಾರ್ಥ್​ ಮಲ್ಹೋತ್ರಾ ಜೊತೆ ರಶ್ಮಿಕಾ ಮಂದಣ್ಣ ನಟಿಸಿದ ‘ಮಿಷನ್​ ಮಜ್ನು’ ಸಿನಿಮಾ ಈ ವರ್ಷ ಆರಂಭದಲ್ಲೇ ಒಟಿಟಿಯಲ್ಲಿ ರಿಲೀಸ್​ ಆಗಿ ಜನಮೆಚ್ಚುಗೆ ಪಡೆದುಕೊಂಡಿತು. ಅದರ ಬೆನ್ನಲ್ಲೇ ಅವರಿಗೆ ಹೊಸ ಹೊಸ ಅವಕಾಶಗಳು ಸಿಗುತ್ತಿವೆ. ಆ ಮೂಲಕ 2023ರ ವರ್ಷ ಅವರಿಗೆ ಸಖತ್​ ಆಶಾದಾಯಕವಾಗಿದೆ.

​ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು