ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಬಗ್ಗೆ ಹರಿದಾಡಿದ್ದು ಸುಳ್ಳು ಸುದ್ದಿ; ಆ ಬಗ್ಗೆ ಸಿಕ್ತು ಸ್ಪಷ್ಟನೆ
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ‘ಗೀತ ಗೋವಿಂದಂ’ ಹಾಗೂ ‘ಡಿಯರ್ ಕಾಮ್ರೇಡ್’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದರು. ಇತ್ತೀಚೆಗೆ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಬಗ್ಗೆ ಹೊಸ ವದಂತಿ ಹುಟ್ಟಿತ್ತು. ಈ ಬಗ್ಗೆ ಸ್ಪಷ್ಟನೆ ಸಿಕ್ಕಿದೆ.

ರಶ್ಮಿಕಾ ಮಂದಣ್ಣ (Rashmika Mandanna) ಅವರು ಸ್ಟಾರ್ ನಟಿಯಾಗಿ ಹೊರಹೊಮ್ಮಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರ ಬಗ್ಗೆ ಹರಿದಾಡುವ ಸುದ್ದಿಗಳು ಒಂದೆರಡಲ್ಲ. ತಮ್ಮ ಬಗ್ಗೆ ಹುಟ್ಟಿಕೊಂಡ ಎಲ್ಲ ವದಂತಿಗಳಿಗೂ ರಶ್ಮಿಕಾ ಸ್ಪಷ್ಟನೆ ನೀಡುವುದಿಲ್ಲ. ಈಗ ರಶ್ಮಿಕಾ ಮಂದಣ್ಣ ಬಗ್ಗೆ ಹೊಸ ಗಾಸಿಪ್ ಹಬ್ಬಿದೆ. ಈ ವಿಚಾರಕ್ಕೆ ಸಂಬಂಧಿಸಿ ರಶ್ಮಿಕಾ ಆಪ್ತ ಮೂಲಗಳು ಸ್ಪಷ್ಟನೆ ನೀಡಿವೆ ಎನ್ನಲಾಗುತ್ತಿದೆ.
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ‘ಗೀತ ಗೋವಿಂದಂ’ ಹಾಗೂ ‘ಡಿಯರ್ ಕಾಮ್ರೇಡ್’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಪೈಕಿ ‘ಗೀತ ಗೋವಿಂದಂ’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಇವರ ನಡುವೆ ಪ್ರೀತಿ ಇದೆ ಎನ್ನುವ ವದಂತಿ ಕೂಡ ಹರಿದಾಡಿತು. ಈ ಬಗ್ಗೆ ಈಗಾಗಲೇ ಇವರಿಬ್ಬರೂ ಸ್ಪಷ್ಟನೆ ಕೊಟ್ಟಿದ್ದಾರೆ. ಈ ಮಧ್ಯೆ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಬಗ್ಗೆ ಹೊಸ ವದಂತಿ ಹುಟ್ಟಿತ್ತು. ಈ ಬಗ್ಗೆ ಸ್ಪಷ್ಟನೆ ಸಿಕ್ಕಿದೆ.
ವಿಜಯ್ ದೇವರಕೊಂಡ ಅವರು ‘ಜೆಜಿಎಂ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಪುರಿ ಜಗನ್ನಾಥ್ ಅವರು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ‘ಲೈಗರ್’ ಸಿನಿಮಾ ಕೆಲಸಗಳು ಪ್ರಗತಿಯಲ್ಲಿರುವಾಗಲೇ ಇವರ ಕಾಂಬಿನೇಷನ್ನ ಮತ್ತೊಂದು ಸಿನಿಮಾ ಘೋಷಣೆ ಆಗಿದೆ. ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಅವರು ವಿಶೇಷ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಇದು ಸುಳ್ಳು ಎನ್ನುತ್ತಿವೆ ಆಪ್ತ ಮೂಲಗಳು.
ಇದನ್ನೂ ಓದಿ: ರಶ್ಮಿಕಾ ಮಂದಣ್ಣ ತೆಕ್ಕೆಗೆ ಮತ್ತೊಂದು ಬಾಲಿವುಡ್ ಸಿನಿಮಾ; ಸ್ಟಾರ್ ನಟನ ಜತೆ ನಟಿಸೋ ಅವಕಾಶ
ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಅನೇಕ ಬಾರಿ ಒಟ್ಟಿಗೆ ಕಾಣಿಸಿಕೊಂಡಿದ್ದಿದೆ. ಆದರೆ, ಇತ್ತೀಚೆಗೆ ಇವರು ಅಷ್ಟಾಗಿ ಒಟ್ಟಾಗಿ ಕಾಣಿಸುತ್ತಿಲ್ಲ. ಇವರಿಬ್ಬರ ನಡುವೆ ಯಾವುದೂ ಸರಿ ಇಲ್ಲ ಎನ್ನುವ ಮಾತುಗಳೂ ಕೇಳಿ ಬಂದಿವೆ. ರಶ್ಮಿಕಾ ಮಂದಣ್ಣ ಅವರು ಬೇಡಿಕೆಯ ನಟಿ ಆಗಿದ್ದಾರೆ. ಇಂತಹ ಸಂದರ್ಭದಲ್ಲಿ ವಿಶೇಷ ಹಾಡಿನಲ್ಲಿ ಕಾಣಿಸಿಕೊಳ್ಳುವುದು ಅಷ್ಟು ಸರಿ ಅಲ್ಲ ಎಂಬುದು ಅವರ ಅಭಿಪ್ರಾಯ. ಈ ಕಾರಣಕ್ಕೆ ರಶ್ಮಿಕಾ ಈ ಆಫರ್ ರಿಜೆಕ್ಟ್ ಮಾಡಿದ್ದಾರೆ ಎಂದೂ ಹೇಳಲಾಗುತ್ತಿದೆ.








