AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳಿನ ಮತ್ತೊಬ್ಬ ಸೂಪರ್​ ಸ್ಟಾರ್​ಗೆ ರಶ್ಮಿಕಾ ಮಂದಣ್ಣ ನಾಯಕಿ

Rashmika Mandanna: ಬಾಲಿವುಡ್​ನಲ್ಲಿ ಬೇಡಿಕೆಯ ನಟಿಯಾಗುವತ್ತ ದಾಪುಗಾಲು ಇಡುತ್ತಿರುವ ರಶ್ಮಿಕಾ ಮಂದಣ್ಣ ತಮಿಳಿನ ಸ್ಟಾರ್ ನಟರೊಟ್ಟಿಗೆ ನಟಿಸುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

ತಮಿಳಿನ ಮತ್ತೊಬ್ಬ ಸೂಪರ್​ ಸ್ಟಾರ್​ಗೆ ರಶ್ಮಿಕಾ ಮಂದಣ್ಣ ನಾಯಕಿ
ರಶ್ಮಿಕಾ ಮಂದಣ್ಣ
ಮಂಜುನಾಥ ಸಿ.
|

Updated on: Aug 06, 2023 | 10:41 PM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಈಗ ಪ್ಯಾನ್ ಇಂಡಿಯಾ (Pan India) ನಟಿಯಾಗಿದ್ದಾರೆ. ಟಾಲಿವುಡ್​ನಲ್ಲಿ ಮಿರಿ-ಮಿರಿ ಮಿಂಚಿದ ರಶ್ಮಿಕಾ ಈಗ ಬಾಲಿವುಡ್​ ಕಡೆಗೆ ಗಮನ ಹರಿಸಿದ್ದಾರೆ. ಸಾಲು-ಸಾಲು ಹಿಂದಿ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿರುವ ರಶ್ಮಿಕಾ ಆಗಾಗ್ಗೆ ದಕ್ಷಿಣ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ. ಇದೀಗ ತಮಿಳಿನ ಸ್ಟಾರ್ ನಟರೊಬ್ಬರ ಸಿನಿಮಾದಲ್ಲಿ ನಟಿಸುವ ಅವಕಾಶ ರಶ್ಮಿಕಾ ಮಂದಣ್ಣಗೆ ಒದಗಿ ಬಂದಿದೆ. ಮಾತುಕತೆಯೆಲ್ಲ ಪೂರ್ಣಗೊಂಡಿದ್ದು ಕೆಲವೇ ದಿನಗಳಲ್ಲಿ ಚಿತ್ರೀಕರಣ ಶುರುವಾಗಲಿದೆ ಎನ್ನಲಾಗುತ್ತಿದೆ.

ಸ್ಟಾರ್ ನಟ ಚಿಯಾನ್ ವಿಕ್ರಂರ ಹೊಸ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಲಿದ್ದಾರೆ. ಈ ಸಿನಿಮಾದಲ್ಲಿ ವಿಜಯ್ ಸೇತುಪತಿ ಸಹ ನಟಿಸಲಿದ್ದು, ಇತ್ತೀಚಿನ ಸೂಪರ್ ಹಿಟ್ ಮಲಯಾಳಂ ಸಿನಿಮಾ ‘2018’ ಅನ್ನು ನಿರ್ದೇಶಿಸಿರುವ ಜೂಡ್ ಆಂಟೊನಿ ಜೋಸೆಫ್ ನಿರ್ದೇಶನ ಮಾಡಲಿದ್ದಾರೆ. ಸಿನಿಮಾಕ್ಕೆ ಬಂಡವಾಳ ತೊಡಗಿಸುತ್ತಿರುವುದು ತಮಿಳಿನ ದೊಡ್ಡ ನಿರ್ಮಾಣ ಸಂಸ್ಥೆ ಲೈಕಾ.

ಚಿಯಾನ್ ವಿಕ್ರಂ, ರಶ್ಮಿಕಾ ಹಾಗೂ ವಿಜಯ್ ಅವರೊಟ್ಟಿಗೆ ನಿರ್ಮಾಣ ಸಂಸ್ಥೆ ಮಾತುಕತೆ ನಡೆಸಿದ್ದು, ಮೂವರ ಪಡೆದುಕೊಳ್ಳಲಾಗಿದೆ ಎನ್ನಲಾಗಿದೆ. ಭಿನ್ನ ವ್ಯಕ್ತಿಗಳಿರುವ ವ್ಯಕ್ತಿಯೊಬ್ಬನಿಗೆ ಸಂಬಂಧಿಸಿದ ಕತೆಯನ್ನು ಸಿನಿಮಾ ಒಳಗೊಂಡಿರಲಿದೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಇನ್ನಷ್ಟೆ ಖಾತ್ರಿ ಆಗಬೇಕಿದೆ. ಸಿನಿಮಾವನ್ನು ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಲೈಕಾ ಪ್ರೊಡಕ್ಷನ್ ಹೌಸ್ ಘೋಷಣೆ ಮಾಡಲಿದೆ.

ಇದನ್ನೂ ಓದಿ:ಶಾರುಖ್​ ಖಾನ್​ ಜೊತೆ ತೆರೆ ಹಂಚಿಕೊಂಡ ರಶ್ಮಿಕಾ ಮಂದಣ್ಣ; ಸಿಕ್ತು ಸೂಪರ್​ ಅವಕಾಶ

ಜೂಡ್ ಆಂಟೊನಿ, ‘2018’ ಸಿನಿಮಾವನ್ನು ನಿರ್ದೇಶನ ಮಾಡಿದ್ದರು. ಕಡಿಮೆ ಬಜೆಟ್​ನಲ್ಲಿ ಉತ್ತಮ ಗುಣಮಟ್ಟದ ಸಿನಿಮಾವನ್ನು ಮಾಡಿದ್ದ ಜೂಡ್ ಆಂಟೊನಿಗೆ ಪ್ರಶಂಸೆಗಳ ಸುರಿಮಳೆಯನ್ನೇ ಸುರಿಸಲಾಗಿತ್ತು. ‘2018’ ಮಲಯಾಳಂನ ಈವರೆಗಿನ ಸೂಪರ್ ಡೂಪರ್ ಹಿಟ್ ಸಿನಿಮಾ ಎನಿಸಿಕೊಂಡಿತು. ‘ಪುಲಿಮುರುಗನ್’ ಸಿನಿಮಾದ ಕಲೆಕ್ಷನ್ ದಾಖಲೆಯನ್ನು ಚಿಂದಿ ಉಡಾಯಿಸಿ ಗಳಿಕೆಯಲ್ಲಿ ಹೊಸ ದಾಖಲೆಯನ್ನು ‘2018’ ಬರೆಯಿತು. ಒಳ್ಳೆಯ ನಟರೂ ಆಗಿರುವ ಜೂಡ್ ಆಂಟೊನಿ ‘ಪ್ರೇಮಂ’ ಸೇರಿದಂತೆ ಹಲವು ಮಲಯಾಳಂ ಸಿನಿಮಾಗಳಲ್ಲಿ ಸಣ್ಣ-ಪುಟ್ಟ ಪಾತ್ರಗಳಲ್ಲಿ ನಟಿಸಿದ್ದಾರೆ.

ಚಿಯಾನ್ ವಿಕ್ರಂ ‘ತೂಂಗಾಲಂ’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪಾ ರಂಜಿತ್ ನಿರ್ದೇಶಿಸುತ್ತಿರುವ ಈ ಸಿನಿಮಾ ತನ್ನ ಪೋಸ್ಟರ್, ಟೀಸರ್​ನಿಂದಾಗಿ ಈಗಾಗಲೇ ಗಮನ ಸೆಳೆದಿದೆ. ಅದರ ಜೊತೆಗೆ ತೆಲುಗು ಸಿನಿಮಾ ಒಂದರಲ್ಲಿ ವಿಲನ್ ಪಾತ್ರದಲ್ಲಿಯೂ ವಿಕ್ರಂ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ‘ಧೃವ ನಚ್ಚತಿರಮ್’ ಹೆಸರಿನ ಸಿನಿಮಾದಲ್ಲಿ ಚಿಯಾನ್ ನಟಿಸಿದ್ದು ಆ ಸಿನಿಮಾ ಸಹ ಶೀಘ್ರವೇ ಬಿಡುಗಡೆ ಆಗಲಿದೆ.

ಇನ್ನು ನಟಿ ರಶ್ಮಿಕಾ, ರಣ್​ಬೀರ್ ಕಪೂರ್ ಜೊತೆಗೆ ‘ಅನಿಮಲ್’ ಸಿನಿಮಾದಲ್ಲಿ ನಟಿಸಿದ್ದು, ಚಿತ್ರೀಕರಣ ಮುಗಿಸಿದ್ದಾರೆ. ಟೈಗರ್ ಶ್ರಾಫ್ ಜೊತೆಗೆ ಹೊಸ ಸಿನಿಮಾದಲ್ಲಿ ನಟಿಸಲಿದ್ದಾರೆ. ತೆಲುಗಿನಲ್ಲಿ ‘ಪುಷ್ಪ 2’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ತಮಿಳಿನಲ್ಲಿಯೂ ಒಂದು ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್