AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ರಶ್ಮಿಕಾ ನಟನೆ ಬಗ್ಗೆ ತಂದೆ-ತಾಯಿಗೆ ಹೆಮ್ಮೆ ಇಲ್ವಾ? ಸಂದರ್ಶನದಲ್ಲಿ ಬಹಿರಂಗ ಆಯ್ತು ವಿಷಯ

Rashmika Mandanna Family: ‘ಪಾಲಕರು ನನ್ನ ಬಗ್ಗೆ ನಿಜಕ್ಕೂ ಹೆಮ್ಮೆಪಡಬೇಕು ಎಂದರೆ ನಾನು ಇನ್ನೂ ಸಾಧನೆ ಮಾಡಬೇಕು’ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಾರೆ. ಈ ಕುರಿತು ಇಲ್ಲಿದೆ ವಿವರ..

Rashmika Mandanna: ರಶ್ಮಿಕಾ ನಟನೆ ಬಗ್ಗೆ ತಂದೆ-ತಾಯಿಗೆ ಹೆಮ್ಮೆ ಇಲ್ವಾ? ಸಂದರ್ಶನದಲ್ಲಿ ಬಹಿರಂಗ ಆಯ್ತು ವಿಷಯ
ರಶ್ಮಿಕಾ ಮಂದಣ್ಣ
ಮದನ್​ ಕುಮಾರ್​
|

Updated on:Mar 23, 2023 | 11:18 AM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಸ್ಟಾರ್​ ಹೀರೋಯಿನ್​ ಆಗಿ ಮಿಂಚುತ್ತಿದ್ದಾರೆ. ದೇಶಾದ್ಯಂತ ಅವರ ಖ್ಯಾತಿ ಹಬ್ಬಿದೆ. ಹಲವು ಸೂಪರ್​ ಹಿಟ್​ ಸಿನಿಮಾಗಳನ್ನು ಅವರು ನೀಡಿದ್ದಾರೆ. ದಕ್ಷಿಣ ಭಾರತದ ಅನೇಕ ಸ್ಟಾರ್​ ಹೀರೋಗಳ ಜೊತೆ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಈಗ ಅವರ ಕೈಯಲ್ಲಿ ‘ಪುಷ್ಪ 2’ (Pushpa 2), ‘ಅನಿಮಲ್​’ ಮುಂತಾದ ಹೈವೋಲ್ಟೇಜ್​ ಸಿನಿಮಾಗಳಿವೆ. ಇಷ್ಟೆಲ್ಲ ಸಾಧನೆ ಮಾಡಿದರೂ ಕೂಡ ಅವರ ತಂದೆ-ತಾಯಿಗೆ ಮಗಳ ನಟನೆ ಬಗ್ಗೆ ಹೆಮ್ಮೆ ಇಲ್ಲವಂತೆ. ಈ ವಿಚಾರದ ಬಗ್ಗೆ ಸ್ವತಃ ರಶ್ಮಿಕಾ ಮಂದಣ್ಣ ಮಾತನಾಡಿದ್ದಾರೆ. ‘ಬಜಾರ್​ ಇಂಡಿಯಾ’ ನಡೆಸಿದ ಸಂದರ್ಶನದಲ್ಲಿ ಅವರು ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ.

ರಶ್ಮಿಕಾ ಮಂದಣ್ಣ ಅವರ ತಾಯಿ ಸುಮನ್​ ಮಂದಣ್ಣ ಹಾಗೂ ತಂದೆ ಮದನ್​ ಮಂದಣ್ಣ. ಇವರದ್ದು ಸಿನಿಮಾ ಹಿನ್ನೆಲೆಯ ಕುಟುಂಬ ಅಲ್ಲ. ‘ನಿಮ್ಮ ನಟನೆ ಬಗ್ಗೆ ತಂದೆ-ತಾಯಿಗೆ ತುಂಬ ಹೆಮ್ಮೆ ಇದೆಯಾ?’ ಎಂದು ಕೇಳಿದ ಪ್ರಶ್ನೆಗೆ ರಶ್ಮಿಕಾ ಮಂದಣ್ಣ ಉತ್ತರ ನೀಡಿದ್ದಾರೆ. ‘ಹೆಮ್ಮೆ ಇಲ್ಲ. ಯಾಕೆಂದರೆ ಅವರು ಚಿತ್ರರಂಗದಿಂದ ಅಂತರ ಕಾಯ್ದುಕೊಂಡಿದ್ದಾರೆ. ಮಗಳು ಏನು ಮಾಡುತ್ತಿದ್ದಾಳೆ ಎಂಬುದು ಅವರಿಗೆ ಅರ್ಥ ಆಗುವುದಿಲ್ಲ. ಆದರೆ ನಾನು ಪ್ರಶಸ್ತಿ ಗೆದ್ದಾಗ ಅವರಿಗೆ ತುಂಬ ಹೆಮ್ಮೆ ಆಗುತ್ತದೆ. ಅವರು ನನ್ನ ಬಗ್ಗೆ ನಿಜಕ್ಕೂ ಹೆಮ್ಮೆಪಡಬೇಕು ಎಂದರೆ ನಾನು ಇನ್ನೂ ಸಾಧನೆ ಮಾಡಬೇಕು’ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಾರೆ.

ಇದನ್ನೂ ಓದಿ: IPL 2023: 4 ವರ್ಷಗಳ ಬಳಿಕ ಐಪಿಎಲ್​ನಲ್ಲಿ ಉದ್ಘಾಟನಾ ಸಮಾರಂಭ: ನೃತ್ಯ ಮಾಡಲಿದ್ದಾರೆ ರಶ್ಮಿಕಾ ಮಂದಣ್ಣ?

ಇದನ್ನೂ ಓದಿ
Image
Rashmika Mandanna: ಎದೆ ಮೇಲೆ ಆಟೋಗ್ರಾಫ್​ ಹಾಕಿ ಅಂತ ಹಠ ಹಿಡಿದ ರಶ್ಮಿಕಾ ಮಂದಣ್ಣ ಅಭಿಮಾನಿ; ಮುಂದೇನಾಯ್ತು?
Image
Rashmika Mandanna: ‘ಇಂದು ನಾನೇ ಗೋಲ್ಡನ್​ ಗರ್ಲ್​’ ಅಂತ ಪೋಸ್​ ನೀಡಿದ ರಶ್ಮಿಕಾ ಮಂದಣ್ಣ; ಆದ್ರೆ ಜನ ಹೇಳಿದ್ದೇನು?
Image
Rashmika Mandanna: ಬಾಲಿವುಡ್​ ಸೇರಿದ ರಶ್ಮಿಕಾ ಮಂದಣ್ಣ ಹೊಸ ಅವತಾರ ಹೇಗಿದೆ ನೋಡಿ; ಫೋಟೋ ವೈರಲ್​
Image
Rashmika Mandanna: ಸೆಲ್ಫಿ ಕೇಳಿದ ಅಭಿಮಾನಿಗಳ ಜತೆ ರಶ್ಮಿಕಾ ಮಂದಣ್ಣ ನಡೆದುಕೊಂಡಿದ್ದು ಹೇಗೆ? ವಿಡಿಯೋ ವೈರಲ್​

‘ಯಾವುದೇ ಕೊರತೆ ಆಗದ ರೀತಿಯಲ್ಲಿ ನನ್ನ ತಂದೆ-ತಾಯಿ ನನ್ನನ್ನು ಬೆಳೆಸಿದರು. ಕೇಳಿದ್ದೆಲ್ಲವನ್ನೂ ಅವರು ನನಗೆ ನೀಡಿದರು. ಅದಕ್ಕೆ ನಾನು ಚಿರಋಣಿ. ಈಗ ಅವರನ್ನು ಚೆನ್ನಾಗಿ ನೋಡಿಕೊಳ್ಳುವ ಕರ್ತವ್ಯ ನನ್ನದು’ ಎಂದಿದ್ದಾರೆ ರಶ್ಮಿಕಾ ಮಂದಣ್ಣ.

ರಶ್ಮಿಕಾ ಮಂದಣ್ಣ ಲೈಫ್​ ಸ್ಟೈಲ್​ ಹೀಗಿದೆ..

‘ನನಗೆ ಚಿಕ್ಕ ವಿಷಯಗಳು ಕೂಡ ಮುಖ್ಯವಾಗುತ್ತವೆ. ಬೆಳಗ್ಗೆ ಎದ್ದ ಬಳಿಕ ನಾನು ಸಾಕು ಪ್ರಾಣಿಗಳ ಜೊತೆ ಹಾಗೂ ಸ್ನೇಹಿತರ ಜೊತೆ ಸಮಯ ಕಳೆಯುತ್ತೇನೆ. ಅದರಿಂದ ನನಗೆ ಖುಷಿ ಸಿಗುತ್ತದೆ. ಮಾತುಗಳಿಗೆ ತುಂಬ ಶಕ್ತಿ ಇದೆ. ಅದು ಒಬ್ಬರಿಗೆ ಪೂರಕವೂ ಆಗಬಹುದು ಅಥವಾ ಮಾರಕವೂ ಆಗಬಹುದು. ಅದಕ್ಕಾಗಿ.. ಕೆಲವರು ಏನಾದರೂ ಹೇಳಿದಾಗ ನನ್ನ ಮೇಲೆ ಪರಿಣಾಮ ಬೀರುತ್ತದೆ. ಡೈರಿಯಲ್ಲಿ ನಾನು ಎಲ್ಲ ಚಿಕ್ಕ ಚಿಕ್ಕ ವಿಷಯಗಳನ್ನೂ ಬರೆದಿಡುತ್ತೇನೆ’ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಾರೆ.

ಇದನ್ನೂ ಓದಿ: ಇನ್ಮುಂದೆ ‘ಸಾಮಿ ಸಾಮಿ..’ ಸ್ಟೆಪ್ ಮಾಡದಿರಲು ನಿರ್ಧರಿಸಿದ ರಶ್ಮಿಕಾ ಮಂದಣ್ಣ; ಕಾರಣ ತಿಳಿಸಿದ ನಟಿ

ಎಲ್ಲರಿಗೂ ಗೌರವ ನೀಡುವ ರಶ್ಮಿಕಾ:

‘ಮನೆಗೆ ಹೋದ ಬಳಿಕ ಗೌರವದಿಂದ ಎಲ್ಲರ ಕಾಲಿಗೂ ನಮಸ್ಕರಿಸುವ ಅಭ್ಯಾಸ ನನಗಿದೆ. ಮನೆ ಕೆಲಸದವರ ಕಾಲಿಗೂ ನಮಸ್ಕಾರ ಮಾಡುತ್ತೇನೆ. ಯಾಕೆಂದರೆ ನಾನು ಬೇಧ-ಭಾವ ಮಾಡುವುದಿಲ್ಲ. ನಾನು ಎಲ್ಲರನ್ನೂ ಗೌರವಿಸುತ್ತೇನೆ. ಅದು ನನ್ನ ವ್ಯಕ್ತಿತ್ವ’ ಎಂದಿದ್ದಾರೆ ರಶ್ಮಿಕಾ ಮಂದಣ್ಣ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:18 am, Thu, 23 March 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ