AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಜಡೆ ಜಗಳಕ್ಕೆ ಅವಕಾಶವೇ ಕೊಡಲಿಲ್ಲ ರಶ್ಮಿಕಾ ಮಂದಣ್ಣ; ಐಶ್ವರ್ಯಾ ರಾಜೇಶ್ ಜೊತೆಗಿನ ಕಿರಿಕ್​ ಅಂತ್ಯ

Aishwarya Rajesh: ಐಶ್ವರ್ಯಾ ರಾಜೇಶ್​ ನೀಡಿದ ಸ್ಪಷ್ಟನೆ ಈಗ ರಶ್ಮಿಕಾ ಮಂದಣ್ಣ ಅವರ ಗಮನಕ್ಕೆ ಬಂದಿದೆ. ದೊಡ್ಡದಾಗಿ ಬೆಳೆಯಬಹುದಾಗಿದ್ದ ಜಗಳವನ್ನು ಅವರು ಅಂತ್ಯಗೊಳಿಸಿದ್ದಾರೆ.

Rashmika Mandanna: ಜಡೆ ಜಗಳಕ್ಕೆ ಅವಕಾಶವೇ ಕೊಡಲಿಲ್ಲ ರಶ್ಮಿಕಾ ಮಂದಣ್ಣ; ಐಶ್ವರ್ಯಾ ರಾಜೇಶ್ ಜೊತೆಗಿನ ಕಿರಿಕ್​ ಅಂತ್ಯ
ಐಶ್ವರ್ಯಾ ರಾಜೇಶ್, ರಶ್ಮಿಕಾ ಮಂದಣ್ಣ
ಮದನ್​ ಕುಮಾರ್​
|

Updated on: May 19, 2023 | 11:05 AM

Share

ಖ್ಯಾತ ನಟಿ ಐಶ್ವರ್ಯಾ ರಾಜೇಶ್ (Aishwarya Rajesh)​ ಅವರು ಹಲವಾರು ಸಿನಿಮಾಗಳಲ್ಲಿ ನಟಿಸಿ ಜನಪ್ರಿಯತೆ ಪಡೆದಿದ್ದಾರೆ. ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಅವರು ಸಕ್ರಿಯರಾಗಿದ್ದಾರೆ. ಕೆಲವೇ ದಿನಗಳ ಹಿಂದೆ ರಶ್ಮಿಕಾ ಮಂದಣ್ಣ ಬಗ್ಗೆ ಅವರು ಆಡಿದ ಮಾತುಗಳು ವಿವಾದಕ್ಕೆ ಎಡೆಮಾಡಿಕೊಟ್ಟಿದ್ದವು. ‘ಪುಷ್ಪ ಸಿನಿಮಾದಲ್ಲಿನ ಶ್ರೀವಲ್ಲಿ ಪಾತ್ರವನ್ನು ರಶ್ಮಿಕಾ ಮಂದಣ್ಣ (Rashmika Mandanna) ಅವರಿಗಿಂತ ನಾನೇ ಚೆನ್ನಾಗಿ ಮಾಡುತ್ತಿದ್ದೆ’ ಎಂದು ಐಶ್ವರ್ಯಾ ರಾಜೇಶ್​ ಹೇಳಿದ್ದರು ಎಂದು ಸುದ್ದಿ ಆಗಿತ್ತು. ಆದರೆ ತಾವು ಆ ರೀತಿ ಹೇಳಿಯೇ ಇಲ್ಲ ಎಂದು ಐಶ್ವರ್ಯಾ ರಾಜೇಶ್​ ಸ್ಪಷ್ಟನೆ ನೀಡಿದ್ದರು. ಅದು ಈಗ ರಶ್ಮಿಕಾ ಮಂದಣ್ಣ ಅವರ ಗಮನಕ್ಕೆ ಬಂದಿದೆ. ಅದಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ದೊಡ್ಡದಾಗಿ ಬೆಳೆಯಬಹುದಾಗಿದ್ದ ಜಗಳವನ್ನು ಅವರು ಅಂತ್ಯಗೊಳಿಸಿದ್ದಾರೆ. ಯಾವುದೇ ಕಿರಿಕ್​ಗೆ ಅವಕಾಶ ನೀಡದಂತೆ ಸ್ನೇಹದ ಹಸ್ತ ಚಾಚಿದ್ದಾರೆ.

‘ಹಾಯ್​ ಲವ್​.. ಈಗ ತಾನೇ ಇದನ್ನು ನೋಡಿದೆ. ವಿಷಯವೆಂದರೆ.. ನೀವು ಏನು ಹೇಳುತ್ತಿದ್ದೀರಿ ಎಂಬುದನ್ನು ನಾನು ಸಂಪೂರ್ಣವಾಗಿ ಅರ್ಥಮಾಡಿಕೊಂಡಿದ್ದೇನೆ. ನಾವು ಏನು ಎಂಬುದನ್ನು ವಿವರಿಸಬೇಕಾದ ಅವಶ್ಯಕತೆ ಇಲ್ಲ. ನಿಮಗೆ ತಿಳಿದಿರುವಂತೆ ನನಗೆ ನಿಮ್ಮ ಬಗ್ಗೆ ಪ್ರೀತಿ ಮತ್ತು ಗೌರವವಿದೆ. ನಿಮ್ಮ ‘ಫರ್ಹಾನಾ’ ಚಿತ್ರಕ್ಕೆ ಒಳ್ಳೆಯದಾಗಲಿ’ ಎಂದು ರಶ್ಮಿಕಾ ಮಂದಣ್ಣ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ
Image
Rashmika Mandanna: ಎದೆ ಮೇಲೆ ಆಟೋಗ್ರಾಫ್​ ಹಾಕಿ ಅಂತ ಹಠ ಹಿಡಿದ ರಶ್ಮಿಕಾ ಮಂದಣ್ಣ ಅಭಿಮಾನಿ; ಮುಂದೇನಾಯ್ತು?
Image
Rashmika Mandanna: ‘ಇಂದು ನಾನೇ ಗೋಲ್ಡನ್​ ಗರ್ಲ್​’ ಅಂತ ಪೋಸ್​ ನೀಡಿದ ರಶ್ಮಿಕಾ ಮಂದಣ್ಣ; ಆದ್ರೆ ಜನ ಹೇಳಿದ್ದೇನು?
Image
Rashmika Mandanna: ಬಾಲಿವುಡ್​ ಸೇರಿದ ರಶ್ಮಿಕಾ ಮಂದಣ್ಣ ಹೊಸ ಅವತಾರ ಹೇಗಿದೆ ನೋಡಿ; ಫೋಟೋ ವೈರಲ್​
Image
Rashmika Mandanna: ಸೆಲ್ಫಿ ಕೇಳಿದ ಅಭಿಮಾನಿಗಳ ಜತೆ ರಶ್ಮಿಕಾ ಮಂದಣ್ಣ ನಡೆದುಕೊಂಡಿದ್ದು ಹೇಗೆ? ವಿಡಿಯೋ ವೈರಲ್​

ಐಶ್ವರ್ಯಾ ರಾಜೇಶ್ ಸ್ಪಷ್ಟನೆಯಲ್ಲಿ ಏನಿತ್ತು?

ಸಂದರ್ಶನವೊಂದರಲ್ಲಿ ಐಶ್ವರ್ಯಾ ರಾಜೇಶ್ ಹೇಳಿದ ಮಾತನ್ನೇ ಇಟ್ಟುಕೊಂಡು ಸೋಶಿಯಲ್​ ಮೀಡಿಯಾದಲ್ಲಿ ಕೆಲವರು ಟ್ರೋಲ್​ ಮಾಡಿದ್ದರು. ಅದರ ಬೆನ್ನಲ್ಲೇ ಐಶ್ವರ್ಯಾ ರಾಜೇಶ್​ ಕಡೆಯಿಂದ ಸ್ಪಷ್ಟನೆ ಬಂತು. ‘ಕೆಲಸದ ಬಗ್ಗೆ ಮಾತನಾಡುವಾಗ, ತೆಲುಗು ಚಿತ್ರರಂಗದಲ್ಲಿ ನಾನು ಯಾವ ರೀತಿಯ ಪಾತ್ರಗಳನ್ನು ಮಾಡಲು ಬಯಸುತ್ತೇನೆ ಎಂದು ಇತ್ತೀಚೆಗೆ ಸಂದರ್ಶನವೊಂದರಲ್ಲಿ ನನ್ನನ್ನು ಕೇಳಲಾಯಿತು. ನಾನು ತೆಲುಗು ಚಿತ್ರರಂಗವನ್ನು ತುಂಬಾ ಇಷ್ಟಪಡುತ್ತೇನೆ ಮತ್ತು ನನಗೆ ಇಷ್ಟವಾಗುವ ಪಾತ್ರಗಳು ಸಿಕ್ಕರೆ ನಾನು ಖಂಡಿತವಾಗಿಯೂ ತೆಲುಗು ಚಿತ್ರಗಳನ್ನು ಮಾಡುತ್ತೇನೆ ಎಂದು ಉತ್ತರಿಸಿದೆ. ಒಂದು ಉದಾಹರಣೆಯನ್ನು ಹೇಳುವುದಾದರೆ, ಪುಷ್ಪದಲ್ಲಿನ ಶ್ರೀವಲ್ಲಿ ಪಾತ್ರವು ನನಗೆ ತುಂಬಾ ಇಷ್ಟವಾಯಿತು ಹಾಗೂ ಅಂತಹ ಪಾತ್ರಗಳು ನನಗೆ ಸರಿಹೊಂದುತ್ತವೆ ಅಂತ ನಾನು ತಿಳಿಸಿದೆ’ ಎಂದಿದ್ದರು ಐಶ್ವರ್ಯಾ ರಾಜೇಶ್​.

ಫರ್ಹಾನಾ; ಸಿನಿಮಾ ವಿವಾದ: ನಟಿ ಐಶ್ವರ್ಯಾ ರಾಜೇಶ್​ಗೆ ಪೊಲೀಸ್​ ಭದ್ರತೆ

‘ದುರದೃಷ್ಟವಶಾತ್, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಮತ್ತು ಚಿತ್ರದಲ್ಲಿ ನಟಿ ರಶ್ಮಿಕಾ ಮಂದಣ್ಣ ಅವರ ಅದ್ಭುತ ಕೆಲಸವನ್ನು ನಾನು ಅವಹೇಳನ ಮಾಡುತ್ತಿದ್ದೇನೆ ಎಂಬ ಭಾವನೆಯನ್ನು ಮೂಡಿಸುವ ರೀತಿಯಲ್ಲಿ ವರದಿ ಮಾಡಲಾಗುತ್ತಿದೆ. ಆ ಹೇಳಿಕೆಯಿಂದ ಉಂಟಾದ ಗೊಂದಲವನ್ನು ನಿವಾರಿಸಲು ಈ ಸ್ಪಷ್ಟನೆ ನೀಡುತ್ತಿದ್ದೇನೆ. ‘ಪುಷ್ಪ’ ಚಿತ್ರದಲ್ಲಿ ರಶ್ಮಿಕಾ ಅವರ ಕೆಲಸದ ಬಗ್ಗೆ ನನಗೆ ತುಂಬಾ ಅಭಿಮಾನವಿದೆ ಮತ್ತು ನನ್ನ ಎಲ್ಲಾ ಸಹ ನಟ-ನಟಿಯರ ಬಗ್ಗೆ ನನಗೆ ಅಪಾರ ಗೌರವವಿದೆ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ’ ಎಂದು ಐಶ್ವರ್ಯಾ ರಾಜೇಶ್​ ಅವರು ಹೇಳಿಕೆ ಬಿಡುಗಡೆ ಮಾಡಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು