ಖ್ಯಾತ ನಟಿ ಐಶ್ವರ್ಯಾ ರಾಜೇಶ್ (Aishwarya Rajesh) ಅವರು ಹಲವಾರು ಸಿನಿಮಾಗಳಲ್ಲಿ ನಟಿಸಿ ಜನಪ್ರಿಯತೆ ಪಡೆದಿದ್ದಾರೆ. ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಅವರು ಸಕ್ರಿಯರಾಗಿದ್ದಾರೆ. ಕೆಲವೇ ದಿನಗಳ ಹಿಂದೆ ರಶ್ಮಿಕಾ ಮಂದಣ್ಣ ಬಗ್ಗೆ ಅವರು ಆಡಿದ ಮಾತುಗಳು ವಿವಾದಕ್ಕೆ ಎಡೆಮಾಡಿಕೊಟ್ಟಿದ್ದವು. ‘ಪುಷ್ಪ ಸಿನಿಮಾದಲ್ಲಿನ ಶ್ರೀವಲ್ಲಿ ಪಾತ್ರವನ್ನು ರಶ್ಮಿಕಾ ಮಂದಣ್ಣ (Rashmika Mandanna) ಅವರಿಗಿಂತ ನಾನೇ ಚೆನ್ನಾಗಿ ಮಾಡುತ್ತಿದ್ದೆ’ ಎಂದು ಐಶ್ವರ್ಯಾ ರಾಜೇಶ್ ಹೇಳಿದ್ದರು ಎಂದು ಸುದ್ದಿ ಆಗಿತ್ತು. ಆದರೆ ತಾವು ಆ ರೀತಿ ಹೇಳಿಯೇ ಇಲ್ಲ ಎಂದು ಐಶ್ವರ್ಯಾ ರಾಜೇಶ್ ಸ್ಪಷ್ಟನೆ ನೀಡಿದ್ದರು. ಅದು ಈಗ ರಶ್ಮಿಕಾ ಮಂದಣ್ಣ ಅವರ ಗಮನಕ್ಕೆ ಬಂದಿದೆ. ಅದಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ದೊಡ್ಡದಾಗಿ ಬೆಳೆಯಬಹುದಾಗಿದ್ದ ಜಗಳವನ್ನು ಅವರು ಅಂತ್ಯಗೊಳಿಸಿದ್ದಾರೆ. ಯಾವುದೇ ಕಿರಿಕ್ಗೆ ಅವಕಾಶ ನೀಡದಂತೆ ಸ್ನೇಹದ ಹಸ್ತ ಚಾಚಿದ್ದಾರೆ.
‘ಹಾಯ್ ಲವ್.. ಈಗ ತಾನೇ ಇದನ್ನು ನೋಡಿದೆ. ವಿಷಯವೆಂದರೆ.. ನೀವು ಏನು ಹೇಳುತ್ತಿದ್ದೀರಿ ಎಂಬುದನ್ನು ನಾನು ಸಂಪೂರ್ಣವಾಗಿ ಅರ್ಥಮಾಡಿಕೊಂಡಿದ್ದೇನೆ. ನಾವು ಏನು ಎಂಬುದನ್ನು ವಿವರಿಸಬೇಕಾದ ಅವಶ್ಯಕತೆ ಇಲ್ಲ. ನಿಮಗೆ ತಿಳಿದಿರುವಂತೆ ನನಗೆ ನಿಮ್ಮ ಬಗ್ಗೆ ಪ್ರೀತಿ ಮತ್ತು ಗೌರವವಿದೆ. ನಿಮ್ಮ ‘ಫರ್ಹಾನಾ’ ಚಿತ್ರಕ್ಕೆ ಒಳ್ಳೆಯದಾಗಲಿ’ ಎಂದು ರಶ್ಮಿಕಾ ಮಂದಣ್ಣ ಟ್ವೀಟ್ ಮಾಡಿದ್ದಾರೆ.
Hi love.. just came across this.. the thing is – I perfectly understood what you meant and I wish there were no reasons for us to explain ourselves and as you know I only and only have love and respect for you.. and ones again all the bestest for your film Farhana love .. ??❤️
— Rashmika Mandanna (@iamRashmika) May 18, 2023
ಸಂದರ್ಶನವೊಂದರಲ್ಲಿ ಐಶ್ವರ್ಯಾ ರಾಜೇಶ್ ಹೇಳಿದ ಮಾತನ್ನೇ ಇಟ್ಟುಕೊಂಡು ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಟ್ರೋಲ್ ಮಾಡಿದ್ದರು. ಅದರ ಬೆನ್ನಲ್ಲೇ ಐಶ್ವರ್ಯಾ ರಾಜೇಶ್ ಕಡೆಯಿಂದ ಸ್ಪಷ್ಟನೆ ಬಂತು. ‘ಕೆಲಸದ ಬಗ್ಗೆ ಮಾತನಾಡುವಾಗ, ತೆಲುಗು ಚಿತ್ರರಂಗದಲ್ಲಿ ನಾನು ಯಾವ ರೀತಿಯ ಪಾತ್ರಗಳನ್ನು ಮಾಡಲು ಬಯಸುತ್ತೇನೆ ಎಂದು ಇತ್ತೀಚೆಗೆ ಸಂದರ್ಶನವೊಂದರಲ್ಲಿ ನನ್ನನ್ನು ಕೇಳಲಾಯಿತು. ನಾನು ತೆಲುಗು ಚಿತ್ರರಂಗವನ್ನು ತುಂಬಾ ಇಷ್ಟಪಡುತ್ತೇನೆ ಮತ್ತು ನನಗೆ ಇಷ್ಟವಾಗುವ ಪಾತ್ರಗಳು ಸಿಕ್ಕರೆ ನಾನು ಖಂಡಿತವಾಗಿಯೂ ತೆಲುಗು ಚಿತ್ರಗಳನ್ನು ಮಾಡುತ್ತೇನೆ ಎಂದು ಉತ್ತರಿಸಿದೆ. ಒಂದು ಉದಾಹರಣೆಯನ್ನು ಹೇಳುವುದಾದರೆ, ಪುಷ್ಪದಲ್ಲಿನ ಶ್ರೀವಲ್ಲಿ ಪಾತ್ರವು ನನಗೆ ತುಂಬಾ ಇಷ್ಟವಾಯಿತು ಹಾಗೂ ಅಂತಹ ಪಾತ್ರಗಳು ನನಗೆ ಸರಿಹೊಂದುತ್ತವೆ ಅಂತ ನಾನು ತಿಳಿಸಿದೆ’ ಎಂದಿದ್ದರು ಐಶ್ವರ್ಯಾ ರಾಜೇಶ್.
ಫರ್ಹಾನಾ; ಸಿನಿಮಾ ವಿವಾದ: ನಟಿ ಐಶ್ವರ್ಯಾ ರಾಜೇಶ್ಗೆ ಪೊಲೀಸ್ ಭದ್ರತೆ
‘ದುರದೃಷ್ಟವಶಾತ್, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಮತ್ತು ಚಿತ್ರದಲ್ಲಿ ನಟಿ ರಶ್ಮಿಕಾ ಮಂದಣ್ಣ ಅವರ ಅದ್ಭುತ ಕೆಲಸವನ್ನು ನಾನು ಅವಹೇಳನ ಮಾಡುತ್ತಿದ್ದೇನೆ ಎಂಬ ಭಾವನೆಯನ್ನು ಮೂಡಿಸುವ ರೀತಿಯಲ್ಲಿ ವರದಿ ಮಾಡಲಾಗುತ್ತಿದೆ. ಆ ಹೇಳಿಕೆಯಿಂದ ಉಂಟಾದ ಗೊಂದಲವನ್ನು ನಿವಾರಿಸಲು ಈ ಸ್ಪಷ್ಟನೆ ನೀಡುತ್ತಿದ್ದೇನೆ. ‘ಪುಷ್ಪ’ ಚಿತ್ರದಲ್ಲಿ ರಶ್ಮಿಕಾ ಅವರ ಕೆಲಸದ ಬಗ್ಗೆ ನನಗೆ ತುಂಬಾ ಅಭಿಮಾನವಿದೆ ಮತ್ತು ನನ್ನ ಎಲ್ಲಾ ಸಹ ನಟ-ನಟಿಯರ ಬಗ್ಗೆ ನನಗೆ ಅಪಾರ ಗೌರವವಿದೆ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ’ ಎಂದು ಐಶ್ವರ್ಯಾ ರಾಜೇಶ್ ಅವರು ಹೇಳಿಕೆ ಬಿಡುಗಡೆ ಮಾಡಿದ್ದರು.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.