AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇವರಕೊಂಡ ಜತೆ ಲಿಪ್​ ಲಾಕ್​ ಮಾಡಿ ಟ್ರೋಲ್​ ಆದಾಗ ಹಗಲು-ರಾತ್ರಿ ಕಣ್ಣೀರು ಸುರಿಸಿದ್ದೆ’: ರಶ್ಮಿಕಾ

Rashmika Mandanna: ಇದನ್ನೆಲ್ಲ ರಶ್ಮಿಕಾ ಮಂದಣ್ಣ ಅವರು ಕುಟುಂಬದವರ ಬಳಿಯೂ ಹೇಳಿಕೊಂಡಿರಲಿಲ್ಲ. ಮನೆಯವರಿಗೆ ತೊಂದರೆ ಕೊಡುವುದು ಬೇಡ ಎಂಬ ಕಾರಣಕ್ಕೆ ಎಲ್ಲ ನೋವನ್ನೂ ತಾವೊಬ್ಬರೇ ಅನುಭವಿಸಿದರು.

‘ದೇವರಕೊಂಡ ಜತೆ ಲಿಪ್​ ಲಾಕ್​ ಮಾಡಿ ಟ್ರೋಲ್​ ಆದಾಗ ಹಗಲು-ರಾತ್ರಿ ಕಣ್ಣೀರು ಸುರಿಸಿದ್ದೆ’: ರಶ್ಮಿಕಾ
ರಶ್ಮಿಕಾ ಮಂದಣ್ಣ
TV9 Web
| Edited By: |

Updated on:Oct 04, 2022 | 8:42 AM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಈಗ ನ್ಯಾಷನಲ್​ ಕ್ರಶ್​ ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುತ್ತಿದ್ದಾರೆ. ಅವರ ಕಾಲ್​ಶೀಟ್​ ಬೇಕು ಎಂದು ನಿರ್ಮಾಪಕರು ಸಾಲುಗಟ್ಟಿ ನಿಂತಿದ್ದಾರೆ. ದಕ್ಷಿಣ ಭಾರತದಿಂದ ಬಾಲಿವುಡ್​ ತನಕ ಅವರಿಗೆ ಸಖತ್​ ಡಿಮ್ಯಾಂಡ್​ ಇದೆ. ಕೆಲವು ಕಾರಣಗಳಿಂದ ಅವರನ್ನು ನೆಟ್ಟಿಗರು ಟ್ರೋಲ್​ (Troll) ಮಾಡುತ್ತಾರೆ. ಯಾವುದೇ ಟ್ರೋಲ್​ಗಳಿಗೆ ರಶ್ಮಿಕಾ ಈಗ ಜಗ್ಗುವುದಿಲ್ಲ. ಆದರೆ ಒಂದು ಕಾಲದಲ್ಲಿ ಪರಿಸ್ಥಿತಿ ಹೀಗೆ ಇರಲಿಲ್ಲ. ಲಿಪ್​ ಲಾಕ್​ ಕಾರಣಕ್ಕಾಗಿ ಅವರನ್ನು ಹಿಗ್ಗಾಮುಗ್ಗಾ ಟ್ರೋಲ್​ ಮಾಡಿದಾಗ ತುಂಬ ನೊಂದುಕೊಂಡಿದ್ದರು. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಆ ದಿನಗಳ ಕುರಿತು ರಶ್ಮಿಕಾ ಮಂದಣ್ಣ ಮಾತನಾಡಿದ್ದಾರೆ. ಅಂದಿನ ಸ್ಥಿತಿ ಹೇಗಿತ್ತು ಎಂಬುದನ್ನು ವಿವರಿಸಿದ್ದಾರೆ.

ರಶ್ಮಿಕಾ ಮಂದಣ್ಣ ಮತ್ತು ವಿಜಯ್​ ದೇವರಕೊಂಡ ಅವರು ‘ಗೀತಾ ಗೋವಿಂದಂ’ ಹಾಗೂ ‘ಡಿಯರ್​ ಕಾಮ್ರೇಡ್​’ ಸಿನಿಮಾಗಳಲ್ಲಿ ಜೊತೆಯಾಗಿ ನಟಿಸಿದರು. ಇಬ್ಬರ ನಡುವೆ ಉತ್ತಮ ಬಾಂಧವ್ಯ ಇದೆ. ತೆರೆ ಮೇಲೆ ಅವರಿಬ್ಬರ ಕೆಮಿಸ್ಟ್ರಿ ಅಭಿಮಾನಿಗಳಿಗೆ ಇಷ್ಟ ಆಗಿದೆ. ‘ಡಿಯರ್​ ಕಾಮ್ರೇಡ್​’ ಚಿತ್ರದಲ್ಲಿ ರಶ್ಮಿಕಾ ಹಾಗೂ ವಿಜಯ್​ ದೇವರಕೊಂಡ ಲಿಪ್​ ಲಾಕ್​ ಮಾಡಿದ್ದರು. ಆ ದೃಶ್ಯವನ್ನೇ ಇಟ್ಟುಕೊಂಡು ಸಿಕ್ಕಾಪಟ್ಟೆ ಟ್ರೋಲ್​ ಮಾಡಲಾಗಿತ್ತು.

‘ಅದು ಒಂದು ಸೆಕೆಂಡ್​ನಲ್ಲಿ ನಡೆಯಿತು. ಆದರೆ ಅದನ್ನು ತಿಂಗಳುಗಟ್ಟಲೆ ಟ್ರೋಲ್​ ಮಾಡಲಾಯಿತು. ನೋವಿನ ಅನೇಕ ಸಂಗತಿಗಳು ನಡೆಯುತ್ತಿದ್ದವು. ಬೇಸರ ತರಿಸುವ ಹಲವು ಸುದ್ದಿಗಳನ್ನು ನೋಡುತ್ತಿದ್ದೆ. ಎಲ್ಲರೂ ನನ್ನ ಬಿಟ್ಟು ಹೋದಂತೆ, ನಾನು ಒಂಟಿ ಆದಂತೆ ಕನಸು ಬೀಳುತ್ತಿತ್ತು. ಕಣ್ಣೀರು ಹಾಕುತ್ತಲೇ ಏಳುತ್ತಿದ್ದೆ’ ಎಂದು ರಶ್ಮಿಕಾ ಹೇಳಿದ್ದಾರೆ.

ಇದನ್ನೂ ಓದಿ
Image
Rashmika Mandanna: ಎದೆ ಮೇಲೆ ಆಟೋಗ್ರಾಫ್​ ಹಾಕಿ ಅಂತ ಹಠ ಹಿಡಿದ ರಶ್ಮಿಕಾ ಮಂದಣ್ಣ ಅಭಿಮಾನಿ; ಮುಂದೇನಾಯ್ತು?
Image
Rashmika Mandanna: ‘ಇಂದು ನಾನೇ ಗೋಲ್ಡನ್​ ಗರ್ಲ್​’ ಅಂತ ಪೋಸ್​ ನೀಡಿದ ರಶ್ಮಿಕಾ ಮಂದಣ್ಣ; ಆದ್ರೆ ಜನ ಹೇಳಿದ್ದೇನು?
Image
Rashmika Mandanna: ಬಾಲಿವುಡ್​ ಸೇರಿದ ರಶ್ಮಿಕಾ ಮಂದಣ್ಣ ಹೊಸ ಅವತಾರ ಹೇಗಿದೆ ನೋಡಿ; ಫೋಟೋ ವೈರಲ್​
Image
Rashmika Mandanna: ಸೆಲ್ಫಿ ಕೇಳಿದ ಅಭಿಮಾನಿಗಳ ಜತೆ ರಶ್ಮಿಕಾ ಮಂದಣ್ಣ ನಡೆದುಕೊಂಡಿದ್ದು ಹೇಗೆ? ವಿಡಿಯೋ ವೈರಲ್​

ಈ ಎಲ್ಲ ವಿಚಾರಗಳನ್ನು ಅವರು ಕುಟುಂಬದವರ ಬಳಿಯೂ ಹೇಳಿಕೊಂಡಿರಲಿಲ್ಲ. ಮನೆಯವರಿಗೆ ಸುಮ್ಮನೆ ತೊಂದರೆ ಕೊಡುವುದು ಬೇಡ ಎಂಬ ಕಾರಣಕ್ಕೆ ಎಲ್ಲ ನೋವನ್ನೂ ತಾವೊಬ್ಬರೇ ಅನುಭವಿಸಿದರು. ಇಷ್ಟೆಲ್ಲ ಕಷ್ಟಗಳನ್ನು ದಾಟಿಕೊಂಡು ಬಂದಿರುವ ರಶ್ಮಿಕಾ ಈಗ ಬಹುಬೇಡಿಕೆಯ ಹೀರೋಯಿನ್​ ಆಗಿ ಬೆಳೆದಿದ್ದಾರೆ. ಬಾಲಿವುಡ್​ನಲ್ಲೂ ಅವರು ಮಿಂಚುತ್ತಿದ್ದಾರೆ.

‘ಗುಡ್​ಬೈ’ ಸಿನಿಮಾದಲ್ಲಿ ಅಮಿತಾಭ್​ ಬಚ್ಚನ್​ ಜೊತೆಗೆ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಅಂತಹ ಮಹಾನ್​ ಕಲಾವಿದನ ಜೊತೆ ನಟಿಸಿದ್ದಕ್ಕೆ ಅವರಿಗೆ ತುಂಬ ಹೆಮ್ಮೆ ಇದೆ. ಈ ಸಿನಿಮಾ ಅಕ್ಟೋಬರ್​ 7ರಂದು ಬಿಡುಗಡೆ ಆಗಲಿದೆ. ಈಗಾಗಲೇ ಟ್ರೇಲರ್​ ಗಮನ ಸೆಳೆದಿದೆ. ಮೊದಲ ದಿನ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರನ್ನು ತಲುಪಲು ಟಿಕೆಟ್​ ದರವನ್ನು ಕೇವಲ 150 ರೂಪಾಯಿ ನಿಗದಿ ಮಾಡಲಾಗಿದೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:42 am, Tue, 4 October 22

Follow Us
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?