AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ‘ಅಂಜನಿ ಪುತ್ರ’ ಚಿತ್ರಕ್ಕೀಗ 5 ವರ್ಷ: ಟ್ವೀಟ್​ ಮಾಡಿ ಪುನೀತ್ ರಾಜ್‌ಕುಮಾರ್​ ಅವರನ್ನು ನೆನಪಿಸಿಕೊಂಡ ನಟಿ ರಶ್ಮಿಕಾ ಮಂದಣ್ಣ   

ನಟ ಪುನೀತ್ ರಾಜ್‌ಕುಮಾರ್ ಮತ್ತು ರಶ್ಮಿಕಾ ಮಂದಣ್ಣ ನಟನೆಯ 'ಅಂಜನಿ ಪುತ್ರ' ಚಿತ್ರ 2017ರಲ್ಲಿ ತೆರೆಗೆ ಬಂದಿತ್ತು. ಸದ್ಯ ಈ ಚಿತ್ರಕ್ಕೀಗ 5 ವರ್ಷ. ಇದೇ ಖುಷಿಯಲ್ಲಿ ರಶ್ಮಿಕಾ ಮಂದಣ್ಣ ಟ್ವೀಟ್​ ಮಾಡಿದ್ದಾರೆ.

Rashmika Mandanna: 'ಅಂಜನಿ ಪುತ್ರ' ಚಿತ್ರಕ್ಕೀಗ 5 ವರ್ಷ: ಟ್ವೀಟ್​ ಮಾಡಿ ಪುನೀತ್ ರಾಜ್‌ಕುಮಾರ್​ ಅವರನ್ನು ನೆನಪಿಸಿಕೊಂಡ ನಟಿ ರಶ್ಮಿಕಾ ಮಂದಣ್ಣ   
ಪುನೀತ್ ರಾಜ್‌ಕುಮಾರ್, ರಶ್ಮಿಕಾ ಮಂದಣ್ಣ   
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Dec 21, 2022 | 8:27 PM

Share

ನಟ ಪುನೀತ್ ರಾಜ್‌ಕುಮಾರ್ (Puneeth Rajkumar) ಅವರು ಕಳೆದ ವರ್ಷ (2021) ಅಕ್ಟೋಬರ್‌ನಲ್ಲಿ ನಿಧನ ಹೊಂದಿದರು. ಪುನೀತ್ ಅವರನ್ನು ಕಳೆದುಕೊಂಡು ಸ್ಯಾಂಡಲ್​ವುಡ್​ ದೊಡ್ಡ ನಷ್ಟ ಅನುಭವಿಸಿದೆ. ನಟ ಪುನೀತ್ ರಾಜ್‌ಕುಮಾರ್ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಅಭಿಮಾನಿಗಳಿಗೆ ಸಿಡಿಲು ಬಡಿದಂತಾಗಿತ್ತು. ಪುನೀತ್ ರಾಜ್‌ಕುಮಾರ್ ಅವರೊಂದಿಗೆ ಕೆಲಸ ಮಾಡಿದ ಪ್ರತಿಯೊಬ್ಬರೂ ಕೂಡ ಅವರೊಂದಿಗೆ ಕಳೆದ ಸುಂದರ ಕ್ಷಣಗಳನ್ನು ಹಂಚಿಕೊಂಡಿದ್ದರು. ಮತ್ತು ಆಗಾಗ ಅವರನ್ನು ನೆನಪಿಸಿಕೊಳ್ಳುತ್ತಿದ್ದಾರೆ. ಸದ್ಯ ನ್ಯಾಷನಲ್​ ಕ್ರಶ್​ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಪುನೀತ್ ರಾಜ್‌ಕುಮಾರ್ ಅವರನ್ನು ನೆನಪು ಮಾಡಿಕೊಂಡಿದ್ದಾರೆ. ‘ಅಂಜನಿ ಪುತ್ರ’ (Anjani Putra) ಚಿತ್ರ ಇಂದಿಗೆ 5 ವರ್ಷಗಳನ್ನು ಪೂರೈಸಿದ್ದು, ಇದೇ ಖಷಿಯಲ್ಲಿ ಅವರು ಟ್ವೀಟ್​ ಮಾಡಿದ್ದು, ಪುನೀತ್ ರಾಜ್‌ಕುಮಾರ್ ಅವರನ್ನು ನೆನಪಿಸಿಕೊಂಡಿದ್ದಾರೆ.

ಎ. ಹರ್ಷ ನಿರ್ದೇಶನದಲ್ಲಿ, ಪುನೀತ್ ರಾಜ್‌ಕುಮಾರ್ ಮತ್ತು ರಶ್ಮಿಕಾ ಮಂದಣ್ಣ ನಟನೆಯ ‘ಅಂಜನಿ ಪುತ್ರ’ ಚಿತ್ರ 2017ರಲ್ಲಿ ತೆರೆಗೆ ಬಂದಿತ್ತು. ಇದೀಗ ಈ ಚಿತ್ರ 5 ವರ್ಷಗಳನ್ನು ಕಂಪ್ಲೀಟ್​ ಮಾಡಿದೆ. ಈ ಸಂದರ್ಭದಲ್ಲಿ ರಶ್ಮಿಕಾ ಮಂದಣ್ಣ ಟ್ವೀಟ್​ ಮಾಡಿದ್ದಾರೆ. ‘ಅಂಜನಿ ಪುತ್ರ ಚಿತ್ರ ಈಗಾಗಲೇ 5 ವರ್ಷಗಳು ಪೂರೈಸಿದೆ. ನಾನು ಪುನೀತ್ ರಾಜ್‌ಕುಮಾರ್ ಅವರೊಂದಿಗಿನ ಸಂಭಾಷಣೆಯ ಬಗ್ಗೆ ಯೋಚಿಸುತ್ತಲೇ ಇದ್ದೇನೆ. ಅವರು ನನ್ನ ಬಗ್ಗೆ ಹೆಚ್ಚು ವಿಶ್ವಾಸ ಹೊಂದಿದ್ದರು. ಅವರು ಹೃದಯವಂತರು ಮತ್ತು ಅವರ ಸ್ಥಾನ ನನ್ನ ಹೃದಯದಲ್ಲಿ ಯಾವಾಗಲೂ ಅಮರ’ ಎಂದು ಬರೆದುಕೊಂಡಿದ್ದಾರೆ. ಜೊತೆಗೆ ನಿರ್ದೇಶಕ ಎ. ಹರ್ಷ ಅವರಿಗೂ ಅವರು ಧನ್ಯವಾದಗಳು ಹೇಳಿದ್ದಾರೆ.     ​

ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಒಂದಿಲ್ಲೊಂದು ವಿಚಾರಕ್ಕೆ ಚರ್ಚೆ ಆಗುತ್ತಿರುತ್ತಾರೆ. ಅವರು ನಡೆದುಕೊಳ್ಳುವ ರೀತಿ, ಸಿನಿಮಾ ವಿಚಾರಗಳಿಂದ ಕೂಡ ಅವರನ್ನು ಟ್ರೋಲ್​​ ಮಾಡಿರುವುದಿದೆ. ಇತ್ತೀಚೆಗೆ ಅವರನ್ನು ಸ್ಯಾಂಡಲ್​ವುಡ್​ನಿಂದ ಬ್ಯಾನ್​ ಮಾಡಬೇಕು ಎಂಬ ಮಾತುಗಳು ಸಹ ಕೇಳಿಬಂದಿದ್ದವು. ಆ ವಿಚಾರವಾಗಿ ರಶ್ಮಿಕಾ ಮಂದಣ್ಣ ಈಗಾಗಲೇ ಪ್ರತಿಕ್ರಿಯೆ ನೀಡಿದ್ದು, ಬ್ಯಾನ್​ ವಿಚಾರವಾಗಿ ನನಗೆ ಯಾವುದೇ ನೋಟಿಸ್​ ಬಂದಿಲ್ಲ. ಮತ್ತು ಯಾರು ಮಾತನಾಡಿಯೂ ಇಲ್ಲ ಎಂದಿದ್ದರು.

ಇದನ್ನೂ ಓದಿ: Rashmika Mandanna: ರಶ್ಮಿಕಾ ಮಂದಣ್ಣ ಇನ್​ಸ್ಟಾಗ್ರಾಮ್​ ಖಾತೆ ಹ್ಯಾಕ್​ ಆಯ್ತಾ? ಉಲ್ಟಾ ಅಕ್ಷರದ ಅಸಲಿ ವಿಷಯ ಇಲ್ಲಿದೆ..

ಸದ್ಯ ರಶ್ಮಿಕಾ ಮಂದಣ್ಣ ನಟ ವಿಜಯ್ ನಟನೆಯ ಫ್ಯಾಮಿಲಿ ಎಂಟರ್‌ಟೈನರ್ ‘ವಾರಿಸು’ ಚಿತ್ರ ಜನವರಿಯಲ್ಲಿ ಬಿಡುಗಡೆಯಾಗಲಿದೆ. ಅಲ್ಲದೆ ತೆಲುಗಿನ ‘ಪುಷ್ಪ 2’ ಚಿತ್ರದಲ್ಲಿ ಅಭಿನಯಿಸಲಿದ್ದಾರೆ. ಮತ್ತು ರಣಬೀರ್ ಕಪೂರ್ ನಟನೆಯ ‘ಅನಿಮಲ್’ ಚಿತ್ರೀಕರಣದಲ್ಲಿಯೂ ಸಹ ಅವರು ಭಾಗಿಯಾಗಲಿದ್ದಾರೆ.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:23 pm, Wed, 21 December 22