AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಮುಗಿಸಿ ಕೆಲವೇ ದಿನಗಳಲ್ಲಿ ಕೆಲಸಕ್ಕೆ ಮರಳಿದ ರಶ್ಮಿಕಾ ಮಂದಣ್ಣ

ಖ್ಯಾತ ನಟಿ ರಶ್ಮಿಕಾ ಮಂದಣ್ಣ ಅವರು ಇಷ್ಟು ದಿನಗಳ ಕಾಲ ಮದುವೆ ಸಲುವಾಗಿ ಬ್ರೇಕ್ ಪಡೆದಿದ್ದರು. ಈಗ ಅವರು ಮದುವೆಯ ಸಂಭ್ರಮದಿಂದ ಹೊರಗೆ ಬಂದಿದ್ದು, ಸಿನಿಮಾ ಶೂಟಿಂಗ್​​ಗೆ ಮರಳಿದ್ದಾರೆ. ‘ಮೈಸಾ’ ಸಿನಿಮಾದ ಚಿತ್ರೀಕರಣದ ಸೆಟ್​​ನಿಂದ ಹೊಸ ಫೋಟೋವನ್ನು ಅವರು ಶೇರ್ ಮಾಡಿದ್ದಾರೆ.

ಮದುವೆ ಮುಗಿಸಿ ಕೆಲವೇ ದಿನಗಳಲ್ಲಿ ಕೆಲಸಕ್ಕೆ ಮರಳಿದ ರಶ್ಮಿಕಾ ಮಂದಣ್ಣ
Rashmika Mandanna
ಮದನ್​ ಕುಮಾರ್​
|

Updated on: Mar 17, 2026 | 5:15 PM

Share

ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿರುವ ರಶ್ಮಿಕಾ ಮಂದಣ್ಣ (Rashmika Mandanna) ಅವರು ವಿಜಯ್ ದೇವರಕೊಂಡ ಜೊತೆ ಕೆಲವೇ ದಿನಗಳ ಹಿಂದೆ ಅದ್ದೂರಿಯಾಗಿ ಮದುವೆಯಾದರು. ವಿವಾಹದ ಸಂಭ್ರಮದ ನಂತರ ಈ ಜೋಡಿ ಈಗ ಮತ್ತೆ ಕೆಲಸದ ಕಡೆಗೆ ಗಮನ ಹರಿಸಿದ್ದಾರೆ. ಮದುವೆಯ ನಂತರ ಈ ಜೋಡಿ ‘ರಣಬಾಲಿ’ ಚಿತ್ರದ ಶೂಟಿಂಗ್ ಆರಂಭಿಸಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ರಶ್ಮಿಕಾ ಮಂದಣ್ಣ ಅವರಯ ‘ಮೈಸಾ’ (Mysaa) ಚಿತ್ರದ ಶೂಟಿಂಗ್ ಆರಂಭಿಸಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ದಾರೆ.

ಮಾರ್ಚ್ 17ರಂದು ರಶ್ಮಿಕಾ ಮಂದಣ್ಣ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹೊಸ ಅಪ್‌ಡೇಟ್ ಒಂದನ್ನು ಹಂಚಿಕೊಂಡಿದ್ದಾರೆ. ರವೀಂದ್ರ ಪುಲ್ಲೆ ನಿರ್ದೇಶನದ ‘ಮೈಸಾ’ ಚಿತ್ರದ ಚಿತ್ರೀಕರಣಕ್ಕೆ ಅವರು ಮರಳಿದ್ದಾರೆ. ಮರುಭೂಮಿಯಂತಹ ಪ್ರದೇಶದಲ್ಲಿ ಚಿತ್ರತಂಡ ಕಷ್ಟಪಟ್ಟು ಕೆಲಸ ಮಾಡುತ್ತಿರುವ ಫೋಟೋವನ್ನು ಹಂಚಿಕೊಂಡಿರುವ ನಿರ್ದೇಶಕರು, ‘ದಿ ಹಂಟ್ ಬಿಗಿನ್ಸ್’ ಎಂದು ಬರೆದುಕೊಂಡಿದ್ದಾರೆ. ರಶ್ಮಿಕಾ ಈ ಪೋಸ್ಟ್ ರೀ-ಶೇರ್ ಮಾಡುವ ಮೂಲಕ ತಾವು ಕೆಲಸಕ್ಕೆ ಹಾಜರಾಗಿರುವುದನ್ನು ಖಚಿತಪಡಿಸಿದ್ದಾರೆ.

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಫೆಬ್ರವರಿ 26ರಂದು ಖಾಸಗಿ ಹೋಟೆಲ್​​ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮಾರ್ಚ್ 4ರಂದು ಚಿತ್ರರಂಗದ ಗಣ್ಯರಿಗಾಗಿ ಅದ್ದೂರಿ ರಿಸೆಪ್ಷನ್ ಹಮ್ಮಿಕೊಳ್ಳಲಾಗಿತ್ತು. ಇದಾದ ನಂತರ ಹನಿಮೂನ್​​ಗೆ ತೆರಳಿದ್ದ ಈ ಜೋಡಿ, ಈ ವಾರವಷ್ಟೇ ಹಿಂದಿರುಗಿದ್ದು ತಕ್ಷಣವೇ ತಮ್ಮ ವೃತ್ತಿಜೀವನದ ಕಡೆಗೆ ಮುಖ ಮಾಡಿದ್ದಾರೆ.

2026ರಲ್ಲಿ ಬಿಡುಗಡೆ ಆಗಲಿರುವ ಬಹುನಿರೀಕ್ಷಿತ ಚಿತ್ರಗಳಲ್ಲಿ ‘ಮೈಸಾ’ ಕೂಡ ಇದೆ. ಈ ಚಿತ್ರದಲ್ಲಿ ರಶ್ಮಿಕಾ ಅವರು ಈ ಹಿಂದೆ ಎಂದೂ ಕಾಣಿಸಿಕೊಳ್ಳದಂತಹ ಆಕ್ರೋಶಭರಿತ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಅವರ ವೃತ್ತಿಜೀವನಕ್ಕೆ ಈ ಸಿನಿಮಾ ಹೊಸ ತಿರುವು ನೀಡುವ ಸಾಧ್ಯತೆಯಿದೆ. ಈಗಾಗಲೇ ಬಿಡುಗಡೆ ಆಗಿರುವ ಅವರ ಫಸ್ಟ್ ಲುಕ್ ಟೀಸರ್ ಗಮನ ಸೆಳೆದಿದೆ.

ಇದನ್ನೂ ಓದಿ: ‘ಮೈಸಾ’ ಫಸ್ಟ್ ಗ್ಲಿಂಪ್ಸ್: ಸಿಕ್ಕಾಪಟ್ಟೆ ಮಾಸ್ ಅವತಾರದಲ್ಲಿ ರಶ್ಮಿಕಾ ಮಂದಣ್ಣ

ಸದ್ಯಕ್ಕೆ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಜೊತೆಯಾಗಿ ನಟಿಸಲಿರುವ ‘ರಣಬಾಲಿ’ ಚಿತ್ರಕ್ಕಿಂತ ಮುಂಚಿತವಾಗಿ ‘ಮೈಸಾ’ ಚಿತ್ರದ ಶೂಟಿಂಗ್ ಮುಗಿಯಲಿದೆ. ‘ಗೀತ ಗೋವಿಂದಂ’ ಮತ್ತು ‘ಡಿಯರ್ ಕಾಮ್ರೇಡ್’ ಸಿನಿಮಾದಲ್ಲಿ ಜೊತೆಯಾಗಿದ್ದ ಈ ಜೋಡಿ ‘ರಣಬಾಲಿ’ ಸಿನಿಮಾದಲ್ಲಿ ಮತ್ತೆ ಒಂದಾಗುತ್ತಿರುವುದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ತನಗೆ ಮಂತ್ರಿಗಿರಿಯೇ ಬೇಡವೆಂದ ಕೆ.ಎನ್​​. ರಾಜಣ್ಣ!
ತನಗೆ ಮಂತ್ರಿಗಿರಿಯೇ ಬೇಡವೆಂದ ಕೆ.ಎನ್​​. ರಾಜಣ್ಣ!
SIR ಬಗ್ಗೆ ಭಯ ಬೇಡ: ಧೈರ್ಯ ಹೇಳಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್
SIR ಬಗ್ಗೆ ಭಯ ಬೇಡ: ಧೈರ್ಯ ಹೇಳಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಹೆಚ್.ಕೆ ಸುರೇಶ್ ಪ್ರಮಾಣ!
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಹೆಚ್.ಕೆ ಸುರೇಶ್ ಪ್ರಮಾಣ!
ಎಲ್ಲರೂ ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಿ ಎಂದ ಡಿಕೆಶಿ!
ಎಲ್ಲರೂ ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಿ ಎಂದ ಡಿಕೆಶಿ!
ಬೆಂಗಳೂರಿನಲ್ಲಿ ಫುಟ್​ಪಾತ್ ಅತಿಕ್ರಮಣ ತೆರವಿಗೆ ಇಂದೇ ಗಡುವು
ಬೆಂಗಳೂರಿನಲ್ಲಿ ಫುಟ್​ಪಾತ್ ಅತಿಕ್ರಮಣ ತೆರವಿಗೆ ಇಂದೇ ಗಡುವು
ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಮನೆಯಿಂದಲೇ ಎಸ್​ಐಆರ್​ಗೆ ಚಾಲನೆ!
ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಮನೆಯಿಂದಲೇ ಎಸ್​ಐಆರ್​ಗೆ ಚಾಲನೆ!
ವಿವಾಹಿತೆ ಜೊತೆ ಪರಾರಿಯಾದ ಯುವಕನ ಮನೆ ಧ್ವಂಸ: ಕಮಿಷನರ್​​ ಏನಂದ್ರು?
ವಿವಾಹಿತೆ ಜೊತೆ ಪರಾರಿಯಾದ ಯುವಕನ ಮನೆ ಧ್ವಂಸ: ಕಮಿಷನರ್​​ ಏನಂದ್ರು?
ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ
ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ
ನೋಡಿ, ಎಂಥಾ ಅದ್ಭುತ ದೃಶ್ಯ! ಒಂದೇ ಮರದ ಮೇಲೆ ಕುಳಿತ ಎರಡು ಚಿರತೆಗಳು
ನೋಡಿ, ಎಂಥಾ ಅದ್ಭುತ ದೃಶ್ಯ! ಒಂದೇ ಮರದ ಮೇಲೆ ಕುಳಿತ ಎರಡು ಚಿರತೆಗಳು
ಅಡ್ಡಮತದಾನ ಮಾಡಿಲ್ಲ: ಬೇಲೂರು ಬಿಜೆಪಿ ಶಾಸಕ ಸುರೇಶ್ ಆಣೆ-ಪ್ರಮಾಣ
ಅಡ್ಡಮತದಾನ ಮಾಡಿಲ್ಲ: ಬೇಲೂರು ಬಿಜೆಪಿ ಶಾಸಕ ಸುರೇಶ್ ಆಣೆ-ಪ್ರಮಾಣ