AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ನನ್ನ ಅಪ್ಪ-ಅಮ್ಮನಿಗೂ ಇದನ್ನು ನಂಬಲಾಗಲಿಲ್ಲ; ಹಳೆ ನೆನಪು ಬಿಚ್ಚಿಟ್ಟ ರಶ್ಮಿಕಾ ಮಂದಣ್ಣ

ಅಮಿತಾಭ್​ ಜತೆ ನಟಿಸುತ್ತಿರುವ ಸಿನಿಮಾಗೆ ಗುಡ್​ ಬಾಯ್​ ಎನ್ನುವ ಟೈಟಲ್​ ಇಡಲಾಗಿದೆ. ಈ ಸಿನಿಮಾ ಆಫರ್ ಬಂದಾಗ ಅವರು ತುಂಬಾನೇ ಎಗ್ಸೈಟ್​ ಆಗಿದ್ದರಂತೆ. ಆದರೆ, ಈ ವಿಚಾರವನ್ನು ಅವರ ಮನೆಯವರು ನಂಬಲೇ ಇಲ್ಲವಂತೆ!

Rashmika Mandanna: ನನ್ನ ಅಪ್ಪ-ಅಮ್ಮನಿಗೂ ಇದನ್ನು ನಂಬಲಾಗಲಿಲ್ಲ; ಹಳೆ ನೆನಪು ಬಿಚ್ಚಿಟ್ಟ ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಾಜೇಶ್ ದುಗ್ಗುಮನೆ
|

Updated on: Apr 15, 2021 | 5:49 PM

Share

ನಟಿ ರಶ್ಮಿಕಾ ಮಂದಣ್ಣ ಖ್ಯಾತಿ ಈಗ ದಕ್ಷಿಣ ಭಾರತಕ್ಕೆ ಮಾತ್ರ ಸೀಮಿತವಾಗಿಲ್ಲ. ಕನ್ನಡ ಸಿನಿಮಾ ಮೂಲಕ ಬಣ್ಣದ ಬದುಕು ಆರಂಭಿಸಿದ ಅವರು ಈಗ ಬಾಲಿವುಡ್​ಗೆ ಹೋಗಿ ನಿಂತಿದ್ದಾರೆ. ಬಾಲಿವುಡ್​ ಬಿಗ್​ ಬಿ ಅಮಿತಾಭ್​ ಬಚ್ಚನ್​ ಜತೆಗೆ ರಶ್ಮಿಕಾ ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ವಿಚಾರದ ಬಗ್ಗೆ ರಶ್ಮಿಕಾ ಮಾತನಾಡಿದ್ದಾರೆ. ಅಮಿತಾಭ್​ ಜತೆ ನಟಿಸುತ್ತಿರುವ ಸಿನಿಮಾಗೆ ಗುಡ್​ಬಯ್​​ ಎನ್ನುವ ಟೈಟಲ್​ ಇಡಲಾಗಿದೆ. ಈ ಸಿನಿಮಾ ಆಫರ್ ಬಂದಾಗ ಅವರು ತುಂಬಾನೇ ಎಗ್ಸೈಟ್​ ಆಗಿದ್ದರಂತೆ. ಆದರೆ, ಈ ವಿಚಾರವನ್ನು ಅವರ ಮನೆಯವರು ನಂಬಲೇ ಇಲ್ಲವಂತೆ! ಈ ನೆನಪಿನ ಬಗ್ಗೆ ಅವರು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

ಅಮಿತಾಭ್​ ಓರ್ವ ಸೂಪರ್​ಸ್ಟಾರ್​. ಅವರ ಜತೆ ನಾನು ತೆರೆ ಹಂಚಿಕೊಳ್ಳುತ್ತೇನೆ ಎನ್ನುವ ವಿಚಾರ ಮನೆಯವರಿಗೆ ಗೊತ್ತಾದಾಗ ತುಂಬಾನೇ ಖುಷಿಯಾಗಿದ್ದರು. ಅದಕ್ಕೂ ಮೊದಲು ಅವರಿಗೆ ಈ ವಿಚಾರದ ಮೇಲೆ ನಂಬಿಕೆಯೇ ಬಂದಿರಲಿಲ್ಲ. ನಾನು ಅಮಿತಾಭ್​ ಸಿನಿಮಾ ನೋಡಿ ಬೆಳೆದವಳು. ಈಗ ಅವರ ಜತೆಯೇ ನಟನೆ ಮಾಡುತ್ತಿರುವುದಕ್ಕೆ ಖುಷಿ ಇದೆ ಎಂದಿದ್ದಾರೆ ರಶ್ಮಿಕಾ.

ರಶ್ಮಿಕಾ ಮಂದಣ್ಣ ಇತ್ತೀಚೆಗೆ ಅಮಿತಾಭ್​ ಅವರನ್ನು ಭೇಟಿ ಮಾಡಿದ್ದರು. ಈ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲೂ ಹಂಚಿಕೊಂಡಿದ್ದರು. ಈ ಭೇಟಿ ಬಗ್ಗೆ ಹೇಳಿಕೊಂಡಿರುವ ರಶ್ಮಿಕಾ, ಶಿಕ್ಷಕರು ವಿದ್ಯಾರ್ಥಿಗಳನ್ನು ಟ್ರೀಟ್​ ಮಾಡುವಂತೆ ಅವರು ನನ್ನನ್ನು ಟ್ರೀಟ್​ ಮಾಡಿದ್ದರು. ಒಳ್ಳೊಳ್ಳೆ ಕೆಲಸ ಮಾಡು ಎಂದು ಅವರು ನನಗೆ ಕಿವಿಮಾತು ಹೇಳಿದರು ಎಂದಿದ್ದಾರೆ ರಶ್ಮಿಕಾ.

ಸದ್ಯ, ರಶ್ಮಿಕಾ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಬಾಲಿವುಡ್​ ಸಿನಿಮಾ ಮಿಷನ್​ ಮಜ್ನು ಕೆಲಸದಲ್ಲಿ ಅವರು ಬ್ಯುಸಿಯಾಗಿದ್ದಾರೆ. ಈ ಚಿತ್ರದಲ್ಲಿ ಸಿದ್ಧಾರ್ಥ್​ ಮಲ್ಹೋತ್ರಗೆ ಜೋಡಿ ಆಗಿದ್ದಾರೆ. ಗುಡ್​ಬಯ್​ ರಶ್ಮಿಕಾ ಅವರ ಎರಡನೇ ಹಿಂದಿ ಸಿನಿಮಾ. ವಿಕಾಸ್​  ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ನಟ ಅಲ್ಲು ಅರ್ಜುನ್​ ಹಾಗೂ ನಿರ್ದೇಶಕ ಸುಕುಮಾರ್​ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಪುಷ್ಪ ಚಿತ್ರಕ್ಕೂ ರಶ್ಮಿಕಾ ನಾಯಕಿ.

ಇದನ್ನೂ ಓದಿ: Rashmika Mandanna: ರಶ್ಮಿಕಾಗೆ ಬಾಲಿವುಡ್​ನಲ್ಲಿ ಬೆಂಬಲವಾಗಿ ನಿಂತ ಸಿದ್ಧಾರ್ಥ್ ಮಲ್ಹೋತ್ರ! ಅನುಭವ ಹಂಚಿಕೊಂಡ ಕಿರಿಕ್​ ಬೆಡಗಿ

ಹರಿದ ಜೀನ್ಸ್​ ಪ್ಯಾಂಟ್​ ವಿಚಾರಕ್ಕೆ ಮುಖ್ಯಮಂತ್ರಿಯನ್ನೇ ಎದುರು ಹಾಕಿಕೊಂಡ ಅಮಿತಾಭ್​ ಮೊಮ್ಮಗಳು ನವ್ಯಾ!

ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ