AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಇದು ರಶ್ಮಿಕಾ ಮಂದಣ್ಣ ಅಂತ ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು; ಈ ಫೋಟೋದ ಅಸಲಿಯತ್ತು ಏನು?

Viral Photo: ‘ಪುಷ್ಪ 2’ ಸಿನಿಮಾ ಬಗ್ಗೆ ಗಾಳಿಸುದ್ದಿಯನ್ನು ಹಬ್ಬಿಸುವ ಭರದಲ್ಲಿ ಈ ಫೋಟೋವನ್ನು ವೈರಲ್​ ಮಾಡಲಾಗಿದೆ. ಆದರೆ ಇದರ ಅಸಲಿಯತ್ತು ಬೇರೆಯೇ ಇದೆ.

Rashmika Mandanna: ಇದು ರಶ್ಮಿಕಾ ಮಂದಣ್ಣ ಅಂತ ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು; ಈ ಫೋಟೋದ ಅಸಲಿಯತ್ತು ಏನು?
ವೈರಲ್​ ಫೋಟೋ, ರಶ್ಮಿಕಾ ಮಂದಣ್ಣ
ಮದನ್​ ಕುಮಾರ್​
|

Updated on: May 20, 2023 | 4:03 PM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರನ್ನು ಒಂದು ವರ್ಗದ ನೆಟ್ಟಿಗರು ಟ್ರೋಲ್​ ಮಾಡುತ್ತಾರೆ ಎಂಬುದು ನಿಜ. ಆದರೆ ಎಲ್ಲದಕ್ಕೂ ಒಂದು ಇತಿಮಿತಿ ಇರಬೇಕು. ಇತ್ತೀಚೆಗೆ ಕೆಲವು ಕಿಡಿಗೇಡಿಗಳು ಬೇರೆ ನಟಿಯ ಫೋಟೋ ಪೋಸ್ಟ್​ ಮಾಡಿ, ಇದು ರಶ್ಮಿಕಾ ಮಂದಣ್ಣ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಶವದಂತೆ ಮಲಗಿರುವ ನಟಿಯ ಫೋಟೋ ಇದು. ‘ಪುಷ್ಪ 2’ (Pushpa 2 Movie) ಚಿತ್ರದಲ್ಲಿ ಕಥಾನಾಯಕಿ ಪಾತ್ರ ಸಾಯುತ್ತದೆ ಎಂಬ ಗಾಸಿಪ್​ ಇದೆ. ಆ ಗಾಳಿಸುದ್ದಿಯನ್ನು ಹಬ್ಬಿಸುವ ಭರದಲ್ಲಿ ಈ ಫೋಟೋವನ್ನು ವೈರಲ್​ ಮಾಡಲಾಗಿದೆ. ಆದರೆ ಇದರ ಅಸಲಿಯತ್ತು ಬೇರೆಯೇ ಇದೆ. ಇದು ಮರಾಠಿ ಸಿನಿಮಾವೊಂದರಲ್ಲಿ ಬರುವ ದೃಶ್ಯದ ಸ್ಕ್ರೀನ್ ಶಾಟ್​ ಎಂಬುದು ಗೊತ್ತಾಗಿದೆ. ಆ ದೃಶ್ಯದಲ್ಲಿ ಅಭಿನಯಿಸಿದ ನಟಿ ಕೊಂಚ ರಶ್ಮಿಕಾ ಮಂದಣ್ಣ ರೀತಿ ಕಾಣುತ್ತಾರೆ ಎಂಬ ಕಾರಣಕ್ಕೆ ಇಷ್ಟೆಲ್ಲ ಕಿತಾಪತಿ ಮಾಡಲಾಗಿದೆ.

‘ಪುಷ್ಪ 2’ ಸಿನಿಮಾದಲ್ಲಿ ಅಲ್ಲು ಅರ್ಜುನ್ ಜೊತೆಗೆ ಫಹಾದ್ ಫಾಸಿಲ್, ಕನ್ನಡದ ಡಾಲಿ ಧನಂಜಯ್ ನಟಿಸುತ್ತಿರುವುದು ಗೊತ್ತೇ ಇದೆ. ಜೊತೆಗೆ ತಮಿಳಿನ ವಿಜಯ್ ಸೇತುಪತಿ ಸಹ ಇರುತ್ತಾರೆ ಎನ್ನಲಾಗುತ್ತಿದೆ. ಮಾತ್ರವಲ್ಲದೆ ನಟಿ ಸಾಯಿ ಪಲ್ಲವಿ ಸಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ ಎಂಬ ಮಾತು ಕೇಳಿಬಂದಿದೆ. ಕಥಾನಾಯಕನ ಪಾತ್ರ ವಿದೇಶಕ್ಕೆ ತೆರಳುತ್ತದೆ ಎಂಬ ಗಾಸಿಪ್​ ಕೂಡ ಇದೆ. ಆದರೆ ಈ ಅಂತೆ-ಕಂತೆಗಳಿಗೂ ಚಿತ್ರತಂಡ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ: Mrunal Thakur: ‘ನ್ಯಾಷನಲ್​ ಕ್ರಶ್​’ ಬಿರುದು ಪಡೆದುಕೊಂಡ ಮೃಣಾಲ್​ ಠಾಕೂರ್​; ಈಗ ರಶ್ಮಿಕಾ ಮಂದಣ್ಣ ಪಾಡು ಏನು?

‘ಪುಷ್ಪ’ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗಿ ಬ್ಲಾಕ್​ ಬಸ್ಟರ್​ ಆಯಿತು. ಈಗ ‘ಪುಷ್ಪ 2’ ಚಿತ್ರ ಕೂಡ ಅದ್ದೂರಿಯಾಗಿ ತಯಾರಾಗುತ್ತಿದೆ. ಬಹುಭಾಷೆಯಲ್ಲಿ ಫಸ್ಟ್​ ಗ್ಲಿಂಪ್ಸ್​ ಅನಾವರಣ ಮಾಡಿದ ಬಳಿಕ ಅಭಿಮಾನಿಗಳ ನಿರೀಕ್ಷೆ ಜಾಸ್ತಿ ಆಗಿದೆ. ‘ಪುಷ್ಪ 2’ ಸಿನಿಮಾದಿಂದ ದೊಡ್ಡ ಗೆಲುವು ಪಡೆಯಲೇಬೇಕು ಎಂಬ ಗುರಿಯೊಂದಿಗೆ ನಿರ್ದೇಶಕ ಸುಕುಮಾರ್ ಅವರು ಹಲವು ತಂತ್ರಗಳನ್ನು ಬಳಕೆ ಮಾಡುತ್ತಿದ್ದಾರೆ. ಈ ಚಿತ್ರದಿಂದ ರಶ್ಮಿಕಾ ಮಂದಣ್ಣ ಅವರ ವೃತ್ತಿಜೀವನಕ್ಕೆ ಹೊಸ ತಿರುವು ಸಿಗುವ ನಿರೀಕ್ಷೆ ಇದೆ.

ಇದನ್ನೂ ಓದಿ: Rashmika Mandanna: ಜಡೆ ಜಗಳಕ್ಕೆ ಅವಕಾಶವೇ ಕೊಡಲಿಲ್ಲ ರಶ್ಮಿಕಾ ಮಂದಣ್ಣ; ಐಶ್ವರ್ಯಾ ರಾಜೇಶ್ ಜೊತೆಗಿನ ಕಿರಿಕ್​ ಅಂತ್ಯ

ರಶ್ಮಿಕಾ ಮಂದಣ್ಣ ಟಾಲಿವುಡ್​ನಲ್ಲಿ ಫೇಮಸ್ ಆದ ಬಳಿಕ ಹಿಂದಿ ಚಿತ್ರರಂಗಕ್ಕೆ ಕಾಲಿಟ್ಟರು. ಅವರು ಈಗಾಗಲೇ ಸಿದ್ದಾರ್ಥ್ ಮಲ್ಹೋತ್ರಾ ಹಾಗೂ ಅಮಿತಾಭ್ ಬಚ್ಚನ್ ಜೊತೆ ತೆರೆ ಹಂಚಿಕೊಂಡಿದ್ದಾರೆ. ರಣಬೀರ್ ಕಪೂರ್ ಜೊತೆ ಅವರು ‘ಅನಿಮಲ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ವಿಕ್ಕಿ ಕೌಶಲ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಛತ್ರಪತಿ ಶಿವಾಜಿ ಸೊಸೆಯ ಪಾತ್ರದಲ್ಲಿ ರಶ್ಮಿಕಾ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಇದರ ಜೊತೆ ಮತ್ತೊಂದು ಸಿನಿಮಾ ಮಾತುಕತೆಯಲ್ಲಿ ರಶ್ಮಿಕಾ ಬ್ಯುಸಿ ಇದ್ದಾರೆ ಎಂದು ವರದಿ ಆಗಿದೆ. ಶಾಹಿದ್ ಕಪೂರ್ ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ತಾಂತ್ರಿಕ ವರ್ಗದ ಬಗ್ಗೆ ಇನ್ನಷ್ಟೇ ಮಾಹಿತಿ ಹೊರ ಬೀಳಬೇಕಿದೆ. ಈ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ನಾಯಕಿ ಎನ್ನಲಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು