ವಿಮಾನ ತುರ್ತು ಭೂಸ್ಪರ್ಷ: ಪ್ರಾಣಾಪಾಯದಿಂದ ಪಾರಾದ ನಟಿ ರಶ್ಮಿಕಾ
Rashmika Mandanna: ರಶ್ಮಿಕಾ ಮಂದಣ್ಣ ಮತ್ತು ಶ್ರದ್ಧಾದಾಸ್ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಷ ಮಾಡಿದೆ. ತಾವು ಸ್ವಲ್ಪದರಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾಗಿ ರಶ್ಮಿಕಾ ಹೇಳಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ನಟಿ ಶ್ರದ್ಧಾ ದಾಸ್ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತುರ್ತು ಭೂಸ್ಪರ್ಷ ಮಾಡಲಾಗಿದೆ. ಘಟನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ರಶ್ಮಿಕಾ ಮಂದಣ್ಣ ಪ್ರಾಣಾಪಾಯದಿಂದ ಸ್ಪಲ್ಪದರಲ್ಲಿ ಪಾರಾದುದಾಗಿ ಹೇಳಿಕೊಂಡಿದ್ದಾರೆ. ರಶ್ಮಿಕಾ ಹಾಗೂ ಶ್ರದ್ಧಾದಾಸ್ ಅವರುಗಳು ಒಟ್ಟಿಗೆ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ.
ರಶ್ಮಿಕಾ ಮಂದಣ್ಣ ಹಾಗೂ ಶ್ರದ್ಧಾದಾಸ್ ಅವರುಗಳು ಮುಂಬೈ ವಿಮಾನ ನಿಲ್ದಾಣದಿಂದ ಹೈದರಾಬಾದ್ಗೆ ಪ್ರಯಾಣ ಬೆಳೆಸಿದ್ದರು. ಇಬ್ಬರೂ ಒಟ್ಟಿಗೆ ಪ್ರಯಾಣ ಮಾಡುತ್ತಿದ್ದರು. ವಿಮಾನ ಟೇಕ್ ಆಫ್ ಆದ ಬಳಿಕ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೇ ವಿಮಾನ ನಿಲ್ದಾಣವನ್ನು ತುರ್ತು ಭೂಸ್ಪರ್ಷ ಮಾಡಲಾಗಿದೆ. ತಮ್ಮ ಹಾಗೂ ಶ್ರದ್ಧಾದಾಸ್ರ ಕೆಲವು ಚಿತ್ರಗಳನ್ನು ರಶ್ಮಿಕಾ ಮಂದಣ್ಣ ಹಂಚಿಕೊಂಡಿದ್ದು, ‘ಇಂದು ಹೀಗೆ ಮಾಡಿ ನಾವು ಪ್ರಾಣಾಪಾಯದಿಂದ ಪಾರಾದೆವು’ ಎಂದಿದ್ದಾರೆ ರಶ್ಮಿಕಾ. ತುರ್ತು ಭೂಸ್ಪರ್ಷದ ವೇಳೆ ವಿಮಾನ ಸಿಬ್ಬಂದಿ ನೀಡಿದ ಸೂಚನೆಯಂತೆ, ರಶ್ಮಿಕಾ ಹಾಗೂ ಶ್ರದ್ಧಾ ತಮ್ಮ ಕಾಲುಗಳಿಂದ ಎದುರಿನ ಸೀಟ್ನ ಹಿಂಬದಿಯನ್ನು ಜೋರಾಗಿ ಒತ್ತಿ ಹಿಡಿದುಕೊಂಡಿದ್ದಾರೆ. ಈ ಚಿತ್ರವನ್ನು ರಶ್ಮಿಕಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ:Rashmika Mandanna: ವ್ಯಾಲೆಂಟೈನ್ಸ್ ಡೇ ದಿನ ಫ್ಯಾನ್ಸ್ ಎದುರು ಹೊಸ ಕೋರಿಕೆ ಇಟ್ಟ ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ ಫ್ರೀಕ್ವೆಂಟ್ ಟ್ರಾವೆಲರ್ ಆಗಿದ್ದಾರೆ. ಹೈದರಾಬಾದ್, ಮುಂಬೈ, ಚೆನ್ನೈ ಹಾಗೂ ಬೆಂಗಳೂರಿಗೆ ಪದೇ ಪದೇ ಓಡಾಡುತ್ತಲೇ ಇರುತ್ತಾರೆ. ಹೈದರಾಬಾದ್ನಲ್ಲಿ ಮನೆ ಹೊಂದಿರುವ ರಶ್ಮಿಕಾ, ಬಾಲಿವುಡ್, ಕಾಲಿವುಡ್ಗಳಲ್ಲಿಯೂ ಕೆಲಸ ಮಾಡುತ್ತಿರುವ ಕಾರಣ ಮುಂಬೈ, ಚೆನ್ನೈಗಳಿಗೆ ಓಡಾಡುತ್ತಿರುತ್ತಾರೆ. ರಶ್ಮಿಕಾ ಮಂದಣ್ಣ ಪ್ರಸ್ತುತ ತೆಲುಗಿನ ‘ಪುಷ್ಪ 2’, ‘ಗರ್ಲ್ಫ್ರೆಂಡ್’ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಬಾಲಿವುಡ್ನಲ್ಲಿ ವಿಕ್ಕಿ ಕೌಶಲ್ ಜೊತೆಗೆ ‘ಛಾವಾ’, ಟೈಗರ್ ಶ್ರಾಫ್ ಜೊತೆಗೆ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆಗೆ ಒಂದು ತಮಿಳು ಸಿನಿಮಾವನ್ನು ಸಹ ರಶ್ಮಿಕಾ ಮಂದಣ್ಣ ಒಪ್ಪಿಕೊಂಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:08 pm, Sun, 18 February 24




