AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತರತ್ನ ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‌ನಲ್ಲಿ ರಶ್ಮಿಕಾ ಮಂದಣ್ಣ

ಭಾರತರತ್ನ ಎಂ.ಎಸ್. ಸುಬ್ಬುಲಕ್ಷ್ಮಿ ಅವರ ಜೀವನಾಧಾರಿತ ಬಯೋಪಿಕ್‌ನಲ್ಲಿ ನಟಿ ರಶ್ಮಿಕಾ ಮಂದಣ್ಣ ನಟಿಸಲಿದ್ದಾರೆ. ಸಾಯಿ ಪಲ್ಲವಿ ಕಾಲ್‌ಶೀಟ್ ಸಮಸ್ಯೆಯಿಂದ ಹೊರನಡೆದ ಬಳಿಕ ರಶ್ಮಿಕಾ ಈ ಪಾತ್ರಕ್ಕೆ ಆಯ್ಕೆಯಾಗಿದ್ದಾರೆ. ಗೌತಮ್ ತಿನ್ನನುರಿ ನಿರ್ದೇಶನದ ಈ ಸಿನಿಮಾವನ್ನು ಸೆಪ್ಟೆಂಬರ್ 16 ರಂದು ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿಯಂದು ಅಧಿಕೃತವಾಗಿ ಘೋಷಿಸಲಾಗುತ್ತದೆ.

ಭಾರತರತ್ನ ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‌ನಲ್ಲಿ ರಶ್ಮಿಕಾ ಮಂದಣ್ಣ
ರಶ್ಮಿಕಾ-ಸುಬ್ಬಲಕ್ಷ್ಮಿ
ರಾಜೇಶ್ ದುಗ್ಗುಮನೆ
|

Updated on:Aug 28, 2026 | 1:30 PM

Share

ಮುಖ್ಯಾಂಶಗಳು

  • ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‌ಗೆ ರಶ್ಮಿಕಾ ಮಂದಣ್ಣ ಆಯ್ಕೆ
  • ಸೆಪ್ಟೆಂಬರ್ 16ಕ್ಕೆ ಆಫಿಷಿಯಲ್ ಅನೌನ್ಸ್‌ಮೆಂಟ್
  • ಸಾಯಿ ಪಲ್ಲವಿ ಜಾಗಕ್ಕೆ ಬಂದ ರಶ್ಮಿಕಾ

ಭಾರತರತ್ನ ಪುರಸ್ಕೃತೆ ಹಾಗೂ ಗಾಯಕಿ ಎಂ.ಎಸ್. ಸುಬ್ಬುಲಕ್ಷ್ಮಿ ಅವರ ಜೀವನಾಧಾರಿತ ಬಯೋಪಿಕ್ ಸಿನಿಮಾ ಮಾಡಲು ಸಿದ್ಧತೆಗಳು ನಡೆದಿವೆ. ಈ ಐತಿಹಾಸಿಕ ಪಾತ್ರದಲ್ಲಿ ಅಭಿನಯಿಸಲು ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಆಯ್ಕೆಯಾಗಿದ್ದಾರೆ. ಭಾರತೀಯ ಶಾಸ್ತ್ರೀಯ ಸಂಗೀತ ಲೋಕದ ದಿಗ್ಗಜ ಗಾಯಕಿಯ ಪಾತ್ರವನ್ನು ತೆರೆಯ ಮೇಲೆ ತರಲು ಚಿತ್ರತಂಡ ಬಿರುಸಿನ ತಯಾರಿ ನಡೆಸಿದೆ. ಈ ಬಿಗ್ ಪ್ರಾಜೆಕ್ಟ್ ಕುರಿತು ಸೆಪ್ಟೆಂಬರ್ 16ರಂದು ಎಂ.ಎಸ್. ಸುಬ್ಬುಲಕ್ಷ್ಮಿ ಅವರ ಜನ್ಮದಿನದಂದು ಅಧಿಕೃತ ಘೋಷಣೆ ಹೊರಬೀಳಲಿದೆ.

ಆರಂಭದಲ್ಲಿ ಈ ಬಯೋಪಿಕ್ ಚಿತ್ರಕ್ಕಾಗಿ ನಟಿ ಸಾಯಿ ಪಲ್ಲವಿ ಅವರನ್ನು ಆಯ್ಕೆ ಮಾಡಲು ಉದ್ದೇಶಿಸಲಾಗಿತ್ತು. ಆದರೆ ಅವರು ಮುಂಚಿತವಾಗಿಯೇ ಒಪ್ಪಿಕೊಂಡಿದ್ದ ಸಿನಿಮಾಗಳ ಕಾಲ್‌ಶೀಟ್ ಸಮಸ್ಯೆ ಎದುರಾಯಿತು. ಹೀಗಾಗಿ ಅವರು ಈ ಸಿನಿಮಾದಿಂದ ಹೊರನಡೆದರು. ನಂತರ ನಟಿ ರುಕ್ಮಿಣಿ ವಸಂತ್ ಅವರ ಹೆಸರು ಕೂಡ ಕೇಳಿಬಂದಿತ್ತು. ಆದರೆ ಅಂತಿಮವಾಗಿ ನಿರ್ಮಾಪಕರು ರಶ್ಮಿಕಾ ಮಂದಣ್ಣ ಅವರನ್ನು ಈ ಮಹತ್ವದ ಪಾತ್ರಕ್ಕೆ ಫೈನಲ್ ಮಾಡಿದ್ದಾರೆ.

ಎಂ.ಎಸ್. ಸುಬ್ಬುಲಕ್ಷ್ಮಿ ಅವರಂತಹ ಮಹಾನ್ ಗಾಯಕಿಯ ಪಾತ್ರ ಮಾಡುವುದು ರಶ್ಮಿಕಾ ಅವರಿಗೆ ದೊಡ್ಡ ಸವಾಲಾಗಿದೆ. ಕೇವಲ ನಟನೆಯಷ್ಟೇ ಅಲ್ಲದೆ ಅವರ ವ್ಯಕ್ತಿತ್ವ ಮತ್ತು ಗೌರವವನ್ನು ಪರದೆಯ ಮೇಲೆ ತರುವುದು ಅತ್ಯಗತ್ಯ. ಈ ಪಾತ್ರವನ್ನು ರಶ್ಮಿಕಾ ಯಶಸ್ವಿಯಾಗಿ ನಿರ್ವಹಿಸಿದರೆ ಅವರ ಸಿನಿ ಜೀವನಕ್ಕೆ ದೊಡ್ಡ ಮೈಲಿಗಲ್ಲಾಗಲಿದೆ.

ಈ ಬಹುನಿರೀಕ್ಷಿತ ಸಿನಿಮಾವನ್ನು ಪ್ರಸಿದ್ಧ ನಿರ್ದೇಶಕ ಗೌತಮ್ ತಿನ್ನನುರಿ ನಿರ್ದೇಶಿಸಲಿದ್ದಾರೆ. ರಾಕ್‌ಲೈನ್ ವೆಂಕಟೇಶ್ ಮತ್ತು ಅಲ್ಲು ಅರವಿಂದ್ ಹಾಗೂ ಬನ್ನಿ ವಾಸ್ ಜಂಟಿಯಾಗಿ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಚಿತ್ರದ ಶೀರ್ಷಿಕೆ ಮತ್ತು ಇತರ ತಾರಾಗಣದ ವಿವರಗಳನ್ನು ಸೆಪ್ಟೆಂಬರ್ 16 ರಂದು ಅಧಿಕೃತವಾಗಿ ಪ್ರಕಟಿಸಲಾಗುತ್ತದೆ.

ಇದನ್ನೂ ಓದಿ: ಇರುಮುಡಿ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ಮೆಚ್ಚುಗೆ: ‘ಟಾಕ್ಸಿಕ್’ ಸಿನಿಮಾಗೂ ನಟಿಯಿಂದ ಸಿಗುತ್ತಾ ಹೊಗಳಿಕೆ?

ಸಂಗೀತ ಲೋಕದ ದೇವತೆಯ ಜೀವನಚರಿತ್ರೆಯನ್ನು ತೆರೆಯ ಮೇಲೆ ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ. ರಶ್ಮಿಕಾ ಈ ಪಾತ್ರಕ್ಕೆ ಹೇಗೆ ಸಿದ್ಧರಾಗಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲಿದೆ. ಈ ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ಹೊಸ ಸಂಚಲನ ಸೃಷ್ಟಿಸುವ ನಿರೀಕ್ಷೆಯಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:29 pm, Fri, 28 August 26

Follow Us
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!