ರಶ್ಮಿಕಾ ಮಂದಣ್ಣಗೆ ಗುಲಾಬಿ ಹೂವು ನೀಡಿದ ಪ್ರೇಮಿ: ಆ ವ್ಯಕ್ತಿ ಮೇಲೆ ಎಲ್ಲರ ಅನುಮಾನ

ರೋಸ್ ಕೊಟ್ಟಿದ್ದಕ್ಕೆ ರಶ್ಮಿಕಾ ಮಂದಣ್ಣ ಅವರ ಮುಖದಲ್ಲಿ ನಗು ಮೂಡಿದೆ. ಹೂ ಗುಚ್ಛದ ಫೋಟೋವನ್ನು ರಶ್ಮಿಕಾ ಅವರು ಬಹಳ ಖುಷಿಯಿಂದ ಹಂಚಿಕೊಂಡಿದ್ದಾರೆ. ವಿಜಯ್ ದೇವರಕೊಂಡ ಈ ರೋಸ್ ನೀಡಿರಬಹುದು ಎಂಬುದು ಬಹುತೇಕರ ಅನುಮಾನ. ಯಾಕೆಂದರೆ ಅವರಿಬ್ಬರ ಬಗ್ಗೆ ಮೊದಲಿನಿಂದಲೂ ಗಾಸಿಪ್ ಇದೆ.

ರಶ್ಮಿಕಾ ಮಂದಣ್ಣಗೆ ಗುಲಾಬಿ ಹೂವು ನೀಡಿದ ಪ್ರೇಮಿ: ಆ ವ್ಯಕ್ತಿ ಮೇಲೆ ಎಲ್ಲರ ಅನುಮಾನ
Rashmika Mandanna

Updated on: Feb 17, 2025 | 5:37 PM

ಪ್ರೇಮಿಗಳೆಲ್ಲ ವ್ಯಾಲೆಂಟೈನ್ಸ್ ಡೇ ಆಚರಿಸಿದ್ದಾರೆ. ಅನೇಕರು ಪ್ರಪೋಸ್ ಮಾಡಿ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ. ಸೆಲೆಬ್ರಿಟಿಗಳಲ್ಲಿ ಕೂಡ ಕೆಲವರು ಪ್ರೀತಿಯಲ್ಲಿ ಬಿದ್ದಿದ್ದಾರೆ. ನೇರವಾಗಿ ಹೇಳದೇ ಇದ್ದರೂ ಸೂಚ್ಯವಾಗಿ ಕೆಲವು ನಟಿಯರು ಪ್ರೀತಿಯ ಬಗ್ಗೆ ಹೇಳಿಕೊಂಡಿದ್ದಾರೆ. ಸಮಂತಾ ರುತ್ ಪ್ರಭು ಅವರು ಪ್ರೀತಿಯಲ್ಲಿ ಬಿದ್ದಿರುವ ಸೂಚನೆ ನೀಡಿದ್ದಾರೆ. ಅದೇ ರೀತಿ ನಟಿ ರಶ್ಮಿಕಾ ಮಂದಣ್ಣ ಅವರು ಕೂಡ ಪ್ರೀತಿ ಚಿಗುರಿದೆ ಎಂಬುದನ್ನು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಬಾಯ್​ಫ್ರೆಂಡ್​ ನೀಡಿರುವ ಗುಲಾಬಿ ಹೂವಿನ ಗುಚ್ಛದ ಫೋಟೋವನ್ನು ರಶ್ಮಿಕಾ ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ.

‘ನನ್ನ ಮುಖದ ಮೇಲೆ ನಗು ಮೂಡಿಸುವುದು ಹೇಗೆ ಎಂಬುದು ನಿನಗೆ ಯಾವಾಗಲೂ ಗೊತ್ತು’ ಎಂದು ರಶ್ಮಿಕಾ ಮಂದಣ್ಣ ಅವರು ಈ ಫೋಟೋಗೆ ಕ್ಯಾಪ್ಷನ್ ನೀಡಿದ್ದಾರೆ. ಆದರೆ ಈ ಗುಲಾಬಿ ಹೂವಿನ ಗುಚ್ಛ ನೀಡಿದ ವ್ಯಕ್ತಿ ಯಾರು ಎಂಬುದನ್ನು ಮಾತ್ರ ಅವರು ಬಹಿರಂಗಪಡಿಸಿಲ್ಲ. ಹಾಗಾಗಿ ಅಭಿಮಾನಿಗಳಿಗೆ ಅನುಮಾನ ಮೂಡಿದೆ. ಫೋಟೋ ವೈರಲ್ ಆಗಿದೆ.

ರಶ್ಮಿಕಾ ಮಂದಣ್ಣ ಅವರು ವಿಜಯ್ ದೇವರಕೊಂಡ ಜೊತೆ ಸಿಕ್ಕಾಪಟ್ಟೆ ಕ್ಲೋಸ್ ಆಗಿದ್ದಾರೆ ಎಂಬುದು ಗೊತ್ತಿರುವ ವಿಷಯ. ಈ ಮೊದಲು ಅವರು ಒಟ್ಟಿಗೆ ಮಾಲ್ಡೀವ್ಸ್​ಗೆ ತೆರಳಿದ್ದರು. ಆದರೂ ಕೂಡ ಅವರಿಬ್ಬರು ತಮ್ಮ ಪ್ರೀತಿಯ ಬಗ್ಗೆ ನೇರವಾಗಿ ಏನನ್ನೂ ಹೇಳಿಕೊಂಡಿಲ್ಲ. ಆದರೆ ನೆಟ್ಟಿಗರಿಗೆ ಗುಮಾನಿ ಜೋರಾಗಿದೆ. ಈಗ ರಶ್ಮಿಕಾ ಮಂದಣ್ಣಗೆ ಗುಲಾಬಿ ಹೂವನ್ನು ನೀಡಿರುವುದು ವಿಜಯ್ ದೇವರಕೊಂಡ ಅಲ್ಲದೇ ಬೇರೆ ಯಾರೂ ಅಲ್ಲ ಎಂದು ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ಬಾಕ್ಸ್ ಆಫೀಸ್​ನಲ್ಲಿ ‘ಛಾವ’ ಸಿನಿಮಾ ಅಬ್ಬರ; 3 ದಿನಕ್ಕೆ 121 ಕೋಟಿ ರೂ. ಕಲೆಕ್ಷನ್

ಚಿತ್ರರಂಗದಲ್ಲಿ ರಶ್ಮಿಕಾ ಮಂದಣ್ಣ ಅವರಿಗೆ ಇರುವ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ‘ಅನಿಮಲ್’, ‘ಪುಷ್ಪ 2’ ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ಹಿಟ್ ಆಗಿವೆ. ಈಗ ‘ಛಾವ’ ಸಿನಿಮಾ ಸಹ ಸೂಪರ್​ ಹಿಟ್ ಆಗಿದೆ. ಸಲ್ಮಾನ್ ಖಾನ್ ಖಾತೆ ‘ಸಿಕಂದರ್’ ಸಿನಿಮಾದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಆ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇದೆ. ಹೊಸ ಹೊಸ ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us