AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ 10 ತಿಂಗಳಲ್ಲಿ ರಿಲೀಸ್ ಆಗಲಿದೆ ರಶ್ಮಿಕಾ ಮಂದಣ್ಣ ನಟನೆಯ ಐದು ಸಿನಿಮಾಗಳು

ರಶ್ಮಿಕಾ ಮಂದಣ್ಣ ಅವರು ಕೇವಲ 8 ವರ್ಷಗಳಲ್ಲಿ ಕನ್ನಡ ಚಿತ್ರರಂಗದಿಂದ ಬಾಲಿವುಡ್ ವರೆಗೆ ಅಪಾರ ಯಶಸ್ಸು ಗಳಿಸಿದ್ದಾರೆ. ಅನೇಕ ಬಹುನಿರೀಕ್ಷಿತ ಚಿತ್ರಗಳಲ್ಲಿ ಅವರು ನಟಿಸುತ್ತಿದ್ದಾರೆ. 'ಪುಷ್ಪ 2', 'ಛವಾ' ಮತ್ತು ಇನ್ನಿತರ ಚಿತ್ರಗಳಲ್ಲಿ ಅವರ ಪಾತ್ರಗಳು ಅವರ ಜನಪ್ರಿಯತೆಯನ್ನು ಮತ್ತಷ್ಟು ಹೆಚ್ಚಿಸುತ್ತಿವೆ. ಭವಿಷ್ಯದಲ್ಲಿ ಅವರ ಚಿತ್ರಗಳ ರಿಲೀಸ್​ಗಾಗಿ ಅಭಿಮಾನಿಗಳು ಕಾತುರರಾಗಿದ್ದಾರೆ.

ಮುಂದಿನ 10 ತಿಂಗಳಲ್ಲಿ ರಿಲೀಸ್ ಆಗಲಿದೆ ರಶ್ಮಿಕಾ ಮಂದಣ್ಣ ನಟನೆಯ ಐದು ಸಿನಿಮಾಗಳು
ರಶ್ಮಿಕಾ
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on: Nov 11, 2024 | 10:47 AM

Share

ರಶ್ಮಿಕಾ ಮಂದಣ್ಣ ಅವರಿಗೆ ಇನ್ನೂ 30 ತುಂಬಿಲ್ಲ. ಯಂಗ್ ಆಗಿದ್ದಾಗ ಅವರು ಚಿತ್ರರಂಗಕ್ಕೆ ಬಂದರು. ಮೊದಲು ಕರ್ನಾಟಕ ಕ್ರಶ್ ಆದರು. ಆ ಬಳಿಕ ಭಾರತದ ಕ್ರಶ್ ಎನಿಸಿಕೊಂಡರು. ಅವರು ‘ಅನಿಮಲ್’ ಚಿತ್ರದಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡರು. ಅವರು ಈಗ ಟಾಲಿವುಡ್, ಕಾಲಿವುಡ್​ ಹಾಗೂ ಬಾಲಿವುಡ್​ನಲ್ಲಿ ಬ್ಯುಸಿ ಇದ್ದಾರೆ. ಮುಂದಿನ 10 ತಿಂಗಳಲ್ಲಿ ಅವರ ನಟನೆಯ 5 ಸಿನಿಮಾಗಳು ರಿಲೀಸ್​ಗೆ ರೆಡಿ ಇವೆ. ಇದು ಅಚ್ಚರಿ ಎನಿಸಿದರೂ ನಿಜ.

ರಶ್ಮಿಕಾ ಮಂದಣ್ಣ ಅವರು 2016ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ಕೇವಲ 8 ವರ್ಷಗಳಲ್ಲಿ ಅವರು ದೊಡ್ಡ ಮಟ್ಟಕ್ಕೆ ಬೆಳೆದಿದ್ದಾರೆ. ಸ್ಟಾರ್ ಹೀರೋಗಳ ಜೊತೆ ಅವರು ನಟಿಸಿ ಗಮನ ಸೆಳೆಯುತ್ತಿದ್ದಾರೆ. ಅವರ ಶೂಟಿಂಗ್ ಶೆಡ್ಯೂಲ್ ಕೂಡ ಈಗ ಸಖತ್ ಟೈಟ್ ಇರುತ್ತದೆ. ಇದರ ಮಧ್ಯೆ ಮನೆಗೆ ಹೋಗಿ ಬಂದು ಮಾಡಲೂ ಅವರಿಗೆ ಸಮಯ ಇರೋದಿಲ್ಲ. ಅವರ ಸಿನಿಮಾಗಳು ಬ್ಯಾಕ್​ ಟು ಬ್ಯಾಕ್ ರಿಲೀಸ್ ಆಗುತ್ತಿದೆ.

ಸುಕುಮಾರ್ ನಿರ್ದೇಶನದ, ಅಲ್ಲು ಅರ್ಜುನ್ ನಟನೆಯ ಬಹುನಿರೀಕ್ಷಿತ ಚಿತ್ರ ‘ಪುಷ್ಪ 2’ ಚಿತ್ರಕ್ಕೆ ರಶ್ಮಿಕಾ ನಾಯಕಿ. ಈ ಸಿನಿಮಾ ಡಿಸೆಂಬರ್ 5ರಂದು ರಿಲೀಸ್ ಆಗಲಿದೆ. ಈ ಚಿತ್ರದ ಬಗ್ಗೆ ಅವರು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಡಿಸೆಂಬರ್ 6ರಂದು ‘ಛವಾ’ ಹೆಸರಿನ ಹಿಂದಿ ಸಿನಿಮಾ ರಿಲೀಸ್ ಆಗುತ್ತಿದೆ. ಇದರಲ್ಲಿ ಅವರು ಪವರ್​ಫುಲ್ ಪಾತ್ರ ಮಾಡುತ್ತಿದ್ದಾರೆ. ಛತ್ರಪತಿ ಶಿವಾಜಿ ಪುತ್ರ ಸಾಂಭಾಜಿ ಅವರ ಪತ್ನಿ ಪಾತ್ರದಲ್ಲಿ ರಶ್ಮಿಕಾ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ‘ಪುಷ್ಪ 2’ ಜೊತೆಗಿನ ಕ್ಲ್ಯಾಶ್ ತಪ್ಪಿಸಿಕೊಳ್ಳಲು ಇದರ ರಿಲೀಸ್ ಡೇಟ್ ಮುಂದಕ್ಕೆ ಹೋಗುತ್ತದೆ ಎನ್ನಲಾಗಿದೆ.

‘ದಿ ಗರ್ಲ್​ಫ್ರೆಂಡ್’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ರಾಹುಲ್ ರವೀಂದ್ರನ್ ಈ ಚಿತ್ರ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಕಥೆ ಸಂಪೂರ್ಣವಾಗಿ ರಶ್ಮಿಕಾ ಮೇಲೆಯೇ ಸಾಗಲಿದೆ.  ಈ ಚಿತ್ರ ಮುಂದಿನ ಬೇಸಿಗೆಯಲ್ಲಿ ರಿಲೀಸ್ ಆಗುವ ಸಾಧ್ಯತೆ ಇದೆ.

ರಶ್ಮಿಕಾ ಮಂದಣ್ಣ ಅವರು ‘ಸಿಖಂದರ್’ ಚಿತ್ರದಲ್ಲಿ ಸಲ್ಮಾನ್ ಖಾನ್ ಅವರಿಗೆ ಜೊತೆಯಾಗಿದ್ದಾರೆ. ಈ ಚಿತ್ರವನ್ನು ಎಆರ್​ ಮುರುಗದಾಸ್ ಅವರು ನಿರ್ದೇಶನ ಮಾಡಿದ್ದಾರೆ. ಈ ಚಿತ್ರ 2025ರ ಈದ್​ಗೆ ರಿಲೀಸ್ ಆಗಲಿದೆ. ಇದಲ್ಲದೆ, ತಮಿಳಿನಲ್ಲಿ ಧನುಷ್ ಹಾಗೂ ನಾಗಾರ್ಜುನ ನಟಿಸುತ್ತಿರುವ ‘ಕುಬೇರ’ ಸಿನಿಮಾದಲ್ಲೂ ನಟಿಸಿದ್ದಾರೆ. ಈ ಚಿತ್ರ ಕೂಡ ಮುಂದಿನ ವರ್ಷ ರಿಲೀಸ್ ಆಗಲಿದೆ.

ಇದನ್ನೂ ಓದಿ: ರಶ್ಮಿಕಾ ವಿಡಿಯೋ ಡೈರಿ, ಎಲ್ಲರಿಗೂ ಧನ್ಯವಾದ ಹೇಳಿದ ನಟಿ

‘ರೇನ್​ಬೋ’ ಹೆಸರಿನ ಚಿತ್ರದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಈ ಸಿನಿಮಾದ ಒಂದು ಹಂತದ ಶೂಟಿಂಗ್ ಮುಗಿದೆ. ಮುಂದೆ ಈ ಚಿತ್ರದ ಶೂಟಿಂಗ್ ನಡೆದಿದೆಯೋ ಅಥವಾ ಇಲ್ಲವೋ ಗೊತ್ತಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ