ಒಂದೇ ದಿನ ಬಿಡುಗಡೆ ಆಗಲಿವೆ ರಶ್ಮಿಕಾ ನಟನೆಯ ಈ ಎರಡು ಬಿಗ್ ಬಜೆಟ್ ಸಿನಿಮಾಗಳು
‘ಪುಷ್ಪ 2’ ಚಿತ್ರ ಆಗಸ್ಟ್ 15ರಂದು ರಿಲೀಸ್ ಆಗಬೇಕಿತ್ತು. ಈಗ ತಂಡ ಹೊಸ ರಿಲೀಸ್ ದಿನಾಂಕವನ್ನು ಘೋಷಣೆ ಮಾಡಿದೆ. ಅದುವೇ ಡಿಸೆಂಬರ್ 6. ಅದೇ ರೀತಿ ರಶ್ಮಿಕಾ ನಟನೆಯ ‘ಛವಾ’ ಕೂಡ ಡಿಸೆಂಬರ್ 6ಕ್ಕೆ ಬಿಡುಗಡೆ ಕಾಣಲಿದೆ ಎಂದು ಹೇಳಲಾಗುತ್ತಿದೆ.

ರಶ್ಮಿಕಾ ಮಂದಣ್ಣ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರು ಹೊಸ ಸಿನಿಮಾ ಒಪ್ಪಿಕೊಳ್ಳಬೇಕು ಎಂದರೆ ಡೇಟ್ಸ್ ಹೊಂದಾಣಿಕೆ ಸಖತ್ ಕಷ್ಟ ಆಗುತ್ತಿದೆ. ಅಲ್ಲು ಅರ್ಜುನ್ ಜೊತೆ ಅವರು ನಟಿಸುತ್ತಿರುವ ‘ಪುಷ್ಪ 2’ ಸಿನಿಮಾ ಬಗ್ಗೆ ಭರ್ಜರಿ ನಿರೀಕ್ಷೆ ಇದೆ. ಕಾರಣಾಂತರಗಳಿಂದ ಸಿನಿಮಾದ ರಿಲೀಸ್ ದಿನಾಂಕ ಡಿಸೆಂಬರ್ ತಿಂಗಳಿಗೆ ಮುಂದೂಡಲ್ಪಟ್ಟಿದೆ. ಅದೇ ರೀತಿ ಅವರು ‘ಛವಾ’ ಹೆಸರಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈಗ ಒಂದೇ ದಿನ ರಶ್ಮಿಕಾ ಅವರ ಈ ಎರಡು ಸಿನಿಮಾಗಳು ರಿಲೀಸ್ ಆಗೋ ಸಾಧ್ಯತೆ ಗೋಚರವಾಗಿದೆ.
‘ಪುಷ್ಪ 2’ ಸಿನಿಮಾ ಆಗಸ್ಟ್ 15ರಂದು ರಿಲೀಸ್ ಆಗಬೇಕಿತ್ತು. ಆದರೆ, ಈಗ ಸಿನಿಮಾನ ಡಿಸೆಂಬರ್ 6ರಂದು ರಿಲೀಸ್ ಮಾಡೋದಾಗಿ ತಂಡದವರು ಘೋಷಣೆ ಮಾಡಿದ್ದಾರೆ. ಅದೇ ರೀತಿ ರಶ್ಮಿಕಾ ನಟನೆಯ ‘ಛವಾ’ ಕೂಡ ಡಿಸೆಂಬರ್ 6ಕ್ಕೆ ಬಿಡುಗಡೆ ಕಾಣಲಿದೆ ಎಂದು ಹೇಳಲಾಗುತ್ತಿದೆ. ಈ ಸಿನಿಮಾದಲ್ಲಿ ವಿಕ್ಕಿ ಕೌಶಲ್ ಅವರು ವಿಲನ್ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾ ಛತ್ರಪತಿ ಶಿವಾಜಿ ಅವರ ಮಗ ಸಂಭಾಜಿ ಬಗ್ಗೆ ಇದೆ.
‘ಛವಾ’ ಈ ಮೊದಲೇ ಡಿಸೆಂಬರ್ 6ರಂದು ರಿಲೀಸ್ ಆಗಲಿದೆ ಎಂದು ಹೇಳಲಾಗಿತ್ತು. ‘ಪುಷ್ಪ 2’ ಘೋಷಣೆ ಆದ ಬಳಿಕ ಈ ಚಿತ್ರದ ರಿಲೀಸ್ ದಿನಾಂಕ ಮುಂದಕ್ಕೆ ಹೋಗಬಹುದು ಎಂದು ಅನೇಕರು ಭಾವಿಸಿದ್ದರು. ಆದರೆ ಆ ರೀತಿ ಆಗಿಲ್ಲ. ಈ ಚಿತ್ರ ಕೂಡ ಅಂದುಕೊಂಡಂತೆ ಡಿಸೆಂಬರ್ 6ರಂದು ರಿಲೀಸ್ ಆಗಲಿದೆ ಎಂದು ಹೇಳಲಾಗುತ್ತಿದೆ. ಆಗಸ್ಟ್ 15ರಂದು ಸಿನಿಮಾದ ಮೊದಲ ಗ್ಲಿಂಪ್ಸ್ ರಿಲೀಸ್ ಆಗಲಿದೆ.
‘ಸ್ತ್ರೀ 2’ ಸಿನಿಮಾ ಆಗಸ್ಟ್ 15ರಂದು ಬಿಡುಗಡೆ ಆಗುತ್ತಿದೆ. ಈ ಸಿನಿಮಾದ ಜೊತೆ ‘ಛವಾ’ ಸಿನಿಮಾದ ಗ್ಲಿಂಪ್ಸ್ ಅಟ್ಯಾಚ್ ಆಗಿ ಪ್ರಸಾರ ಕಾಣಲಿದೆ. ಲಕ್ಷ್ಮಣ್ ಉಟೇಕರ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ‘ಮಡ್ಯಾಕ್ ಫಿಲ್ಮ್ಸ್’ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ.
ಇದನ್ನೂ ಓದಿ: ಸೂಟ್ಕೇಸ್ ತುಂಬ ಹಣದ ಕಂತೆ; ಎಲ್ಲವನ್ನೂ ಹೊತ್ತುಕೊಂಡು ಹೋದ ರಶ್ಮಿಕಾ ಮಂದಣ್ಣ
ಈ ಮೊದಲು ಅನೇಕ ಹೀರೋಯಿನ್ಗಳಿಗೆ ಈ ರೀತಿ ಆಗಿದೆ. ಒಂದೇ ದಿನ ಅವರ ನಟನೆಯ ಎರಡು ಸಿನಿಮಾಗಳು ರಿಲೀಸ್ ಆದ ಉದಾಹರಣೆ ಇದೆ. ಈಗ ‘ಪುಷ್ಪ 2’ ಹಾಗೂ ‘ಛವಾ’ ಒಂದೇ ದಿನ ಬಿಡುಗಡೆ ಆಗಲಿದೆಯೇ ಎನ್ನುವ ಪ್ರಶ್ನೆ ಕಾಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.