
ನಟಿ ರಶ್ಮಿಕಾ ಮಂದಣ್ಣ ಅವರು (Rashmika Mandanna) ಸದ್ಯ ಸಖತ್ ಬ್ಯುಸಿ ಆಗಿದ್ದಾರೆ. ಟಾಲಿವುಡ್ ಮಾತ್ರವಲ್ಲದೆ ಹಿಂದಿ ಚಿತ್ರರಂಗದಲ್ಲೂ ಅವರು ತೊಡಗಿಕೊಂಡಿದ್ದಾರೆ. ಕೊವಿಡ್ ಕಾರಣದಿಂದ ಕೆಲ ಸಿನಿಮಾಗಳ ಕೆಲಸಗಳು ವಿಳಂಬ ಆದವು. ಈಗ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ಸೀತಾ ರಾಮಂ’ ಸಿನಿಮಾ (Sita Ramam Movie) ರಿಲೀಸ್ಗೆ ರೆಡಿ ಇದೆ. ಆಗಸ್ಟ್ 5ರಂದು ಈ ಚಿತ್ರ ತೆರೆಗೆ ಬರುತ್ತಿರುವ ಬಗ್ಗೆ ಸಿನಿಮಾ ತಂಡ ಘೋಷಣೆ ಮಾಡಿದೆ. ಈ ಸಿನಿಮಾದಲ್ಲಿ ದುಲ್ಖರ್ ಸಲ್ಮಾನ್, ಮೃಣಲಾ ಠಾಕೂರ್ ಮೊದಲಾದವರು ನಟಿಸಿದ್ದಾರೆ. ಸಿನಿಮಾದಲ್ಲಿ ರಶ್ಮಿಕಾ ಪಾತ್ರ ಸಾಕಷ್ಟು ಕುತೂಹಲ ಮೂಡಿಸಿದೆ.
‘ಸೀತಾ ರಾಮಂ’ ಸಿನಿಮಾ ಬಗ್ಗೆ ಕುತೂಹಲ ಮೂಡಲು ಕಾರಣ ರಶ್ಮಿಕಾ ಮಂದಣ್ಣ ಅವರ ಗೆಟಪ್. ರಶ್ಮಿಕಾ ಜನ್ಮದಿನದ ಪ್ರಯುಕ್ತ ಈ ಸಿನಿಮಾದ ಫಸ್ಟ್ ಪೋಸ್ಟರ್ ರಿಲೀಸ್ ಮಾಡಲಾಗಿತ್ತು. ಇದರಲ್ಲಿ ರಶ್ಮಿಕಾ ಅವರು ಹಿಜಾಬ್ ಧರಿಸಿ ಕಾಣಿಸಿಕೊಂಡಿದ್ದರು. ಸದ್ಯ, ಹಿಜಾಬ್ ವಿಚಾರ ಕರ್ನಾಕಟದಲ್ಲಿ ಚರ್ಚೆಯಲ್ಲಿದೆ. ಹೀಗಿರುವಾಗಲೇ ಅವರು ಈ ರೀತಿಯ ವೇಷದಲ್ಲಿ ಕಾಣಿಸಿಕೊಂಡಿದ್ದು ಸಾಕಷ್ಟು ಕುತೂಹಲ ಮೂಡಿಸಿತ್ತು. ಅವರು ಈ ರೀತಿ ಕಾಣಿಸಿಕೊಂಡಿದ್ದು ಏಕೆ ಎನ್ನುವ ಪ್ರಶ್ನೆಗೆ ಆಗಸ್ಟ್ 5ರಂದು ಉತ್ತರ ಸಿಗಲಿದೆ.
ಇದನ್ನೂ ಓದಿ: ಕೊಡವ ಶೈಲಿಯಲ್ಲಿ ಸೀರೆ ಧರಿಸಿ ಮಿಂಚಿದ ರಶ್ಮಿಕಾ ಮಂದಣ್ಣ; ಅಭಿಮಾನಿಗಳಿಂದ ಸಿಕ್ತು ಮಿಲಿಯನ್ ಲೈಕ್ಸ್
‘ಸೀತಾ ರಾಮಂ’ ಸಿನಿಮಾ ಬಗ್ಗೆ ಕನ್ನಡಿಗರಿಗೆ ಬೇಸರವಾಗಿದೆ. ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂನಲ್ಲಿ ಚಿತ್ರ ಬಿಡುಗಡೆ ಆಗುತ್ತಿದೆ. ಆದರೆ, ಚಿತ್ರವನ್ನು ಕನ್ನಡಕ್ಕೆ ಡಬ್ ಮಾಡಿಲ್ಲ. ಈ ಬಗ್ಗೆ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಸಿನಿಮಾವನ್ನು ಕನ್ನಡದಲ್ಲೂ ರಿಲೀಸ್ ಮಾಡಬೇಕು ಎನ್ನುವ ಒತ್ತಾಯ ಜೋರಾಗಿದೆ.
‘ಸೀತಾ ರಾಮಮಂ’ ಸಿನಿಮಾ ರಿಲೀಸ್ ಬಗ್ಗೆ ಟ್ರೇಡ್ ಅನಲಿಸ್ಟ್ ತರಣ್ ಆದರ್ಶ್ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ಗೆ ಅನೇಕ ಕನ್ನಡಿಗರು ಕಮೆಂಟ್ ಮಾಡಿದ್ದಾರೆ. ‘ಈ ಸಿನಿಮಾ ಕನ್ನಡದಲ್ಲಿ ಏಕಿಲ್ಲ’ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಹನು ರಾಘವಪುಡಿ ಅವರು ನಿರ್ದೇಶನ ಮಾಡಿದ್ದು, ಅವರೇ ಇದಕ್ಕೆ ಸ್ಪಷ್ಟನೆ ನೀಡಬೇಕಿದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:57 pm, Wed, 25 May 22