‘ಅನಿಮಲ್’ ಸಿನಿಮಾದಿಂದ ಅಂತರ ಕಾಯ್ದುಕೊಂಡರೇ ರಶ್ಮಿಕಾ? ಕೊಟ್ಟಿದ್ದಾರೆ ಉತ್ತರ

Rashmika Mandanna: ನಟಿ ರಶ್ಮಿಕಾ ಮಂದಣ್ಣ ‘ಅನಿಮಲ್’ ಸಿನಿಮಾದಿಂದ ದೂರ ಉಳಿದಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಸ್ವತಃ ರಶ್ಮಿಕಾ ಮಂದಣ್ಣ ದೀರ್ಘವಾದ ಉತ್ತರ ನೀಡಿದ್ದಾರೆ.

‘ಅನಿಮಲ್’ ಸಿನಿಮಾದಿಂದ ಅಂತರ ಕಾಯ್ದುಕೊಂಡರೇ ರಶ್ಮಿಕಾ? ಕೊಟ್ಟಿದ್ದಾರೆ ಉತ್ತರ
Follow us
ಮಂಜುನಾಥ ಸಿ.
|

Updated on:Feb 25, 2024 | 4:29 PM

ರಣ್​ಬೀರ್ ಕಪೂರ್ (Ranbir Kapoor) ಹಾಗೂ ರಶ್ಮಿಕಾ ಮಂದಣ್ಣ (Rashmika Mandanna) ನಟಿಸಿರುವ ‘ಅನಿಮಲ್’ ಸಿನಿಮಾ ದೊಡ್ಡ ಹಿಟ್ ಆಗಿದೆ. ಬಾಲಿವುಡ್​ನ ಈ ವರ್ಷದ ಅತಿ ದೊಡ್ಡ ಹಿಟ್ ಎನಿಸಿಕೊಂಡಿದೆ. ರಣ್​ಬೀರ್ ಕಪೂರ್, ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಸೇರಿದಂತೆ ಚಿತ್ರತಂಡವೆಲ್ಲ ಸಿನಿಮಾದ ಯಶಸ್ಸನ್ನು ಅದ್ಧೂರಿಯಾಗಿ ಸಂಭ್ರಮಿಸಿದೆ. ಸರಣಿ ಸಂದರ್ಶನಗಳಲ್ಲಿ ಭಾಗಿಯಾಗಿದೆ. ಸಿನಿಮಾದ ಬಗ್ಗೆ ಮಾತನಾಡಿದೆ, ಸಿನಿಮಾದ ಯಶಸ್ಸಿನ ಬಗ್ಗೆ ಮಾತನಾಡಿದೆ. ಆದರೆ ರಶ್ಮಿಕಾ ಮಂದಣ್ಣ ಮಾತ್ರ ‘ಅನಿಮಲ್’ ಸಿನಿಮಾ ಬಿಡುಗಡೆ ಬಳಿಕ ಸಿನಿಮಾದ ಯಾವುದೇ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿಲ್ಲ. ‘ಅನಿಮಲ್’ ಸಿನಿಮಾದಿಂದ ರಶ್ಮಿಕಾ ಮಂದಣ್ಣ ಅಂತರ ಕಾಯ್ದುಕೊಂಡಿದ್ದಾರೆ ಎಂಬ ಸುದ್ದಿಗಳು ಹರಿದಾಡಲು ಆರಂಭವಾಗಿದ್ದು, ಈ ಬಗ್ಗೆ ಸ್ವತಃ ರಶ್ಮಿಕಾ ಉತ್ತರಿಸಿದ್ದಾರೆ.

ತನ್ನದೇ ಸಿನಿಮಾದ ಯಶಸ್ಸನ್ನು ಸಂಭ್ರಮಿಸುತ್ತಿಲ್ಲ ಎಂಬಿತ್ಯಾದಿ ಮಾತುಗಳು ಕೇಳಿ ಬರುತ್ತಿವೆ, ಆ ಬಗ್ಗೆ ಉತ್ತರಿಸಲೇ ಬೇಕಿದೆ ಎಂದಿರುವ ರಶ್ಮಿಕಾ, ‘ಪ್ರೀತಿ, ಕಾಳಜಿ ಇರುವವರೇ ಇಂಥಹಾ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ ಎಂಬ ಅರಿವು ನನಗೆ ಇದೆ. ನಾವು ಒಂದು ಭರ್ಜರಿ ಹಿಟ್ ಸಿನಿಮಾವನ್ನು ನೀಡಿದ್ದೇವೆ ಮತ್ತು ಜನರು ಅದನ್ನು ಇಷ್ಟಪಟ್ಟಿದ್ದಾರೆ. ನಾವೆಲ್ಲರೂ ಬಯಸಿದಂತೆ ಸಿನಿಮಾದ ಯಶಸ್ಸನ್ನು ಆನಂದಿಸಲು ಸ್ವಲ್ಪ ಸಮಯ ತೆಗೆದುಕೊಳ್ಳಬೇಕೆಂದು ಬಯಸಿದ್ದೆ. ಆದರೆ ನನ್ನ ಚಿತ್ರ ಬಿಡುಗಡೆಯ ಮರುದಿನವೇ ನಾನು ಇನ್ನೊಂದು ಸಿನಿಮಾದ ಶೂಟಿಂಗ್​ ಸೆಟ್‌ಗೆ ಮರಳಿದೆ’ ಎಂದಿದ್ದಾರೆ. ಅಂದಹಾಗೆ ತಮ್ಮ ಪೋಸ್ಟ್​ನಲ್ಲಿ ‘ಅನಿಮಲ್’ ಸಿನಿಮಾದ ಹೆಸರನ್ನು ಸಹ ರಶ್ಮಿಕಾ ತೆಗೆದುಕೊಂಡಿಲ್ಲ ಎಂಬುದು ಗಮನಿಸಬೇಕಾದ ಅಂಶ.

ಇದನ್ನೂ ಓದಿ:ಪ್ರತಿಷ್ಠಿತ ಫೋರ್ಬ್ಸ್ ಪಟ್ಟಿಯಲ್ಲಿ ರಶ್ಮಿಕಾ ಮಂದಣ್ಣ ಹೆಸರು

ಪೋಸ್ಟ್ ಮುಂದುವರೆಸಿರುವ ರಶ್ಮಿಕಾ, ‘ಇದೇ ಕಾರಣಕ್ಕೆ ನಾನು ಸಾಕಷ್ಟು ಸಂದರ್ಶನಗಳಲ್ಲಿ ಅಥವಾ ಸಕ್ಸಸ್ ಪಾರ್ಟಿಗಳಿಗೆ ಹಾಜರಾಗಲು ಸಾಧ್ಯವಾಗಲಿಲ್ಲ. ನಾನು ಕೆಲಸಕ್ಕಾಗಿ ಈ ರಾತ್ರಿಯ ಪ್ರಯಾಣಗಳನ್ನು ಮಾಡಲೇಬೇಕಾಗಿದೆ. ಈಗ ನಾನು ನನ್ನ ವೃತ್ತಿಜೀವನದಲ್ಲಿ ಕೆಲವು ದೊಡ್ಡ ಹಾಗೂ ತೀವ್ರತರವಾದ ವಸ್ತುವುಳ್ಳ ಸಿನಿಮಾಗಳಲ್ಲಿ ನಟಿಸುತ್ತಿದ್ದೇನೆ. ಅಲ್ಲದೆ ನನ್ನ ಸಿನಿಮಾಗಳ ಲುಕ್​ಗಳನ್ನು ನಾನು ಬಹಿರಂಗಪಡಿಸುವುದಿಲ್ಲ. ನಾನು ಸಂದರ್ಶನಗಳಲ್ಲಿ ಭಾಗಿ ಆಗದೇ ಇರುವುದಕ್ಕೆ ಇದು ಸಹ ಕಾರಣ’ ಎಂದಿದ್ದಾರೆ.

ಇನ್ನು ಮುಂದೆ ಹೀಗೆ ಆಗದೇ ಇರುವ ಬಗ್ಗೆ ನಾನು ಮತ್ತು ನಮ್ಮ ತಂಡ ಯೋಜನೆ ಮಾಡುತ್ತಿದ್ದೇವೆ. ಸಿನಿಮಾದ ಯಶಸ್ಸಿನ ಕಾರ್ಯಕ್ರಮದಲ್ಲಿ ಭಾಗಿಯಾಗದ ಮಾತ್ರಕ್ಕೆ ಸಿನಿಮಾದ ಯಶಸ್ಸಿನ ಖುಷಿಯನ್ನು ಅನುಭವಿಸುತ್ತಿಲ್ಲ ಎಂದೇನಿಲ್ಲ. ನಮಗಿಂತಲೂ ನಮ್ಮ ಕೆಲಸ ಹೆಚ್ಚು ಮಾತನಾಡಬೇಕು ಎಂಬುದು ನನ್ನ ನಂಬಿಕೆ. ಸಿನಿಮಾವನ್ನು ನೋಡಿ ಖುಷಿ ಪಟ್ಟ ಪ್ರೇಕ್ಷಕರ ಸಂದೇಶಗಳು ನನಗೆ ತಲುಪುತ್ತಿವೆ. ಅದನ್ನೆಲ್ಲ ನೋಡಿ ನಾನು ಖುಷಿ ಪಡುತ್ತಿದ್ದೇನೆ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:28 pm, Sun, 25 February 24

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್