ರಶ್ಮಿಕಾ ಮಂದಣ್ಣ ಕುಟುಂಬಕ್ಕಿತ್ತು ಬಡತನ; ಬಾಡಿಗೆ ಕಟ್ಟಲೂ ಕಷ್ಟಪಡುತ್ತಿದ್ದ ನಟಿಯ ಪಾಲಕರು

ಹಲವು ಸೂಪರ್​ಸ್ಟಾರ್​​ಗಳ ಜತೆ ರಶ್ಮಿಕಾ ಕೆಲಸ ಮಾಡಿದ್ದಾರೆ. ಸದ್ಯ ಅವರ ಕೈಯಲ್ಲಿ ಹಲವು ಆಫರ್​ಗಳಿವೆ. ಈಗ ಅವರು ಹಿಂದುಸ್ತಾನ್ ಟೈಮ್ಸ್​ ಜತೆ ಮಾತನಾಡುತ್ತಾ ಬಾಲ್ಯದ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

ರಶ್ಮಿಕಾ ಮಂದಣ್ಣ ಕುಟುಂಬಕ್ಕಿತ್ತು ಬಡತನ; ಬಾಡಿಗೆ ಕಟ್ಟಲೂ ಕಷ್ಟಪಡುತ್ತಿದ್ದ ನಟಿಯ ಪಾಲಕರು
ರಶ್ಮಿಕಾ ಮಂದಣ್ಣ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Nov 15, 2022 | 2:45 PM

ರಶ್ಮಿಕಾ ಮಂದಣ್ಣ (Rashmika Mandanna) ಅವರು ಸ್ಟಾರ್​ ನಟಿಯಾಗಿದ್ದಾರೆ. ಕನ್ನಡದಿಂದ ಆರಂಭವಾದ ಅವರ ಸಿನಿ ಜರ್ನಿ ಬಾಲಿವುಡ್​ವರೆಗೆ ಹೋಗಿ ನಿಂತಿದೆ. ಪ್ರತಿ ಚಿತ್ರಕ್ಕೆ ಅವರು ಕೋಟಿ ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಅವರು ಹೈದರಾಬಾದ್, ಮುಂಬೈ ಮೊದಲಾದ ಕಡೆಗಳಲ್ಲಿ ಸ್ವಂತ ಮನೆ ಹೊಂದಿದ್ದಾರೆ. ಇತ್ತೀಚೆಗೆ ಅವರು ಗೋವಾದಲ್ಲೂ ಮನೆ ಖರೀದಿಸಿದ್ದಾರೆ ಎಂದು ಸುದ್ದಿ ಆಗಿತ್ತು. ಆದರೆ, ಈ ಮೊದಲು ರಶ್ಮಿಕಾ ಅವರ ಕುಟುಂಬದ ಸ್ಥಿತಿ ಹೀಗೆ ಇರಲಿಲ್ಲ. ತುಂಬಾನೇ ಬಡತನ ಇತ್ತು. ಈ ಬಗ್ಗೆ ರಶ್ಮಿಕಾ ಈಗ ಮಾತನಾಡಿದ್ದಾರೆ.

‘ಕಿರಿಕ್ ಪಾರ್ಟಿ’ ಚಿತ್ರದಿಂದ ರಶ್ಮಿಕಾ ಮಂದಣ್ಣ ಅವರ ಖ್ಯಾತಿ ಹೆಚ್ಚಿತು. ಬಳಿಕ ತೆಲುಗಿನಲ್ಲಿ ರಶ್ಮಿಕಾ ಫೇಮಸ್ ಆದರು. ‘ಗೀತ ಗೋವಿಂದಂ’ ಸೇರಿ ಅನೇಕ ಹಿಟ್ ಚಿತ್ರಗಳನ್ನು ನೀಡಿದರು. ಹಲವು ಸೂಪರ್​ಸ್ಟಾರ್​​ಗಳ ಜತೆ ರಶ್ಮಿಕಾ ಕೆಲಸ ಮಾಡಿದ್ದಾರೆ. ಸದ್ಯ ಅವರ ಕೈಯಲ್ಲಿ ಹಲವು ಆಫರ್​ಗಳಿವೆ. ಈಗ ಅವರು ಹಿಂದುಸ್ತಾನ್ ಟೈಮ್ಸ್​ ಜತೆ ಮಾತನಾಡುತ್ತಾ ಬಾಲ್ಯದ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

‘ನನ್ನ ಕಾಣದ ಮುಖವೂ ಇದೆ. ನಾವು ಪ್ರತಿ ಎರಡು ತಿಂಗಳಿಗೆ ಒಮ್ಮೆ ಮನೆ ಬದಲಿಸುತ್ತಿದ್ದೆವು. ಚಿಕ್ಕಂದಿನಿಂದ ನಾನು ಸ್ಟ್ರಗಲ್ ಮಾಡುವುದನ್ನು ಕಲಿತೆ. ಆಗ ಬಾಡಿಗೆ ಕಟ್ಟುವುದು ಕಷ್ಟವಾಗುತ್ತಿತ್ತು. ಆಟಿಕೆಗಳನ್ನು ಕೇಳಿದರೆ ನನ್ನ ಪಾಲಕರು ಕೊಡಿಸುವುದಿಲ್ಲ ಎಂದು ಹೇಳುತ್ತಿರಲಿಲ್ಲ. ಆದರೆ, ಅದನ್ನು ಕೊಳ್ಳಲು ಅವರ ಬಳಿ ಹಣ ಇರುತ್ತಿರಲಿಲ್ಲ’ ಎಂದಿದ್ದಾರೆ ರಶ್ಮಿಕಾ ಮಂದಣ್ಣ.

ಇದನ್ನೂ ಓದಿ
Image
Rashmika Mandanna: ಎದೆ ಮೇಲೆ ಆಟೋಗ್ರಾಫ್​ ಹಾಕಿ ಅಂತ ಹಠ ಹಿಡಿದ ರಶ್ಮಿಕಾ ಮಂದಣ್ಣ ಅಭಿಮಾನಿ; ಮುಂದೇನಾಯ್ತು?
Image
Rashmika Mandanna: ‘ಇಂದು ನಾನೇ ಗೋಲ್ಡನ್​ ಗರ್ಲ್​’ ಅಂತ ಪೋಸ್​ ನೀಡಿದ ರಶ್ಮಿಕಾ ಮಂದಣ್ಣ; ಆದ್ರೆ ಜನ ಹೇಳಿದ್ದೇನು?
Image
Rashmika Mandanna: ಬಾಲಿವುಡ್​ ಸೇರಿದ ರಶ್ಮಿಕಾ ಮಂದಣ್ಣ ಹೊಸ ಅವತಾರ ಹೇಗಿದೆ ನೋಡಿ; ಫೋಟೋ ವೈರಲ್​
Image
Rashmika Mandanna: ಸೆಲ್ಫಿ ಕೇಳಿದ ಅಭಿಮಾನಿಗಳ ಜತೆ ರಶ್ಮಿಕಾ ಮಂದಣ್ಣ ನಡೆದುಕೊಂಡಿದ್ದು ಹೇಗೆ? ವಿಡಿಯೋ ವೈರಲ್​

ಇದನ್ನೂ ಓದಿ: Rashmika Mandanna: ತೊಂದರೆ ಕೊಟ್ಟು, ಮನಸ್ಸಿಗೆ ನೋವು ಮಾಡಿದವರ ಬಗ್ಗೆ ಬಹಿರಂಗ ಪತ್ರ ಬರೆದ ರಶ್ಮಿಕಾ ಮಂದಣ್ಣ

ಈ ವರ್ಷ ರಶ್ಮಿಕಾ ಮಂದಣ್ಣ ಅವರು ಸೋಲು-ಗೆಲುವು ಎರಡನ್ನೂ ಕಂಡಿದ್ದಾರೆ. ‘ಸೀತಾ ರಾಮಂ’ ಚಿತ್ರದಲ್ಲಿ ರಶ್ಮಿಕಾ ಪ್ರಮುಖ ಪಾತ್ರ ಮಾಡಿದ್ದರು. ಈ ಚಿತ್ರ ಯಶಸ್ಸು ಕಂಡಿತು. ಈ ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ. ಇನ್ನು, ಅವರ ನಟನೆಯ ಮೊದಲ ಹಿಂದಿ ಸಿನಿಮಾ ‘ಗುಡ್​ಬೈ’ ಚಿತ್ರ ಹೀನಾಯವಾಗಿ ಸೋತಿದೆ. ಅಮಿತಾಭ್​ ಬಚ್ಚನ್​ ಅವರು ನಟಿಸಿದ ಹೊರತಾಗಿಯೂ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಕಮಾಲ್ ಮಾಡಲು ವಿಫಲವಾಗಿದೆ. ಜನವರಿಯಲ್ಲಿ ಅವರ ನಟನೆಯ ‘ವಾರಿಸು’ ಸಿನಿಮಾ ರಿಲೀಸ್ ಆಗಲಿದೆ. ದಳಪತಿ ವಿಜಯ್ ಅವರು ಈ ಚಿತ್ರಕ್ಕೆ ಹೀರೋ.

Published On - 2:44 pm, Tue, 15 November 22

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ